ಕಾವೇರಿ ಜಲವಿವಾದ: ಆಗಸ್ಟ್ 31ಕ್ಕೆ ಸುಪ್ರೀಂ ಕೋರ್ಟ್ ವಿಚಾರಣೆ ಮುಂದೂಡಿಕೆ

Date:

ಭಾರಿ ಕುತೂಹಲ ಕೆರಳಿಸಿದ್ದ ಕರ್ನಾಟಕ ಮತ್ತು ತಮಿಳುನಾಡು ನಡುವಿನ ಕಾವೇರಿ ನೀರು ಹಂಚಿಕೆ ವಿವಾದದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇದೇ ಆಗಸ್ಟ್ 31ಕ್ಕೆ ಮುಂದೂಡಿದೆ. ಅಲ್ಲದೆ, ನೀರು ಬಿಡುಗಡೆಗೆ ಸಂಬಂಧಿಸಿದಂತೆ ನಿಖರ ದತ್ತಾಂಶಗಳನ್ನೊಳಗೊಂಡ ವರದಿಯನ್ನು ಸಲ್ಲಿಸುವಂತೆ ಉಭಯ ರಾಜ್ಯ ಸರ್ಕಾರಗಳಿಗೆ ಸರ್ವೋಚ್ಚ ನ್ಯಾಯಾಲಯ ಸೂಚನೆ ನೀಡಿದೆ.

- Advertisement -

​ವಿಚಾರಣೆ ವೇಳೆ ವಾದ ಮಂಡಿಸಿದ ತಮಿಳುನಾಡು ಸರ್ಕಾರದ ಪರ ವಕೀಲರು, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (CWMA) ಆದೇಶವನ್ನು ಕರ್ನಾಟಕ ಪಾಲಿಸಿದೆ. ಆದರೆ, ಕಾವೇರಿ ನ್ಯಾಯಮಂಡಳಿಯ ಮೂಲ ತೀರ್ಪಿಗೆ ಅನುಗುಣವಾಗಿ ನೀರು ಹರಿಸಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇಂದು ಭಗತ್ ಸಿಂಗ್ ಹೆಸರು ಬಳಸುವ ಆರ್‌ಎಸ್‌ಎಸ್ ನಾಯಕರಿಗೆ...

ಜಾತ್ಯತೀತತೆ ಮತ್ತು ಸಮಾಜವಾದದ ಬಗ್ಗೆ ಗಟ್ಟಿಯಾಗಿ ಮಾತನಾಡುತ್ತಿದ್ದ, ಕೋಮುವಾದಿ ಧೋರಣೆಗಳನ್ನು ಕಟುವಾಗಿ ವಿಮರ್ಶಿಸುತ್ತಿದ್ದ ಭಗತ್ ಸಿಂಗ್ ಅವರನ್ನು ಇಂದು ಅದೇ ಸಿದ್ಧಾಂತಗಳ ವಿರುದ್ಧ ನಿಂತಿರುವ ಬಿಜೆಪಿ, ಆರ್‌ಎಸ್‌ಎಸ್, ಎಬಿವಿಪಿ ನಾಯಕರು ತಮ್ಮ 'ಸ್ವಂತ...

ಬರಗಾಲ | ಕಾಡಿನ ಮೌನದ ಹಿಂದೆ ಅಡಗಿದೆ ಜೀವಸಂಕುಲದ...

ಒಂದು ಆನೆಗೆ ದಿನಕ್ಕೆ ನೂರಾರು ಲೀಟರ್ ನೀರು ಮತ್ತು ನೂರಾರು ಕೆ.ಜಿ. ಆಹಾರ ಬೇಕಾಗುತ್ತದೆ. ಇನ್ನು ಕಾಡಿನಲ್ಲಿರುವ ಸಾವಿರಾರು ಆನೆಗಳು, ಹುಲಿಗಳು, ಚಿರತೆಗಳು, ಜಿಂಕೆಗಳು, ಕಾಡೆಮ್ಮೆಗಳು ಸೇರಿದಂತೆ ವಿವಿಧ ವನ್ಯಜೀವಿಗಳ ಅಗತ್ಯವನ್ನು ಲೆಕ್ಕಹಾಕಿದರೆ...

ಬಾಗಲಕೋಟೆ | ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ತರಗತಿ ಆರಂಭ;...

ಬಾಗಲಕೋಟೆ ಜಿಲ್ಲೆಯ ಜನರ ಬಹುದಿನಗಳ ನಿರೀಕ್ಷೆಗೆ ಕೊನೆಗೂ ಕಾಲ ಕೂಡಿಬಂದಿದೆ. ಬಾಗಲಕೋಟೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಯಾಗಬೇಕು ಎಂಬ ದಶಕಗಳ ಬೇಡಿಕೆಗೆ ಸಾಕಾರ ರೂಪ ಸಿಕ್ಕಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ನಗರದ ಬಹುನಿರೀಕ್ಷಿತ...

​ಈ ವಾದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ರಾ ಅವರನ್ನೊಳಗೊಂಡ ದ್ವಿಸದಸ್ಯ ಪೀಠ, ‘ಪ್ರಾಧಿಕಾರದ ಆದೇಶವನ್ನು ಪಾಲಿಸಿರುವಾಗ ಸಮಸ್ಯೆಯಾದರೂ ಎಲ್ಲಿದೆ?’ ಎಂದು ಪ್ರಶ್ನಿಸಿತು. ಉಳಿದ ಯಾವುದೇ ಆಕ್ಷೇಪಗಳಿದ್ದರೂ, ಈ ಬಗ್ಗೆ ಪ್ರಾಧಿಕಾರಕ್ಕೇ ಮೇಲ್ಮನವಿ ಸಲ್ಲಿಸುವಂತೆ ತಮಿಳುನಾಡಿಗೆ ನ್ಯಾಯಪೀಠ ಸಲಹೆ ನೀಡಿತು.

​ಇದೇ ವೇಳೆ, ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಹಾಗೂ ಪ್ರಾಧಿಕಾರದ ಮಹತ್ವದ ಸಭೆಗಳು ಇಂದು ಮತ್ತು ನಾಳೆ ನಿಗದಿಯಾಗಿವೆ ಎಂಬ ಅಂಶವನ್ನು ವಕೀಲರು ನ್ಯಾಯಾಲಯದ ಗಮನಕ್ಕೆ ತಂದರು. ಈ ಬೆಳವಣಿಗೆಯನ್ನು ಪರಿಗಣಿಸಿದ ಸುಪ್ರೀಂ ಕೋರ್ಟ್, ವಿಚಾರಣೆಯನ್ನು ತಿಂಗಳಾಂತ್ಯಕ್ಕೆ (ಆ.31) ಮುಂದೂಡಲು ನಿರ್ಧರಿಸಿತು.

​ರಾಜ್ಯದಲ್ಲಿ ತೀವ್ರ ಸಂಕಷ್ಟದ ಪರಿಸ್ಥಿತಿ ಇದ್ದರೂ, ನೆರೆ ರಾಜ್ಯ ತಮಿಳುನಾಡಿಗೆ ಪ್ರತಿದಿನ 12,000 ಕ್ಯುಸೆಕ್ ನೀರು ಬಿಡುಗಡೆ ಮಾಡಲಾಗುತ್ತಿದೆ ಎಂದು ಆಗಸ್ಟ್ 17ರಂದು ಕರ್ನಾಟಕ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ವಿವರಿಸಿತ್ತು. ಈ ಹಿನ್ನೆಲೆಯಲ್ಲಿ, ನೀರು ಹರಿಸಿರುವ ಬಗ್ಗೆ ಅಧಿಕೃತ ಪಾಲನಾ ವರದಿಯನ್ನು (Compliance Report) ಸಲ್ಲಿಸುವಂತೆ ನ್ಯಾಯಾಲಯವು ರಾಜ್ಯಕ್ಕೆ ನಿರ್ದೇಶನ ನೀಡಿತ್ತು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಬಿದ್ರಿ ಕಲಾವಿದೆ ಶಾಂತಾಬಾಯಿ ಕಾಂಬಳೆಗೆ ನಿವೇಶನ, ಮನೆ, ಜಮೀನು ಮಂಜೂರಾತಿಗೆ ಒತ್ತಾಯ

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ, ಹಿರಿಯ ಬಿದ್ರಿ ಕಲಾವಿದೆ ಶಾಂತಾಬಾಯಿ ಕಾಂಬಳೆ...

ಮುಂಡಗೋಡ | ನೀರು ಕೇಳುವ ನೆಪದಲ್ಲಿ ಮಹಿಳೆಯ ಕೊರಳಲ್ಲಿದ್ದ ಚಿನ್ನದ ಸರ ಕಿತ್ತು ಪರಾರಿ

ಅಂಗಡಿಗೆ ಬಂದು ವಿಮಲ್ ಹಾಗೂ ಕುಡಿಯುವ ನೀರು ಕೇಳುವ ನೆಪದಲ್ಲಿ ಮಹಿಳೆಯ...

ಬೀದರ್‌ | ಟನ್ ಕಬ್ಬಿಗೆ ₹4,000 ಬೆಲೆ ಘೋಷಣೆಗೆ ಪಟ್ಟು: ರೈತರ ಧರಣಿ 11ನೇ ದಿನಕ್ಕೆ

ಬೀದರ್ ಜಿಲ್ಲೆಯ ರೈತರ ನಾಲ್ಕು ಪ್ರಮುಖ ಬೇಡಿಕೆಗಳ ಈಡೇರಿಕೆಗಾಗಿ ನಡೆಯುತ್ತಿರುವ ಅನಿರ್ದಿಷ್ಟಾವಧಿ...

ಶಿರಸಿ | ಮೊಗೇರರಿಗೆ ಎಸ್‌ಸಿ ಪ್ರಮಾಣಪತ್ರ ನೀಡಬೇಡಿ: ಅರ್ಜುನ್ ಮಿಂಟಿ

ಉತ್ತರ ಕನ್ನಡ ಜಿಲ್ಲೆಯ ಮೀನುಗಾರ ಮೊಗೇರ್ ಸಮುದಾಯಕ್ಕೆ ಪರಿಶಿಷ್ಟ ಜಾತಿ (ಎಸ್‌ಸಿ)...