ಮಹಿಳೆಯರಿಲ್ಲದ ಸಚಿವ ಸಂಪುಟ: ಸಿಎಂ ಡಿಕೆ ಶಿವಕುಮಾರ್‌ಗೆ ಮಹಿಳಾ ಸಂಘಟನೆಗಳ ಬಹಿರಂಗ ಪತ್ರ

Date:

ರಾಜ್ಯ ಸಚಿವ ಸಂಪುಟದಲ್ಲಿ ಒಬ್ಬ ಮಹಿಳೆಗೂ ಅವಕಾಶ ನೀಡದಿರುವುದನ್ನು ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಬಹಿರಂಗ ಪತ್ರ ಬರೆದು ಆಕ್ರೋಶ ವ್ಯಕ್ತಪಡಿಸಿದೆ.

- Advertisement -

ಸಚಿವ ಸಂಪುಟ ವಿಸ್ತರಣೆಯಲ್ಲಾದರೂ ಮಹಿಳೆಯರಿಗೆ ಅವಕಾಶ ಸಿಗಬಹುದು ಎಂಬ ನಿರೀಕ್ಷೆ ಇತ್ತು. ಆದರೆ ವಿಸ್ತರಣೆಯಲ್ಲೂ ಒಬ್ಬ ಮಹಿಳೆಯನ್ನೂ ಸಚಿವರನ್ನಾಗಿ ಮಾಡದಿರುವುದು ರಾಜಕೀಯವಾಗಿ ಮಹಿಳೆಯರನ್ನು ಅಧಿಕಾರದಿಂದ ದೂರ ಇಡುವ ನಿರ್ಧಾರವಾಗಿದೆ ಎಂದು ಪತ್ರದಲ್ಲಿ ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

ಕರ್ನಾಟಕದ ಮತದಾರರಲ್ಲಿ ಸುಮಾರು ಅರ್ಧದಷ್ಟು ಮಹಿಳೆಯರಿದ್ದಾರೆ. 2023ರ ವಿಧಾನಸಭೆ ಚುನಾವಣೆಯಲ್ಲಿ ಮಹಿಳಾ ಮತದಾರರು ಹೆಚ್ಚಿರುವ ಹಲವು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ್ದರೂ, ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಪಕ್ಷದ ಘೋಷಿತ ಮಹಿಳಾ ಪರ ನಿಲುವಿಗೆ ವಿರುದ್ಧವಾಗಿದೆ. ಮಹಿಳೆಯರು ಪಂಚಾಯತ್‌, ನಗರಸಭೆ, ಸ್ವಸಹಾಯ ಗುಂಪುಗಳು, ಕಾರ್ಮಿಕ ಸಂಘಟನೆಗಳು, ವಿಜ್ಞಾನ, ತಂತ್ರಜ್ಞಾನ, ಶಿಕ್ಷಣ, ಉದ್ಯಮ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ನಾಯಕತ್ವ ವಹಿಸುತ್ತಿದ್ದರೂ, ರಾಜ್ಯದ ಉನ್ನತ ಕಾರ್ಯನಿರ್ವಹಣಾ ಅಂಗವಾದ ಸಚಿವ ಸಂಪುಟದಲ್ಲಿ ಅವರನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಎಂದು ಸಂಘಟನೆಗಳು ಆರೋಪಿಸಿವೆ.

ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಅವಕಾಶ ನಿರಾಕರಿಸುವುದು ಸಂವಿಧಾನ ನೀಡಿರುವ ಸಮಾನತೆ, ಗೌರವ ಮತ್ತು ಸಮಾನ ಅವಕಾಶಗಳ ಆಶಯಕ್ಕೆ ವಿರುದ್ಧವಾಗಿದ್ದು, ರಾಜಕೀಯ ಅಧಿಕಾರ ಪುರುಷರಿಗಷ್ಟೇ ಸೀಮಿತ ಎಂಬ ಸಂದೇಶ ನೀಡುತ್ತಿದೆ. ಮೊದಲ ಪಟ್ಟಿಯಲ್ಲಿ ಸಚಿವ ಸ್ಥಾನಕ್ಕೆ ಹೆಸರು ಕೇಳಿಬಂದಿದ್ದ ಗಾಯತ್ರಿ ಶಾಂತೇಗೌಡ ಅವರ ಹೆಸರನ್ನು ಅಂತಿಮ ಪಟ್ಟಿಯಿಂದ ಕೈಬಿಟ್ಟಿರುವುದನ್ನು ಉಲ್ಲೇಖಿಸಿರುವ ಸಂಘಟನೆಗಳು, ರಾಜಕೀಯ ಸಮೀಕರಣಗಳಿಗಾಗಿ ಮಹಿಳೆಯರ ಪ್ರಾತಿನಿಧ್ಯವನ್ನು ಬಲಿಕೊಡಲಾಗಿದೆ. ಮಹಿಳಾ ಮೀಸಲು ಮತ್ತು ಮಹಿಳಾ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ಬದ್ಧತೆ ವ್ಯಕ್ತಪಡಿಸುವ ಕಾಂಗ್ರೆಸ್, ಕರ್ನಾಟಕದಲ್ಲಿ ಸಂಪೂರ್ಣ ಪುರುಷರ ಸಚಿವ ಸಂಪುಟ ರಚಿಸಿರುವುದು ವಿರೋಧಾಭಾಸವಾಗಿದೆ. ಇಂತಹ ಕ್ರಮದಿಂದ ಮಹಿಳೆಯರ ರಾಜಕೀಯ ಪಾಲ್ಗೊಳ್ಳುವಿಕೆಯ ಕುರಿತು ಮಾತನಾಡುವ ನೈತಿಕತೆಯನ್ನೇ ಪಕ್ಷ ಕಳೆದುಕೊಂಡಿದೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ಧಾಟಿ ಬದಲಿಸಿದ ಸುಪ್ರೀಂ | ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳ ಮಾತು ಆಲಿಸಲು ಅಧಿಕಾರಿಗಳಿಗೆ ಸಲಹೆ

ಹಿಂದೆ ಕಾಂಗ್ರೆಸ್ ನಡೆಸಿದ್ದ ‘ನಾ ನಾಯಕಿ’ ಕಾರ್ಯಕ್ರಮವನ್ನು ಉಲ್ಲೇಖಿಸಿರುವ ಸಂಘಟನೆಗಳು, “ಆಗ ‘ನಾ ನಾಯಕಿ’ ಎಂದಿದ್ದ ಸರ್ಕಾರ ಈಗ ‘ನಾ ನಾಯಕ’ ಆಗಿಬಿಟ್ಟಿದೆ” ಎಂದು ವ್ಯಂಗ್ಯವಾಡಿವೆ. ಸಚಿವ ಸಂಪುಟದಲ್ಲಿ ಕೇವಲ ಸಾಂಕೇತಿಕವಲ್ಲ, ಸಮರ್ಪಕ ಹಾಗೂ ಸಮರ್ಥ ಮಹಿಳಾ ಪ್ರಾತಿನಿಧ್ಯ ನೀಡುವ ಮೂಲಕ ಈ ಐತಿಹಾಸಿಕ ಅಸಮತೋಲನವನ್ನು ತಕ್ಷಣವೇ ಸರಿಪಡಿಸಬೇಕು ಎಂದು ಮುಖ್ಯಮಂತ್ರಿಯನ್ನು ಆಗ್ರಹಿಸಿವೆ.

ಈ ಬಹಿರಂಗ ಪತ್ರಕ್ಕೆ ‘ನಾವೆದ್ದು ನಿಲ್ಲದಿದ್ದರೆ’ ವೇದಿಕೆಯೊಂದಿಗೆ ಗಮನ, ವಿಮೋಚನಾ, ಸಬಲಾ, ಪ್ರೇರಣಾ ವಿಕಾಸ ವೇದಿಕೆ, ಟ್ರಾನ್ಸ್ ಫೆಮಿಸಿಸ್ಟ್ ಕಲೆಕ್ಟಿವ್, ಕರ್ನಾಟಕ ಇಂಟರ್ ಸೆಕ್ಸ್ ಅಸೋಸಿಯೇಷನ್, ಕರ್ನಾಟಕ ಸ್ಟೇಟ್ ಜೆಂಡರ್ ಅಂಡ್ ಸೆಕ್ಷುಆಲಿಟಿ ಮೈನಾರಿಟಿ ಕೊಅಲಿಷನ್ ಫಾರ್ ಗವರ್ನೆನ್ಸ್, ಜನವಾದಿ ಮಹಿಳಾ ಸಂಘಟನೆ, ಕರ್ನಾಟಕ ಲೈಂಗಿಕ ಕಾರ್ಮಿಕರ ಯೂನಿಯನ್, ದುಡಿಯುವ ಜನರ ವೇದಿಕೆ, ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟ, ಲಿಂಗತ್ವ ಮತ್ತು ಲೈಂಗಿಕ ಬಹುತ್ವಕ್ಕಾಗಿ ಚಳುವಳಿ, ಗಾರ್ಮೆಂಟ್ ಅಂಡ್ ಟೆಕ್ಸ್ಟೈಲ್ಸ್ ವರ್ಕರ್ಸ್ ಯೂನಿಯನ್ ಸೇರಿದಂತೆ 25ಕ್ಕೂ ಹೆಚ್ಚು ಮಹಿಳಾ, ಕಾರ್ಮಿಕ ಹಾಗೂ ನಾಗರಿಕ ಸಂಘಟನೆಗಳು ಸಹಿ ಹಾಕಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ ಸಾಕೇ, ಇನ್ನಷ್ಟು ಬೇಕೇ?

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು....

ಕೇರಳದಲ್ಲಿ ಮತ್ತೆ ಭೂಕುಸಿತ; 9 ಮಂದಿ ಸಾವು, ಹಲವರು ನಾಪತ್ತೆ

ಕೇರಳ ರಾಜ್ಯದಾದ್ಯಂತ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಸಂಭವಿಸಿದ ಭೂಕುಸಿತ ಮತ್ತು ಪ್ರವಾಹದಿಂದ...

ವಿಧಾನ ಮಂಡಲದಲ್ಲಿ ಕಸ್ತೂರಿರಂಗನ್ ವರದಿ ಕುರಿತು ಗಂಭೀರ ಚರ್ಚೆ; ಕಾಡಂಚಿನ ಜನರ ಹಿತ ಕಾಯಲು ಶಾಸಕರ ಒಕ್ಕೊರಲ ಆಗ್ರಹ

ಸದನದಲ್ಲಿ ಮಾತನಾಡಿದ ಈ ಎಲ್ಲಾ ನಾಯಕರು, ಕಸ್ತೂರಿರಂಗನ್ ವರದಿಯನ್ನು ಅರಣ್ಯದ ಸಮೀಪ...

ಜಾರ್ಖಂಡ್ ಸಿಎಂ ಸೊರೇನ್ ವಿರುದ್ಧ ಹೇಳಿಕೆ: ಮಾಜಿ ಸಚಿವ ಯೋಗೇಂದ್ರ ಸಾವ್‌ಗೆ ಕಾಂಗ್ರೆಸ್‌ ಶೋಕಾಸ್ ನೋಟಿಸ್

ಜಾರ್ಖಂಡ್‌ ಮುಖ್ಯಮಂತ್ರಿ ಹೇಮಂತ್ ಸೊರೆನ್ ವಿರುದ್ಧ ಮಾಜಿ ಸಚಿವ ಹಾಗೂ ಹಿರಿಯ...