ಸಾರಿಗೆ ನೌಕರರ ಕುಟುಂಬದವರಿಗೆ ನಗದು ರಹಿತ ಚಿಕಿತ್ಸಾ ಯೋಜನೆ: ಸಿಎಂ ಸಿದ್ದರಾಮಯ್ಯ

Date:

ನಮ್ಮ ಸಾರಿಗೆ ನೌಕರರು ಮತ್ತು ಕುಟುಂಬದವರನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷ್ಯದಿಂದ ಕಾಣಬಾರದು. ಚಿಕಿತ್ಸೆ ನೀಡುವಲ್ಲಿ ಉದಾಸೀನ ಮಾಡಕೂಡದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಾಸಗಿ ಆಸ್ಪತ್ರೆಗಳಿಗೆ ಸೂಚನೆ ನೀಡಿದರು.

- Advertisement -

ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನೌಕರರು ಮತ್ತು ಸಿಬ್ಬಂದಿಗೆ ನಗದು ರಹಿತ ಆರೋಗ್ಯ ಸವಲತ್ತು ನೀಡುವ ಕೆಎಸ್‌ಆರ್‌ಟಿಸಿ ಆರೋಗ್ಯ ಯೋಜನೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, “ಸಾರಿಗೆ ನೌಕರರು ತಮ್ಮ ದುಡಿಮೆಯ ಮೂಲಕ ಸಂಸ್ಥೆಯ ಮತ್ತು ನಿಗಮದ ಆದಾಯ ಹೆಚ್ಚಿಸುತ್ತಿದ್ದಾರೆ. ಇವರ ಆರೋಗ್ಯ ಸರ್ಕಾರದ ಮತ್ತು ಸಂಸ್ಥೆ ಹಾಗೂ ನಿಗಮದ ಜವಾಬ್ದಾರಿ ಆಗಿದೆ. ಈ ಕಾರಣಕ್ಕೆ ಖಾಸಗಿ ಆಸ್ಪತ್ರೆಗಳ ಜೊತೆಗೂ ಒಡಂಬಡಿಕೆ ಮಾಡಿಕೊಂಡಿದ್ದೇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಿವೀಸ್ ಕೋಟೆಯಲ್ಲಿ ಇತಿಹಾಸ ಬರೆಯುವತ್ತ ಶುಭಮನ್ ಗಿಲ್ ಪಡೆ:...

ನವೆಂಬರ್ 13 ಮತ್ತು 15ರಂದು ನಡೆಯಲಿರುವ ಕಿವೀಸ್ ವಿರುದ್ಧದ ನಾಲ್ಕು ಹಾಗೂ ಐದನೇ ಏಕದಿನ ಪಂದ್ಯಗಳಲ್ಲಿ ನಾಯಕ ಶುಭಮನ್ ಗಿಲ್ ಅವರ ನಾಯಕತ್ವದ ಕೌಶಲ ಮತ್ತೊಮ್ಮೆ ಒರೆಗಲ್ಲಿಗೆ ಹಚ್ಚಲ್ಪಡಲಿದೆ. ಗಾಯದ ಸಮಸ್ಯೆಯಿಂದ ಬಳಲುತ್ತಿರುವ...

ತುರ್ತುಪರಿಸ್ಥಿತಿ ಸರಿಯೇ- ತಪ್ಪೇ? ಸೋನಿಯಾ ತಮ್ಮ ಆತ್ಮಕಥೆಯಲ್ಲಿ ಏನಂತಾರೆ?

The Guardian ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ತುರ್ತುಪರಿಸ್ಥಿತಿ ಘೋಷಣೆಯೇ ತಪ್ಪು ನಿರ್ಧಾರವಾಗಿತ್ತು ಎಂದು ಸೋನಿಯಾ ಅಭಿಪ್ರಾಯಪಟ್ಟಿದ್ದಾರೆ. ರಾಜೀವ್ ಗಾಂಧಿ ಈ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿ, ಮುಂದಿನ ಚುನಾವಣೆಯವರೆಗೆ ಕಾಯುವಂತೆ ಇಂದಿರಾ ಗಾಂಧಿಯವರಿಗೆ ಸಲಹೆ...

GMPL ಘಟಕದಿಂದ ಪರಿಸರಕ್ಕೆ ಕುತ್ತು: ಜನವಸತಿ ಪ್ರದೇಶದಲ್ಲಿ ವಿಷ...

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲ್ಲೂಕಿನ ಬಜ್ಪೆ ಶಾಂತಿಗುಡ್ಡೆ ಪರಿಸರದ ಜನರು ಕೆಲವು ದಿನಗಳಿಂದ ಆತಂಕದಿಂದಲೇ ಬದುಕನ್ನು ಸಾಗಿಸುವಂತಾಗಿದೆ. ತಮ್ಮ ಪರಿಸರ ವಿಶೇಷ ಆರ್ಥಿಕ ವಲಯವಾಗಿದ್ದರೂ, ಪರಿಸರದ ಮನೆಗಳ ಅಂಗಳ, ಬಾವಿಗಳ ನೀರಿಗೂ...

