ಬೆಂಬಲ ಬೆಲೆಯಲ್ಲಿ ಶೇಂಗಾ ಖರೀದಿಗೆ ಕೇಂದ್ರ ಸರ್ಕಾರ ಸಮ್ಮತಿ: ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ

Date:

ಬೆಂಬಲ ಬೆಲೆಯಲ್ಲಿ ಶೇಂಗಾ ಖರೀದಿಗೆ ಅನುಮತಿ ನೀಡಬೇಕು ಎಂಬ ರಾಜ್ಯ ಸರ್ಕಾರದ ಮನವಿಗೆ ಕೇಂದ್ರ ಸರ್ಕಾರ ಸಮ್ಮತಿಸಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.

- Advertisement -

ಪ್ರತಿ ಕ್ವಿಂಟಾಲ್‌ಗೆ 6,783 ರೂ. ನಿಗದಿಪಡಿಸಿದ್ದು, ಬೆಂಬಲ ಬೆಲೆಯ ಮಾರ್ಗಸೂಚಿ ಅನ್ವಯ ಕೊಪ್ಪಳ, ಧಾರವಾಡ, ಹಾವೇರಿ, ಬಳ್ಳಾರಿ, ಚಿತ್ರದುರ್ಗ, ಗದಗ ಮತ್ತು ಬಾಗಲಕೋಟ, ದಾವಣಗೆರೆ, ರಾಯಚೂರು, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳ ರೈತರಿಂದ ಶೇಂಗಾ ಖರೀದಿಗೆ ಅನುಮತಿ ದೊರೆತಿದೆ ಎಂದು ಸಚಿವರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಈಗ ಅನುಮತಿ ದೊರೆತಿರುವ ಶೇಂಗಾ ಸೇರಿ ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಒಟ್ಟು ಎಂಟು ಕೃಷಿ ಉತ್ಪನ್ನಗಳನ್ನು ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಖರೀದಿ ಮಾಡಲಾಗಿದೆ. ಇದುವರೆಗೆ ಉಂಡೆ ಕೊಬ್ಬರಿ, ಮಿಲ್ಲಿಂಗ್ ಕೊಬ್ಬರಿ, ಹೆಸರುಕಾಳು, ಉದ್ದಿನಕಾಳು, ಸೋಯಾಬಿನ್, ಸೂರ್ಯಕಾಂತಿ, ಹತ್ತಿಯನ್ನು ಖರೀದಿಸಲಾಗಿದೆ. ಬೆಲೆ ಕುಸಿತದ ಸಂದರ್ಭದಲ್ಲಿ ರೈತರ ನೆರವಿಗೆ ಧಾವಿಸಲು ರಾಜ್ಯ ಸರ್ಕಾರ ಬೆಂಬಲ ಬೆಲೆಯಲ್ಲಿ ಖರೀದಿಗೆ ಅನುಮತಿ ನೀಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿತ್ತು. ರಾಜ್ಯದ ಮನವಿಗೆ ಕೇಂದ್ರ ಪುರಸ್ಕರಿಸಿದ್ದು, ಶೇಂಗಾ ಖರೀದಿಗೆ ಕೇಂದ್ರ ಸರ್ಕಾರದಿಂದ ಎರಡು, ರಾಜ್ಯ ಸರ್ಕಾರದಿಂದ ನಾಲ್ಕು ಏಜನ್ಸಿಗಳನ್ನು ಗುರುತಿಸಲಾಗಿದೆ. ಅವಶ್ಯಕತೆಗನುಗುಣವಾಗಿ ಖರೀದಿ ಕೇಂದ್ರಗಳನ್ನು ಆರಂಭಿಸಲು ನಾಫೆಡ್ ಸಂಸ್ಥೆ, ಎನ್ಸಿಸಿಎಫ್ ಸಂಸ್ಥೆ ಹಾಗೂ ಖರೀದಿ ಏಜನ್ಸಿಗಳೊಂದಿಗೆ ಸಮಾಲೋಚನೆ ನಡೆಸಿ ಖರೀದಿ ಕೇಂದ್ರಗಳನ್ನು ತೆರೆದು ನೋಂದಣಿ ಪ್ರಕ್ರಿಯೆ ಆರಂಭಿಸಬೇಕು ಎಂದು ಜಿಲ್ಲಾ ಟಾಸ್ಕ್‌ಫೋರ್ಸ್‌ ಸಮಿತಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈದಿನ ಸಂಪಾದಕೀಯ | ಮಳೆ ನಿರ್ವಹಣೆಗೆ ಬೇಕು 500 ವರ್ಷಗಳ ದೂರದೃಷ್ಟಿ

ಬೆಂಬಲ ಬೆಲೆ ಯೋಜನೆಯಡಿ ಶೇಂಗಾ ಖರೀದಿ ಪ್ರಕ್ರಿಯೆಯಲ್ಲಿ ರೈತರಿಗೆ ಯಾವುದೇ ರೀತಿ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಈ ಬಗ್ಗೆ ಜಿಲ್ಲಾಧಿಕಾರಿಗಳು ಮುನ್ನೆಚ್ಚರಿಕೆ ವಹಿಸಬೇಕು. ನೋಂದಣಿ ಮತ್ತು ಖರೀದಿ ಪ್ರಕ್ರಿಯೆ ಆರಂಭಿಸುವ ಪೂರ್ವದಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಯಾವುದೇ ಖರೀದಿ ಕೇಂದ್ರದಿಂದ ದೂರುಗಳು ಬರಬಾರದು ಎಂದು ಸಚಿವರು ಎಚ್ಚರಿಕೆ ನೀಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಕರ್ನಾಟಕ SIR | ಅರ್ಹರ ಹೆಸರು ಡಿಲೀಟ್‌ ಮಾಡಲು ಬಿಜೆಪಿಗೆ ‘ಫಾರ್ಮ್‌-7’ ಟೂಲ್‌ಕಿಟ್; ಷಡ್ಯಂತ್ರ ಬಹಿರಂಗ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಿಜೆಪಿಗರು ‘ಫಾರ್ಮ್‌-7’ಅನ್ನು ದುರ್ಬಳಕೆ ಮಾಡಿಕೊಳ್ಳುತತಿದ್ದಾರೆ. ಈ...