ಕನಿಷ್ಠ ವೇತನ ಪರಿಷ್ಕರಣೆ ಪರಿಶೀಲನೆಗೆ ಸಚಿವ ಸಂಪುಟ ಉಪಸಮಿತಿ ರಚನೆ

Date:

ರಾಜ್ಯದಲ್ಲಿ ಕನಿಷ್ಠ ವೇತನ ದರಗಳ ಪರಿಷ್ಕರಣೆಗೆ ಸಂಬಂಧಿಸಿದಂತೆ ಕಾರ್ಮಿಕ ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಪರಿಶೀಲಿಸಲು ರಾಜ್ಯ ಸರ್ಕಾರವು ಸಚಿವ ಸಂಪುಟ ಉಪಸಮಿತಿಯನ್ನು ರಚಿಸಿ ಇಂದು (ಆಗಸ್ಟ್‌ 18) ಅಧಿಕೃತ ಜ್ಞಾಪನ ಹೊರಡಿಸಿದೆ.

- Advertisement -

​ಕಾರ್ಮಿಕ ಇಲಾಖೆಯು 2026ರ ಮೇ 22ರಂದು ಹೊರಡಿಸಿರುವ ಕನಿಷ್ಠ ವೇತನ ಪರಿಷ್ಕರಣೆ ಅಧಿಸೂಚನೆಯಲ್ಲಿನ ಅಂಶಗಳು ಕೇಂದ್ರ ಸರ್ಕಾರದ ‘ವೇತನ ಸಂಹಿತೆ, 2019’ಕ್ಕೆ (Code on Wages, 2019) ಅನುಗುಣವಾಗಿದೆಯೇ ಎಂಬುದನ್ನು ಈ ಸಂಪುಟ ಉಪಸಮಿತಿಯು ಪರಿಶೀಲನೆ ನಡೆಸಲಿದೆ. ಆಗಸ್ಟ್ 13ರಂದು ನಡೆದ ಸಚಿವ ಸಂಪುಟ ಸಭೆಯ ನಿರ್ಣಯದ (ಪ್ರಕರಣ ಸಂಖ್ಯೆ: ಸಿ.422/2026) ಅನ್ವಯ ಈ ಸಮಿತಿಯನ್ನು ಅಸ್ತಿತ್ವಕ್ಕೆ ತರಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಕ್ಸ್ ಆಫೀಸ್‌ನಲ್ಲಿ ರಾವಣನೇ ವಿಜೃಂಭಿಸಿರುವ ‘ರಾಮಾಯಣ’ದ ಅಬ್ಬರ: ₹1,600...

ರಾವಣನೇ ವಿಜೃಂಭಿಸಿರುವ ಬಾಲಿವುಡ್‌ ಸಿನಿಮಾ 'ರಾಮಾಯಣ: ಭಾಗ-1' ಬಿಡುಗಡೆಯಾದ ಕೇವಲ 17 ದಿನಗಳಲ್ಲಿ ಜಾಗತಿಕವಾಗಿ ₹1,600 ಕೋಟಿಗೂ ಅಧಿಕ ಕಮಾಯಿ ಮಾಡಿ ದಾಖಲೆ ಬರೆದಿದೆ. ಈ ಮೂಲಕ 'ದಂಗಲ್', 'ಧುರಂಧರ್-2', 'ಬಾಹುಬಲಿ-2' ಹಾಗೂ...

ರಾಯಚೂರು | ಉದ್ಘಾಟನೆಗಾಗಿ ಕಾಯುತ್ತಿರುವ ಶಾಲೆ; ವರಾಂಡದಲ್ಲೇ ಮಕ್ಕಳಿಗೆ...

ರಾಯಚೂರು ಜಿಲ್ಲೆ, ಜಾಲಹಳ್ಳಿಯ ಬೊಮ್ಮನಹಳ್ಳಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ, ಶುದ್ಧ ಕುಡಿಯುವ ನೀರಿನ ಅಭಾವ, ಕಾಂಪೌಂಡ್ ಇಲ್ಲದಿರುವುದು ಹಾಗೂ ಶಾಲಾ ಜಾಗದ ವಿವಾದ ಸೇರಿದಂತೆ ಹಲವು ಸಮಸ್ಯೆಗಳು ಮಕ್ಕಳ ಶಿಕ್ಷಣಕ್ಕೆ ಅಡ್ಡಿಯಾಗಿವೆ....

‘ಹುಟ್ಟಿಗೂ, ಸಾವಿಗೂ ನಾವೇ ಬೇಕು… ನಮ್ಮ ಜೊತೆ ನಿಲ್ಲೋಕೆ...

ಪೆಂಡಾಲಿನ ಒಂದು ಮೂಲೆಯಿಂದ ಆಶಾ ಕಾಯಕರ್ತೆಯರು " ರೂಪ ರೂಪಗಳನು ದಾಟಿ, ನಾಮ ಕೋಟಿಗಳನು ಮೀಟಿ, ಎದೆಯ ಬಿರಿಯೆ ಭಾವದೀಟಿ, ಓ ನನ್ನ ಚೇತನ... ಆಗು ಅನಿಕೇತನ" ಕವಿತೆಯ ಸಾಲುಗಳನ್ನು ಎದೆತುಂಬಿ ಹಾಡುತ್ತಿದ್ದರು....

​ಡಾ. ಜಿ. ಪರಮೇಶ್ವರ್ ಅವರ ಅಧ್ಯಕ್ಷತೆಯಲ್ಲಿ ರಚನೆಯಾಗಿರುವ ಈ ಮಹತ್ವದ ಉಪಸಮಿತಿಯಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ್, ಗೃಹ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು. ಟಿ. ಖಾದರ್, ಕಾರ್ಮಿಕ ಸಚಿವ ಸಂತೋಷ್ ಲಾಡ್, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಸಣ್ಣ ಕೈಗಾರಿಕೆಗಳ ಸಚಿವ ವಿಜಯಾನಂದ ಕಾಶಪ್ಪನವರ್ ಹಾಗೂ ಪೌರಾಡಳಿತ ಸಚಿವ ಹೆಚ್. ಸಿ. ಬಾಲಕೃಷ್ಣ ಅವರು ಸದಸ್ಯರಾಗಿ ಕಾರ್ಯನಿರ್ವಹಿಸಲಿದ್ದಾರೆ.

​ಕರ್ನಾಟಕ ಸರ್ಕಾರ (ವ್ಯವಹಾರ ನಿರ್ವಹಣೆ) ನಿಯಮಗಳು, 1977ರ ನಿಯಮ 13(5) ಹಾಗೂ 2025ರ ಮಾರ್ಚ್ 15ರ ಸುತ್ತೋಲೆಯ ಅನ್ವಯ ಕಾರ್ಮಿಕ ಇಲಾಖೆಯು ಈ ಸಚಿವ ಸಂಪುಟ ಉಪಸಮಿತಿಯ ಅಧ್ಯಯನ ಹಾಗೂ ಕಾರ್ಯಕಲಾಪಗಳಿಗೆ ಅಗತ್ಯವಿರುವ ಎಲ್ಲಾ ನೆರವು ಮತ್ತು ಮಾಹಿತಿಗಳನ್ನು ಒದಗಿಸಲಿದೆ ಎಂದು ಸರ್ಕಾರದ ಅಧೀನ ಕಾರ್ಯದರ್ಶಿಗಳು ಅಧಿಕೃತ ಆದೇಶದಲ್ಲಿ ಸ್ಪಷ್ಟಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸ್ವಾತಂತ್ರ್ಯ ಹೋರಾಟದ ಇತಿಹಾಸ ಸಾರುವ ಪ್ರವಾಸಿ ತಾಣವಾಗಿ ಶಿವಪುರ ಸೌಧ ಅಭಿವೃದ್ಧಿ

ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನ ಹಾಗೂ ದೇಶಪ್ರೇಮದ ಇತಿಹಾಸವನ್ನು ಮುಂದಿನ ಪೀಳಿಗೆಗೆ...

ವಾಟ್ಸ್‌ಆ್ಯಪ್ ಬಳಕೆದಾರರಿಗೆ ಕೇಂದ್ರ ಸರ್ಕಾರ ಎಚ್ಚರಿಕೆ!

ಕಂಪ್ಯೂಟರ್‌ಗಳಲ್ಲಿ ವಾಟ್ಸ್‌ಆ್ಯಪ್ ವೆಬ್ ಬಳಸುವವರಿಗೆ ಕೇಂದ್ರ ಗೃಹ ಸಚಿವಾಲಯದ ರಾಷ್ಟ್ರೀಯ ಸೈಬರ್...

ಕಾಡಾನೆ ವಿವಾದ; ಸ್ಪೀಕರ್ ಕಚೇರಿಯಲ್ಲಿ ರಾಜೀನಾಮೆ ಸಲ್ಲಿಸಿದ ನಯನಾ ಮೋಟಮ್ಮ

ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನಿಂದ ಚಿಕ್ಕಮಗಳೂರು ಜಿಲ್ಲೆಯ ಭದ್ರಾ ಅಭಯಾರಣ್ಯ ಹಾಗೂ...

ದೆಹಲಿ ರಸ್ತೆಗಳಲ್ಲಿ ಕೇವಲ BS-VI ವಾಹನಗಳಷ್ಟೇ ಓಡಾಡಲಿ: ವಾಯುಮಾಲಿನ್ಯ ತಡೆಗೆ ಸುಪ್ರೀಂ ಮಹತ್ವದ ಇಂಗಿತ!

ರಾಷ್ಟ್ರ ರಾಜಧಾನಿ ದೆಹಲಿಯ ವಾಯುಮಾಲಿನ್ಯ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ...