ಜಾತಿ ಗಣತಿ | ತಮ್ಮದೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಶಾಮನೂರು

Date:

  • ಒಕ್ಕಲಿಗರ ವಿರೋಧದ ಬೆನ್ನಲ್ಲೇ ಲಿಂಗಾಯತ ಸಮುದಾಯದಿಂದಲೂ ವಿರೋಧ
  • ಹೊಸದಾಗಿ, ವೈಜ್ಞಾನಿಕವಾಗಿ ವರದಿ ಸಿದ್ಧಪಡಿಸಲು ಶಾಮನೂರು ಆಗ್ರಹ

ರಾಜ್ಯ ಸರ್ಕಾರದ ಮಹತ್ವದ ಜಾತಿ ಗಣತಿಗೆ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಗುರುವಾರ ಆರೋಪಿಸಿದ್ದಾರೆ. ಈ ಮೂಲಕ ತಮ್ಮದೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ರಾಜ್ಯ ಸರ್ಕಾರದ ಮಹತ್ವದ ಜಾತಿ ಗಣತಿ ವರದಿಗೆ ಒಕ್ಕಲಿಗರ ಪ್ರಬಲ ವಿರೋಧದ ಬೆನ್ನಲ್ಲೇ ಇದೀಗ ಲಿಂಗಾಯತ ಸಮುದಾಯದಿಂದಲೂ ತೀವ್ರ ವಿರೋಧ ವ್ಯಕ್ತವಾದಂತೆ ಕಾಣುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

ಬೆಂಗಳೂರಿನ ಸದಾಶಿವನಗರದಲ್ಲಿರುವ ಮಹಾಸಭಾದ ಕಚೇರಿಯಲ್ಲಿ ನಡೆದ ಸಭೆಯ ಬಳಿಕ ಮಾಹಿತಿ ನೀಡಿದ ಅವರು, “ನಮ್ಮ ಸಮುದಾಯದ ಮನೆ ಮನೆಗಳಿಗೆ ಹೋಗಿ ಸಮೀಕ್ಷೆ ನಡೆಸಿಲ್ಲ. ಮನೆಯಲ್ಲೇ ಕುಳಿತು ವರದಿ ಸಿದ್ಧಪಡಿಸಲಾಗಿದೆ” ಎಂದು ಆರೋಪಿಸಿದ್ದಾರೆ.

“ಜಾತಿ ಗಣತಿ ಸಮೀಕ್ಷೆ ಸಮರ್ಪಕವಾಗಿ ನಡೆದಿಲ್ಲ. ಹಲವರ ಮನೆಗಳಿಗೆ ಭೇಟಿ ನೀಡದೆ ವರದಿ ಸಿದ್ಧಪಡಿಸಲಾಗಿದೆ ಎಂಬ ದೂರುಗಳು ಕೇಳಿ ಬಂದಿವೆ. ಈ ಸಮೀಕ್ಷೆಯಲ್ಲಿ ವೀರಶೈವ ಲಿಂಗಾಯತ ಸಮುದಾಯದ ಜನ ಸಂಖ್ಯೆಯನ್ನು ಕಡಿಮೆ ತೋರಿಸಲಾಗಿದೆ. ಇದರಿಂದ ಸಮಾಜಕ್ಕೆ ತೀವ್ರ ಸ್ವರೂಪದ ನಷ್ಟವಾಗಲಿದೆ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಜಿಲ್ಲಾ, ತಾಲ್ಲೂಕು ಪಂಚಾಯತಿ ಚುನಾವಣೆ | ಸರ್ಕಾರಕ್ಕೆ ನಾಲ್ಕು ವಾರದ ಗಡುವು ನೀಡಿದ ಹೈಕೋರ್ಟ್

“ಜಾತಿ ಜನಗಣತಿ ಲೋಪದೋಷ ಪರಿಹರಿಸಲು ವೀರಶೈವ ಲಿಂಗಾಯತ ಮಹಾಸಭಾ ಒತ್ತಾಯಿಸುತ್ತಿದೆ. ಜನಗಣತಿಯ ಅಂಕಿ ಅಂಶಗಳಲ್ಲಿ ಸಾಕಷ್ಟು ಲೋಪದೋಷಗಳಿವೆ. ಮತ್ತೊಮ್ಮೆ ವೈಜ್ಞಾನಿಕವಾಗಿ ಜಾತಿ ಗಣತಿ ಮಾಡಬೇಕು” ಎಂದು ಶಾಮನೂರು ಆಗ್ರಹಿಸಿದ್ದಾರೆ.

“ಎಲ್ಲರ ಒಳಿತು ಬಯಸುವುದು ನಮ್ಮ ಸಮುದಾಯದ ಗುರಿ. ನಾವು ಜಾತಿ ಗಣತಿಯ ವಿರೋಧಿಗಳಲ್ಲ. ಆದರೆ ಯಾವುದೇ ವರದಿ ವೈಜ್ಞಾನಿಕವಾಗಿರಬೇಕು ಎಂಬುದು ನಮ್ಮ ಒತ್ತಾಯ. ಈ ಜಾತಿ ಗಣತಿ ವರದಿ ಈಗಾಗಲೇ 8 ವರ್ಷದಷ್ಟು ಹಳೆಯದಾಗಿದೆ” ಎಂದು ತಿಳಿಸಿದರು.

“ವರದಿಯು ಹಲವು ನ್ಯೂನತೆಗಳಿಂದ ಕೂಡಿದೆ. ಹೊಸದಾಗಿ ಮತ್ತು ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ವೈಜ್ಞಾನಿಕವಾಗಿ ವರದಿ ಸಿದ್ಧಪಡಿಸಬೇಕು. ಸರ್ಕಾರ ಮತ್ತೊಮ್ಮೆ ಪರಾಮರ್ಶಿಸಿ ಮುಂದಿನ ಕ್ರಮ ಕೈಗೊಳ್ಳಬೇಕು” ಎಂದು ಶಾಮನೂರು ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಕರ್ನಾಟಕ SIR | ಅರ್ಹರ ಹೆಸರು ಡಿಲೀಟ್‌ ಮಾಡಲು ಬಿಜೆಪಿಗೆ ‘ಫಾರ್ಮ್‌-7’ ಟೂಲ್‌ಕಿಟ್; ಷಡ್ಯಂತ್ರ ಬಹಿರಂಗ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಿಜೆಪಿಗರು ‘ಫಾರ್ಮ್‌-7’ಅನ್ನು ದುರ್ಬಳಕೆ ಮಾಡಿಕೊಳ್ಳುತತಿದ್ದಾರೆ. ಈ...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

SIR | ಮತ ಡಿಲೀಟ್‌ ಮಾಡಲು ಒಳಸಂಚು ಆರೋಪ : ಭಾಲ್ಕಿಯಲ್ಲಿ 32 ಜನರ ವಿರುದ್ಧ FIR

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಯಾವುದೇ ಆಧಾರ...