ಕಾವೇರಿ ವಿವಾದ | ಕಾನೂನು ತಜ್ಞರ ಸಭೆ ಕರೆದ ಸಿಎಂ: ಎಚ್‌ ಕೆ ಪಾಟೀಲ್

Date:

  • ಶುಕ್ರವಾರದ ಸಭೆಯಲ್ಲಿ ಸಮಾಲೋಚಿಸಿ, ಸೂಕ್ತ ನಿರ್ಧಾರ
  • ಸಿಡಬ್ಲ್ಯೂಎಂಎ ಸಹ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕಿದೆ

ಕಾವೇರಿ ನದಿ ನೀರು ಹಂಚಿಕೆ ಸಮಸ್ಯೆ ಕುರಿತು ಚರ್ಚಿಸಲು ಮುಖ್ಯಮಂತ್ರಿಯವರು ನಾಳೆ (ಸೆ.29) ಸುಪ್ರೀಂಕೋರ್ಟ್‌, ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಗಳ, ವಕೀಲರ, ಜಲತಜ್ಞರ ಹಾಗೂ ಅನುಭವಿಗಳ ಸಭೆ ಕರೆದಿದ್ದಾರೆ ಎಂದು ಕಾನೂನು ಸಚಿವ ಎಚ್‌ ಕೆ ಪಾಟೀಲ್ ಹೇಳಿದರು.

ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆಯುವ ತಜ್ಞರ ಸಭೆಯಲ್ಲಿ ಸಮಾಲೋಚಿಸಿ, ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು” ಎಂದರು.

“ಕಾವೇರಿ ನದಿಯಲ್ಲಿ ನೀರು ಎಷ್ಟು ಹರಿಯುತ್ತಿದೆ, ಅಣೆಕಟ್ಟೆಯಲ್ಲಿ ಎಷ್ಟು ನೀರು ಕಡಿಮೆಯಾಗಿದೆ ಎನ್ನುವುದು ಈಗ ಎಲ್ಲರಿಗೂ ಗೊತ್ತಿರುವ ಸಂಗತಿ. ಬೆಂಗಳೂರಿನ ಜನತೆಗೆ ಕುಡಿಯಲು ನಾವು ನೀರನ್ನು ಉಳಿಸಿಕೊಳ್ಳಬೇಕು. ಬರದ ಈ ಸನ್ನಿವೇಶದದಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ(ಸಿಡಬ್ಲ್ಯೂಎಂಎ) ಸಹ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕಿದೆ” ಎಂದು ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಂತಃಕರಣವಿರುವವರ ನಿದ್ದೆಗೆಡಿಸುವ ಮೂರು ಸುದ್ದಿಗಳು

“ಸಂಕಷ್ಟದ ಸೂತ್ರ ಕಂಡುಹಿಡಿಯಲು ಸುಪ್ರೀಂಕೋರ್ಟ್‌ ಮತ್ತು ಸಿಡಬ್ಲ್ಯೂಎಂಎಗೆ ನಾವು ಒತ್ತಾಯ ಮಾಡುತ್ತಲೇ ಇದ್ದೇವೆ. ಕಾವೇರಿ ನದಿ ನೀರು ಕಡಿಮೆಯಾಗುತ್ತಿರುವುದರಿಂದ ಸಂಕಷ್ಟದ ಪರಿಸ್ಥಿತಿ ಎದುರಾಗಿದೆ. ಕಾನೂನಾತ್ಮಕವಾಗಿ ಜಾಗರೂಕತೆಯಿಂದ ಹೆಜ್ಜೆ ಇಡಬೇಕಿದೆ. ರಾಜ್ಯದ ಹಿತಕ್ಕೆ ಯಾವೆಲ್ಲ ಕ್ರಮಕೈಗೊಳ್ಳಬೇಕು ಅವೆಲ್ಲವನ್ನೂ ಮಾಡುತ್ತೇವೆ” ಎಂದು ತಿಳಿಸಿದರು.

“ಬರದಿಂದಾಗಿ ರಾಜ್ಯದ ಜನತೆ ಸಂಕಷ್ಟ ಎದುರಿಸುತ್ತಿದೆ. ಹತಾಶೆ, ಆಕ್ರೋಶ ವ್ಯಕ್ತಪಡಿಸಲು ರಾಜ್ಯ ಬಂದ್‌ ಕರೆ ನೀಡಿದ್ದಾರೆ. ಎಲ್ಲರೂ ಶಾಂತ ರೀತಿಯಿಂದ ಪ್ರತಿಭಟನೆ ನಡೆಸಲಿ. ಇದಕ್ಕೆ ನಮ್ಮ ಅಭ್ಯಂತರ ಇಲ್ಲ. ಆದರೆ ಅಹಿತಕರ ಘಟನೆಗಳು ಯಾವುದೇ ಕಾರಣಕ್ಕೂ ನಡೆಯಬಾರದು” ಎಂದರು.

ಇಂಡಿಯಾ ಒಕ್ಕೂಟ ಬಲಗೊಳಿಸಿಕೊಳ್ಳಲು ಕಾಂಗ್ರೆಸ್‌ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುತ್ತಿದೆ ಎನ್ನುವ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸಿ, “ಬಿಜೆಪಿಯವರು ಕ್ಷುಲ್ಲಕ ರಾಜಕಾರಣ ಮಾಡುವುದನ್ನು ಮೊದಲು ಬಿಡಬೇಕು. ಪ್ರಧಾನಿಗಳು ಎರಡೂ ರಾಜ್ಯದ ಮುಖ್ಯಮಂತ್ರಿಗಳ ಜೊತೆ ಮಾತನಾಡಿ ಸಮಸ್ಯೆ ಪರಿಹಾರಕ್ಕೆ ಯತ್ನಿಸಬೇಕು. ಇದು ರಾಜ್ಯಗಳ ನಡುವಿನ ವಿಶ್ವಾಸ ವೃದ್ಧಿಸಲು ಸಹಕಾರಿಯಾಗುತ್ತದೆ” ಎಂದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶುಕ್ಲಾ ಜೊತೆ ಕರಣ್ ಥಾಪರ್ ಮಾತುಕತೆ: ಮಹಾನಾಯಕನ ಐಬು ಮತ್ತು ಅಂಧಭಕ್ತರ ಹೂಂಕಾರ

ಭಾರತ ದೇಶ ಕಳೆದ ಹತ್ತು ವರ್ಷಗಳಿಂದ ಅದೆಂಥ ಕರಾಳಕೂಪಕ್ಕೆ ಜಾರುತ್ತಿದೆ ಎಂಬುದರ...

ಇಲ್ಲಾ ಗೌಡ್ರೇ, ಇದು ನ್ಯಾಯ ಅಲ್ಲ, ಇನ್ನು ನಿಲ್ಲಿಸ್ಬಿಡಿ ಸಾಕು: ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಮನವಿ

ಪ್ರಜ್ವಲ್‌ ರೇವಣ್ಣನ ವಿಡಿಯೋಗಳನ್ನ ನೋಡಿ ಹಾಸನದ ಜನ ಬೆಚ್ಚಿ ಬಿದ್ದಿದ್ದಾರೆ. ಮೊದಮೊದಲು...

ಶಿವಮೊಗ್ಗ | ಕ್ಷೇತ್ರದ ರಕ್ಷಣೆಗೆ, ಅಭಿವೃದ್ಧಿಗೆ ಆದ್ಯತೆ: ಗೀತಾ ಶಿವರಾಜ್‌ಕುಮಾರ್

ಶಿವಮೊಗ್ಗ ಜಿಲ್ಲೆಯಲ್ಲಿ ಅಧಿಕಾರವು ರಾಜಕಾರಣಿಗಳ ಬಳಿಯಿದೆ. ಸಮಸ್ಯೆಗಳು ಸಾಕಷ್ಟಿವೆ. ಆದರೂ, ಕೆಲವು...

ಚಿಕ್ಕಮಗಳೂರು | ಬಿಜೆಪಿ ಆಡಳಿತದಲ್ಲಿ ಅಭಿವೃದ್ಧಿ ಶೂನ್ಯ; ಜೆ.ಪಿ ಹೆಗ್ಡೆಗೆ ಜನ ಬೆಂಬಲ

ಚಿಕ್ಕಮಗಳೂರು ಹಾಗೂ ಉಡುಪಿ ಲೋಕಾಸಭಾ ಕ್ಷೇತ್ರವಾಗಿದೆ. ಎಂಟು ವಿಧಾನಸಭಾ ಕ್ಷೇತ್ರ ಒಳಗೊಂಡ...