ಕಾವೇರಿ ಜಲ ಸಂಕಷ್ಟ: ತಮಿಳುನಾಡಿಗೆ ನಿತ್ಯ 9,000 ಕ್ಯೂಸೆಕ್‌ ನೀರು ಹರಿಸಲು ಸಿಡಬ್ಲ್ಯುಆರ್‌ಸಿ ಶಿಫಾರಸು

Date:

ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯಕ್ಕೆ ಮತ್ತೊಮ್ಮೆ ಹಿನ್ನಡೆಯಾಗಿದೆ. ಮುಂದಿನ 15 ದಿನಗಳ ಕಾಲ ನೆರೆರಾಜ್ಯ ತಮಿಳುನಾಡಿಗೆ ಪ್ರತಿದಿನ 9,000 ಕ್ಯೂಸೆಕ್ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯುಆರ್‌ಸಿ) ಕರ್ನಾಟಕಕ್ಕೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.

- Advertisement -

​ನವದೆಹಲಿಯಲ್ಲಿ ಸೋಮವಾರ ನಡೆದ ಸಮಿತಿಯ 141ನೇ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಈ ನಿರ್ದೇಶನದ ಅನ್ವಯ ಆಗಸ್ಟ್ 15ರ ಬೆಳಿಗ್ಗೆ 8 ಗಂಟೆಯಿಂದಲೇ ಆದೇಶ ಜಾರಿಗೆ ಬರಲಿದ್ದು, ಅಂತಾರಾಜ್ಯ ಗಡಿಯಾದ ಬಿಳಿಗುಂಡ್ಲು ಮಾಪನ ಕೇಂದ್ರದಲ್ಲಿ ಪ್ರತಿದಿನ 9,000 ಕ್ಯೂಸೆಕ್ ಹರಿವು ಇರುವಂತೆ ನೋಡಿಕೊಳ್ಳಬೇಕಿದೆ. ಇದರಿಂದಾಗಿ ಮುಂಬರುವ 15 ದಿನಗಳಲ್ಲಿ ಒಟ್ಟಾರೆ 11.66 ಟಿಎಂಸಿ ನೀರನ್ನು ತಮಿಳುನಾಡಿಗೆ ಹರಿಸುವುದು ರಾಜ್ಯಕ್ಕೆ ಅನಿವಾರ್ಯವಾಗಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ರಾಜ್ಯದ ಜಲಾಶಯಗಳಲ್ಲಿ ನೀರಿನ ಒಳಹರಿವು ತೀವ್ರವಾಗಿ ಕುಸಿದಿದೆ ಎಂಬ ವಾಸ್ತವವನ್ನು ಸಭೆಯಲ್ಲಿ ಕರ್ನಾಟಕದ ಅಧಿಕಾರಿಗಳು ಎಳೆಎಳೆಯಾಗಿ ಬಿಚ್ಚಿಟ್ಟರು. ಕಳೆದ 30 ವರ್ಷಗಳ ಸರಾಸರಿಗೆ ಹೋಲಿಸಿದರೆ ಈ ಬಾರಿ ಕಾವೇರಿ ಜಲಾನಯನ ಪ್ರದೇಶದ ನಾಲ್ಕು ಪ್ರಮುಖ ಅಣೆಕಟ್ಟುಗಳ ಒಳಹರಿವಿನಲ್ಲಿ ಶೇ. 49.18ರಷ್ಟು ಕೊರತೆಯಾಗಿದೆ. ಜುಲೈ 29ರಿಂದ ಆಗಸ್ಟ್ 23ರವರೆಗೆ ನಿಗದಿತ 1,84,500 ಕ್ಯೂಸೆಕ್‌ಗಿಂತಲೂ ಹೆಚ್ಚುವರಿಯಾಗಿ 32,493 ಕ್ಯೂಸೆಕ್ ಸೇರಿದಂತೆ, ಒಟ್ಟು 2,16,993 ಕ್ಯೂಸೆಕ್ ನೀರನ್ನು ಈಗಾಗಲೇ ಬಿಳಿಗುಂಡ್ಲು ಮೂಲಕ ಹರಿಸಲಾಗಿದೆ ಎಂದು ಅಂಕಿ-ಅಂಶಗಳ ಸಮೇತ ವಿವರಿಸಿದರು. ಅಲ್ಲದೆ, ರಾಜ್ಯದ ಪ್ರಮುಖ ಅಣೆಕಟ್ಟುಗಳ ಒಳಹರಿವು 77,048 ಕ್ಯೂಸೆಕ್‌ನಿಂದ ಕೇವಲ ೯,೨೮೨ ಕ್ಯೂಸೆಕ್‌ಗೆ ಕುಸಿದಿರುವ ಇಂದಿನ ವಾಸ್ತವ ಸ್ಥಿತಿಯಲ್ಲಿ, ನೆರೆ ರಾಜ್ಯಕ್ಕೆ ನಿರಂತರವಾಗಿ ನೀರು ಬಿಡುಗಡೆ ಮಾಡುವುದು ಪ್ರಾಯೋಗಿಕವಾಗಿ ಅಸಾಧ್ಯ ಎಂದು ಅಸಹಾಯಕತೆ ವ್ಯಕ್ತಪಡಿಸಿದರು.

​ಮತ್ತೊಂದೆಡೆ, ತಮಿಳುನಾಡು ತನ್ನ ಪಾಲಿನ ನೀರಿಗಾಗಿ ಎಂದಿನಂತೆ ಪಟ್ಟು ಹಿಡಿಯಿತು. ಬಾಕಿ ಇರುವ 17.49 ಟಿಎಂಸಿ ಹಾಗೂ ಆಗಸ್ಟ್ 24ರಿಂದ ಸೆಪ್ಟೆಂಬರ್ 7ರವರೆಗಿನ ೧೫ ದಿನಗಳ ಅವಧಿಗೆ ಅನ್ವಯವಾಗುವ 10.896 ಟಿಎಂಸಿ ಪ್ರೊ-ರಾಟಾ ಪಾಲು ಸೇರಿ, ಒಟ್ಟು 28.386 ಟಿಎಂಸಿ ನೀರನ್ನು ಬಿಳಿಗುಂಡ್ಲುವಿಗೆ ಹರಿಸಬೇಕು. ಸಂಕಷ್ಟದ ಪರಿಸ್ಥಿತಿಯ ಸಂಪೂರ್ಣ ಹೊರೆಯನ್ನು ಕೇವಲ ತಮಿಳುನಾಡಿನ ಮೇಲೆ ಹಾಕುವುದು ಸರಿಯಲ್ಲ, ಹೀಗಾಗಿ ಕೆಆರ್‌ಎಸ್ ಮತ್ತು ಕಬಿನಿಯಿಂದ ನೀರು ಬಿಡಲು ಕರ್ನಾಟಕಕ್ಕೆ ನಿರ್ದೇಶಿಸಬೇಕು ಎಂದು ಆ ರಾಜ್ಯದ ಪ್ರತಿನಿಧಿಗಳು ವಾದಿಸಿದರು.

​ಕಾವೇರಿ ಕೊಳ್ಳದ ಜಲಾಶಯಗಳ ಪ್ರಸ್ತುತ ನೀರಿನ ಮಟ್ಟ, ಕೇಂದ್ರ ಜಲ ಆಯೋಗದ (ಸಿಡಬ್ಲ್ಯುಸಿ) ಅಂಕಿ-ಅಂಶಗಳು ಹಾಗೂ ಮುಂದಿನ ಏಳು ದಿನಗಳ ಒಳಹರಿವಿನ ಮುನ್ಸೂಚನೆಯನ್ನು ಪರಿಶೀಲಿಸಿದ ಸಮಿತಿಯು ಅಂತಿಮವಾಗಿ 9,000 ಕ್ಯೂಸೆಕ್ ನೀರು ಬಿಡುವಂತೆ ಶಿಫಾರಸು ಮಾಡಿದೆ.

​ಕಾವೇರಿ ನೀರು ಬಿಡುಗಡೆಗೆ ಸಂಬಂಧಿಸಿದಂತೆ ರಾಜ್ಯವು ಸತತ ಸವಾಲುಗಳನ್ನು ಎದುರಿಸುತ್ತಲೇ ಇದ್ದು, ಆರಂಭದಲ್ಲಿ 3,000 ಕ್ಯೂಸೆಕ್, ಬಳಿಕ 12,000 ಕ್ಯೂಸೆಕ್ ಹಾಗೂ ಇದೀಗ ಮೂರನೇ ಹಂತದಲ್ಲಿ ನಿತ್ಯ 9,000 ಕ್ಯೂಸೆಕ್ ನೀರು ಹರಿಸುವಂತೆ ಸೂಚನೆ ಹೊರಬಿದ್ದಿದೆ. ಈ ಹಿನ್ನೆಲೆಯಲ್ಲಿ ಮಂಗಳವಾರ ನಡೆಯಲಿರುವ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (ಸಿಡಬ್ಲ್ಯುಎಂಎ) ಮಹತ್ವದ ಸಭೆಯಲ್ಲಿ ಕೈಗೊಳ್ಳುವ ಅಂತಿಮ ನಿರ್ಧಾರ ತೀವ್ರ ಕುತೂಹಲ ಮೂಡಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಲೈಂಗಿಕ ಕಿರುಕುಳ ಆರೋಪ; ಪ್ರಾಧ್ಯಾಪಕ ಹುದ್ದೆಯಿಂದ ಕಾಂಗ್ರೆಸ್ ಸಂಸದ ಬಿಮೋಲ್ ವಜಾ

11 ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳ ಹಾಗೂ ಅನುಚಿತ ವರ್ತನೆಯ ಆರೋಪದಡಿ ದೂರು...

ಬೀದರ್‌ | ಕಾನ್ಶಿರಾಂ ಹೋರಾಟ ಬಹುಜನರ ರಾಜಕೀಯ ಜಾಗೃತಿಗೆ ದಾರಿದೀಪ

ಬೀದರ್ ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟ ಹಾಗೂ ವಿವಿಧ ಬಹುಜನ ಸಂಘಟನೆಗಳ...

ವಿಜಯನಗರ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ವಿದ್ಯಾರ್ಥಿ-ಯುವಜನ ಸಂಘಟನೆಗಳ ಬೃಹತ್ ಪ್ರತಿಭಟನೆ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...