ಕಾವೇರಿ ವಿವಾದ | ತಮಿಳು ಸಿಎಂ ವಿಜಯ್ ಬೆಂಗಳೂರು ಭೇಟಿ ಮುಂದೂಡಲು ಡಿಕೆಶಿ ಮನವಿ

Date:

ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ಮತ್ತೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ, ಆಗಸ್ಟ್ 3ರಂದು ನಿಗದಿಯಾಗಿದ್ದ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರ ಬೆಂಗಳೂರು ಭೇಟಿಯನ್ನು ಕೆಲ ದಿನಗಳ ಕಾಲ ಮುಂದೂಡುವಂತೆ ಮನವಿ ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

- Advertisement -

ವಿಧಾನಸೌಧದಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿದ ಅವರು, “ಪ್ರಸ್ತುತ ವಾತಾವರಣ ಸೌಹಾರ್ದಯುತ ಸಭೆಗೆ ಅನುಕೂಲಕರವಾಗಿಲ್ಲ. ಹೊರರಾಜ್ಯದ ಅತಿಥಿಯನ್ನು ಗೌರವಪೂರ್ವಕವಾಗಿ ಸ್ವಾಗತಿಸುವ ಪರಿಸ್ಥಿತಿ ಇರಬೇಕು. ಹೀಗಾಗಿ ಆಗಸ್ಟ್ 3ರ ಬದಲು ಮತ್ತೊಂದು ದಿನಾಂಕ ನಿಗದಿಪಡಿಸುವಂತೆ ತಮಿಳುನಾಡು ಮುಖ್ಯಮಂತ್ರಿಗೆ ಮನವಿ ಮಾಡಲು ಚರ್ಚಿಸಲಾಗುತ್ತಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

“ತಮಿಳುನಾಡು ಮುಖ್ಯಮಂತ್ರಿಗಳ ಕಚೇರಿಯಿಂದ ಕರ್ನಾಟಕದ ಮುಖ್ಯ ಕಾರ್ಯದರ್ಶಿಗೆ ಪತ್ರ ಬಂದಿದ್ದು, ಹಲವು ವಿಷಯಗಳ ಕುರಿತು ಚರ್ಚಿಸಲು ವಿಜಯ್ ಅವರು ಕರ್ನಾಟಕಕ್ಕೆ ಬರಲು ಬಯಸಿದ್ದಾರೆ. ಅದಕ್ಕೆ ರಾಜ್ಯ ಸರ್ಕಾರ ಸಮ್ಮತಿ ನೀಡಿ ಆಗಸ್ಟ್ 3ರಂದು ಸಭೆ ನಿಗದಿಪಡಿಸಿತ್ತು. ಆದರೆ, ಕಾವೇರಿ ವಿಚಾರವಾಗಿ ಪ್ರತಿಭಟನೆಗಳು ತೀವ್ರಗೊಂಡಿರುವುದರಿಂದ ಸಭೆಯನ್ನು ಮುಂದೂಡುವ ಚಿಂತನೆ ನಡೆದಿದೆ” ಎಂದು ಅವರು ವಿವರಿಸಿದರು.

“ಕಾವೇರಿ ನೀರು ನಿಯಂತ್ರಣ ಸಮಿತಿ ಪ್ರತಿದಿನ 3,500 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸುವಂತೆ ಸೂಚಿಸಿದೆ. ಇದರ ವಿರುದ್ಧ ಕರ್ನಾಟಕವು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮೇಲ್ಮನವಿ ಸಲ್ಲಿಸಿದ್ದರೂ, ಅದನ್ನು ಅಂಗೀಕರಿಸಲಾಗಿಲ್ಲ. ಮುಂದಿನ ಕಾನೂನು ಕ್ರಮಗಳ ಬಗ್ಗೆ ದೆಹಲಿಯ ಕಾನೂನು ತಜ್ಞರು, ಮಾಜಿ ಮುಖ್ಯಮಂತ್ರಿಗಳು, ವಿರೋಧ ಪಕ್ಷದ ನಾಯಕರು, ಕಾವೇರಿ ಭಾಗದ ಶಾಸಕರು ಹಾಗೂ ಸಂಸದರ ಅಭಿಪ್ರಾಯ ಪಡೆದು ತೀರ್ಮಾನಿಸಲಾಗುವುದು” ಎಂದು ಶಿವಕುಮಾರ್ ಹೇಳಿದರು.

