ಗಗನಕ್ಕೇರಿದ ಚಿಕನ್, ಮೊಟ್ಟೆ ದರ: ದಿಢೀರ್ ಏರಿಕೆಗೆ ಕಾರಣವೇನು?

Date:

ರಾಜ್ಯದಲ್ಲಿ ಕೋಳಿ ಮಾಂಸ ಮತ್ತು ಮೊಟ್ಟೆಯ ಬೆಲೆ ದಿಢೀರನೆ ಗಗನಕ್ಕೇರಿದೆ. ಮಳೆಗಾಲದ ಆರಂಭದ ಬೆನ್ನಲ್ಲೇ ಈ ದಿಢೀರ್ ದರ ಏರಿಕೆಯಾಗಿದ್ದು, ಸಾಮಾನ್ಯ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್ ಸಂಪೂರ್ಣವಾಗಿ ಏರುಪೇರಾಗಿದೆ.

- Advertisement -

ಬೆಂಗಳೂರು ಸೇರಿದಂತೆ ರಾಜ್ಯದ ಹಲವಾರು ಭಾಗಗಳಲ್ಲಿ ಕೆಲವು ದಿನಗಳ ಹಿಂದೆ ಪ್ರತಿ ಕೆಜಿಗೆ 250 ರೂ. ಆಸುಪಾಸಿನಲ್ಲಿದ್ದ ಸ್ಕಿನ್‌ಲೆಸ್ ಚಿಕನ್ ಬೆಲೆ, ಈಗ ಬರೋಬ್ಬರಿ 340 ರಿಂದ 350 ರೂಪಾಯಿಯ ಗಡಿ ದಾಟಿದೆ. ಇನ್ನು ವಿತ್ ಸ್ಕಿನ್ ಚಿಕನ್ ದರ 320 ರೂಪಾಯಿಗೆ ತಲುಪಿದೆ. ಅಂತೆಯೇ, ಕೆ.ಜಿಗೆ 170 ರೂ.ಗಳಿದ್ದ ಜೀವಂತ ಕೋಳಿ ಬೆಲೆ 210 ರೂಪಾಯಿ ದಾಟಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾರತಕ್ಕೆ ಬರದ ಬುಲೆಟ್ ಟ್ರೈನ್: ತಡವಾಗುತ್ತಿರುವುದು ಮೋದಿಯಿಂದಲೋ, ಜಪಾನ್‌ನವರಿಂದಲೋ?

ಮುಂಬೈ ಮತ್ತು ಅಹಮದಾಬಾದ್ ನಡುವಿನ 508 ಕಿ.ಮೀ ಉದ್ದದ ಈ ಮಾರ್ಗವು ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಯೋಜನೆಯ ಭಾಗವಾಗಿ ನರೇಂದ್ರ ಮೋದಿಯವರು ಘೋಷಿಸಿದ್ದರು. ಅದಾಗಿ ಹತ್ತು ವರ್ಷವಾದರೂ ಸುದ್ದಿಯೇ ಇಲ್ಲ. ಬುಲೆಟ್ ಟ್ರೈನ್...

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಮತ್ತೊಂದೆಡೆ, ಬಡವರಿಗೆ ಪ್ರೊಟೀನ್ ಮೂಲವಾಗಿರುವ ಮೊಟ್ಟೆಯ ಬೆಲೆಯೂ ದಾಖಲೆ ಮಟ್ಟಕ್ಕೆ ಏರಿದೆ. ಕಳೆದ ತಿಂಗಳು ಒಂದು ಡಜನ್ (12) ಮೊಟ್ಟೆ ಬೆಲೆ 80 ರೂ ಇದ್ದದ್ದು, ಈಗ 100 ರೂ. ಗಡಿ ಮುಟ್ಟಿದೆ. ಚಿಲ್ಲರೆ ಅಂಗಡಿಗಳಲ್ಲಿ ಒಂದು ಮೊಟ್ಟೆ ಬೆಲೆ 8.50 ರೂ. ಆಸುಪಾಸಿನಲ್ಲಿ ಮಾರಾಟವಾಗುತ್ತಿದೆ.

ರಾಷ್ಟ್ರೀಯ ಮೊಟ್ಟೆ ಸಮನ್ವಯ ಸಮಿತಿ (NECC) ನೀಡಿರುವ ದತ್ತಾಂಶಗಳ ಪ್ರಕಾರ, ಮೇ ತಿಂಗಳಲ್ಲಿ 100 ಮೊಟ್ಟೆಗಳಿಗೆ 598.5 ರೂಪಾಯಿ ಇದ್ದ ಸಗಟು ದರವು, ಜೂನ್‌ನಲ್ಲಿ 671.7 ರೂಪಾಯಿಗೆ ಏರಿಕೆಯಾಗಿತ್ತು. ಈಗ, ಜುಲೈ ಆರಂಭದಲ್ಲಿ 710 ರೂಪಾಯಿಗೆ ತಲುಪಿದೆ.

ಈ ದಿಢೀರ್ ಬೆಲೆ ಏರಿಕೆಯ ಹಿಂದೆ ಬೇಡಿಕೆ ಮತ್ತು ಪೂರೈಕೆಯ ನಡುವಿನ ಭಾರಿ ವ್ಯತ್ಯಾಸ ಪ್ರಮುಖ ಕಾರಣವೆಂದು ಹೇಳಲಾಗಿದೆ. ಮಳೆಗಾಲದ ವಾತಾವರಣದಿಂದಾಗಿ ಮಾರುಕಟ್ಟೆಯಲ್ಲಿ ಮೊಟ್ಟೆ ಮತ್ತು ಚಿಕನ್‌ಗೆ ಬೇಡಿಕೆ ಗಣನೀಯವಾಗಿ ಹೆಚ್ಚಾಗಿದೆ. ಆದರೆ, ಅದಕ್ಕೆ ತಕ್ಕಂತೆ ಪೂರೈಕೆ ಇಲ್ಲದೆ ಉತ್ಪಾದನೆ ಪಾತಾಳಕ್ಕೆ ಕುಸಿದಿದೆ ಎಂದು ವರದಿಗಳು ಹೇಳುತ್ತಿವೆ.

ಕರ್ನಾಟಕದ ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಮೈಸೂರು ಭಾಗಗಳಲ್ಲಿ ಒಟ್ಟು 2.5 ರಿಂದ 3 ಕೋಟಿ ಮೊಟ್ಟೆಗಳು ಉತ್ಪಾದನೆಯಾಗುತ್ತಿದೆ. ಆದರೂ, ಇದೇ ಭಾಗದಲ್ಲಿನ ಕೊರತೆ ನೀಗಿಸಲು ಸಾಧ್ಯವಾಗುತ್ತಿಲ್ಲ. ಅದಕ್ಕಾಗಿ, ನೆರೆಯ ತಮಿಳುನಾಡಿನ ನಾಮಕ್ಕಲ್‌ನಿಂದ ದಿನ ನಿತ್ಯ 30 ರಿಂದ 40 ಲಕ್ಷ ಮೊಟ್ಟೆಗಳನ್ನು ಆಮದು ಮಾಡಿಕೊಳ್ಳಲಾಗುತ್ತಿದೆ. ಆದರೆ, ಇತ್ತೀಚೆಗೆ ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿ ದಾಖಲಾಗಿದ್ದ ವಿಪರೀತ ಬಿಸಿಲಿನ ತಾಪಮಾನದಿಂದಾಗಿ ಕೋಳಿಗಳ ಮೊಟ್ಟೆ ಇಡುವ ಸಾಮರ್ಥ್ಯ ಕ್ಷೀಣಿಸಿದೆ. ಮೊಟ್ಟೆಗಳ ಕಡಿಮೆ ಇಳುವರಿ ಮತ್ತು ಕೋಳಿಗಳ ಸಾವು ಹಾಗೂ ಕೋಳಿ ಆಹಾರದ ವೆಚ್ಚ ಹೆಚ್ಚಾಗಿರುವುದು ದೇಶೀಯ ಮಾರುಕಟ್ಟೆಯ ಮೇಲೆ ನೇರ ಪರಿಣಾಮ ಬೀರಿದೆ ಎಂದು ವರದಿಯಾಗಿದೆ.

ರಾಷ್ಟ್ರೀಯ ಮೊಟ್ಟೆ ಸಮನ್ವಯ ಸಮಿತಿಯ (NECC) ಕರ್ನಾಟಕ ವಲಯದ ಅಧ್ಯಕ್ಷ ಎಂ.ಎಸ್.ಆರ್. ಪ್ರಸಾದ್ ಹೇಳುವಂತೆ; ಮೊಟ್ಟೆಗಳ ಒಟ್ಟಾರೆ ಉತ್ಪಾದನೆಯಲ್ಲಿ 10%ರಷ್ಟು ಕುಸಿತ ಕಂಡುಬಂದಿದೆ. ಪರಿಣಾಮ ಮೊಟ್ಟೆ ಕೊರತೆ ಎದುರಾಗಿದೆ. ಕೋಳಿ ಫಾರ್ಮ್‌ಗಳಲ್ಲಿ ಉತ್ಪಾದನೆ ಮತ್ತೆ ಸಹಜ ಸ್ಥಿತಿಗೆ ಮರಳಿ, ಮಾರುಕಟ್ಟೆಯಲ್ಲಿ ಬೆಲೆಗಳು ಇಳಿಕೆಯಾಗಲು ಇನ್ನು ಕನಿಷ್ಠ ಎರಡು ತಿಂಗಳ ಕಾಲಾವಕಾಶ ಬೇಕಾಗಬಹುದು.”

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಕುವೆಂಪು ವಿಶ್ವವಿದ್ಯಾಲಯದಲ್ಲಿ ಎನ್ ಎಸ್ ಎಸ್ ದಿನಾಚರಣೆ ಅಂಗವಾಗಿ ವಿಚಾರ ಸಂಕಿರಣ

ಕುವೆಂಪು ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ಎನ್ ಎಸ್ ಎಸ್ ದಿನಾಚರಣೆ...

ಮತ ಕಳೆದುಹೋದರೆ ಪ್ರಜಾಪ್ರಭುತ್ವ ಕಳೆದುಹೋಗುತ್ತದೆ: ಅಭಿಜೀತ್ ದೀಪ್ಕೆ

ದೇಶದಲ್ಲಿ ಮತದಾನದ ಹಕ್ಕು ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವ ನಿಟ್ಟಿನಲ್ಲಿ ಜನರು ಎಚ್ಚೆತ್ತುಕೊಂಡು...

ಹಾಲಿನ ದರ ಏರಿಕೆ ಬೆನ್ನಲ್ಲೇ ಬಸ್ ಟಿಕೆಟ್ ದರ ಏರಿಕೆಗೆ ಮುಂದಾದ ರಾಜ್ಯ ಸರ್ಕಾರ!

ಕರ್ನಾಟಕದಲ್ಲಿ ದಿನಬಳಕೆಯ ಅಗತ್ಯ ವಸ್ತುಗಳ ಬೆಲೆ ಏರಿಕೆಯ ಬಿಸಿ ತಣ್ಣಗಾಗುವ ಮುನ್ನವೇ,...

ಈ ದಿನ ಸಂಪಾದಕೀಯ | ಪ್ರಬುದ್ಧತೆಯತ್ತ ರಾಹುಲ್, ಪಥಭ್ರಾಂತದತ್ತ ಮೋದಿ

ದೇಶದ ಇತ್ತೀಚಿನ ರಾಜಕೀಯ ಬೆಳವಣಿಗೆಗಳು, ಕಳೆಗಟ್ಟುತ್ತಿರುವ ಜೆನ್-ಝಿ ಹೋರಾಟ, ಕೇಂದ್ರ ಸರ್ಕಾರದ...