ಜಾತಿ ಜನಗಣತಿ | ಡಿಸೆಂಬರ್‌ನಲ್ಲಿ ವರದಿ ಸಲ್ಲಿಸುವ ನಿರೀಕ್ಷೆ ಇದೆ : ಸಿಎಂ ಸಿದ್ದರಾಮಯ್ಯ

Date:

  • ಜಾತಿ ಜನಗಣತಿ: ಒಕ್ಕಲಿಗರ ಸಂಘ ಮನವಿ ಸಲ್ಲಿಸಿದೆ
  • ‘ವರದಿ ಕೊಟ್ಟ ಮೇಲೆ ತೀರ್ಮಾನ ಕೈಗೊಳ್ಳಲಾಗುವುದು’

ಜಾತಿ ಜನಗಣತಿ ಪಡೆಯದಿರುವಂತೆ ಒಕ್ಕಲಿಗರ ಸಂಘ ಮನವಿ ಸಲ್ಲಿಸಿದ್ದು, ವರದಿ ಕೊಡುವ ಮುನ್ನವೇ ಏಕೆ ವಿರೋಧಿಸುತ್ತಿದ್ದೀರಿ ಎಂದು ಕೇಳಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬೆಂಗಳೂರಿನಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಜಾತಿ ಜನಗಣತಿ ವರದಿ ಇನ್ನೂ ನಮ್ಮ ಕೈ ಸೇರಿಲ್ಲ. ಕೊಟ್ಟ ಮೇಲೆ ತೀರ್ಮಾನ ಕೈಗೊಳ್ಳಲಾಗುವುದು” ಎಂದರು.

ಡಿಸಿಎಂ ಡಿಕೆ ಶಿವಕುಮಾರ್ ಅವರು ಸೇರಿದಂತೆ ಒಕ್ಕಲಿಗ ಸಮುದಾಯದ ಮುಖಂಡರು ಜಾತಿ ಜನಗಣತಿ ವರದಿ ತಿರಸ್ಕರಿಸಬೇಕೆಂದು ಮನವಿ ಸಲ್ಲಿಸಿರುವ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮೂಲಪ್ರತಿ ಕಾಣೆಯಾಗಿದೆ ಎಂದು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿ, “ಈ ಬಗ್ಗೆ ನನಗೆ ತಿಳಿದಿಲ್ಲ. ನನ್ನನ್ನು ಭೇಟಿಯಾಗಿ ವರದಿ ಸಲ್ಲಿಸಲಾಗುವುದು ಎಂದಿದ್ದಾರೆ.  ಅಲ್ಲಿಯವರೆಗೆ ಅವಧಿ ವಿಸ್ತರಣೆ ಮಾಡಿ ಎಂದು ಮನವಿ ಮಾಡಿದ್ದಾರೆ” ಎಂದರು.

“ವರದಿ ಯಾವಾಗ ಕೊಡುತ್ತಾರೋ ಅಲ್ಲಿಯವರೆಗೆ ಅವಧಿ ವಿಸ್ತರಣೆಯಾಗುತ್ತದೆ. 162 ಕೋಟಿ ಖರ್ಚು ಮಾಡಿ ವರದಿ ತಯಾರಿಸಲಾಗಿದೆ. ವರದಿ ಬಂದ ನಂತರ ಅವರ ಸಂಶಯಗಳ ನಿವಾರಣೆಯಾಗಲಿದೆಯೋ ಇಲ್ಲವೋ ನೋಡೋಣ. ವರದಿಯಲ್ಲಿ ಏನಿದೆ ಎಂದು ತಿಳಿದಿಲ್ಲ. ಡಿಸೆಂಬರ್‌ನಲ್ಲಿ ವರದಿ ಸಲ್ಲಿಸುವ ನಿರೀಕ್ಷೆ ಇದೆ” ಎಂದರು.

ಡಿಸಿಎಂ ನನ್ನೊಂದಿಗೆ ಈ ಬಗ್ಗೆ ಏನನ್ನೂ ಮಾತನಾಡಿಲ್ಲ ಎಂದು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು. ನಿಗಮ ಮಂಡಳಿಗಳ ನೇಮಕಾತಿಗೆ ಸಂಬಂಧಿಸಿದಂತೆ ಪೂರ್ವಭಾವಿ ಚರ್ಚೆಯಾಗಿದ್ದು ಯಾರನ್ನು ಮಾಡಬೇಕೆಂಬ ಬಗ್ಗೆ ಅಂತಿಮಗೊಳಿ ಸಿಲ್ಲ ಎಂದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ತಾಯಿಯ ಫೋಟೋ ವೈರಲ್ ಮಾಡುವುದಾಗಿ ಬೆದರಿಸಿ ಮಗಳ ನಗ್ನ ಫೋಟೋ ಪಡೆದ ಕಾಮುಕ

ಅಶ್ಲೀಲವಾಗಿ ಎಡಿಟ್ ಮಾಡಿದ ತಾಯಿ ಫೋಟೋಗಳನ್ನು ಮಗಳಿಗೆ ಕಳುಹಿಸಿ ವೈರಲ್ ಮಾಡುವುದಾಗಿ...

ಹಾಸನ ಪೆನ್‌ಡ್ರೈವ್ ಪ್ರಕರಣ | ಎಸ್‌ಐಟಿ ತಂಡದ ಮುಖ್ಯಸ್ಥರಾಗಿ ಎಡಿಜಿಪಿ ಬಿಜಯ್ ಕುಮಾರ್ ಸಿಂಗ್ ನೇಮಕ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ವಿಶೇಷ ತನಿಖಾ...

ಹಾಸನ ಪೆನ್‌ಡ್ರೈವ್ ಪ್ರಕರಣ | ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಎಫ್‌ಐಆರ್

ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್...

ದೇಶಪ್ರೇಮಿ ಯುವಜನರ ಸಮಾವೇಶ | ಪಕೋಡಾ ಪ್ರದರ್ಶಿಸಿ ಪ್ರಧಾನಿ ಮೋದಿ ವಿರುದ್ಧ ಆಕ್ರೋಶ

ದೇಶವನ್ನು ಅಭಿವೃದ್ಧ ಪತದಲ್ಲಿ ಕೊಂಡೊಯ್ಯುತ್ತೇವೆ ಎಂದಿದ್ದ ಮೋದಿ, ವರ್ಷಕ್ಕೆ 2 ಕೋಟಿ...