“275 ಖಾಸಗಿ ಆಸ್ಪತ್ರೆಗಳ ಜೊತೆಗೆ ಒಡಂಬಡಿಕೆ ಆಗಿದೆ. ಈ ಪ್ರಮಾಣ ಇನ್ನೂ ಹೆಚ್ಚಲಿದೆ. ಸಿಬ್ಬಂದಿ ಕರ್ತವ್ಯನಿರತ ಊರಿನಲ್ಲೇ ಚಿಕಿತ್ಸೆ ಪಡೆಯಬಹುದು. ನೌಕರರ ಕುಟುಂಬದವರು ಅವರು ನೆಲೆಸಿರುವ ಊರಿನಲ್ಲಿ ನಗದು ರಹಿತವಾಗಿ ಚಿಕಿತ್ಸೆ ಪಡೆಯಬಹುದಾದ ಅತ್ಯಂತ ಸುಲಲಿತ ಯೋಜನೆ ಇದಾಗಿದೆ. ನಮ್ಮ ನೌಕರರು ಮತ್ತು ಕುಟುಂಬದವರು ಇದರ ಸದುಪಯೋಗ ಪಡಿಸಿಕೊಳ್ಳಿ” ಎಂದು ಕರೆ ನೀಡಿದರು.

“ಸಮಾಜದಲ್ಲಿ ಲಿಂಗ ತಾರತಮ್ಯ ಇರುವುದರಿಂದ ಮಹಿಳೆಯರ ಆರ್ಥಿಕ‌ ಸಾಮರ್ಥ್ಯ ಹೆಚ್ಚಿಸಲು ಶಕ್ತಿ ಮತ್ತು ಇತರೆ ಯೋಜನೆಗಳ ಮೂಲಕ ಮಹಿಳೆಯರಿಗೆ ಅನುಕೂಲ ಮತ್ತು ಶಕ್ತಿ ಹೆಚ್ಚಿಸಿದ್ದೇವೆ. ಶಕ್ತಿ ಯೋಜನೆ ಪರಿಣಾಮ ಧಾರ್ಮಿಕ‌ ಸ್ಥಳಗಳು ಮತ್ತು ಪ್ರವಾಸೋದ್ಯಮ ಸಂಸ್ಥೆಗಳಿಗೆ ಭಕ್ತರ ಮತ್ತು ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದೆ. ಈ ಬಗ್ಗೆ ಧರ್ಮಸ್ಥಳದ ಧರ್ಮಾಧಿಕಾರಿಗಳೂ ನನಗೂ ಪತ್ರ ಬರೆದಿದ್ದಾರೆ” ಎಂದು ಉಲ್ಲೇಖಿಸಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಾತಾಳ ಸೀಳಿ ಪೈರಾಗಿ ಎದ್ದವನು: ಕನ್ನಡ ಮನಸ್ಸಿನಲ್ಲಿ ಬಲೀಂದ್ರನ ಬಹುರೂಪ

ಸತ್ಯನಿಷ್ಠೆ, ಮಹೋದಾರತೆ ಮತ್ತು ಶ್ರಮಸಂಸ್ಕೃತಿಯ ಫಲವಂತಿಕೆಯಾಗಿ ಸಾವನ್ನು ಗೆದ್ದು ಜನಮಾನಸದಲ್ಲಿ ನೆಲೆಗೊಂಡಿರುವ...

ಸಿದ್ದರಾಮಯ್ಯ ಮತ್ತು ನನ್ನ ನಡುವೆ ಯಾವುದೇ ಮುನಿಸಿಲ್ಲ: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ನನ್ನ ನಡುವೆ ದೊಡ್ಡ ಮುನಿಸೂ ಇಲ್ಲ,...

ಅಕ್ರಮ ಮನೆಗಳ ಸಕ್ರಮ ಶುಲ್ಕದಲ್ಲಿ ಶೇ.50ರಷ್ಟು ಭಾರೀ ರಿಯಾಯಿತಿ: ಸಿಎಂ ಡಿ ಕೆ ಶಿವಕುಮಾರ್‌

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಭೂಸ್ವಾಧೀನಕ್ಕೊಳಪಟ್ಟ ಜಮೀನಿನಲ್ಲಿ 2008ರ ಆಗಸ್ಟ್ 10ರ ಪೂರ್ವದಲ್ಲಿ...

ಹಾಸನ ಡಿಸಿ ಕಚೇರಿಯಲ್ಲಿ ಲಂಚಾವತಾರ ಆರೋಪ: ಎಚ್‌ಡಿಕೆ ಕೈಯಲ್ಲಿ 15 ಪುಟಗಳ ವಾಟ್ಸ್‌ಆ್ಯಪ್‌ ಚಾಟ್; ಸಿಕ್ಕಿದ್ದು ಹೇಗೆ?

ಕರ್ನಾಟಕದ ರಾಜಕೀಯ ವಲಯದಲ್ಲಿ ಮತ್ತೊಮ್ಮೆ ಭ್ರಷ್ಟಾಚಾರದ ಗಂಭೀರ ಆರೋಪಗಳು ಮುನ್ನೆಲೆಗೆ ಬಂದಿವೆ....