ಎಚ್‌ಡಿಕೆ ಪತ್ರಕ್ಕೆ ಸ್ಪಂದಿಸಿದ ಕೇಂದ್ರ; ಕ್ವಿಂಟಾಲ್‌ ಮಾವಿಗೆ 1616 ರೂ. ಪರಿಹಾರ ಘೋಷಣೆ

Date:

Advertisements

ರಾಜ್ಯದ ಮಾವು ಬೆಳೆಗಾರರ ಹಿತರಕ್ಷಣೆಗೆ ಸ್ಪಂದಿಸುವಂತೆ ಕೋರಿ ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಅವರು ಬರೆದಿದ್ದ ಪತ್ರಕ್ಕೆ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್‌ ಚೌಹಾಣ್‌ ಸ್ಪಂದಿಸಿದ್ದು, ಮಾರುಕಟ್ಟೆ ಮಧ್ಯ ಪ್ರವೇಶ ಯೋಜನೆಯಡಿ ಮಾವಿಗೆ ಬೆಂಬಲ ಬೆಲೆ ಘೋಷಣೆ ಮಾಡಿದ್ದಾರೆ.

ಈ ಯೋಜನೆಯಡಿಯಲ್ಲಿ, ಕ್ವಿಂಟಲ್‌ಗೆ ರೂ. 1616 ಮಾರುಕಟ್ಟೆ ಮಧ್ಯಸ್ಥಿಕೆ ಬೆಲೆಯಲ್ಲಿ ಗರಿಷ್ಠ 2,50,000 ಮೆಟ್ರಿಕ್ ಟನ್ ಮಾವಿನಹಣ್ಣಿನ ಖರೀದಿಗೆ ಅನುಮೋದಿಸಲಾಗಿದೆ ಎಂದು ಕೇಂದ್ರ ಸಚಿವರು ತಿಳಿಸಿದ್ದಾರೆ.

ಈ ಮಧ್ಯಸ್ಥಿಕೆ ಪರಿಹಾರವನ್ನು ನೀಡುತ್ತದೆ ಮತ್ತು ಕರ್ನಾಟಕದ ಮಾವಿನ ರೈತರ ಕಲ್ಯಾಣಕ್ಕಾಗಿ ಕುಮಾರಸ್ವಾಮಿ ಅವರು ಎತ್ತಿದ ನಿಜವಾದ ಕಳವಳಗಳನ್ನು ಪರಿಹರಿಸುತ್ತದೆ ಎಂದು ಶಿವರಾಜ್ ಸಿಂಗ್ ಚೌಹಾಣ್ ಅವರು ಪತ್ರದಲ್ಲಿ ತಿಳಿಸಿದ್ದಾರೆ.

Advertisements

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಆಗ ಇರಾಕ್ – ಈಗ ಇರಾನ್: ಅಮೆರಿಕ ಕ್ರೌರ್ಯಕ್ಕೆ ಕೊನೆ ಎಂದು?

ಇದಕ್ಕೆ ಧನ್ಯವಾದ ತಿಳಿಸಿರುವ ಕುಮಾರಸ್ವಾಮಿ, ‘ಕರ್ನಾಟಕದ ಮಾವು ಬೆಳೆಗಾರರ ನೆರವಿಗೆ ಧಾವಿಸಿದ ಪ್ರಧಾನಿಗಳಾದ ನರೇಂದ್ರ ಮೋದಿ ಅವರ ಸರಕಾರದ ರೈತಪರ ಬದ್ಧತೆ, ಅಚಲತೆಗೆ ನನ್ನ ಹೃದಯಪೂರ್ವಕ ಧನ್ಯವಾದಗಳು. ಬೆಲೆ ಕುಸಿತದಿಂದ ಕಂಗಾಲಾಗಿದ್ದ ರಾಜ್ಯದ ಮಾವು ಬೆಳೆಗಾರರ ಹಿತದೃಷ್ಟಿಯಿಂದ ಮನವಿ ಮಾಡಿದ ತಕ್ಷಣವೇ ಮಾರುಕಟ್ಟೆ ಮಧ್ಯಸ್ಥಿಕೆ ಬೆಲೆ ಯೋಜನೆ ಅಡಿಯಲ್ಲಿ ಬೆಂಬಲ ಬೆಲೆ ಘೋಷಿಸಿದ್ದಕ್ಕಾಗಿ ಕೇಂದ್ರದ ಕೃಷಿ ಸಚಿವರಾದ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರಿಗೆ ಕರ್ನಾಟಕದ ಮಾವು ಬೆಳೆಗಾರರ ಪರವಾಗಿ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ನರೇಂದ್ರ ಮೋದಿ ಅವರ ಆಡಳಿತದಲ್ಲಿ ರೈತರ ಉತ್ಪನ್ನಗಳಿಗೆ ಸ್ಥಿರ ಬೆಲೆಯ ಖಾತರಿ ಸದಾ ಇರುತ್ತದೆ ಎಂಬುದನ್ನು ಈ ಉಪಕ್ರಮವು ಮತ್ತೊಮ್ಮೆ ಸಾಬೀತುಪಡಿಸಿದೆ ಎಂದು ಟ್ವೀಟ್‌ ಮಾಡಿದ್ದಾರೆ.

ಇದಕ್ಕೂ ಮುನ್ನ ಕೃಷಿ ಸಚಿವರಿಗೆ ಬರೆದಿದ್ದ ಪತ್ರದಲ್ಲಿ, ರಾಜ್ಯದಲ್ಲಿನ ವಾತಾವರಣ, ಮಾವಿನ ಬೆಲೆ ಕುಸಿತದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೂಡಲೇ ಮಾವು ಬೆಳೆಗಾರರ ಸಮಸ್ಯೆ ಪರಿಹರಿಸಿ. ಬೆಂಗಳೂರು ನಗರ, ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ ಮುಂತಾದ ಜಿಲ್ಲೆಗಳಲ್ಲಿ ಮಾವು ಬೆಳೆಗಾರರು ಸಂಕಷ್ಟದಲ್ಲಿ ಇದ್ದಾರೆ. ಭಾರೀ ಬೆಲೆ ಕುಸಿತದಿಂದ ಬೆಳಗಾರರು ಕಂಗಾಲಾಗಿದ್ದಾರೆ. ಇವರಿಗೆ ನೆರವು ನೀಡುವಂತೆ ಮನವಿ ಮಾಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X