ಜಾತಿಗಣತಿ | ಕೇಂದ್ರ-ರಾಜ್ಯಕ್ಕೆ ಸಂಘರ್ಷವಿಲ್ಲ, ತಂತ್ರಜ್ಞಾನ ಬಳಸಿ 16 ದಿನದಲ್ಲಿ ಸಮೀಕ್ಷೆ: ಸಚಿವ ಪರಮೇಶ್ವರ್

Date:

ತಂತ್ರಜ್ಞಾನ ಉಪಯೋಗಿಸಿಕೊಂಡು 16 ದಿನಗಳಲ್ಲಿ ಜಾತಿ ಜನಗಣತಿ ಸಮೀಕ್ಷೆ ಮಾಡಬಹುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು‌.

- Advertisement -

ಸದಾಶಿವನಗರದ ಗೃಹ ಕಚೇರಿಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಜಾತಿಗಣತಿ ಸಮೀಕ್ಷೆ ವಿಚಾರದಲ್ಲಿ ಕೇಂದ್ರ ಸರ್ಕಾರಕ್ಕು ಮತ್ತು ರಾಜ್ಯಕ್ಕೆ ಸಂಘರ್ಷ ಏನೂ ಇಲ್ಲ. ರಾಜ್ಯದ ಮಟ್ಟಿಗೆ ನಾವು ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಸ್ಥಿತಿಗತಿ ತಿಳಿಯಲು ಸಮೀಕ್ಷೆ ಮಾಡುತ್ತಿದ್ದೇವೆ. ರಾಜ್ಯದ ವತಿಯಿಂದ ನಮಗೆನು ಮಾನದಂಡಗಳಲ್ಲಿ ಬೇಕು ಅದನ್ನು ಮಾಡುತ್ತೇವೆ. ಕೇಂದ್ರ ಸರ್ಕಾರ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕವಾಗಿ ಸಮೀಕ್ಷೆ ಮಾಡುವುದಿಲ್ಲ. ಯಾರು ಎಷ್ಟು ಜನ ಇದ್ದಾರೆ ಎಂಬ ಅಂಕಿ ಅಂಶವನ್ನು ಮಾತ್ರ ಕೇಂದ್ರ ಮಾಡುತ್ತದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಎಸ್ಐಟಿ ತಂಡದಿಂದ ಐಪಿಎಸ್ ಅಧಿಕಾರಿ ಹೊರಗುಳಿಯುವ ವಿಚಾರದ ಕುರಿತು ಮಾತನಾಡಿ, “ಅಧಿಕೃತವಾಗಿ ನನಗೆ ಅವರು ಮಾಹಿತಿ ತಿಳಿಸಿಲ್ಲ. ಆದರೆ ಅನ್‌ಅಫಿಷಿಯಲ್ ಆಗಿ ಅವರು ತಂಡದಿಂದ ಹೊರಗುಳಿಯುವ ವಿಚಾರಕ್ಕೆ ಪತ್ರ ಬರೆದಿರುವುದು ಗೊತ್ತಾಗಿದೆ. ವೈಯಕ್ತಿಕ ಕಾರಣ ಇದೆ. ಹಾಗಾಗಿ ತಂಡದಿಂದ ಹೊರಗುಳಿಯುವ ಬಗ್ಗೆ ಮಾಹಿತಿ ಕೊಟ್ಟಿದ್ದಾರೆ. ಒಂದು ವೇಳೆ ಆ ರೀತಿ ಇದ್ದರೆ, ಅವರನ್ನು ಬದಲಾಯಿಸಲಾಗುವುದು” ಎಂದು ತಿಳಿಸಿದರು.‌

ಆಂಧ್ರಪ್ರದೇಶದಲ್ಲಿ ಬೆಂಗಳೂರಿನ ಬಿಜೆಪಿ ಮುಖಂಡರ ಹತ್ಯೆ ಪ್ರಕರಣದ‌ಕುರಿತು ಪ್ರತಿಕ್ರಿಯಿಸಿ, “ಆಂಧ್ರಪ್ರದೇಶ ಪೊಲೀಸರು ತನಿಖೆ ಮಾಡುತ್ತಾರೆ. ಹತ್ಯೆಯಾದವರು ನಮ್ಮ ರಾಜ್ಯದವರು ಆಗಿರುವುದರಿಂದ ಆಂಧ್ರ ಪೊಲೀಸರು ಇಲ್ಲಿಗೂ ಬಂದು ತನಿಖೆ ಮಾಡುತ್ತಾರೆ. ಆ ರಾಜ್ಯದ ಪೊಲೀಸರ ತನಿಖೆಗೆ ನಮ್ಮ ಪೊಲೀಸರು ಸಹಕಾರ ಮಾಡುತ್ತಾರೆ” ಎಂದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು ಎಂಆರ್‌ಪಿಎಲ್ ದುರಂತ: ಮೃತ ಕಾರ್ಮಿಕನ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

ಮಂಗಳೂರಿನ ಎಂಆರ್‌‌ಪಿಎಲ್ (MRPL) ಕಾರ್ಖಾನೆಯಲ್ಲಿ ನಡೆದ ದಾರುಣ ಅಪಘಾತದಲ್ಲಿ ಜೀವ ಕಳೆದುಕೊಂಡ...

‘ಎಫ್ಐಆರ್ ದಾಖಲಾಗುವವರೆಗೂ ಚುನಾವಣಾ ಆಯೋಗದ ಕಚೇರಿಯಿಂದ ಕದಲೋದೆ ಇಲ್ಲ’: ಪಟ್ಟು ಹಿಡಿದು ಕುಳಿತ ಸಿಎಂ

'ಎಫ್ಐಆರ್ ದಾಖಲಾಗುವವರೆಗೂ ಕದಲುವುದೇ ಇಲ್ಲ' ಎಂದು ಸ್ಪಷ್ಟವಾಗಿ ಹೇಳಿರುವ ಮುಖ್ಯಮಂತ್ರಿ ಡಿ.ಕೆ....

KPSC ನೇಮಕಾತಿ ಹಗರಣ: SIT ರಚನೆಗೆ ಸುಪ್ರೀಂ ತಡೆ

KPSC (ಕರ್ನಾಟಕ ಲೋಕಸೇವಾ ಆಯೋಗ) ನಡೆಸಿದ್ದ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣದ ತನಿಖೆಗೆ...

ನಾಳೆ ‘ಕೊಂದವರು ಯಾರು?’ ರಾಷ್ಟ್ರೀಯ ವಿಚಾರ ಸಂಕಿರಣ: ಪಿತೃಪ್ರಧಾನತೆ, ಹೊಣೆಗಾರಿಕೆ ಕುರಿತು ಚರ್ಚೆಗೆ ವೇದಿಕೆ

ಕರ್ನಾಟಕದ ‘ನಾವೆದ್ದು ನಿಲ್ಲದಿದ್ದರೆ' ಸಂಘಟನೆಯು ಆರಂಭಿಸಿರುವ 'ಕೊಂದವರು ಯಾರು? Who Killed...