ಇನ್ಸ್‌ಪೆಕ್ಟರ್‌ಗೆ ಜಾತಿ ನಿಂದನೆ: ಪ್ರತಾಪ್ ಸಿಂಹ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲು

Date:

ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ಅವರ ವಿರುದ್ಧ ಜಾತಿ ನಿಂದನೆ ಮಾಡಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರ ವಿರುದ್ಧ ಜಿಲ್ಲೆಯ ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.

ಅಂಬೇಡ್ಕರ್ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ಮಧು ಅವರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಈ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇನ್ಸ್‌ಪೆಕ್ಟರ್ ಧನಂಜಯ್ ಅವರ ಜಾತಿ ಹೆಸರನ್ನು ಪ್ರಸ್ತಾಪಿಸಿ ಪ್ರತಾಪ್ ಸಿಂಹ ಅವರು ಅವಹೇಳನ ಮಾಡಿದ್ದಾರೆ ಎಂದು ದೂರಿನಲ್ಲಿ ಗಂಭೀರ ಆರೋಪ ಮಾಡಲಾಗಿದೆ.

ಇತ್ತೀಚೆಗೆ ನಡೆದ ಗಣೇಶೋತ್ಸವ ಮೆರವಣಿಗೆಯ (ಶೋಭಾಯಾತ್ರೆ) ಸಂದರ್ಭದಲ್ಲಿ ಟಿ.ನರಸೀಪುರ ಠಾಣೆಯ ಇನ್ಸ್‌ಪೆಕ್ಟರ್ ಧನಂಜಯ್ ಅವರು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಎಚ್ಚರಿಕೆ ನೀಡಿದ್ದರು. ಪೊಲೀಸ್ ಕ್ರಮವನ್ನು ವಿರೋಧಿಸಿ ಬಿಜೆಪಿ ನಾಯಕರು ತೀವ್ರ ಪ್ರತಿಭಟನೆ ನಡೆಸಿದ್ದರು. ಈ ಪ್ರತಿಭಟನೆಯ ಮುಂಚೂಣಿಯಲ್ಲಿದ್ದ ಪ್ರತಾಪ್ ಸಿಂಹ ಅವರು, ಪೊಲೀಸರಿಗೆ ನೇರ ಸವಾಲು ಹಾಕಿ ಶೋಭಾಯಾತ್ರೆಯಲ್ಲಿ ಪಾಲ್ಗೊಂಡಿದ್ದರು. ನಿಯಮ ಉಲ್ಲಂಘಿಸಿದ್ದಲ್ಲದೆ ದಲಿತ ಸಮದಾಯಗಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಕಾರಣ ಮೊದಲ ಎಫ್‌ಐಆರ್ ದಾಖಲಾಗಿತ್ತು.

ಈ ಬೆಳವಣಿಗೆಗಳ ಬೆನ್ನಲ್ಲೇ, ದಲಿತ ಸಂಘರ್ಷ ಸಮಿತಿ (ಡಿಎಸ್ಎಸ್) ಹಾಗೂ ಇತರ ಕೆಲವು ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಈ ವೇಳೆ ಪ್ರತಾಪ್ ಸಿಂಹ ಹಾಗೂ ಪ್ರತಿಭಟನಾಕಾರರ ನಡುವೆ ತೀವ್ರ ಸ್ವರೂಪದ ಮಾತಿನ ಚಕಮಕಿ ಮತ್ತು ವಾಗ್ವಾದ ನಡೆದಿತ್ತು ಎನ್ನಲಾಗಿದೆ. ಇದೇ ಸಂದರ್ಭದಲ್ಲಿ ಪ್ರತಾಪ್ ಸಿಂಹ ಅವರು ಇನ್ಸ್‌ಪೆಕ್ಟರ್ ಧನಂಜಯ್ ಅವರನ್ನು ಗುರಿಯಾಗಿಸಿ ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಇದೀಗ ಮಧು ಅವರು ದೂರು ನೀಡಿದ್ದಾರೆ. ಈ ದೂರಿನ ಅನ್ವಯ ಪೊಲೀಸರು ಎರಡನೇ ಎಫ್‌ಐಆರ್ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಸಿಡಿಲು ಬಡಿದು ರೈತ ಸಾವು

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು ರೈತರೊಬ್ಬರು ಮೃತಪಟ್ಟಿರುವ ಘಟನೆ...

ಸಮುದ್ರತೀರ, ಪಾರ್ಟಿ ಆಚೆಗಿನ ನೈಜ ಗೋವಾವನ್ನು ದೇಶದ ಮುಂದೆ ತರುತ್ತೇವೆ: ನಿರ್ದೇಶಕ ಆದಿತ್ಯ ಜಾಂಭಳೆ

ಗೋವಾ ಎಂದರೆ ತಕ್ಷಣವೇ ಕಣ್ಣಮುಂದೆ ಬರುವ ಸಮುದ್ರತೀರಗಳು, ಪ್ರವಾಸೋದ್ಯಮ ಹಾಗೂ ಪಾರ್ಟಿಗಳ...

ಚಿತ್ರರಂಗದ ತೀರ್ಪುಗಾರರ ಮಂಡಳಿಯಲ್ಲಿ ಮಹಿಳೆಯರ ಭಾಗವಹಿಸುವಿಕೆ ಹೆಚ್ಚಿಸಿ: ರಾಷ್ಟ್ರಪತಿ ದ್ರೌಪದಿ ಮುರ್ಮು

ಚಿತ್ರರಂಗದ ನಿರ್ಧಾರ ಕೈಗೊಳ್ಳುವ ಪ್ರಕ್ರಿಯೆಯಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸಬೇಕು ಎಂದು ರಾಷ್ಟ್ರಪತಿ...

ಲಖೀಂಪುರ್ ಖೇರಿ ಪ್ರಕರಣ: ವಿಚಾರಣಾ ನ್ಯಾಯಾಧೀಶರ ಮೇಲೆ ಸಂತ್ರಸ್ತರಿಗೆ ಅನುಮಾನ; ಹೈಕೋರ್ಟ್ ಪರಿಶೀಲನೆಗೆ ಸುಪ್ರೀಂ ಸೂಚನೆ

ಲಖೀಂಪುರ್ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣಾ ನ್ಯಾಯಾಧೀಶರ ನಡವಳಿಕೆ ಮತ್ತು...