ಆತ್ಮಸಾಕ್ಷಿಗೆ ವಿರುದ್ಧವಾಗಿ ಕಾರ್ಯನಿರ್ವಹಿಸಲಾಗದು: ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

Date:

ಜಲಸಂಪನ್ಮೂಲ ಖಾತೆ ವಹಿಸಿಕೊಳ್ಳಲು ನಿರಾಕರಿಸಿರುವ ರಾಮಲಿಂಗಾರೆಡ್ಡಿ, ಆತ್ಮಸಾಕ್ಷಿಗೆ ವಿರುದ್ಧವಾಗಿ ಕಾರ್ಯನಿರ್ವಹಿಸಲಾಗದು ಎಂದು ಹೇಳಿ ರಾಜೀನಾಮೆ ನೀಡಿದ್ದಾರೆ. ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ. ಹಾಗೆಯೇ ಕಾಂಗ್ರೆಸ್ ತೊರೆಯಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

- Advertisement -

ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಅವರು, ಕಾಂಗ್ರೆಸ್ ತೊರೆಯಲ್ಲ. ನಾನು ಸಚಿವ ಸ್ಥಾನಕ್ಕೆ ಮಾತ್ರ ರಾಜೀನಾಮೆ ನೀಡುತ್ತಿರುವುದು ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ಇದನ್ನು ಓದಿದ್ದೀರಾ? ಸಾರಿಗೆ ನಿಗಮಗಳಲ್ಲಿ ತಾಂತ್ರಿಕ ಸಿಬ್ಬಂದಿ ನೇಮಕಕ್ಕೆ ಸಚಿವ ರಾಮಲಿಂಗಾರೆಡ್ಡಿಗೆ ಸಂಘಟನೆಗಳ ಮನವಿ

ಇನ್ನು ರಾಜೀನಾಮೆ ಪತ್ರದಲ್ಲಿ, “ನನಗೆ ತಮ್ಮ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಿದಕ್ಕೆ ತಮಗೂ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ನನ್ನ ಧನ್ಯವಾದಗಳು. ನಾನು ನನ್ನ ಆತ್ಮಸಾಕ್ಷಿ ವಿರುದ್ದವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗದ ಕಾರಣ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ನನ್ನ ರಾಜೀನಾಮೆಯನ್ನು ಅಂಗೀಕರಿಸಬೇಕೆಂದು ಕೋರುತ್ತೇನೆ” ಎಂದು ಬರೆದಿದ್ದಾರೆ. “ನಾನು ಶಾಸಕನಾಗಿ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತನಾಗಿ ಮುಂದುವರಿಯುತ್ತೇನೆ” ಎಂದು ತಿಳಿಸಿದ್ದಾರೆ.

resign

ಡಿ ಕೆ ಶಿವಕುಮಾರ್ ಸಂಪುಟ ಸೇರಿರುವ 13 ಸಚಿವರು ಬುಧವಾರವಷ್ಟೇ ಪ್ರಮಾಣವಚನ ಸ್ವೀಕರಿಸಿದ್ದರು. ಗುರುವಾರ ಖಾತೆ ಹಂಚಿಕೆಯಾಗಿದೆ. ಇದೀಗ ಎರಡು ದಿನದೊಳಗೆ ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ ನೀಡಿದ್ದಾರೆ.

ಬೆಂಗಳೂರು ಅಭಿವೃದ್ಧಿ ಕೊಡುವುದಾಗಿ ಹೇಳಿ ಮಾತಿಗೆ ತಪ್ಪಿದ್ದಾರೆ ಎಂದು ಈ ಹಿಂದೆಯೇ ರಾಮಲಿಂಗಾರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದ್ದರು. ರಾಮಲಿಂಗಾರೆಡ್ಡಿ ಅವರು 2023ರಲ್ಲಿಯೇ ಬೆಂಗಳೂರು ಅಭಿವೃದ್ಧಿ ಖಾತೆ ನಿರೀಕ್ಷೆಯಲ್ಲಿದ್ದರು. ಆದರೆ ಸಿಕ್ಕಿರಲಿಲ್ಲ. ಈ ಬಾರಿಯಾದರೂ ಆ ಖಾತೆ ನೀಡಬಹುದು ಎಂಬ ನಿರೀಕ್ಷೆ ಅವರದ್ದಾಗಿತ್ತು.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ವಿರುದ್ಧ ಹೇಳಿಕೆ ಆರೋಪ; ಸಿಜೆಪಿ ನಾಯಕ ಸೌರವ್‌ ದಾಸ್‌ಗೆ ಮದ್ರಾಸ್ ಹೈಕೋರ್ಟ್ ನೋಟಿಸ್

ನ್ಯಾಯಾಂಗದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ CJP ವಕ್ತಾರ...

ಶಿಕಾರಿಪುರ | ಖಾಸಗಿ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಶಿಕಾರಿಪುರ ಪಟ್ಟಣದ ಗಬ್ಬೂರು ಸಮೀಪ ಗುರುವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ...

ಶಿವಮೊಗ್ಗ | ಸಾಮೂಹಿಕ ನಕಲಿಗೆ ಅವಕಾಶ! KSOU ಪ್ರಾದೇಶಿಕ ನಿರ್ದೇಶಕ ಬಿ.ಎಂ ಸ್ವಾಮಿ ವಿರುದ್ಧ ದೂರು

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (KSOU) ಶಿವಮೊಗ್ಗ ಪ್ರಾದೇಶಿಕ ಕೇಂದ್ರದಲ್ಲಿ ನಡೆದ...