ಬಿಡದಿ ಟೌನ್‌ಶಿಪ್‌ | ಬಲವಂತದ ಭೂಸ್ವಾಧೀನವಿಲ್ಲ ಎಂಬ ಮಾತು ಸಾಲದು; ಯೋಜನೆಯನ್ನೇ ರದ್ದು ಮಾಡಿ: ರೈತರ ಆಗ್ರಹ

Date:

“ನಾವು ಕೇವಲ ಭರವಸೆಗಳನ್ನಷ್ಟೇ ನಂಬಿ ಕೂರಲು ಸಾಧ್ಯವಿಲ್ಲ. ಬಲವಂತವಾಗಿ ಜಮೀನು ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎನ್ನುವ ಮಾತು ಸಾಲದು. ಇಡೀ ಟೌನ್‌ಶಿಪ್ ಮತ್ತುಎಐ ಸಿಟಿ ಯೋಜನೆಯನ್ನೇ ಸಂಪೂರ್ಣವಾಗಿ ರದ್ದುಪಡಿಸಿ ಅಧಿಕೃತ ಆದೇಶ ಹೊರಡಿಸಬೇಕು” ಎಂದು ಬಿಡದಿ ರೈತ ಹೋರಾಟಗಾರರು ಆಗ್ರಹಿಸಿದ್ದಾರೆ.

- Advertisement -

ಬುಧವಾರ, ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, “ಯೋಜನೆಯನ್ನು ಸ್ಥಗಿತಗೊಳಿಸಿದ್ದು, ಬಲವಂತದ ಭೂಸ್ವಾಧೀನ ಮಾಡುವುದಿಲ್ಲ. ದೇವನಹಳ್ಳಿ ಮಾದರಿಯಲ್ಲಿ, ತಾವಾಗಿಯೇ ಭೂಮಿ ಕೊಡಲು ಮುಂದೆಬರುವ ರೈತರಿಗೆ ಪರಿಹಾರ ನೀಡಿ, ಭೂಸ್ವಾಧೀನ ಮಾಡಿಕೊಳ್ಳಲಾಗುತ್ತದೆ. ಯೋಜನೆಯ ಸಾಧಕ-ಬಾಧನಗಳ ಪರಿಶೀಲನೆಗೆ ಸಮಿತಿ ರಚಿಸಲಾಗುತ್ತದೆ” ಎಂದು ಘೋಷಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಡಿ.ಕೆ ಶಿವಕುಮಾರ್ ಅವರ ಘೋಷಣೆಯನ್ನು ಬಿಡದಿ ಹೋಬಳಿಯ ಸುಮಾರು 20ಕ್ಕೂ ಹೆಚ್ಚು ಗ್ರಾಮಗಳ ರೈತರು ಅಲ್ಲಗಳೆದಿದ್ದಾರೆ. “ಈಗಾಗಲೇ ಸರ್ಕಾರ ಪರಿಹಾರ ಪ್ಯಾಕೇಜ್ ಘೋಷಿಸಿ ಭೂಸ್ವಾಧೀನ ಪ್ರಕ್ರಿಯೆ ಆರಂಭಿಸಿರುವುದರಿಂದ, ಕೇವಲ ಬಲವಂತ ಮಾಡುವುದಿಲ್ಲ ಎಂಬ ಹೇಳಿಕೆ ನಮ್ಮ ಆತಂಕವನ್ನು ನಿವಾರಿಸುವುದಿಲ್ಲ” ಎಂದಿದ್ದಾರೆ.

“ಇಡೀ ಯೋಜನೆಯ ಹಿಂದೆ ಸಣ್ಣ ಮತ್ತು ಅತಿ ಸಣ್ಣ ರೈತರ ಬದುಕನ್ನು ಮೂರಾಬಟ್ಟೆ ಮಾಡುವ ಆತಂಕ ಎದ್ದು ಕಾಣುತ್ತಿದೆ. ಬಿಡದಿ ಹೋಬಳಿಯ ಕೃಷಿ ಭೂಮಿಯ ಪೈಕಿ 20%ರಷ್ಟು ಜಮೀನುಗಳು ಹೊರಗಿನ ಉದ್ಯಮಿಗಳು ಹಾಗೂ ಪ್ರಭಾವಿಗಳ ಪಾಲಾಗಿವೆ. ಒಂದು ವೇಳೆ ದೊಡ್ಡ ಜಮೀನು ಹೊಂದಿರುವ ಈ ಉದ್ಯಮಿಗಳು ಸರ್ಕಾರದ ಆಮಿಷಕ್ಕೆ ಒಳಗಾಗಿ ಭೂಮಿ ನೀಡಲು ಮುಂದಾದರೆ, ಅವರ ಜಮೀನುಗಳ ಮಧ್ಯದಲ್ಲಿ ಕೃಷಿ ಮಾಡಿಕೊಂಡಿರುವ ಸಣ್ಣ ರೈತರ ಬದುಕು ದುಸ್ತರವಾಗಲಿದೆ” ಎಂದು ಸ್ಥಳೀಯ ರೈತರು ಕಳವಳ ವ್ಯಕ್ತಪಡಿಸಿದ್ದಾರೆ.

“ದೊಡ್ಡ ಜಮೀನುದಾರರು ಭೂಮಿ ಕೊಟ್ಟ ತಕ್ಷಣ ಸರ್ಕಾರ ಆ ಜಾಗಕ್ಕೆ ಬೇಲಿ ಹಾಕಲು ಮುಂದಾಗುತ್ತದೆ. ಆಗ ಕೇವಲ ಎರಡರಿಂದ ಐದು ಎಕರೆ ಹೊಂದಿರುವ ಸಣ್ಣ ರೈತರು ತಮ್ಮ ಜಮೀನುಗಳಿಗೆ ಹೋಗಲು ದಾರಿಯಿಲ್ಲದೆ, ನೀರಿನ ಮೂಲಗಳ ಸಂಪರ್ಕ ಕಡಿತಗೊಂಡು, ಕೃಷಿ ಚಟುವಟಿಕೆಗಳನ್ನೇ ಸ್ಥಗಿತಗೊಳಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗುತ್ತದೆ” ಎಂದು ಸ್ಥಳೀಯ ರೈತ ಮುಖಂಡರು ಆತಂಕ ವ್ಯಕ್ತಪಡಿಸಿದ್ದಾರೆ.

ರೈತರ ಅಹವಾಲು ಆಲಿಸಲು ಸಮಿತಿ ರಚಿಸುವುದಾಗಿ ಮುಖ್ಯಮಂತ್ರಿಗಳು ಹೇಳಿರುವುದನ್ನು ರೈತರು ಸ್ವಾಗತಿಸಿದ್ದಾರಾದರೂ, ಸರ್ಕಾರದ ಇಬ್ಬಂದಿ ನೀತಿಯನ್ನು ತೀವ್ರವಾಗಿ ಖಂಡಿಸಿದ್ದಾರೆ. “ಒಂದು ಕಡೆ ಸಂಧಾನದ ಮಾತನಾಡುತ್ತಲೇ, ಮತ್ತೊಂದೆಡೆ ಬಿಡದಿ ಹೋಬಳಿಯ ಹೊಸೂರು, ಕೆ.ಜಿ. ಗೊಳ್ಳರಪಾಳ್ಯ, ಅರಳಾಳುಸಂದ್ರ ಹಾಗೂ ಬನ್ನಿಗಿರಿ ಗ್ರಾಮಗಳ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಹೊರಡಿಸಿರುವುದು ಸರ್ಕಾರದ ಇಬ್ಬಗೆಯ ನೀತಿಗೆ ಸಾಕ್ಷಿಯಾಗಿದೆ” ಎಂದು ಕಿಡಿಕಾರಿದ್ದಾರೆ. ಈ ಅಂತಿಮ ಅಧಿಸೂಚನೆಯನ್ನು ತಕ್ಷಣವೇ ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ಮೋದಿಜೀ.. ಈ ವಿಷಯಗಳಲ್ಲಿ ನಿಮಗೆ ನೀವೇ ಸಾಟಿ!

“ಬಿಡದಿ ಹೋಬಳಿಯ ಗ್ರಾಮೀಣ ಆರ್ಥಿಕತೆಯು ಕೇವಲ ಕೃಷಿಯನ್ನಷ್ಟೇ ನಂಬಿಲ್ಲ, ಬದಲಿಗೆ ಹೈನುಗಾರಿಕೆ ಮತ್ತು ರೇಷ್ಮೆ ಕೃಷಿಯೊಂದಿಗೆ ಬಿಗಿಯಾಗಿ ಬೆಸೆದುಕೊಂಡಿದೆ. ಬಿಡದಿ ಭಾಗದಲ್ಲಿ ಸುಮಾರು 20 ಸಾವಿರಕ್ಕೂ ಹೆಚ್ಚು ರೈತರು, ಅದರಲ್ಲೂ ವಿಶೇಷವಾಗಿ ಮಹಿಳೆಯರು ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡು ಆರ್ಥಿಕ ಸ್ವಾವಲಂಬನೆ ಸಾಧಿಸಿದ್ದಾರೆ. ಇಂತಹ ಹಸಿರು ಭೂಮಿಯನ್ನು ಕಾಂಕ್ರೀಟ್ ಕಾಡನ್ನಾಗಿ ಪರಿವರ್ತಿಸಿದರೆ ಗ್ರಾಮೀಣ ಮಹಿಳೆಯರ ಸ್ವಾವಲಂಬಿ ಬದುಕಿಗೆ ಕೊಡಲಿಪೆಟ್ಟು ಬೀಳಲಿದೆ” ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ.

“ಸರ್ಕಾರಕ್ಕೆ ರೈತರ ಮೇಲಿನ ಕಾಳಜಿ ಕೇವಲ ತೋರಿಕೆಯದ್ದಲ್ಲದಿದ್ದರೆ, ತಕ್ಷಣವೇ ಟೌನ್‌ಶಿಪ್ ಯೋಜನೆಯನ್ನು ಸಂಪೂರ್ಣವಾಗಿ ಕೈಬಿಡಬೇಕು. ಅಲ್ಲಿಯವರೆಗೂ ಯಾವುದೇ ಕಾರಣಕ್ಕೂ ನಮ್ಮ ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ” ಎಂದು ಸರ್ಕಾರಕ್ಕೆ ಖಡಕ್ ಸಂದೇಶ ರವಾನಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕನ್ನಾಟ್ ಪ್ಲೇಸ್‌ನಲ್ಲಿ ಸಿಜೆಪಿ ಪ್ರತಿಭಟನೆ: ತಡೆ ನೀಡಲು ದೆಹಲಿ ಹೈಕೋರ್ಟ್ ನಕಾರ

ಮುಖ್ಯ ಚುನಾವಣಾ ಆಯುಕ್ತರ (ಸಿಇಸಿ) ರಾಜೀನಾಮೆಗೆ ಆಗ್ರಹಿಸಿ ಅಕ್ಟೋಬರ್ 16ರಂದು ದೆಹಲಿಯ...

ಔರಾದ್‌ | ನೀರು, ಆರೋಗ್ಯ ಸೇವೆ ಪರಿಶೀಲನೆ; ಕಾರ್ಮಿಕರ ಸಮಸ್ಯೆ ಆಲಿಸಿದ ಸಿಇಒ

ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಆರೋಗ್ಯ ಸೇವೆ ಹಾಗೂ ಅಭಿವೃದ್ಧಿ...

ರಾಜ್ಯದ 12 ಜಿಲ್ಲೆಗಳಲ್ಲಿ ಮುಂದಿನ 3 ದಿನ ಭಾರೀ ಮಳೆ: ಹವಾಮಾನ ಇಲಾಖೆ

ತೀವ್ರ ಮಳೆ ಕೊರತೆಯಿಂದ ಕೂಡಿದ್ದ ಮುಂಗಾರು ಹಂಗಾಮು ಕೊನೆಗೊಂಡಿದೆ. ಹಿಂಗಾರು ಆರಂಭವಾಗಿದೆ....