ಜಾತಿ ಗಣತಿ | ಇಂದು ಮಹತ್ವದ ಸಚಿವ ಸಂಪುಟ ಸಭೆ; ಮೀಸಲಾತಿ ಪ್ರಮಾಣ ಶೇ.51ಕ್ಕೆ ಏರಿಕೆ?

Date:

Advertisements

ಜಾತಿ ಗಣತಿ ವರದಿ ಕುರಿತು ಮಹತ್ವದ ಚರ್ಚೆ ನಡೆಸುವ ವಿಶೇಷ ಸಚಿವ ಸಂಪುಟ ಸಭೆ ಇಂದು ಸಂಜೆ 4 ಗಂಟೆಗೆ ನಡೆಯಲ್ಲಿದ್ದು, ಮಂತ್ರಿಮಂಡಲ ತೆಗೆದುಕೊಳ್ಳುವ ನಿರ್ಣಯಗಳ ಬಗ್ಗೆ ರಾಜ್ಯದ ಜನತೆಯಲ್ಲಿ ತೀವ್ರ ಕುತೂಹಲ ಮೂಡಿದೆ.

ಎಚ್‌ ಕಾಂತರಾಜ್ ನೇತೃತ್ವದ ಹಿಂದುಳಿದ ವರ್ಗಗಳ ಆಯೋಗದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ದತ್ತಾಂಶಗಳ ಮಾಹಿತಿ ಆಧರಿಸಿ, ಮಾಜಿ ಸಂಸದ ಜಯಪ್ರಕಾಶ ಹೆಗಡೆ ಸಾರಥ್ಯದ ಹಿಂದುಳಿದ ವರ್ಗಗಳ ಆಯೋಗ ಕಳೆದ ವರ್ಷ ಫೆಬ್ರವರಿ ಅಂತ್ಯದಲ್ಲಿ ಸರ್ಕಾರಕ್ಕೆೆ ವರದಿ ಸಲ್ಲಿಸಿದೆ. ಅದರ ಜಾರಿ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದ ಸಹೋದ್ಯೋಗಿಗಳ ಜೊತೆ ಸುದೀರ್ಘ ಸಮಾಲೋಚನೆ ನಡೆಸಲಿದ್ದಾರೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಬಗ್ಗೆ ಚರ್ಚಿಸಬೇಕಾದ ಸಂಗತಿಗಳ ಅಜೆಂಡಾ ಸಿದ್ಧಪಡಿಸಿದೆ ಎಂದು ಉನ್ನತ ಮೂಲಗಳಿಂದ ತಿಳಿದು ಬಂದಿದೆ. ಜಾತಿ ಗಣತಿ ವರದಿಯಲ್ಲಿ ಶಿಫಾರಸು ಮಾಡಿದಂತೆ ಹಿಂದುಳಿದ ವರ್ಗಗಳ ಮೀಸಲಾತಿ ಪ್ರಮಾಣವನ್ನು ಶೇಕಡ 32ರಿಂದ 51ಕ್ಕೆ ಏರಿಕೆ ಮಾಡುವ ಕುರಿತು ಪ್ರಮುಖವಾಗಿ ಚರ್ಚೆ ನಡೆಯುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಉರ್ದು ನಮ್ಮದೇ ಸಂಸ್ಕೃತಿಯ ಭಾಗ; ಅನ್ಯ ಅಲ್ಲ- ಸುಪ್ರೀಮ್ ತೀರ್ಪು ಚೇತೋಹಾರಿ

ಜಾತಿ ಗಣತಿ ವರದಿಯಲ್ಲಿ ಸಮುದಾಯವಾರು, ಜಾತಿವಾರು, ಪ್ರವರ್ಗವಾರು ಎಷ್ಟು ಜನಸಂಖ್ಯೆ ಇದೆ ಎನ್ನುವ ಮಾಹಿತಿಯನ್ನು ಜಾತಿ ಗಣತಿ ವರದಿಯಲ್ಲಿ ತಿಳಿಸಲಾಗಿದೆ. ಈ ಅಂಕಿ, ಸಂಖ್ಯೆಗಳ ಬಗ್ಗೆ ಭಿನ್ನಾಭಿಪ್ರಾಯಗಳಿದ್ದು, ಸಚಿವರುಗಳು ಕ್ಯಾಬಿನೆಟ್ ಸಭೆಯಲ್ಲಿ ವರದಿಯ ಪರ ವಿರೋಧ ಚರ್ಚೆ ನಡೆಸುವ ಸಂಭವವಿದೆ.

ಜಾತಿ ಗಣತಿ ವರದಿಯಮುಖ್ಯಾಂಶಗಳ ಸಂಕ್ಷಿಪ್ತ ವರದಿ ಕಳೆದ ವಾರವೇ ಸಚಿವರ ಕೈ ಸೇರಿದ್ದು, ವರದಿ ಅಧ್ಯಯನ ನಡೆಸಿ ಗುರುವಾರದ ಸಂಪುಟ ಸಭೆಯಲ್ಲಿ ಅಭಿಪ್ರಾಯ ಮಂಡಿಸುವಂತೆ ಸೂಚಿಸಲಾಗಿತ್ತು. ಇದರ ಬೆನ್ನಲ್ಲೇ ವರದಿಯ ಮುಖ್ಯಾಂಶಗಳು ಮಾಧ್ಯಮಗಳಲ್ಲಿ ಬಹಿರಂಗಗೊಂಡಿದ್ದವು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X