ಚಾಮರಾಜನಗರ: ಅರಣ್ಯ ಸಿಬ್ಬಂದಿ ಗುಂಡೇಟಿಗೆ ಮೂವರ ಸಾವು, ಆಕ್ರೋಶಗೊಂಡ ಜನರಿಂದ ಕಚೇರಿ ಧ್ವಂಸ

Date:

ಚಾಮರಾಜನಗರದ ಹನೂರಿನ ಕಾವೇರಿ ವನ್ಯಜೀವಿಧಾಮದ ಹೊಳೆದಟ್ಟಿ ಅರಣ್ಯ ಪ್ರದೇಶದಲ್ಲಿ ಅರಣ್ಯ ಸಿಬ್ಬಂದಿ ಹಾಗೂ ಶಂಕಿತ ಕಳ್ಳಬೇಟೆಗಾರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಮೃತಪಟ್ಟಿರುವ ಘಟನೆ ವರದಿಯಾಗಿದೆ. ಈ ಘಟನೆಯಿಂದ ತೀವ್ರ ಆಕ್ರೋಶಗೊಂಡಿರುವ ಸ್ಥಳೀಯರು ಅರಣ್ಯಾಧಿಕಾರಿಗಳ ಕಚೇರಿಗೆ ನುಗ್ಗಿ ಪೀಠೋಪಕರಣಗಳನ್ನು ಧ್ವಂಸಗೊಳಿಸಿದ್ದು, ಪ್ರದೇಶದಲ್ಲಿ ಬೂದಿ ಮುಚ್ಚಿದ ಕೆಂಡದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

- Advertisement -

ಗುಂಡೇಟಿಗೆ ಬಲಿಯಾದವರನ್ನು ಹನೂರು ತಾಲೂಕಿನ ತೋಮಿಯರ್ ಪಾಳ್ಯ ಗ್ರಾಮದ ನಿವಾಸಿಗಳಾದ ಅಂತೋನಿಸ್ವಾಮಿ, ಪೀಟರ್ ಹಾಗೂ ಕುಮಾರ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಗಾಯಗೊಂಡಿರುವ ಮಹಿಮದಾಸ್ ಎಂಬುವವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ನಾರಾಯಣ ಹೃದಯಾಲಯಕ್ಕೆ ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇಂ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಇಲಾಖೆಯ ಮೂಲಗಳ ಪ್ರಕಾರ, ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ ಮುಂಜಾನೆ ಗಸ್ತಿನಲ್ಲಿದ್ದ ಸಿಬ್ಬಂದಿಗೆ ವನ್ಯಪ್ರಾಣಿಗಳನ್ನು ಬೇಟೆಯಾಡಿ ಮಾಂಸ ಪಾಲು ಮಾಡುತ್ತಿದ್ದ ಬಗ್ಗೆ ಖಚಿತ ಸುಳಿವು ಸಿಕ್ಕಿತ್ತು. ತಕ್ಷಣವೇ ಕಾರ್ಯಾಚರಣೆಗಿಳಿದ ಸಿಬ್ಬಂದಿ ಅವರನ್ನು ಹಿಡಿಯಲು ಮುಂದಾದಾಗ ಶಂಕಿತರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಆತ್ಮರಕ್ಷಣೆಗಾಗಿ ಅರಣ್ಯ ಸಿಬ್ಬಂದಿ ನಡೆಸಿದ ಪ್ರತಿದಾಳಿಯಲ್ಲಿ ಈ ಮೂವರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಮೈಸೂರಿನ ಕೆ.ಆರ್. ಆಸ್ಪತ್ರೆಗೆ ರವಾನಿಸಲಾಗಿದೆ.

ಮೂವರ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ರೊಚ್ಚಿಗೆದ್ದ ಗ್ರಾಮಸ್ಥರು ಶಾಗ್ಯ ವಿಭಾಗದ ಡಿ.ಆರ್.ಎಫ್.ಓ ಕಚೇರಿಯ ಮೇಲೆ ದಾಳಿ ನಡೆಸಿ ವ್ಯಾಪಕ ಹಾನಿ ಮಾಡಿದ್ದಾರೆ. “ಮೃತಪಟ್ಟವರು ಕಳ್ಳಬೇಟೆಗಾರರಲ್ಲ ಮತ್ತು ಅವರು ಅರಣ್ಯ ಸಿಬ್ಬಂದಿ ಮೇಲೆ ಯಾವುದೇ ದಾಳಿಯನ್ನೂ ಮಾಡಿಲ್ಲ. ಆತ್ಮರಕ್ಷಣೆಯ ಪ್ರತಿದಾಳಿಯ ನೆಪವೊಡ್ಡಿ ಮೂವರನ್ನು ಅಮಾನುಷವಾಗಿ ಗುಂಡಿಟ್ಟು ಹತ್ಯೆ ಮಾಡಲಾಗಿದೆ” ಎಂದು ಆರೋಪಿಸಿರುವ ಸ್ಥಳೀಯರು, ಇಡೀ ಪ್ರಕರಣವನ್ನು ನಿವೃತ್ತ ನ್ಯಾಯಾಧೀಶರಿಂದ ತನಿಖೆಗೊಳಪಡಿಸಬೇಕು ಹಾಗೂ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಪಟ್ಟು ಹಿಡಿದಿದ್ದಾರೆ.

ಈ ಸೂಕ್ಷ್ಮ ಘಟನೆಯ ಕುರಿತು ಪ್ರತಿಕ್ರಿಯಿಸಿರುವ ಸಚಿವ ಸಿ. ಪುಟ್ಟರಂಗಶೆಟ್ಟಿ, ಅರಣ್ಯಾಧಿಕಾರಿಗಳಿಂದ ಮಾಹಿತಿ ಪಡೆದಿರುವುದಾಗಿ ತಿಳಿಸಿದ್ದಾರೆ. “ಅಧಿಕಾರಿಗಳ ವರದಿಯಂತೆ, ಕಳ್ಳಬೇಟೆಗೆ ತೆರಳಿದ್ದವರು ನಾಡಬಂದೂಕುಗಳಿಂದ ಸಿಬ್ಬಂದಿ ಮೇಲೆ ದಾಳಿ ನಡೆಸಿದಾಗ ಆತ್ಮರಕ್ಷಣೆಗಾಗಿ ಈ ಪ್ರತಿದಾಳಿ ನಡೆದಿದೆ. ಆದರೆ, ಮೃತಪಟ್ಟವರು ಯಾವುದೇ ಬೇಟೆಗೆ ಹೋಗಿರದ ಅಮಾಯಕರು ಎಂದು ಸ್ಥಳೀಯರು ವಾದಿಸುತ್ತಿದ್ದಾರೆ. ಹೀಗಾಗಿ ಎರಡೂ ಆಯಾಮಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಮುಂದಿನ ಸೂಕ್ತ ಕ್ರಮ ಕೈಗೊಳ್ಳಲಾಗುವುದು” ಎಂದು ಭರವಸೆ ನೀಡಿದ್ದಾರೆ.

ಸದ್ಯ ಹನೂರು ಅರಣ್ಯ ಇಲಾಖೆ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಯುವ ಸಾಧ್ಯತೆಗಳಿರುವುದರಿಂದ, ಕಚೇರಿಯ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಮ್ ಔರತೇಂ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ ಹಾಕದಿರಿ!

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಬಸವಕಲ್ಯಾಣ | ಅಲ್ಲಮ ಜಗತ್ತಿನ ಶ್ರೇಷ್ಠ ಅನುಭಾವಿ

ಅಲ್ಲಮಪ್ರಭು ಅವರು ಜಗತ್ತಿನ ಶ್ರೇಷ್ಠ ಅನುಭಾವಿಗಳಾಗಿದ್ದು, ಅವರ ಚಿಂತನೆ ಹಾಗೂ ವಚನಗಳ...

ರಾಯಚೂರು | ಕಾಲೇಜಿನಲ್ಲಿ ಶೌಚಾಲಯವಿದೆ, ನೀರಿಲ್ಲ: 400 ಮಂದಿ ವಿದ್ಯಾರ್ಥಿನಿಯರ ಪರದಾಟ

ಹೆಣ್ಣುಮಕ್ಕಳಿಗೆ ಶಿಕ್ಷಣ ನೀಡುವುದಷ್ಟೇ ಸಾಲದು; ಅವರು ಸುರಕ್ಷಿತ, ಗೌರವಯುತ ಹಾಗೂ ಸ್ವಚ್ಛ...