ಕರಾವಳಿಯಲ್ಲಿ ಶೀಘ್ರವೇ ಸಚಿವ ಸಂಪುಟ ಸಭೆ: ಸಿಎಂ ಡಿ.ಕೆ. ಶಿವಕುಮಾರ್

Date:

ಕರಾವಳಿ ಭಾಗದ ಪ್ರವಾಸೋದ್ಯಮ ಅಭಿವೃದ್ಧಿಗೆ ವೇಗ ನೀಡುವ ನಿಟ್ಟಿನಲ್ಲಿ ಶೀಘ್ರವೇ ಕರಾವಳಿಯಲ್ಲಿ ಸಚಿವ ಸಂಪುಟ (ಕ್ಯಾಬಿನೆಟ್) ಸಭೆ ನಡೆಸಲಾಗುವುದು. ಈ ಸಭೆಯೊಳಗಾಗಿ ಬಂಡವಾಳ ಹೂಡಿಕೆದಾರರಿಗೆ ಎದುರಾಗುತ್ತಿರುವ ಸಿಆರ್‌ಝಡ್ (CRZ) ಮತ್ತು ಅರಣ್ಯ ಇಲಾಖೆಯ ತಾಂತ್ರಿಕ ಸಮಸ್ಯೆಗಳಿಗೆ ಪರಿಹಾರ ಸಿದ್ಧವಾಗಿರಬೇಕು ಎಂದು ಡಿ.ಕೆ. ಶಿವಕುಮಾರ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

- Advertisement -

ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆದ ಕರಾವಳಿ ಪ್ರವಾಸೋದ್ಯಮ ಸಭೆಯಲ್ಲಿ ಅವರು ಮಾತನಾಡಿದರು. ಹೂಡಿಕೆದಾರರಿಗೆ ಸುಗಮ ಹಾಗೂ ಸರಳ ಮಾರ್ಗಗಳನ್ನು ಕಲ್ಪಿಸಬೇಕು. ಉದ್ಯಮಿಗಳಿಗೆ ಇಲಾಖೆಗಳಿಂದ ಆಗುತ್ತಿರುವ ಕಿರಿಕಿರಿಗಳನ್ನು ತಪ್ಪಿಸಬೇಕು. ಸಿಆರ್‌ಝಡ್ ಮತ್ತು ಅರಣ್ಯ ಇಲಾಖೆಯಿಂದ ಎದುರಾಗುತ್ತಿರುವ ತಾಂತ್ರಿಕ ತಕರಾರುಗಳ ಕುರಿತು 15-20 ದಿನಗಳಲ್ಲಿ ವರದಿ ಸಿದ್ಧಪಡಿಸಬೇಕು; ಸಮಸ್ಯೆಗಳೇನು ಮತ್ತು ಅವುಗಳಿಗೆ ಪರಿಹಾರವೇನು ಎಂಬುದನ್ನು ಸ್ಪಷ್ಟಪಡಿಸುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಅಭಿವೃದ್ಧಿ ಯೋಜನೆಗಳಿಗೆ ತಾಂತ್ರಿಕ ತೊಂದರೆಯಾಗದಂತೆ ನಾನಾ ಅನುಮತಿಗಳನ್ನು ಒಂದೇ ಸೂರಿನಡಿ ಪಡೆಯಲು ‘ಏಕಗವಾಕ್ಷಿ’ (ಸಿಂಗಲ್ ವಿಂಡೋ) ವ್ಯವಸ್ಥೆ ಜಾರಿಗೆ ತರುವ ಬಗ್ಗೆಯೂ ಸಭೆಯಲ್ಲಿ ಒಲವು ವ್ಯಕ್ತಪಡಿಸಲಾಯಿತು.

ಇದನ್ನು ಓದಿದ್ದೀರಾ? ಮೈದಾನದಲ್ಲಿ ಮಾಸದ ಮೋಡಿ: 39ರ ವಯಸ್ಸಿನಲ್ಲೂ ಮಿಂಚುತ್ತಿರುವ ಮೆಸ್ಸಿ; ಫುಟ್‌ಬಾಲ್ ದಿಗ್ಗಜರ ಸ್ವಾರಸ್ಯಗಳು

ಕರಾವಳಿ ಸಂಸ್ಕೃತಿ, ಆಚರಣೆ ಹಾಗೂ ಕರಾವಳಿಯ ಹೆಮ್ಮೆಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪಸರಿಸಬೇಕು ಮತ್ತು ಪ್ರಚಾರ ಮಾಡಬೇಕು. ಇದರೊಂದಿಗೆ ಹೆಚ್ಚು ಉದ್ಯೋಗ ಸೃಷ್ಟಿ ಮತ್ತು ಆರ್ಥಿಕ ಬೆಳವಣಿಗೆಗೆ ಆದ್ಯತೆ ನೀಡಬೇಕು. ರಾಜ್ಯವು ಅತಿ ಉದ್ದದ ಸಮುದ್ರ ತೀರವನ್ನು ಹೊಂದಿದ್ದು, ಪರಿಸರಕ್ಕೆ ಯಾವುದೇ ಧಕ್ಕೆಯಾಗದಂತೆ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಬೇಕು ಎಂದು ನಿರ್ದೇಶನ ನೀಡಿದರು. ಕರಾವಳಿ ಪ್ರವಾಸೋದ್ಯಮವನ್ನು ವಿಶೇಷ ಕ್ಷೇತ್ರವಾಗಿ ಪರಿಗಣಿಸಿ, ಬೃಹತ್ ಯೋಜನೆಗಳು, ಮಾರ್ಕೆಟಿಂಗ್ ಹಾಗೂ ಕರಾವಳಿ ಮೇಳಗಳನ್ನು, ಉತ್ಸವಗಳನ್ನು ಆಯೋಜಿಸುವ ಬಗ್ಗೆಯೂ ಚರ್ಚಿಸಲಾಯಿತು.

ಸಭೆಯಲ್ಲಿ ಮಾಹಿತಿ ನೀಡಿದ ಅಧಿಕಾರಿಗಳು, ‘ಕರ್ನಾಟಕ ಪ್ರವಾಸೋದ್ಯಮ ನೀತಿ’ಯಡಿ 718.63 ಕೋಟಿ ರೂಪಾಯಿ ಅಂದಾಜು ಹೂಡಿಕೆಯ 45 ಯೋಜನೆಗಳಿಗೆ ಈಗಾಗಲೇ ಅನುಮೋದನೆ ನೀಡಲಾಗಿದೆ ಎಂದು ಗಮನಕ್ಕೆ ತಂದರು. ಈ 45 ಯೋಜನೆಗಳಿಂದ ಸದ್ಯ 4,500 ಉದ್ಯೋಗಗಳು ಸೃಷ್ಟಿಯಾಗಲಿದ್ದು, ಮುಂದಿನ ದಿನಗಳಲ್ಲಿ ಈ ಪ್ರಮಾಣ ಇನ್ನಷ್ಟು ಹೆಚ್ಚಾಗಬೇಕು ಎಂದು ಆಶಿಸಲಾಯಿತು. ಸರ್ಕಾರದ ಈ ಮಹತ್ವಾಕಾಂಕ್ಷೆಯನ್ನು ಸಾಧಿಸಲು ಮತ್ತು ಬಂಡವಾಳವನ್ನು ಆಕರ್ಷಿಸಲು ಹೂಡಿಕೆದಾರರಿಗೆ ಸಹಾಯಧನ, ಬಡ್ಡಿ ಸಹಾಯಧನ ಹಾಗೂ ರಿಯಾಯಿತಿಗಳ ಮೂಲಕ ಪ್ರೋತ್ಸಾಹ ನೀಡುವ ಬಗ್ಗೆ ಸಭೆಯಲ್ಲಿ ಒತ್ತು ನೀಡಲಾಯಿತು.

ಸಭೆಯಲ್ಲಿ ಪಾಲ್ಗೊಂಡಿದ್ದ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಮಾತನಾಡಿ, ಕರಾವಳಿಯ ಕಲೆ, ಜನಪದ ಮತ್ತು ಸಂಗೀತಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು ಎಂದು ಆಗ್ರಹಿಸಿದರು. ಕರಾವಳಿಯಲ್ಲಿ ಸಿನಿಮಾ ಚಿತ್ರೀಕರಣಕ್ಕೆ ಹೆಚ್ಚಿನ ಅನುಕೂಲ ಕಲ್ಪಿಸಿಕೊಟ್ಟರೆ ಕೇರಳ, ಗೋವಾ ಹಾಗೂ ಕರ್ನಾಟಕದ ಸಿನಿಮಾ ಜಗತ್ತಿಗೆ ದೊಡ್ಡ ಮಟ್ಟದ ಲಾಭವಾಗಲಿದೆ ಎಂದು ಸಲಹೆ ನೀಡಿದರು. ಇದೇ ವೇಳೆ, ಕರಾವಳಿಯಲ್ಲಿ ‘ಹೆಲಿ-ಟೂರಿಸಂ’ ಅಭಿವೃದ್ಧಿಗೆ ಒತ್ತು ನೀಡುವಂತೆ ಉದ್ಯಮಿಗಳು ಸಭೆಯಲ್ಲಿ ಮನವಿ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ ತಾಲೂಕು ʼಬರʼ ಘೋಷಣೆಗಾಗಿ ಬೀದಿಗಿಳಿದ ರೈತರು, 10 ದಿನ ಗಡುವು ನೀಡಿದ ಶಾಸಕ ಪ್ರಭು ಚವ್ಹಾಣ

ಬೀದರ್‌ ಜಿಲ್ಲೆಯ ಔರಾದ (ಬಿ) ತಾಲ್ಲೂಕನ್ನು ಕೂಡಲೇ ಬರಪೀಡಿತ ಘೋಷಿಸಿ ರೈತರಿಗೆ...

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ ದಿಯಾ’ ಅರ್ಪಣೆ!

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು...

ಬೀದರ್‌ | DHO, THO ಅಮಾನತು ಆದೇಶ ಹಿಂಪಡೆಯಲು ಸರ್ಕಾರಿ ನೌಕರರ ಸಂಘ ಆಗ್ರಹ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ (DHO) ಡಾ.ಧ್ಯಾನೇಶ್ವರ ನಿರಗುಡೆ ಹಾಗೂ...

ಬಂಟ್ವಾಳದ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಜಾಮೀನು ಬೆನ್ನಲ್ಲೇ ಆರೋಪಿಗಳ ಮೇಲೆ ‘ಗೂಂಡಾ ಕಾಯ್ದೆ’ ಅಸ್ತ್ರ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ...