ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಕೇಂದ್ರ ಸರ್ಕಾರ ಅಮೆರಿಕ ಪ್ರವಾಸಕ್ಕೆ ನಿರ್ಬಂಧಿಸಿದೆ.
ಪ್ರಿಯಾಂಕ್ ಖರ್ಗೆ ಅವರು ಪ್ಯಾರಿಸ್ ಪ್ರವಾಸ ಮುಗಿಸಿ ಇನ್ನೇನು ಅಮೆರಿಕಗೆ ತೆರಳಿ ಬಳಿಕ ಬಯೋ ಇಂಟರ್ ನ್ಯಾಷನಲ್ ಕನ್ವಷನ್ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಿತ್ತು. ಆದರೆ, ಕೇಂದ್ರ ಸರ್ಕಾರ ಖರ್ಗೆ ಅವರ ಯುಎಸ್ ಪ್ರವಾಸಕ್ಕೆ ಅನುಮತಿ ನಿರಾಕರಣೆ ಮಾಡಿದೆ.
ಇದರಿಂದ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಬೇಕಿದ್ದ ಪ್ರಿಯಾಂಕ್ ಖರ್ಗೆಗೆ ನಿರಾಸೆಯಾಗಿದ್ದು, ಕ್ಲಿಯರೆನ್ಸ್ ನೀಡದ ಬಗ್ಗೆ ವಿವರಣೆ ನೀಡುವಂತೆ ಪ್ರಿಯಾಂಕ್ ಖರ್ಗೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಗಮನಾರ್ಹ ಸಂಗತಿ ಎಂದರೆ ಸಚಿವರ ಜೊತೆ ತೆರಳಿದ್ದ ಐಎಎಸ್ ಅಧಿಕಾರಿಗಳಿಗೆ ಯುಎಸ್ಗೆ ತೆರಳಲು ಅನುಮತಿ ಸಿಕ್ಕಿದೆ.
ಸದ್ಯ ಪ್ಯಾರಿಸ್‌ನಲ್ಲಿ ಇರುವ ಪ್ರಿಯಾಂಕ್ ಖರ್ಗೆ ಅವರು ವಿವಿಧ ಅಧಿಕೃತ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದು, ಬಳಿಕ ಅಮೆರಿಕದಲ್ಲಿ ನಡೆಯುತ್ತಿರುವ ಬಯೋ ಇಂಟರ್ ನ್ಯಾಷನಲ್ ಕನ್ವಷನ್ ಕಾರ್ಯಕ್ರಮಕ್ಕೆ ಹೋಗಬೇಕಿತ್ತು. ಆದರೆ ಅಮೆರಿಕಗೆ ತೆರಳಲು ಕ್ಲಿಯರೆನ್ಸ್ ಸಿಗದಿದ್ದಕ್ಕೆ ಪ್ರಿಯಾಂಕ್ ಖರ್ಗೆಗೆ ಬೇಸರ ವ್ಯಕ್ತಪಡಿಸಿದ್ದಾರೆ.
ಪ್ರಿಯಾಂಕ್ ಖರ್ಗೆ ಅವರಿಗೆ ಅನುಮತಿ ನಿರಾಕರಣೆ ಮಾಡಿದ್ದು ಅಚ್ಚರಿಗೆ ಕಾರಣವಾಗಿದೆ. ಪ್ಯಾರಿಸ್ ಏರ್ ಶೋನಲ್ಲಿ ಭಾಗಿಯಾಗಿದ್ದ ಪ್ರಿಯಾಂಕ್ ಖರ್ಗೆ ಗುರುವಾರ ಬೆಂಗಳೂರಿಗೆ ಮರಳಲಿದ್ದಾರೆ. ಕರ್ನಾಟಕಕ್ಕೆ ಬಂದ ಬಳಿಕ ಸುದ್ದಿಗೋಷ್ಠಿ ನಡೆಸುವ ಸಾಧ್ಯತೆಯಿದೆ.
I’m holding back on making any public statements for now. Once I’m back in Bengaluru, I will seek a clear explanation from the Government of India regarding this denial. https://t.co/70QyioMeM8
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) June 17, 2025
