ಸಚಿವ ಪ್ರಿಯಾಂಕ್‌ ಖರ್ಗೆಗೆ ಅಮೆರಿಕ ಪ್ರವಾಸ ನಿರ್ಬಂಧ ತೆರವುಗೊಳಿಸಿದ ಕೇಂದ್ರ ಸರ್ಕಾರ

Date:

ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಅಮೆರಿಕಾ ಪ್ರವಾಸಕ್ಕೆ ಕೇಂದ್ರ ಸರ್ಕಾರ ಅನುಮತಿ ನಿರಾಕರಿಸಿತ್ತು. ಈ ನಿರ್ಧಾರವನ್ನು ಖಂಡಿಸಿ ವಿದೇಶಾಂಗ ಸಚಿವಾಲಯಕ್ಕೆ ಪತ್ರ ಬರೆದ ಎರಡೇ ದಿನಗಳಲ್ಲಿ ಅವರಿಗೆ ಅಮೆರಿಕ ಪ್ರವಾಸ ನಿರ್ಬಂಧ ತೆರವು ಮಾಡಲಾಗಿದೆ.

- Advertisement -

ಕೇಂದ್ರ ಸರ್ಕಾರ ಈ ಬಗ್ಗೆ ಮರು ಆದೇಶ ಹೊರಡಿಸಿದ್ದು, ಈ ಬಗ್ಗೆ ಸ್ವತಃ ಪ್ರಿಯಾಂಕ್ ಖರ್ಗೆ ಟ್ವೀಟ್ ಮೂಲಕ ಖಚಿತಪಡಿಸಿದ್ದಾರೆ. ಜೊತೆಗೆ ಇದೆ ವೇಳೆ ಕೇಂದ್ರ ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಪ್ರಿಯಾಂಕ್ ಖರ್ಗೆ ಜೂನ್ 14ರಿಂದ 27ರವರೆಗೆ ಬೋಸ್ಟನ್ ಬಯೋ 2025 ಮತ್ತು ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ನಡೆಯಲಿರುವ ಈ ವರ್ಷದ ಆಟೋಮೇಶನ್ ಕಾನ್ನರೆನ್ಸ್ ನಲ್ಲಿ ಭಾಗವಹಿಸಲು ಖರ್ಗೆ ಅಮೆರಿಕಕ್ಕೆ ಭೇಟಿ ನೀಡಬೇಕಿತ್ತು. ಆದರೆ ಪ್ರಿಯಾಂಕ್ ಫ್ರಾನ್ಸ್ ನಲ್ಲಿ ಇದ್ದ ವೇಳೆ ಅಮೆರಿಕ ಭೇಟಿ ಅನುಮತಿಯನ್ನು ಕೇಂದ್ರ ನಿರಾಕರಿಸಿತ್ತು.

“ನನ್ನ ಅಮೆರಿಕ ಪ್ರವಾಸ ಕುರಿತಂತೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಯೂ ಟರ್ನ್ ತೆಗೆದುಕೊಂಡಿದ್ದು, ಮೊದಲಿನ ನಿರ್ಧಾರವನ್ನು ಹಿಂಪಡೆದು, ಭೇಟಿಗೆ ಅನುಮತಿ ನೀಡಿದೆ” ಎಂದು ಶನಿವಾರ ಪ್ರಿಯಾಂಕ್ ಖರ್ಗೆ ತಮ್ಮ ಎಕ್ಸ್ ಪೋಸ್ಟ್ ನಲ್ಲಿ ಬರೆದುಕೊಂಡಿದ್ದಾರೆ.

“ಅಮೆರಿಕ ಭೇಟಿಗಾಗಿ ಮೇ 15ರಂದು ಅನುಮತಿ ಕೇಳಲಾಗಿತ್ತು. ಆದರೆ ಪತ್ರಿಕಾಗೋಷ್ಠಿ ನಡೆಸಿ ಆಕ್ಷೇಪ ಎತ್ತಿದ ಬೆನ್ನಲ್ಲೇ ಜೂನ್ 19ರಂದು ಕೇಂದ್ರದಿಂದ ಆಕ್ಷೇಪಣೆ ಇಲ್ಲ ಎಂಬ ಪತ್ರ ಸ್ವೀಕರಿಸಿರುವುದಾಗಿ ಪ್ರಿಯಾಂಕ್ ಖರ್ಗೆ ಮಾಹಿತಿ ನಡಿದ್ದಾರೆ.

“ಸ್ಪಷ್ಟ ಕಾರಣ ನೀಡದೇ ಅನುಮತಿ ನಿರಾಕರಿಸಿದ್ದಕ್ಕೆ ರಾಜಕೀಯ ಕಾರಣ ಅಲ್ಲದೆ ಇನ್ನೇನಿರಲು ಸಾಧ್ಯ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಪ್ರಶ್ನಿಸಿದ್ದರು. ಸಚಿವ ಜೈಶಂಕರ್ ಅವರಿಗೆ 2 ಪುಟಗಳ ಪತ್ರ ಬರೆದು ಔಪಚಾರಿಕ ಸ್ಪಷ್ಟಿಕರಣ ನೀಡಬೇಕೆಂದು ಪ್ರಿಯಾಂಕ್ ಒತ್ತಾಯಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

₹50 ಸಾವಿರ ಕೋಟಿ ಹೂಡಿಕೆ, 1 ಲಕ್ಷ ಉದ್ಯೋಗ; ಕೈಗಾರಿಕಾ ವಲಯಕ್ಕೆ ಸರ್ಕಾರದ ಬಿಗ್ ಪ್ಲಾನ್

ರೈತರಿಗೆ ತಂತ್ರಜ್ಞಾನ ಆಧಾರಿತ ಸೇವೆ ಒದಗಿಸುವುದರಿಂದ ಹಿಡಿದು ಹೂಡಿಕೆ ಮತ್ತು ಉದ್ಯೋಗ...

ರಾಜ್ಯದಲ್ಲಿ ಭೀಕರ ಬರ: 46,000 ಕೋಟಿ ರೂ. ನಷ್ಟ; ಜಿಎಸ್‌ಟಿ ಆದಾಯದ ಮೇಲೆ ಪರಿಣಾಮ

ಕರ್ನಾಟಕದಲ್ಲಿ ಈ ಬಾರಿ ಹಿಂದೆಂದೂ ಕಾಣದಂತಹ ಭೀಕರ ಬರ ಪರಿಸ್ಥಿತಿ ತಲೆದೋರಿದೆ‌....

ರಾಜ್ಯದಲ್ಲಿ ಹೆಚ್ಚುತ್ತಿದೆ ಮಳೆ ಆರ್ಭಟ; 19 ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರೀ ಮಳೆ: ಹವಾಮಾನ ಇಲಾಖೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ವಿವಿಧ ಭಾಗಗಳಲ್ಲಿ ಇಂದು...

ದೆಹಲಿ ಪತ್ರಕರ್ತೆಗೆ ಪೊಲೀಸರಿಂದ ಲೈಂಗಿಕ ಕಿರುಕುಳ: ಕರ್ನಾಟಕ ಪತ್ರಕರ್ತೆಯರ ಸಂಘದಿಂದ ಖಂಡನೆ

ದೆಹಲಿಯ ಜಂತ‌ರ್ ಮಂತರ್‌ನಲ್ಲಿ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ...