ಕಾವೇರಿ ವಿವಾದ | ‘ಕರ್ನಾಟಕ ಬಂದ್’​ಗೆ 100ಕ್ಕೂ ಹೆಚ್ಚು ಸಂಘಟನೆಗಳ ಬೆಂಬಲ

Date:

ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವುದನ್ನು ವಿರೋಧಿಸಿ ಸೆ.29 ರಂದು (ಶುಕ್ರವಾರ) ರೈತ ಸಂಘಟನೆಗಳು, ಕನ್ನಡಪರ ಸಂಘಟನೆಗಳು ಹಾಗೂ ರಾಜಕೀಯ ಪಕ್ಷಗಳು ‘ಕರ್ನಾಟಕ ಬಂದ್‌’ಗೆ ಕರೆ ನೀಡಿವೆ. ಕರ್ನಾಟಕ ಬಂದ್‌ಗೆ 100ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ. ಈ ವೇಳೆ, ಪ್ರತಿಭಟನಾನಿರತರು ರಾಜ್ಯ ಹೆದ್ದಾರಿಗಳನ್ನು ಬಂದ್ ಮಾಡುವ ಸಾದ್ಯತೆಯಿದೆ ಎಂದು ತಿಳಿದುಬಂದಿದೆ.

ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ವಿಚಾರವಾಗಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲು ಕನ್ನಡ ಪರ ಸಂಘಟನೆಗಳು ರಾಜ್ಯ ಹೆದ್ದಾರಿಗಳನ್ನು ಬಂದ್ ಮಾಡಲು ಯೋಜಿಸಿವೆ. ಈ ವೇಳೆ, ಬೆಂಗಳೂರು-ಹೊಸೂರು ಮುಖ್ಯರಸ್ತೆ, ಬೆಂಗಳೂರು-ಹೈದರಾಬಾದ್ ಹೆದ್ದಾರಿ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆ, ಬೆಂಗಳೂರು-ಮೈಸೂರು ಹೆದ್ದಾರಿ, ಬೆಂಗಳೂರು-ತುಮಕೂರು ಹೆದ್ದಾರಿ, ಬೆಂಗಳೂರು-ಕನಕಪುರ ರಸ್ತೆ, ಮಂಡ್ಯ, ರಾಮನಗರ, ಮೈಸೂರಿನ ಪ್ರಮುಖ ರಸ್ತೆಗಳ ತಡೆಗೆ ಸಂಘಟನೆಗಳು ಯೋಜನೆ ರೂಪಿಸಿವೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಬಂದ್ ನಡೆಸದಂತೆ ಸರ್ಕಾರ ಮನವಿ ಮಾಡಿದ್ದರೂ ಸಹ ಹಲವಾರು ಸಂಘಟನೆಗಳು ಬಂದ್ ನಡೆಸಲು ಮುಂದಾಗಿವೆ. ಕನ್ನಡಪರ ಸಂಘಟನೆಗಳು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರ ನೇತೃತ್ವದಲ್ಲಿ ಬಂದ್‌ಗೆ ಮುಂದಾಗಿವೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಬಂದ್ ನಡೆಸಿದಾಗ ವ್ಯಾಪಾರ ಸ್ಥಗಿತಗೊಳ್ಳುವುದರಿಂದ ಸರ್ಕಾರಕ್ಕೆ ನಷ್ಟ ಉಂಟಾಗುತ್ತದೆ. ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಹಾಗಾಗಿ, ಬಂದ್‌ ನಡೆಸಬೇಡಿ. ಬೆಂಗಳೂರು, ಮಂಡ್ಯ ಹಾಗೂ ಮೈಸೂರಿಗೆ ಕುಡಿಯುವ ನೀರು ಪೂರೈಕೆಗೆ ಸಾಕಷ್ಟು ನೀರು ಸಂಗ್ರಹವಾಗುವುದನ್ನು ಖಚಿತಪಡಿಸಿಕೊಳ್ಳುತ್ತೇವೆ. ಕರ್ನಾಟಕದ ರೈತರನ್ನು ಉಳಿಸುತ್ತೇವೆ” ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಹೈಬ್ರಿಡ್‌ ಟಿಎವಿಆರ್ ವಿಧಾನದಿಂದ ತಿರುಚಿಕೊಂಡಿದ್ದ ಹೃದಯದ ಮಹಾಅಪಧಮನಿಯ ಕವಾಟದ ಬದಲಾವಣೆ; ದೇಶದಲ್ಲೇ ಮೊದಲು

“ಇನ್ನು ಪ್ರತಿಭಟನೆಗಳು ಶಾಂತಿಯುತವಾಗಿ ನಡೆಯಲು ಪೊಲೀಸರು ಸನ್ನದ್ಧರಾಗಿದ್ದಾರೆ. ಬೆಂಗಳೂರು ಬಂದ್ ನಡೆದ ದಿನ ಪೊಲೀಸರು ದಕ್ಷತೆಯಿಂದ ಕಾರ್ಯ ನಿರ್ವಹಿಸಿದರು. ಯಾವುದೇ ಅಹಿತಕರ ಘಟನೆಗಳು ಕಂಡು ಬಂದಿಲ್ಲ” ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನೇಹಾ ಕೊಲೆ ಪ್ರಕರಣ | ಸಿಐಡಿ ತನಿಖೆ ಆರಂಭ; ಆರೋಪಿ ಫಯಾಜ್‌ನನ್ನು ವಶಕ್ಕೆ ಪಡೆದ ಅಧಿಕಾರಿಗಳು

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್‌ ಸದಸ್ಯ ನಿರಂಜನ ಹಿರೇಮಠ ಪುತ್ರಿ ನೇಹಾ...

ಅನ್ಯ ರಾಜ್ಯಗಳ 9 ನಾಯಕರನ್ನು ಲೋಕಸಭೆಗೆ ಚುನಾಯಿಸಿದ ಕರ್ನಾಟಕದ ಮತದಾರರು

ರಾಜ್ಯಸಭೆಗೆ ಯಾವುದೇ ರಾಜ್ಯದ ನಾಯಕರು, ಉದ್ಯಮಿಗಳು ಸ್ಥಳೀಯ ರಾಜಕೀಯ ಪಕ್ಷದ ಬೆಂಬಲದಿಂದ...

ಹಿರಿಯ ಪತ್ರಕರ್ತ ಅರ್ಜುನ್‌ ದೇವ ನಿಧನ

ಹಿರಿಯ ಪತ್ರಕರ್ತ, ಕರ್ನಾಕ ಮಾಧ್ಯಮ ಅಕಾಡೆಮಿ ಮಾಜಿ ಅಧ್ಯಕ್ಷರಾದ ಅರ್ಜುನ್ ದೇವ...

ಯಡಿಯೂರಪ್ಪ ಬಣದಲ್ಲಿ ಗುರುತಿಸಿಕೊಂಡಿದ್ದ ಕೆ ಪಿ ನಂಜುಂಡಿ ಕಾಂಗ್ರೆಸ್‌ ಸೇರ್ಪಡೆ

ವಿಧಾನ ಪರಿಷತ್ ಸ್ಥಾನಕ್ಕೆ ಮತ್ತು ಬಿಜೆಪಿಯ ಪಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವ...