ಶಿಕ್ಷಣ ಸುಧಾರಣೆಗೆ ಸಚಿವ ಸಂಪುಟ ಉಪಸಮಿತಿ; ಅಧ್ಯಕ್ಷರಾಗಿ ಯು ಟಿ ಖಾದರ್‌ ನೇಮಕ

Date:

ವಿದ್ಯಾರ್ಥಿಗಳು ಎದುರಿಸುತ್ತಿರುವ ವಿವಿಧ ಸಮಸ್ಯೆಗಳು ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಅಗತ್ಯವಿರುವ ಸುಧಾರಣೆಗಳ ಕುರಿತು ಸಮಗ್ರ ಅಧ್ಯಯನ ನಡೆಸಿ ಶಿಫಾರಸುಗಳನ್ನು ಸಲ್ಲಿಸಲು ರಾಜ್ಯ ಸರ್ಕಾರ ಸಚಿವ ಸಂಪುಟ ಉಪಸಮಿತಿಯನ್ನು ರಚಿಸಿದೆ.

- Advertisement -

ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ಹಜ್ ಮತ್ತು ವಕ್ಫ್ ಸಚಿವ ಯು ಟಿ ಖಾದರ್ ಅವರನ್ನು ಉಪಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ, ಗೃಹ ಹಾಗೂ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಶರಣ ಪ್ರಕಾಶ ಪಾಟೀಲ್ ಹಾಗೂ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸದಸ್ಯರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಉಪಸಮಿತಿಯು ರಾಜ್ಯದ ವಿದ್ಯಾರ್ಥಿಗಳು ಮತ್ತು ಶಿಕ್ಷಣ ಕ್ಷೇತ್ರ ಎದುರಿಸುತ್ತಿರುವ ಪ್ರಮುಖ ಸವಾಲುಗಳ ಕುರಿತು ಅಧ್ಯಯನ ನಡೆಸಲಿದೆ. ಪರೀಕ್ಷೆ ಹಾಗೂ ನೇಮಕಾತಿಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮ ತಡೆ, ಪಾರದರ್ಶಕತೆ ಹಾಗೂ ನಿಗದಿತ ಪರೀಕ್ಷಾ-ನೇಮಕಾತಿ ವೇಳಾಪಟ್ಟಿ ರೂಪಿಸುವ ಕುರಿತು ಶಿಫಾರಸು ಮಾಡಲಿದೆ. ಖಾಸಗಿ ಶಿಕ್ಷಣ ಸಂಸ್ಥೆಗಳ ಶುಲ್ಕ ನಿಯಂತ್ರಣ, ಕೋಚಿಂಗ್ ಕೇಂದ್ರಗಳ ಮೇಲ್ವಿಚಾರಣೆ ಹಾಗೂ ವಿದ್ಯಾರ್ಥಿಗಳು ಮತ್ತು ಕುಟುಂಬಗಳ ಮೇಲಿನ ಶಿಕ್ಷಣದ ಆರ್ಥಿಕ ಹೊರೆಯನ್ನು ಕಡಿಮೆ ಮಾಡುವ ಕ್ರಮಗಳ ಬಗ್ಗೆಯೂ ಸಮಿತಿ ಪರಿಶೀಲನೆ ನಡೆಸಲಿದೆ.

ಸರ್ಕಾರಿ ಶಾಲೆಗಳು, ಪಿಯು ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳ ಮೂಲಸೌಕರ್ಯ ಹಾಗೂ ಶಿಕ್ಷಣದ ಗುಣಮಟ್ಟ ಸುಧಾರಣೆ, ಶಿಕ್ಷಕರ ಖಾಲಿ ಹುದ್ದೆಗಳ ಭರ್ತಿ, ಪ್ರಯೋಗಾಲಯ, ಗ್ರಂಥಾಲಯ, ಹಾಸ್ಟೆಲ್ ಸೇರಿದಂತೆ ಅಗತ್ಯ ಸೌಲಭ್ಯಗಳ ಅಭಿವೃದ್ಧಿಗೂ ಆದ್ಯತೆ ನೀಡಲಿದೆ. ಜೊತೆಗೆ ಉದ್ಯೋಗಾವಕಾಶಗಳಿಗೆ ಅನುಗುಣವಾಗಿ ಪಠ್ಯಕ್ರಮ ರೂಪಿಸುವುದು, ಕೌಶಲ್ಯಾಭಿವೃದ್ಧಿ, ಅಪ್ರೆಂಟಿಸ್‌ಶಿಪ್ ಮತ್ತು ಇಂಟರ್ನ್‌ಶಿಪ್‌ಗೆ ಉತ್ತೇಜನ, ಶಿಕ್ಷಣ ಸಂಸ್ಥೆಗಳು ಹಾಗೂ ಕೈಗಾರಿಕೆಗಳ ನಡುವಿನ ಸಹಭಾಗಿತ್ವ ಬಲಪಡಿಸುವ ವಿಚಾರಗಳನ್ನೂ ಸಮಿತಿ ಪರಿಶೀಲಿಸಲಿದೆ.

ಇದನ್ನೂ ಓದಿ: ಕರ್ನಲ್ ಸೋಫಿಯಾ ಕುರಿತು ಆಕ್ಷೇಪಾರ್ಹ ಹೇಳಿಕೆ; ಸಚಿವ ವಿಜಯ್ ಶಾ ವಿರುದ್ಧ ಕ್ರಮಕ್ಕೆ ಎಂಪಿ ಸರ್ಕಾರ ನಕಾರ

ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಮತ್ತು ಕ್ಷೇಮಾಭಿವೃದ್ಧಿಗೆ ಸಮಾಲೋಚನೆ ಹಾಗೂ ಬೆಂಬಲ ವ್ಯವಸ್ಥೆ ಬಲಪಡಿಸುವುದು, ಪರೀಕ್ಷೆ ಮತ್ತು ಶೈಕ್ಷಣಿಕ ಒತ್ತಡ ನಿರ್ವಹಣೆ ಹಾಗೂ ಆತ್ಮಹತ್ಯೆ ತಡೆಗೆ ಅಗತ್ಯ ಕ್ರಮಗಳ ಬಗ್ಗೆಯೂ ಶಿಫಾರಸುಗಳನ್ನು ರೂಪಿಸಲಿದೆ. ವಿದ್ಯಾರ್ಥಿವೇತನ ಮತ್ತು ಆರ್ಥಿಕ ನೆರವು ಹೆಚ್ಚಿಸುವುದು, ಹಾಸ್ಟೆಲ್‌ಗಳ ಸಾಮರ್ಥ್ಯ ವಿಸ್ತರಣೆ, ಬಾಲಕಿಯರ ಶಿಕ್ಷಣಕ್ಕೆ ಉತ್ತೇಜನ ಹಾಗೂ ಎಸ್‌ಸಿ, ಎಸ್‌ಟಿ, ಒಬಿಸಿ, ಅಲ್ಪಸಂಖ್ಯಾತರು ಮತ್ತು ಮೊದಲ ತಲೆಮಾರಿನ ಕಲಿಕಾರ್ಥಿಗಳಿಗೆ ಸೂಕ್ತ ಬೆಂಬಲ ಒದಗಿಸುವ ಕುರಿತು ಸಮಿತಿ ಗಮನ ಹರಿಸಲಿದೆ.

ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು, ಶಿಕ್ಷಣ ಸಂಸ್ಥೆಗಳು ಸೇರಿದಂತೆ ವಿವಿಧ ಪಾಲುದಾರರೊಂದಿಗೆ ರಾಜ್ಯಾದ್ಯಂತ ಸಮಾಲೋಚನೆ ನಡೆಸಿ, ಒಂದು ತಿಂಗಳೊಳಗೆ ವರದಿ ಸಲ್ಲಿಸುವಂತೆ ಉಪಸಮಿತಿಗೆ ಸೂಚಿಸಲಾಗಿದೆ. ಅಗತ್ಯವಿದ್ದಲ್ಲಿ ವಿವಿಧ ಕ್ಷೇತ್ರಗಳ ತಜ್ಞರ ನೆರವು ಪಡೆಯಲು ಸಮಿತಿಗೆ ಅವಕಾಶ ನೀಡಲಾಗಿದೆ. ಈ ಸಚಿವ ಸಂಪುಟ ಉಪಸಮಿತಿಗೆ ಉನ್ನತ ಶಿಕ್ಷಣ ಇಲಾಖೆಯನ್ನು ನೋಡಲ್ ಇಲಾಖೆಯಾಗಿ ನೇಮಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸುಪ್ರೀಂ ಆದೇಶ ಉಲ್ಲಂಘನೆ: ಕಾನೂನುಬಾಹಿರ ವಶಕ್ಕೆ ತಡೆ ಇದ್ದರೂ 100ಕ್ಕೂ ಹೆಚ್ಚು ಪ್ರತಿಭಟನಾಕಾರರ ಬಂಧನ!

ರಾಜಧಾನಿ ದೆಹಲಿಯಲ್ಲಿ ಕನ್ಹಾಟ್ ಪ್ಲೇಸ್ ಹಾಗೂ ಜಂತರ್ ಮಂತರ್ ಸುತ್ತಮುತ್ತ ನಡೆಯುತ್ತಿರುವ...

ಗ್ಯಾನೂ ವಿರುದ್ಧ ಪ್ರತಿಭಟನೆ: ವಿದ್ಯಾರ್ಥಿ ನಾಯಕಿ ನೇಹಾ ಬೋರಾ ಬಂಧನ

ದೆಹಲಿಯಲ್ಲಿ ಚುನಾವಣಾ ಆಯೋಗ ಮತ್ತು ಕೇಂದ್ರ ಸರ್ಕಾರದ ವಿರುದ್ಧದ ಪ್ರತಿಭಟನೆಗಳು ಭಾನುವಾರವೂ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿ, ಯುವತಿಯರ ಮೇಲೆ ಹಲ್ಲೆ; ನಾಲ್ವರು RSS ಗೂಂಡಾಗಳ ಬಂಧನ

ದೆಹಲಿಯಲ್ಲಿ ನಡೆದ 'ಕಾಕ್ರೋಚ್ ಜನತಾ ಪಾರ್ಟಿ' (CJP) ಪ್ರತಿಭಟನೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳು...