ಕಾವೇರಿ-ಮೇಕೆದಾಟು ವಿವಾದ: ಸೌಹಾರ್ದ ಮಾರ್ಗಕ್ಕಾಗಿ ತಮಿಳು ಸಿಎಂ ವಿಜಯ್‌ಗೆ ವಿಜಯೇಂದ್ರ ಪತ್ರ

Date:

ಕರ್ನಾಟಕ ಮತ್ತು ತಮಿಳುನಾಡು ನಡುವೆ ಮತ್ತೆ ಕಾವೇರಿ ನೀರು ಹಂಚಿಕೆ ಮತ್ತು ಮೇಕೆದಾಟು ಯೋಜನೆ ವಿವಾದಕ್ಕೆ ಮುನ್ನೆಲೆಗೆ ಬಂದಿದೆ. ತಮಿಳುನಾಡಿಗೆ ಪ್ರತಿ ದಿನ 3,500 ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ‘ಕಾವೇರಿ ನೀರು ನಿರ್ವಹಣಾ ಮಂಡಳಿ’ ಸೂಚಿಸಿರುವುದು ರಾಜ್ಯಕ್ಕೆ ಹಿನ್ನಡೆ ಉಂಟು ಮಾಡಿದೆ. ಇದೇ ವಿಚಾರವಾಗಿ, ರಾಜ್ಯದಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಇದೀಗ, ತಮಿಳುನಾಡು ಸಿಎಂ ವಿಜಯ್ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಪತ್ರ ಬರೆದಿದ್ದಾರೆ. ವಿವಾದವನ್ನು ಪರಿಹರಿಸಲು ಸೌಹಾರ್ದಯುತ ಮಾರ್ಗಕ್ಕಾಗಿ ಮನವಿ ಮಾಡಿದ್ದಾರೆ.

- Advertisement -

“ಕಾವೇರಿ ವಿಷಯದಲ್ಲಿ ರಾಜಕೀಯ ವೈರತ್ವವನ್ನು ಬದಿಗಿಟ್ಟು, ಎರಡೂ ರಾಜ್ಯಗಳ ಹಿತಾಸಕ್ತಿಗೆ ಪೂರಕವಾಗಿ ಮಾರ್ಗವನ್ನು ಕಂಡುಕೊಳ್ಳಲು ಸಹಕಾರ ನೀಡಬೇಕು” ಎಂದು ಪತ್ರದಲ್ಲಿ ಕೋರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

“ಕರ್ನಾಟಕ ಮತ್ತು ತಮಿಳುನಾಡು ನಡುವಿನ ಬಾಂಧವ್ಯ ಬಹಳಷ್ಟು ಹಿಂದಿನದು. ಎರಡೂ ರಾಜ್ಯಗಳು ಶತಮಾನಗಳಿಂದಲೂ ಇತಿಹಾಸ, ಸಂಸ್ಕೃತಿ, ವಾಣಿಜ್ಯ ಹಾಗೂ ಜನರ ನಡುವಿನ ಆತ್ಮೀಯ ಸಂಬಂಧದ ಮೂಲಕ ಒಂದಾಗಿವೆ. ಕೋಟ್ಯಂತರ ತಮಿಳರು ಕರ್ನಾಟಕವನ್ನು—ವಿಶೇಷವಾಗಿ ಬೆಂಗಳೂರನ್ನು ತಮ್ಮ ಸ್ವಂತ ಮನೆಯಾಗಿ ಮಾಡಿಕೊಂಡಿದ್ದಾರೆ. ರಾಜ್ಯದ ಅಭಿವೃದ್ಧಿಗೆ ಕೊಡುಗೆ ನೀಡಿದ್ದಾರೆ. ಅದೇ ರೀತಿ, ತಮಿಳುನಾಡಿನಲ್ಲಿರುವ ಕನ್ನಡಿಗರೂ ಅಲ್ಲಿನ ಪ್ರಗತಿಗೆ ಶ್ರಮಿಸುತ್ತಿದ್ದಾರೆ” ಎಂದು ವಿಜಯೇಂದ್ರ ವಿವರಿಸಿದ್ದಾರೆ.

“ವಿವಾದಗಳನ್ನು ನಾವು ಹೇಗೆ ಬಗೆಹರಿಸಿಕೊಳ್ಳುತ್ತೇವೆ ಎಂಬುದೇ ಪ್ರಮುಖ ವಿಷಯ. ಹಿಂದೆ ಬೆಂಗಳೂರಿನಲ್ಲಿ ತಿರುಳ್ಳುವರ್ ಪ್ರತಿಮೆ ಸ್ಥಾಪನೆ ವಿಚಾರ ನನೆಗುದಿಗೆ ಬಿದ್ದಿತ್ತು. ಆದರೆ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಮತ್ತು ತಮಿಳುನಾಡಿನ ಮಾಜಿ ಸಿಎಂ ಎಂ. ಕರುಣಾನಿಧಿ ಅವರ ರಾಜತಾಂತ್ರಿಕ ಪ್ರೌಢತೆ ಮತ್ತು ಔದಾರ್ಯದಿಂದ ಅದು ಇತ್ಯರ್ಥವಾಗಿತ್ತು. ಜನರ ಒಳಿತನ್ನು ಮನಸ್ಸಿನಲ್ಲಿಟ್ಟುಕೊಂಡರೆ ಎಂಥದ್ದೇ ಸವಾಲನ್ನೂ ಎದುರಿಸಬಹುದು ಎಂಬುದಕ್ಕೆ ಅದೇ ಸಾಕ್ಷಿ” ಎಂದು ನೆನಪಿಸಿದ್ದಾರೆ.

“ಕಾವೇರಿ ನದಿಯು ಬೆಂಗಳೂರು ಸೇರಿದಂತೆ ಕೋಟ್ಯಂತರ ಜನರ ಕುಡಿಯುವ ನೀರಿನ ಜೀವನಾಡಿಯಾಗಿದೆ. ಮಾನ್ಸೂನ್ ಅನಿಶ್ಚಿತತೆಯಿಂದಾಗಿ ರೈತರು ಮತ್ತು ಸಾರ್ವಜನಿಕರು ತೀವ್ರ ಸಂಕಷ್ಟದಲ್ಲಿದ್ದಾರೆ. ತಮಿಳುನಾಡಿನ ಹಿತವನ್ನು ಗೌರವಿಸುವಂತೆಯೇ, ಕರ್ನಾಟಕದ ಜನರ ಸಂಕಷ್ಟಕ್ಕೂ ಸಹಾನುಭೂತಿಯಿಂದ ಸ್ಪಂದಿಸಿ ಚರ್ಚೆ ನಡೆಸಬೇಕು. ಈ ವಿವಾದವು ಜನರನ್ನು ವಿಭಜಿಸುವ ಗೋಡೆಯಾಗದೆ, ಒಗ್ಗೂಡಿಸುವ ಸೇತುವೆಯಾಗಬೇಕು” ಎಂದು ವಿಜಯೇಂದ್ರ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಸಮಾಜದ ಅಭಿವೃದ್ಧಿಯಲ್ಲಿ ಎಂಜಿನಿಯರ್‌ ಪಾತ್ರ ಮಹತ್ವದ್ದು: ರಾಕೇಶ್ ಗೋಪಾಲ್ ಜೋಶಿ

ಸಮಾಜದ ಅಭಿವೃದ್ಧಿ, ದೇಶದ ಪ್ರಗತಿಯಲ್ಲಿ ಎಂಜಿನಿಯರ್‌ಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ ಶಕ್ತಿಗೆ ಕತ್ತರಿ

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ...

ಮೋದಿಯ ಮೋಸದ UPI ಶುಲ್ಕ ನೀತಿ; ತೀವ್ರ ವಿರೋಧದ ನಡುವೆಯೂ ಜಾರಿಗೆ ಮುಂದಾದ ಕೇಂದ್ರ

₹2,000ಕ್ಕಿಂತ ಹೆಚ್ಚಿನ UPI ವಹಿವಾಟುಗಳಿಗೆ ಪ್ರಸ್ತಾಪಿಸಿರುವ ಶೇ 0.4ರಷ್ಟು ಮರ್ಚೆಂಟ್ ಡಿಸ್ಕೌಂಟ್...

ಕಲಬುರಗಿ | ಪಿಎಸ್‌ಐ ಕಾರಿಗೆ ಬೆಂಕಿ ಹಚ್ಚಿ ಪರಾರಿಯಾದ ಪೊಲೀಸ್ ಪೇದೆ

ಖಾಕಿ ಧರಿಸಿ ರಕ್ಷಣೆ ಮಾಡಬೇಕಾದವರೇ ಅಪರಾಧ ಕೃತ್ಯಕ್ಕೆ ಇಳಿದಿರುವ ಘಟನೆ...