“ಭಾನುವಾರ ಸರ್ವಪಕ್ಷ ಸಭೆ ಕರೆಯಲಾಗಿದ್ದು, ಅದರಲ್ಲಿ ಅಧಿಕಾರಿಗಳು ಮತ್ತು ಕಾನೂನು ತಜ್ಞರು ಪರಿಸ್ಥಿತಿಯನ್ನು ವಿವರಿಸಲಿದ್ದಾರೆ. ಸಭೆಯ ಬಳಿಕ ಸುಪ್ರೀಂ ಕೋರ್ಟ್ ಮೆಟ್ಟಿಲೇರಬೇಕೇ ಅಥವಾ ಬೇರೆ ಕ್ರಮ ಕೈಗೊಳ್ಳಬೇಕೇ ಎಂಬುದನ್ನು ನಿರ್ಧರಿಸಲಾಗುವುದು. ಎಲ್ಲರನ್ನು ವಿಶ್ವಾಸಕ್ಕೆ ಪಡೆಯದೆ ಯಾವುದೇ ಅಂತಿಮ ತೀರ್ಮಾನ ಕೈಗೊಳ್ಳುವುದಿಲ್ಲ” ಎಂದು ಅವರು ಸ್ಪಷ್ಟಪಡಿಸಿದರು.

ರಾಜ್ಯದ ಜಲಾಶಯಗಳಿಗೆ ಒಳಹರಿವು ಚೇತರಿಸಿಕೊಂಡಿರುವುದು ಸಮಾಧಾನಕರ ಸಂಗತಿ ಎಂದ ಅವರು, “ಹಾರಂಗಿ ಜಲಾಶಯದಲ್ಲಿ ಶೇ.95, ಕಬಿನಿಯಲ್ಲಿ ಶೇ.83, ಹೇಮಾವತಿಯಲ್ಲಿ ಶೇ.67 ಮತ್ತು ಕೆಆರ್‌ಎಸ್‌ನಲ್ಲಿ ಶೇ.36ರಷ್ಟು ನೀರು ಸಂಗ್ರಹವಾಗಿದೆ ಎಂದು ತಿಳಿಸಿದರು. ರಾಜ್ಯದ ಜಲಾಶಯಗಳಿಗೆ ಸುಮಾರು 25 ಸಾವಿರ ಕ್ಯೂಸೆಕ್ ಒಳಹರಿವು ಇದ್ದು, ಅದರಲ್ಲಿ 3,500 ಕ್ಯೂಸೆಕ್ ನೀರನ್ನು ಬಿಡುವಂತೆ ಸೂಚಿಸಲಾಗಿದೆ. ಹದಿನೈದು ದಿನಗಳಲ್ಲಿ ಸುಮಾರು 4.5 ಟಿಎಂಸಿ ನೀರು ಹರಿಸಬೇಕಾಗುತ್ತದೆ” ಎಂದರು.

“ಜುಲೈ ಅಂತ್ಯದವರೆಗೆ ಕರ್ನಾಟಕದಿಂದ ತಮಿಳುನಾಡಿಗೆ ಕೇವಲ 0.6 ಟಿಎಂಸಿ ನೀರು ಹರಿದಿದ್ದು, ಕಳೆದ ನೂರು ವರ್ಷಗಳಲ್ಲಿ ಇದೇ ಅವಧಿಯಲ್ಲಿ ಹರಿದಿರುವ ಅತಿ ಕಡಿಮೆ ಪ್ರಮಾಣವಾಗಿದೆ. ಇದೂ ಅಣೆಕಟ್ಟುಗಳಿಂದ ಉದ್ದೇಶಪೂರ್ವಕವಾಗಿ ಬಿಟ್ಟ ನೀರಲ್ಲ; ಬೆಂಗಳೂರು ಮತ್ತು ಸುತ್ತಮುತ್ತ ಸುರಿದ ಮಳೆಯಿಂದ ಸ್ವಾಭಾವಿಕವಾಗಿ ಹರಿದುಹೋದ ನೀರು” ಎಂದು ಅವರು ತಿಳಿಸಿದರು.

ಆಗಸ್ಟ್ 13ರಂದು ಕರ್ನಾಟಕ ಬಂದ್ ನಡೆಸುವ ಚರ್ಚೆ ನಡೆಯುತ್ತಿರುವುದಕ್ಕೂ ಪ್ರತಿಕ್ರಿಯಿಸಿದ ಅವರು, “ಬಂದ್‌ನಿಂದ ಸಮಸ್ಯೆಗೆ ಪರಿಹಾರ ಸಿಗುವುದಿಲ್ಲ. ಸರ್ಕಾರ ರಾಜ್ಯದ ರೈತರ ಪರವಾಗಿದ್ದು, ಜನರಿಗೆ ತೊಂದರೆ ಉಂಟುಮಾಡುವ ಬಂದ್ ನಡೆಸಬಾರದು” ಎಂದು ಕನ್ನಡಪರ ಸಂಘಟನೆಗಳು ಮತ್ತು ರೈತ ಸಂಘಟನೆಗಳಿಗೆ ಮನವಿ ಮಾಡಿದರು.

ಕಾವೇರಿ ವಿಚಾರದಲ್ಲಿ ಕೇಂದ್ರ ಸಚಿವರು ಮತ್ತು ರಾಜ್ಯದ ಸಂಸದರಿಂದ ಉತ್ತಮ ಸಹಕಾರ ದೊರೆತಿದೆ ಎಂದ ಶಿವಕುಮಾರ್, “ಮೂರು ಕೇಂದ್ರ ಸಚಿವರು ಸೇರಿದಂತೆ 36 ಸಂಸದರು ಸರ್ವಪಕ್ಷ ಸಭೆಯಲ್ಲಿ ಭಾಗವಹಿಸಿದ್ದರು. ಪ್ರಹ್ಲಾದ್ ಜೋಶಿ, ವಿ. ಸೋಮಣ್ಣ ಮತ್ತು ಶೋಭಾ ಕರಂದ್ಲಾಜೆ ಅವರಿಗೆ ಮೇಲ್ಮನವಿ ವಿವರಗಳನ್ನು ಕಳುಹಿಸಲಾಗಿದ್ದು, ಅವರು ಕೇಂದ್ರದ ಮೇಲೆ ಒತ್ತಡ ಹೇರಲು ಪ್ರಯತ್ನಿಸಿದ್ದಾರೆ” ಎಂದು ಹೇಳಿದರು.

ಈ ಲೇಖನ ಓದಿದ್ದೀರಾ?: ಬಿಜೆಪಿ ಸರ್ಕಾರಗಳಿಂದ ಸಂವಿಧಾನದ ಬಹುತ್ವಕ್ಕೆ ‘ಕೇಸರೀಕರಣ’ದ ಲೇಪನ!

“ತಮಿಳುನಾಡು 9.94 ಟಿಎಂಸಿ ನೀರು ಕೇಳಿದ್ದರೂ, ಸಮಿತಿ ಅದರ ಅರ್ಧಕ್ಕಿಂತ ಕಡಿಮೆ ಪ್ರಮಾಣದ ನೀರು ಹರಿಸುವಂತೆ ಸೂಚಿಸಿದೆ. ಆದರೂ ಕರ್ನಾಟಕದ ರೈತರ ಹಿತ, ಕುಡಿಯುವ ನೀರಿನ ಅಗತ್ಯ ಮತ್ತು ಕೆರೆಗಳನ್ನು ತುಂಬಿಸುವ ಜವಾಬ್ದಾರಿಯನ್ನು ಸರ್ಕಾರ ನಿರ್ಲಕ್ಷಿಸುವುದಿಲ್ಲ ಎಂದು ಅವರು ಹೇಳಿದರು. ಬೆಂಗಳೂರು ಸೇರಿದಂತೆ ಕುಡಿಯುವ ನೀರಿನ ಅಗತ್ಯಕ್ಕೆ ಸುಮಾರು 40 ಟಿಎಂಸಿ ನೀರು ಬೇಕಾಗಿದ್ದು, ಕುಡಿಯುವ ನೀರಿಗೆ ಸಮಸ್ಯೆಯಾಗುವುದಿಲ್ಲ” ಎಂದರು.

“ಮೇಕೆದಾಟು ಯೋಜನೆ ಕರ್ನಾಟಕಕ್ಕಿಂತ ತಮಿಳುನಾಡಿಗೇ ಹೆಚ್ಚು ಪ್ರಯೋಜನಕಾರಿಯಾಗಲಿದೆ. 66 ಟಿಎಂಸಿ ಸಾಮರ್ಥ್ಯದ ಈ ಯೋಜನೆಯ ನೀರನ್ನು ನೀರಾವರಿಗೆ ಬಳಸುವುದಿಲ್ಲ; ಕುಡಿಯುವ ನೀರು ಮತ್ತು ವಿದ್ಯುತ್ ಉತ್ಪಾದನೆಗೆ ಮಾತ್ರ ಬಳಸಲಾಗುತ್ತದೆ. ಸಂಕಷ್ಟದ ಸಮಯದಲ್ಲಿ ತಮಿಳುನಾಡಿಗೆ ನೀರು ಹರಿಸಲು ಈ ಸಮತೋಲನ ಅಣೆಕಟ್ಟು ನೆರವಾಗುತ್ತದೆ” ಎಂದರು.

ಮೇಕೆದಾಟು ಯೋಜನೆಯ ಡಿಪಿಆರ್ ತಿರಸ್ಕೃತವಾಗಿದೆ ಎಂಬ ವರದಿಗಳನ್ನೂ ಅವರು ತಳ್ಳಿಹಾಕಿದರು. “ಯೋಜನೆಯನ್ನು ತಿರಸ್ಕರಿಸಿಲ್ಲ; ಕೆಲವು ವಿಚಾರಗಳಲ್ಲಿ ಸ್ಪಷ್ಟನೆ ಕೇಳಲಾಗಿದ್ದು, ಅದನ್ನು ಶೀಘ್ರದಲ್ಲೇ ನೀಡಲಾಗುವುದು” ಎಂದು ತಿಳಿಸಿದರು.

“ರಾಜ್ಯದ ಹಿತ ಕಾಪಾಡುವುದು ಸರ್ಕಾರದ ಕರ್ತವ್ಯವಾಗಿದ್ದು, ತಮಿಳುನಾಡು ತನ್ನ ರಾಜ್ಯದ ಹಿತ ಕಾಯುವಂತೆ ಕರ್ನಾಟಕವೂ ತನ್ನ ರೈತರ ಮತ್ತು ಜನರ ಹಿತವನ್ನು ರಕ್ಷಿಸಲಿದೆ. ಸಮಸ್ಯೆಯನ್ನು ಕಾನೂನು ಚೌಕಟ್ಟಿನೊಳಗೆ ಮತ್ತು ಸೌಹಾರ್ದಯುತ ಮಾತುಕತೆ ಮೂಲಕ ಬಗೆಹರಿಸಲು ಪ್ರಯತ್ನಿಸಲಾಗುವುದು” ಎಂದು ಶಿವಕುಮಾರ್ ಹೇಳಿದರು.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ವಿರುದ್ಧ ಹೇಳಿಕೆ ಆರೋಪ; ಸಿಜೆಪಿ ನಾಯಕ ಸೌರವ್‌ ದಾಸ್‌ಗೆ ಮದ್ರಾಸ್ ಹೈಕೋರ್ಟ್ ನೋಟಿಸ್

ನ್ಯಾಯಾಂಗದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ CJP ವಕ್ತಾರ...

ಶಿಕಾರಿಪುರ | ಖಾಸಗಿ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಶಿಕಾರಿಪುರ ಪಟ್ಟಣದ ಗಬ್ಬೂರು ಸಮೀಪ ಗುರುವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ...

ಶಿವಮೊಗ್ಗ | ಸಾಮೂಹಿಕ ನಕಲಿಗೆ ಅವಕಾಶ! KSOU ಪ್ರಾದೇಶಿಕ ನಿರ್ದೇಶಕ ಬಿ.ಎಂ ಸ್ವಾಮಿ ವಿರುದ್ಧ ದೂರು

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (KSOU) ಶಿವಮೊಗ್ಗ ಪ್ರಾದೇಶಿಕ ಕೇಂದ್ರದಲ್ಲಿ ನಡೆದ...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ, ಊರಲ್ಲಿ ಪಡಿತರವೂ ಇಲ್ಲ!

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು...