ಬಾಲಕಿಯ ಜೊತೆ ಅನುಚಿತ ವರ್ತನೆ ಪ್ರಕರಣ: ವಿಚಾರಣೆಗೆ ಹಾಜರಾದ ಮಲ್ಲಿಕಾರ್ಜುನ ಮುತ್ಯಾ

Date:

ಬಾಲಕಿಯ ಜೊತೆ ಅನುಚಿತ ವರ್ತನೆ ಸಂಬಂಧ ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆಯೇ ನಾಪತ್ತೆಯಾಗಿದ್ದ ಯಾದಗಿರಿಯ ಮಹಲ್ ರೋಜಾ ಮಠದ ಮಲ್ಲಿಕಾರ್ಜುನ ಮುತ್ಯಾ ಪ್ರತ್ಯಕ್ಷನಾಗಿದ್ದಾನೆ. ಫೆಬ್ರವರಿ 25ರಿಂದ ಕಾಣೆಯಾಗಿದ್ದ ಮಲ್ಲಿಕಾರ್ಜುನ ಮುತ್ಯಾ ನಿನ್ನೆ (ಮಾರ್ಚ್ 04) ರಾತ್ರಿ ಶಹಾಪುರ ಸರ್ಕಲ್ ಇನ್ಸ್ಪೆಕ್ಟರ್ ಕಚೇರಿಗೆ ಹಾಜರಾಗಿದ್ದು, ಈ ವೇಳೆ ಪೊಲೀಸರು ವಿಚಾರಣೆ ನಡಸಿ ಇಂದು(ಮಾರ್ಚ್ 05) ಮಧ್ಯಾಹ್ನ 3 ಗಂಟೆಗೆ ಬರುವಂತೆ ಕಳುಹಿಸಿಕೊಟ್ಟಿದ್ದರು. ಅದರಂತೆ ಮುತ್ಯಾ ಮತ್ತೆ ವಿಚಾರಣೆಗೆ ಹಾಜರಾಗಿದ್ದಾನೆ.

- Advertisement -

ನೋಟಿಸ್ ನೀಡಿ ಇಂದು (ಮಾರ್ಚ್ 05) ಮತ್ತೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದ್ದು, ಅದರಂತೆ ಮುತ್ಯಾ ಹಾಜರಾದ ಬಳಿಕ ಮೆಡಿಕಲ್ ಟೆಸ್ಟ್​​ಗೆ ಒಳಪಡಿಸಲಾಗುತ್ತದೆ. ಬಳಿಕ ಪ್ರಕರಣದ ತನಿಖಾಧಿಕಾರಿ ಶಹಾಪುರ ಗ್ರಾಮೀಣ ಸರ್ಕಲ್ ಇನ್ಸ್ಪೆಕ್ಟರ್ ಶರಣಗೌಡ ನ್ಯಾಮಣ್ಣನವರ ನೇತೃತ್ವದಲ್ಲಿ ಮುತ್ಯಾ ಅವರನ್ನ ವಿಚಾರಣೆ ನಡೆಯಲಿದೆ. ಇನ್ನು ಒಂದು ವೇಳೆ ವಿಚಾರಣೆಗೆ ಸಹಕಾರ ನೀಡದಿದ್ದರೆ ಮುತ್ಯಾನನ್ನು ಬಂಧಿಸುವ ಸಾಧ್ಯತೆಗಳಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಇದನ್ನು ಓದಿದ್ದೀರಾ? ಇರಾನ್‌ನ ‘ಉಕ್ಕಿನ ಮನುಷ್ಯ’ ಆಯತೊಲ್ಲಾ ಅಲಿ ಖಮೇನಿ

ಬಾಲಕಿಯ ಜೊತೆಗಿನ ಅನುಚಿತ ವರ್ತನೆಯ ವಿಡಿಯೋ ವೈರಲ್ ಆದ ಬೆನ್ನಲ್ಲೇ ಮುತ್ಯಾ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಯಾದಗಿರಿ ಜಿಲ್ಲಾಧಿಕಾರಿಗೆ ಪತ್ರ ಬರೆದಿತ್ತು. ಈ ಪತ್ರದ ಬಳಿಕ ಫೆಬ್ರವರಿ 25ರಂದು ಶಹಾಪುರ ತಾಲೂಕಿನ ಗೋಗಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಇದರ ಬೆನ್ನಲ್ಲೇ ಮುತ್ಯಾ ನಾಪತ್ತೆಯಾಗಿದ್ದ.

ಇನ್ನು ಪ್ರಕರಣ ಸಂಬಂಧ ಮುತ್ಯಾ ಯಾದಗಿರಿ ಜಿಲ್ಲಾ ಕೋರ್ಟ್​​ಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು ಇದಕ್ಕೆ ಸರ್ಕಾರಿ ಪರ ವಕೀಲರು ಆಕ್ಷೇಪ ಸಲ್ಲಿಸಿದ್ದಾರೆ. ಹೀಗಾಗಿ ನ್ಯಾಯಾಲಯವು ವಿಚಾರಣೆಯನ್ನು ಮಾರ್ಚ್ 6ಕ್ಕೆ ಮುಂದೂಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಕಸ್ತೂರಿರಂಗನ್ ವರದಿಗೆ ಪಕ್ಷಾತೀತ ವಿರೋಧ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...

ಚಿಕ್ಕಮಗಳೂರು | ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಟೀಕೆ ಟಿಪ್ಪಣಿ ಸಹಜ: ನ್ಯಾಯಕ್ಕಾಗಿ ಹೋರಾಡಬೇಕು; ಕೋಟ ಶ್ರೀನಿವಾಸ್ ಪೂಜಾರಿ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...