ಕಾವೇರಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಕರೆಯಲಾಗಿದ್ದ ಕರ್ನಾಟಕ ಬಂದ್‌ಗೆ ಸಾರ್ವಜನಿಕರಿಂದ ನಿರೀಕ್ಷಿತ ಬೆಂಬಲ ವ್ಯಕ್ತವಾಗಿಲ್ಲ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ಜನಜೀವನ ಎಂದಿನಂತೆ ಸಾಮಾನ್ಯವಾಗಿದೆ. ಬಸ್, ಆಟೋ ಸಂಚಾರ ಯಥಾಸ್ಥಿತಿಯಾಗಿದೆ.
ಬಿಎಂಟಿಸಿ ಮತ್ತು ಕೆಎಸ್ಆರ್‌ಟಿಸಿ ಬಸ್‌ಗಳು ಎಂದಿನಂತೆ ರಸ್ತೆಗಿಳಿದಿದ್ದು, ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗಿಲ್ಲ. ಈವರೆಗೆ ನಗರದಲ್ಲಿ ಆಟೋ ಹಾಗೂ ಓಲಾ, ಉಬರ್ ಸೇರಿದಂತೆ ಪ್ರಮುಖ ಟ್ಯಾಕ್ಸಿ ಸೇವೆಗಳು ಎಂದಿನಂತೆ ಲಭ್ಯವಿದೆ. ನಮ್ಮ ಮೆಟ್ರೋ ರೈಲುಗಳು ಯಾವುದೇ ಅಡಚಣೆಯಿಲ್ಲದೆ ನಿಗದಿತ ಸಮಯಕ್ಕೆ ಸಂಚರಿಸುತ್ತಿವೆ.
ಇದನ್ನೂ ಓದಿ: ಕಾವೇರಿ ಜಲ ವಿವಾದ | ಸರ್ವ ಪಕ್ಷ ಸಭೆಯಲ್ಲಿ ಕಾನೂನು ಹೋರಾಟಕ್ಕೆ ಒಕ್ಕೊರಲಿನ ಬೆಂಬಲ
ಹೋಟೆಲ್‌ಗಳು, ಮಾಲ್‌ಗಳು ಹಾಗೂ ವಾಣಿಜ್ಯ ಮಳಿಗೆಗಳು ಎಂದಿನಂತೆ ತೆರೆದಿದೆ. ಬಹುತೇಕ ಕಡೆಗಳಲ್ಲಿ ಶಾಲಾ-ಕಾಲೇಜುಗಳು ಎಂದಿನಂತೆ ಕಾರ್ಯನಿರ್ವಹಿಸಿದ್ದು, ವಿದ್ಯಾರ್ಥಿಗಳ ಹಾಜರಾತಿಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಕೆಲವು ಕಡೆ ಸಂಸ್ಥೆಗಳು ವರ್ಕ್ ಫ್ರಮ್ ನೀಡಿದೆ.
ಹಲವೆಡೆ ಕನ್ನಡಪರ ಸಂಘಟನೆಗಳು ಮತ್ತು ರೈತ ಸಂಘಟನೆಗಳು ಕೆಲವು ಪ್ರಮುಖ ವೃತ್ತಗಳಲ್ಲಿ ಜಮಾಯಿಸಿ ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿದವು. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ನಗರದಾದ್ಯಂತ ವ್ಯಾಪಕ ಪೊಲೀಸ್ ಭದ್ರತೆಯನ್ನು ಕೈಗೊಳ್ಳಲಾಗಿದೆ. ಹೋಟೆಲ್‌ಗಳು, ಮಾಲ್‌ಗಳು ಹಾಗೂ ವಾಣಿಜ್ಯ ಮಳಿಗೆಗಳು ಎಂದಿನಂತೆ ತೆರೆದಿದೆ. ಬಹುತೇಕ ಕಡೆಗಳಲ್ಲಿ ಶಾಲಾ-ಕಾಲೇಜುಗಳು ಎಂದಿನಂತೆ ಕಾರ್ಯನಿರ್ವಹಿಸಿದ್ದು, ವಿದ್ಯಾರ್ಥಿಗಳ ಹಾಜರಾತಿಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಕೆಲವು ಕಡೆ ಸಂಸ್ಥೆಗಳು ವರ್ಕ್ ಫ್ರಮ್ ನೀಡಿದೆ.
ಹಲವೆಡೆ ಕನ್ನಡಪರ ಸಂಘಟನೆಗಳು ಮತ್ತು ರೈತ ಸಂಘಟನೆಗಳು ಕೆಲವು ಪ್ರಮುಖ ವೃತ್ತಗಳಲ್ಲಿ ಜಮಾಯಿಸಿ ಸಾಂಕೇತಿಕವಾಗಿ ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ನಗರದಾದ್ಯಂತ ವ್ಯಾಪಕ ಪೊಲೀಸ್ ಭದ್ರತೆಯನ್ನು ಕೈಗೊಳ್ಳಲಾಗಿದೆ.
ಇನ್ನು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆಗೆ ಅವಕಾಶ ನೀಡಲಾಗಿದೆ. ಉಳಿದಂತೆ ವಾಟಾಳ್ ನಾಗರಾಜ್ ಅವರು ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಮೆಜೆಸ್ಟಿಕ್‌ಗೆ ಆಗಮಿಸಿ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್ ನಿಲ್ದಾಣಗಳಿಗೆ ತೆರಳಿ, ಬಂದ್‌ಗೆ ಬೆಂಬಲ ನೀಡುವಂತೆ ಸಾರಿಗೆ ಸಿಬ್ಬಂದಿಗೆ ಮನವಿ ಮಾಡುವ ಸಾಧ್ಯತೆಯಿದೆ. ಹಾಗೆಯೇ ನಂತರ ಟೌನ್‌ಹಾಲ್‌ನಿಂದ ಫ್ರೀಡಂ ಪಾರ್ಕ್‌ವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಲಿದೆ.




