ರಾಜ್ಯಪಾಲ ಗೆಹ್ಲೋಟ್ ಅವರನ್ನು ಕೇಂದ್ರ ಸರ್ಕಾರ ಕೂಡಲೇ ಹಿಂದಕ್ಕೆ ಕರೆಯಿಸಿಕೊಳ್ಳಬೇಕು- ಕರವೇ ಒತ್ತಾಯ

Date:

ಹಿಂದಿ ಸಾಮ್ರಾಜ್ಯಶಾಹಿಗಳ ಪರವಾಗಿ ವರ್ತಿಸುತ್ತ ಕರ್ನಾಟಕ ವಿರೋಧಿ ಧೋರಣೆ ತಳೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಕೇಂದ್ರ ಸರ್ಕಾರ ಕೂಡಲೇ ಹಿಂದಕ್ಕೆ ಕರೆಯಿಸಿಕೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಒತ್ತಾಯಿಸಿದೆ.

- Advertisement -

ಸೋಮವಾರ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆಯಲ್ಲಿ ಮಾತನಾಡಿದ ಕರವೇ ಅಧ್ಯಕ್ಷ ಟಿ ಎ ನಾರಾಯಣ ಗೌಡ, “ರಾಜ್ಯ ಸರ್ಕಾರವು ಎಸ್ಸೆಸ್ಸೆಲ್ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ವ್ಯವಸ್ಥೆ ಜಾರಿಗೆ ತಂದ ನಿರ್ಧಾರವನ್ನು ಮರುಪರಿಶೀಲಿಸುವಂತೆ ರಾಜ್ಯಪಾಲರು ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ. ಈ ಪತ್ರದ ಹಿಂದೆ ಕರ್ನಾಟಕದಲ್ಲಿ ಹಿಂದಿ ಹೇರಿಕೆಯನ್ನು ಶಾಶ್ವತವಾಗಿ ನಡೆಸುವ ಹುನ್ನಾರವಿದೆ. ರಾಜ್ಯಪಾಲರು ತಮ್ಮ ಕಾರ್ಯವ್ಯಾಪ್ತಿಯನ್ನು ಮೀರಿ ಕನ್ನಡಿಗರ ಆಶೋತ್ತರಗಳಿಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಹೀಗಾಗಿ ಅವರು ಕರ್ನಾಟಕದಲ್ಲಿ ಒಂದೇ ಒಂದು ನಿಮಿಷವೂ ರಾಜ್ಯಪಾಲರಾಗಿ ಉಳಿಯುವ ನೈತಿಕತೆಯನ್ನು ಕಳೆದುಕೊಂಡಿದ್ದಾರೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮಹಿಳಾ ಮೀಸಲಾತಿ ಮರೆಯಲ್ಲಿ ಕ್ಷೇತ್ರ ಮರುವಿಂಗಡಣೆ: ವಿರೋಧ ಪಕ್ಷಗಳ...

2023ರ ಮಹಿಳಾ ಮೀಸಲಾತಿ ಕಾಯ್ದೆಯನ್ನು ಅನಗತ್ಯವಾಗಿ ಕ್ಷೇತ್ರ ಪುನರ್ವಿಂಗಡಣೆಯೊಂದಿಗೆ ತಳುಕು ಹಾಕಿರುವ ಮೋದಿ ಸರ್ಕಾರದ ನಡೆ, ಭಾರತೀಯ ಪ್ರಜಾಪ್ರಭುತ್ವ ಮತ್ತು ಸಂಸದೀಯ ಇತಿಹಾಸದಲ್ಲಿಯೇ ಒಂದು ಅಪರೂಪದ ರಾಜಕೀಯ ಹಾಗೂ ಸಾಂವಿಧಾನಿಕ ಬಿಕ್ಕಟ್ಟನ್ನು ಸೃಷ್ಟಿಸಿದೆ....

ಖಾಸಗಿ ವೈದ್ಯರ ಎಡವಟ್ಟು; ಬಡ ಕುಟುಂಬದ ಆಧಾರ ಸ್ತಂಭ...

ಆತ ಕೂಲಿ‌ ಕೆಲಸ ಮಾಡಿಕೊಂಡು ಹಂಗೊ ಹೆಂಗೋ ಜೀವನ‌ ನಡೆಸಿಕೊಂಡು ಬಂದಿದ್ದ ಚಿರ ಯೌವ್ವನದ ಯುವಕ. ತನ್ನ ಮನೆ ಜವಾಬ್ದಾರಿಯನ್ನು ತನ್ನದೇ ಹೆಗಲ ಮೇಲೆರಿಸಿ ಕಷ್ಟಪಟ್ಟು ದುಡಿದು ತನ್ನ ಇಬ್ಬರು ಸಹೋದರಿಯರಿಗೆ ಮದುವೆಯನ್ನೂ...

ಭಾಷಣಗಳಲ್ಲಿ ಆಗಾಗ ಎಡವಟ್ಟು, ಸುಳ್ಳು-ಅತಿಶಯೋಕ್ತಿಯೇ ಮೇಲುಗೈ: ನವಭಾರತದ ‘ಪಪ್ಪು’...

ಒಂದು ಕಾಲದಲ್ಲಿ ರಾಹುಲ್ ಗಾಂಧಿ ಅವರನ್ನು ಅಪಹಾಸ್ಯ ಮಾಡಲು ಬಳಸುತ್ತಿದ್ದ 'ಪಪ್ಪು' ಎಂಬ ಪದವೇ ಇದೀಗ ಮೋದಿ ಅವರತ್ತ ತಿರುಗಿದೆ. 1987-88ರ ಡಿಜಿಟಲ್ ಕ್ಯಾಮೆರಾ-ಇಮೇಲ್ ಕಥೆಯಿಂದ ಹಿಡಿದು ಐತಿಹಾಸಿಕ ಪ್ರಮಾದಗಳವರೆಗೆ, ಮೋದಿ ಅವರ...

“ರಾಜ್ಯಪಾಲರು ರಾಜ್ಯದ ದಿನನಿತ್ಯದ ಆಡಳಿತದಲ್ಲಿ ಮೂಗು ತೂರಿಸುವುದು ಅತ್ಯಂತ ಆಕ್ಷೇಪಾರ್ಹವಾದ ಬೆಳವಣಿಗೆಯಾಗಿದೆ. ರಾಜ್ಯ ಸರ್ಕಾರವನ್ನು ಕರ್ನಾಟಕದ ಜನತೆ ಆಯ್ಕೆ ಮಾಡಿದ್ದಾರೆ. ನಾಡಿನ ಜನರ ಬೇಕು, ಬೇಡಗಳನ್ನು ರಾಜ್ಯ ಸರ್ಕಾರ ತೀರ್ಮಾನಿಸುತ್ತದೆ. ಹೀಗಿರುವಾಗ ಸರ್ಕಾರದ ಮುಖ್ಯಸ್ಥರಾಗಿ ಸರ್ಕಾರದ ನಾಡಪರ ಕಾಳಜಿಯ ನಿರ್ಧಾರಗಳನ್ನು ಬೆಂಬಲಿಸುವುದು ಅವರ ಕರ್ತವ್ಯವಾಗಿರುತ್ತದೆ. ಆದರೆ ಅವರು ಹಿಂದಿ ಮಾಫಿಯಾ ಪರವಾಗಿ ಕಾರ್ಯ ನಿರ್ವಹಿಸುತ್ತಿರುವಂತೆ ತೋರುತ್ತದೆ. ಹೀಗಾಗಿ ಅವರನ್ನು ಕೇಂದ್ರ ಸರ್ಕಾರ ಕೂಡಲೇ ವಜಾಗೊಳಿಸಬೇಕು” ಎಂದು ಅವರು ಆಗ್ರಹಿಸಿದ್ದಾರೆ.

ಅನಾಮಧೇಯ ಸಂಘಟನೆಯ ಮನವಿಗೆ ರಾಜ್ಯಪಾಲರಿಂದ ತುರ್ತು ಪ್ರತಿಕ್ರಿಯೆ!

“ಬೆಂಗಳೂರು ಸ್ಥಳೀಯ ಭಾಷೆಗಳ ಸಂರಕ್ಷಣಾ ಸಂಘ ಎಂಬ ಅನಾಮಧೇಯ ಸಂಘಟನೆಯ ಮನವಿಗೆ ತುರ್ತಾಗಿ ರಾಜ್ಯಪಾಲರು ಪ್ರತಿಕ್ರಿಯಿಸಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿರುವುದೇ ಒಂದು ದುಷ್ಟ ಹುನ್ನಾರವಾಗಿದೆ. ಕರ್ನಾಟಕವನ್ನು ವಲಸೆ ಬರುತ್ತಿರುವ ಹಿಂದಿಭಾಷಿಕರಿಗಾಗಿ ʼಸುರಕ್ಷಿತ ಸ್ವರ್ಗʼವನ್ನಾಗಿಸುವ ದೂರಗಾಮಿ ಉದ್ದೇಶಗಳು ಹಿಂದಿ ಮಾಫಿಯಾಗೆ ಇದೆ. ಅದರ ಭಾಗವಾಗಿಯೇ ರಾಜ್ಯಪಾಲರು ಈ ಪತ್ರ ಬರೆದಿದ್ದಾರೆ ಎಂಬುದು ಸ್ಪಷ್ಟ.

“ಕರ್ನಾಟಕದ ಶಿಕ್ಷಣ ನೀತಿಯನ್ನು ರಾಜ್ಯ ಸರ್ಕಾರ ತೀರ್ಮಾನಿಸುತ್ತದೆ. ರಾಜ್ಯ ಸರ್ಕಾರವನ್ನು ಇದಕ್ಕಾಗಿಯೇ ನಾವು ಆಯ್ಕೆ ಮಾಡಿ ಕಳಿಸಿದ್ದೇವೆ. ಇದನ್ನು ಪ್ರಶ್ನಿಸಲು ರಾಜ್ಯಪಾಲರು ಯಾರು? ಅವರಿಗೆ ಸಂವಿಧಾನ ಈ ಅವಕಾಶ ನೀಡಿಲ್ಲ. ಹಿಂದಿ ಮಾಫಿಯಾ ಎಷ್ಟು ಬಲಶಾಲಿಯಾಗಿದೆ ಎಂಬುದು ಇದರಿಂದ ಗೊತ್ತಾಗುತ್ತಿದೆ. ಹುತ್ತದ ಒಳಗೆ ಇನ್ನೆಷ್ಟು ಹಾವುಗಳು ಇವೆಯೋ ಗೊತ್ತಿಲ್ಲ. ಎಲ್ಲವೂ ಹೊರಬರಲಿ ಎಂದು ನಾವು ಕಾಯುತ್ತಿದ್ದೇವೆ” ಎಂದು ನಾರಾಯಣ ಗೌಡ ಹೇಳಿದ್ದಾರೆ.

“ರಾಜ್ಯಪಾಲರ ಈ ಪತ್ರವನ್ನು ರಾಜ್ಯ ಸರ್ಕಾರ ಕಸದ ಬುಟ್ಟಿಗೆ ಎಸೆಯಬೇಕು. ಕನ್ನಡಿಗರ ಹಿತದೃಷ್ಟಿಗೆ ವಿರುದ್ಧವಾಗಿ ಯಾರೇ ಏನೇ ಹೇಳಿದರೂ ಅದನ್ನು ರಾಜ್ಯ ಸರ್ಕಾರ ಪರಿಗಣಿಸಬೇಕಿಲ್ಲ. ನಾವು ಹಿಂದೆ ಬ್ರಿಟಿಷ್ ಸಾಮ್ರಾಜ್ಯಶಾಹಿಯ ವಿರುದ್ಧ ಹೋರಾಡಿದ್ದೆವು. ಈಗ ಹಿಂದಿ ಸಾಮ್ರಾಜ್ಯಶಾಹಿ ನಮ್ಮನ್ನು ಆಳಲು ಯತ್ನಿಸುತ್ತಿದೆ. ಇದಕ್ಕೆ ನಾವು ಅವಕಾಶ ಕೊಡುವುದಿಲ್ಲ. ನಮ್ಮ ಪ್ರಾಣ ಹೋದರೂ ನಮ್ಮ ನೆಲದ ಅಸ್ಮಿತೆಯನ್ನು ಉಳಿಸಿಕೊಳ್ಳುತ್ತೇವೆ.

ತೃತೀಯ ಭಾಷೆ ಗ್ರೇಡಿಂಗ್ ವ್ಯವಸ್ಥೆಯ ನಿರ್ಧಾರ ಸರ್ಕಾರ ಕೈಗೊಂಡಿದೆ. ಇದನ್ನು ಬದಲಿಸುವ ಪ್ರಯತ್ನ ಯಾರೇ ಮಾಡಿದರೂ ರಕ್ತಕ್ರಾಂತಿಯಾಗುತ್ತದೆ. ರಾಜ್ಯಪಾಲ ಗೆಹ್ಲೋಟ್ ಹಿಂದಿ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಅಲ್ಲೆಲ್ಲಾ ತೃತೀಯ ಭಾಷೆಯಾಗಿ ಕನ್ನಡ ಕಲಿಸಲು ತಾಕೀತು ಮಾಡಲಿ. ಅಷ್ಟೇಕೆ ಅವರ ಸ್ವಂತ ರಾಜ್ಯವಾದ ಮಧ್ಯಪ್ರದೇಶದಲ್ಲಿ ಈಗಲೂ ಎರಡೇ ಭಾಷೆಗಳನ್ನು ಕಲಿಸಲಾಗುತ್ತಿದೆ. ಮೂರನೇ ಭಾಷೆಯನ್ನಾಗಿ ಕಡ್ಡಾಯವಾಗಿ ಕನ್ನಡ ಕಲಿಸುವಂತೆ ಅಲ್ಲಿನ ಸರ್ಕಾರದ ಮೇಲೆ ಅವರು ಒತ್ತಡ ಹೇರಲಿ. ಅದು ಸಾಧ್ಯವಿಲ್ಲದಿದ್ದರೆ ಕನ್ನಡಿಗರ ಮೇಲೆ ಯಾಕೆ ಹಿಂದಿ ಹೇರಲು ಯತ್ನಿಸುತ್ತಾರೆ. ಇಂಥ ನಾಡದ್ರೋಹಿ ರಾಜ್ಯಪಾಲ ಕರ್ನಾಟಕದಲ್ಲಿ ಇರಲು ಯೋಗ್ಯರಲ್ಲ. ಅವರನ್ನು ಕೇಂದ್ರ ಸರ್ಕಾರ ಕೂಡಲೇ ಹಿಂದಕ್ಕೆ ಕರೆಯಿಸಿಕೊಳ್ಳಲಿ” ಎಂದು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ |ನೀರಿನ ಹಂಚಿಕೆಯಲ್ಲಿ ತಾರತಮ್ಯ ಬೇಡ, ಕೊನೆಯ ಅಂಚಿನ ಪ್ರದೇಶಕ್ಕೂ ನೀರು ತಲುಪಿಸಿ: ಎಂ.ಬಿ. ಪಾಟೀಲ

ಜಿಲ್ಲೆಯಲ್ಲಿ ಲಭ್ಯವಿರುವ ನೀರನ್ನು ಸಮರ್ಪಕವಾಗಿ ನಿರ್ವಹಿಸಿ, ಕುಡಿಯುವ ನೀರಿಗೆ ಮೊದಲ ಆದ್ಯತೆ...

ಮೈಶುಗರ್‌ ಖಾಸಗೀಕರಣ ಕುರಿತು ನಿರಾಣಿ ಹೇಳಿಕೆಗೆ ರೈತ ಹಿತರಕ್ಷಣಾ ಸಮಿತಿ ಖಂಡನೆ

ಮೈಸೂರು ಸಕ್ಕರೆ ಕಾರ್ಖಾನೆ (ಮೈಷುಗರ್) ಅನ್ನು ಜಾಗತಿಕ ಟೆಂಡರ್ ಕರೆದು ಖಾಸಗಿ...

ವಿಜಯಪುರ |ಶಿಥಿಲ ಶಾಲಾ ಕಟ್ಟಡ ತೆರವಿಗೆ ಉಪ ಲೋಕಾಯುಕ್ತರ ಸೂಚನೆ

ನಗರದ ನಂ.24ರ ಸರ್ಕಾರಿ ಕನ್ನಡ ಗಂಡು ಮಕ್ಕಳ ಶಾಸಕರ ಮಾದರಿ ಪ್ರಾಥಮಿಕ...