ಕಾವೇರಿ ಕಿಚ್ಚು: ಮಂಡ್ಯದಲ್ಲಿ ತಮಿಳುನಾಡು ಸಿಎಂ ವಿಜಯ್ ನಟನೆಯ ‘ಜನ ನಾಯಕನ್’ ಚಿತ್ರ ಪ್ರದರ್ಶನ ಸ್ಥಗಿತ

Date:

ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಪ್ರಾಧಿಕಾರ (CWRA) ನೀಡಿರುವ ಆದೇಶವನ್ನು ವಿರೋಧಿಸಿ ಹಳೇ ಮೈಸೂರು ಭಾಗದಲ್ಲಿ ಗುರುವಾರ ಪ್ರತಿಭಟನೆ ತೀವ್ರಗೊಂಡಿದೆ. ಮಂಡ್ಯದಲ್ಲಿ ತಮಿಳುನಾಡು ಮುಖ್ಯಮಂತ್ರಿ ಹಾಗೂ ನಟ ಸಿ. ಜೋಸೆಫ್ ವಿಜಯ್ ಅವರ ‘ಜನ ನಾಯಕನ್’ ಚಿತ್ರದ ಪ್ರದರ್ಶನವನ್ನು ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಸ್ಥಗಿತಗೊಳಿಸಿದ್ದಾರೆ.

- Advertisement -

ಮಂಡ್ಯದ ಗುರುಶ್ರೀ ಚಿತ್ರಮಂದಿರದ ಎದುರು ಜಮಾಯಿಸಿದ ವಿವಿಧ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು, ಪ್ರಾಧಿಕಾರದ ಆದೇಶದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಚಿತ್ರಮಂದಿರದ ಆಡಳಿತ ಮಂಡಳಿಯೊಂದಿಗೆ ಮಾತುಕತೆ ನಡೆಸಿದ ಬಳಿಕ ‘ಜನ ನಾಯಕನ್’ ಚಿತ್ರದ ಪ್ರದರ್ಶನವನ್ನು ರದ್ದುಗೊಳಿಸಲಾಯಿತು. ಆಕ್ರೋಶಗೊಂಡ ಪ್ರತಿಭಟನಾಕಾರರು ಚಿತ್ರಮಂದಿರದ ಹೊರಗಿದ್ದ ಸಿನಿಮಾದ ಪೋಸ್ಟರ್‌ಗಳನ್ನು ಹರಿದು ಹಾಕಿ, ಪ್ರಾಧಿಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಕೆವಿಎನ್- ನಿಜ ಅರ್ಥದ ಕನ್ನಡದ...

ಡಾ. ಕೆ.ವಿ. ನಾರಾಯಣ ಅವರು ವಿಮರ್ಶಕರಾಗಿ, ಭಾಷಾವಿಜ್ಞಾನಿಯಾಗಿ, ವಿಚಾರವಾದಿಯಾಗಿ ಕನ್ನಡ ನಾಡಿಗೆ ಪರಿಚಿತರು. ಅವರ ಇತ್ತೀಚಿನ ಪ್ರತಿಯೊಂದು ಮಾತು ಮತ್ತು ಬರಹಗಳಲ್ಲೂ ವೈಚಾರಿಕತೆ ಇದ್ದೆ ಇರುತ್ತಿತ್ತು. ಅವರು ಇಷ್ಟು ಬೇಗ ಅಗಲಿ ಹೋಗುತ್ತಾರೆ...

ಸುಪ್ರೀಂ ಆದೇಶವಿದ್ದರೂ ರಂಗೋಲಿ ಕೆಳಗೆ ತೂರುವ ಪೊಲೀಸರು: ಬಂಧಿತರ...

ಬಂಧಿಸಿದ 24 ಗಂಟೆಗಳ ಒಳಗಾಗಿ ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವುದು ಸಂವಿಧಾನ ಬದ್ಧ ಹಕ್ಕು. ವಿಳಂಬವಾದರೆ ಬಿಡುಗಡೆ ಕಡ್ಡಾಯವೆಂದು ಸುಪ್ರೀಂ ಕೋರ್ಟ್ ಆದೇಶವಿದೆ. ಆದರೆ ಗಡಿಯಾರ ಟಿಕ್ ಟಿಕ್ ಅನ್ನುತ್ತಿದ್ದರೂ, ದಾಖಲೆಗಳಲ್ಲಿ ಸಮಯವನ್ನು...

ಕೊಪ್ಪಳ | 3 ವರ್ಷದಲ್ಲಿ 35,302 ಜಾನುವಾರುಗಳ ಸಾವು;...

ರೋಗಬಾಧೆ, ಅಪಘಾತ ಹಾಗೂ ವಿವಿಧ ಆಕಸ್ಮಿಕ ಕಾರಣಗಳಿಂದ ಕೊಪ್ಪಳ ಜಿಲ್ಲೆಯಲ್ಲಿ ಜಾನುವಾರುಗಳ ಸಾವಿನ ಪ್ರಕರಣಗಳು ಹೆಚ್ಚುತ್ತಿದ್ದು, ಜಾನುವಾರು ಕಳೆದುಕೊಂಡ ರೈತರು ಒಂದೆಡೆ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದರೆ, ಮತ್ತೊಂದೆಡೆ ಸರ್ಕಾರದ ಪರಿಹಾರಕ್ಕಾಗಿ ಕಚೇರಿಗಳಿಗೆ ಅಲೆದಾಡುವಂತಾಗಿದೆ. ಕೊಪ್ಪಳ...

ರಾಜ್ಯದಲ್ಲಿ ಕುಡಿಯುವ ನೀರಿನ ಪರಿಸ್ಥಿತಿ ಬಿಗಡಾಯಿಸುತ್ತಿರುವುದರಿಂದ, ತಮಿಳುನಾಡಿಗೆ ಒಂದು ಹನಿ ನೀರನ್ನೂ ಬಿಡಬಾರದು ಎಂದು ಆಗ್ರಹಿಸಿ ಪ್ರತಿಭಟನಾಕಾರರು ಮಂಡ್ಯ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ರಾಜ್ಯದ ಜನರ ಕುಡಿಯುವ ನೀರಿನ ಅಗತ್ಯತೆಗೆ ಮೊದಲ ಆದ್ಯತೆ ನೀಡಬೇಕು, ಒಂದು ವೇಳೆ ಪ್ರಾಧಿಕಾರದ ಆದೇಶವನ್ನು ಪಾಲಿಸಿದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.

ಪ್ರತಿಭಟನೆ ವೇಳೆ ಕಾರ್ಯಕರ್ತರು ಟೈರ್‌ಗೆ ಬೆಂಕಿ ಹಚ್ಚಲು ಮುಂದಾದಾಗ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಯಿತು. ತಕ್ಷಣ ಮಧ್ಯಪ್ರವೇಶಿಸಿದ ಪೊಲೀಸರು ಟೈರ್ ಕಸಿದುಕೊಳ್ಳಲು ಯತ್ನಿಸಿದಾಗ ತಳ್ಳಾಟ-ನುಕಾಟ ನಡೆಯಿತು. ಟೈರ್‌ಗೆ ಬೆಂಕಿ ಹಚ್ಚದಂತೆ ಪೊಲೀಸರು ಪದೇ ಪದೇ ಮನವಿ ಮಾಡಿದರೂ ಕೆಲ ಕಾರ್ಯಕರ್ತರು ಪಟ್ಟು ಸಡಿಲಿಸಲಿಲ್ಲ. ಈ ವೇಳೆ ಪೊಲೀಸರು ಅಡ್ಡಿಪಡಿಸಿದರೆ ತನಗೆ ತಾನೇ ಬೆಂಕಿ ಹಚ್ಚಿಕೊಳ್ಳುವುದಾಗಿ ಪ್ರತಿಭಟನಾಕಾರರೊಬ್ಬರು ಬೆದರಿಕೆ ಹಾಕಿದರು. ಅಂತಿಮವಾಗಿ ಟೈರ್ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾದ ಪೊಲೀಸರು, ರಸ್ತೆ ತಡೆ ನಡೆಸಲು ಮಾತ್ರ ಅವಕಾಶ ಮಾಡಿಕೊಟ್ಟರು.

ಇದೇ ವೇಳೆ, ಕಾವೇರಿ ನದಿಗಿಳಿದು ಪ್ರತಿಭಟನೆ ನಡೆಸಿದ ಮತ್ತೊಂದು ಗುಂಪು, ರಾಜ್ಯದ ಜಲಸಂಪನ್ಮೂಲವನ್ನು ರಕ್ಷಿಸುವಂತೆ ಆಗ್ರಹಿಸಿ ಘೋಷಣೆಗಳನ್ನು ಕೂಗಿತು. ಇತ್ತ ಮೈಸೂರಿನಲ್ಲಿಯೂ ಖಾಲಿ ಕೊಡಗಳನ್ನು ಹಿಡಿದು ಬೀದಿಗಿಳಿದ ಕನ್ನಡಪರ ಹೋರಾಟಗಾರರು, ತಮಿಳುನಾಡಿಗೆ ನೀರು ಹರಿಸಿದರೆ ಎದುರಾಗಬಹುದಾದ ಕುಡಿಯುವ ನೀರಿನ ಭೀಕರ ಅಭಾವದ ಬಗ್ಗೆ ಕಳವಳ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ನ್ಯಾ. ನಾಗಮೋಹನ್ ದಾಸರಿಂದ ಸಂವಿಧಾನ ಕುರಿತು ವಿಶೇಷ ಉಪನ್ಯಾಸ

ದಾವಣಗೆರೆ ವಿಶ್ವವಿದ್ಯಾನಿಲಯ, ಮಾನವ ಹಕ್ಕುಗಳ ವೇದಿಕೆ ಮತ್ತು ಕರ್ನಾಟಕ ರಾಜ್ಯ ವಿಜ್ಞಾನ...

ಸರ್ಕಾರಿ ಶಾಲೆ ಮುಚ್ಚುವುದು, ಖಾಸಗೀಕರಣ ಎರಡೂ ಅಪಾಯದ ಸೂಚನೆ; ಅವುಗಳನ್ನು ಉಳಿಸಿ, ಉನ್ನತೀಕರಿಸಬೇಕು! ಏಕೆಂದರೆ…

ಒಂದು ಸರ್ಕಾರಿ ಶಾಲೆ ಮುಚ್ಚಿದಾಗ ಆ ಪ್ರದೇಶದ ಮಕ್ಕಳಿಗೆ ಹತ್ತಿರದಲ್ಲೇ ದೊರೆಯುತ್ತಿದ್ದ...

ಸುಪ್ರೀಂ ಆದೇಶವಿದ್ದರೂ ರಂಗೋಲಿ ಕೆಳಗೆ ತೂರುವ ಪೊಲೀಸರು: ಬಂಧಿತರ ಮೂಲಭೂತ ಹಕ್ಕುಗಳ ಮೇಲೇಕೆ ತೂಗುಕತ್ತಿ?

ಬಂಧಿಸಿದ 24 ಗಂಟೆಗಳ ಒಳಗಾಗಿ ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವುದು ಸಂವಿಧಾನ...

ಬಡತನದ ಸವಾಲಿನಿಂದ ಗವರ್ನರ್ ಪೀಠದವರೆಗೆ: ಅಮೆರಿಕದಲ್ಲಿ ಮೂರು ಬಾರಿ ಇತಿಹಾಸ ಸೃಷ್ಟಿಸಿದ ಡೆಬ್ ಹಾಲಂಡ್

ಅಮೆರಿಕದ ರಾಜಕೀಯ ವ್ಯವಸ್ಥೆಯಲ್ಲಿ ವಂಚಿತ ಜನಾಂಗದ ಮಹಿಳೆಯೊಬ್ಬರು ಅತ್ಯುನ್ನತ ಸ್ಥಾನಕ್ಕೇರುವುದು ಸಾಮಾನ್ಯ...