SIR ಅಕ್ರಮಗಳ ಬಗ್ಗೆ ಉತ್ತರಿಸಲು ನಿರಾಕರಿಸಿದ ಮುಖ್ಯ ಚುನಾವಣಾ ಅಧಿಕಾರಿ ವಿ ಅನ್ಬುಕುಮಾರ್

Date:

ಪಶ್ಚಿಮ ಬಂಗಾಳ, ಬಿಹಾರದಲ್ಲಿ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ನಡೆದಂತಹ ಅಕ್ರಮಗಳು ಕರ್ನಾಟಕದಲ್ಲಿ ನಡೆಯದಂತೆ ಯಾವ ಕ್ರಮ ಕೈಗೊಂಡಿದ್ದೀರಿ ಎಂಬ ಪ್ರಶ್ನೆಗೆ ಉತ್ತರಿಸಲು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ವಿ ಅನ್ಭು ಕುಮಾರ್ ನಿರಾಕರಿಸಿದರು.

- Advertisement -

ರಾಜ್ಯದಲ್ಲಿ ನಡೆಯಲಿರುವ ಎಸ್‌ಐಆರ್‌ ಪ್ರಕ್ರಿಯೆಯ ಬಗ್ಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ, “ಪಶ್ಚಿಮ ಬಂಗಾಳದಲ್ಲಿ ಬದುಕಿದ್ದವರನ್ನು ಸತ್ತವರು ಎಂಬ ಕಾರಣ ನೀಡಿ ಅವರ ಹೆಸರನ್ನು ಮತದಾರರ ಪಟ್ಟಿಯಿಂದ ಡಿಲಿಟ್‌ ಮಾಡಿದ್ದೀರಿ. ನಂತರ ಅವರನ್ನು ಸುಪ್ರೀಂ ಕೋರ್ಟಿನ ಮುಂದೆ ನಿಲ್ಲಿಸಬೇಕಾಯಿತು. ಪಾಸ್‌ಪೋರ್ಟ್‌ ಇರುವ ವ್ಯಕ್ತಿಗಳ ಹೆಸರೂ ಡಿಲಿಟ್‌ ಮಾಡಿದ್ದೀರಿ, ಚುನಾವಣಾ ಕರ್ತವ್ಯದಲ್ಲಿದ್ದ 65 ಅಧಿಕಾರಿಗಳ ಹೆಸರು ಮತದಾರರ ಪಟ್ಟಿಯಿಂದ ಡಿಲಿಟ್‌ ಮಾಡಲಾಗಿತ್ತು. ಕರ್ನಾಟಕದಲ್ಲಿ ಅರ್ಹ ಮತದಾರರ ಹೆಸರನ್ನು ಡಿಲಿಟ್‌ ಮಾಡಲ್ಲ ಎಂದು ಹೇಗೆ ನಂಬುವುದು” ಎಂಬ ಈ ದಿನ.ಕಾಮ್‌ ಪ್ರತಿನಿಧಿಯ ಪ್ರಶ್ನೆಗೆ ಅವರು ಉತ್ತರಿಸಲೇ ಇಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಬೇರೆ ರಾಜ್ಯಗಳಲ್ಲಿ ಒಂದು ಸಮುದಾಯವನ್ನೇ ಗುರಿಪಡಿಸಿ ಎಸ್‌ಐಅರ್‌ ಮೂಲಕ ಮತದಾನದಿಂದ ಹೊರಗಿಡಲಾಗಿದೆ ಎಂಬ ಆರೋಪದ ಬಗ್ಗೆಯೂ ವರದಿಗಾರರ ಪ್ರಶ್ನೆಗೆ ಉತ್ತರಿಸಲಿಲ್ಲ. ಹಾಗೇನು ಇಲ್ಲ ಎಂದು ಹೇಳಿ ಜಾರಿಕೊಂಡರು.

ಇಲ್ಲಿಯವರೆಗೆ ಶೇಕಡಾ 86.37 ರಷ್ಟು ಮತದಾರರ ಮ್ಯಾಪಿಂಗ್ ಪೂರ್ಣಗೊಂಡಿದೆ ಮತ್ತು ಆಗಸ್ಟ್ 5, 2026 ರಂದು SIR ಕರಡು ಪಟ್ಟಿಯನ್ನು ಪ್ರಕಟಿಸಲಾಗುತ್ತದೆ. ಆಗಸ್ಟ್ 3 ರವರೆಗೂ ಮ್ಯಾಪಿಂಗ್ ಕಾರ್ಯ ಮುಂದುವರೆಯಲಿದೆ. SIR ಗಾಗಿ ಕೆಲವು ದಿನಗಳಿಂದ ಸಿದ್ಧತೆಗಳು ನಡೆಯುತ್ತಿವೆ. ಬೂತ್ ಮಟ್ಟದ ಅಧಿಕಾರಿಗಳು (BLO ಗಳು) ತಮಗೆ ನಿಗದಿಪಡಿಸಿದ ಕೆಲಸಗಳನ್ನು ಮಾಡುತ್ತಿದ್ದಾರೆ. ಎಲ್ಲಾ ನಾಗರಿಕರಿಗೆ ಅರ್ಥವಾಗುವಂತೆ ಫಾರ್ಮ್‌ಗಳನ್ನು ಇಂಗ್ಲಿಷ್ ಮತ್ತು ಕನ್ನಡದಲ್ಲಿ ಮುದ್ರಿಸಲಾಗಿರುತ್ತದೆ. ಪ್ರತಿಯೊಬ್ಬ ಮತದಾರರಿಗೂ ಎರಡು ಸೆಟ್ ಫಾರ್ಮ್‌ಗಳನ್ನು ನೀಡಲಾಗುತ್ತದೆ. ಒಂದು ಪ್ರತಿಯನ್ನು ಮತದಾರರು ಸಾಕ್ಷಿಯಾಗಿ ಇಟ್ಟುಕೊಳ್ಳುತ್ತಾರೆ. ಇನ್ನೊಂದನ್ನು ಬಿಎಲ್‌ಒಗೆ ಹಸ್ತಾಂತರಿಸಬೇಕು. ಚುನಾವಣಾ ಅಧಿಕಾರಿಗಳು ಫಾರ್ಮ್ ಅನ್ನು ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡುತ್ತಾರೆ ಮತ್ತು ಹಾರ್ಡ್ ಕಾಪಿಯನ್ನು ಬ್ಯಾಕಪ್ ಆಗಿ ಇಟ್ಟುಕೊಳ್ಳುತ್ತಾರೆ.

ರಾಜಕೀಯ ಪಕ್ಷಗಳೊಂದಿಗೆ ವಿವರವಾದ ಸಂವಾದವನ್ನು ಸಹ ನಡೆಸಲಾಗುವುದು. SIR ನಲ್ಲಿ ಕೆಲಸ ಮಾಡುವ ರಾಜಕೀಯ ಏಜೆಂಟ್‌ಗಳ ವಿವರಗಳನ್ನು ಸಲ್ಲಿಸಲು ಕೇಳಲಾಗುತ್ತದೆ. ಈ ಏಜೆಂಟ್‌ಗಳಿಗೆ ದಿನಕ್ಕೆ 50 ಫಾರ್ಮ್‌ಗಳನ್ನು ಸಂಗ್ರಹಿಸಿ ಸಲ್ಲಿಸಲು ಅನುಮತಿ ಇದೆ ಎಂದು ಅವರು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಮತದಾರರ ಹಕ್ಕು ರಕ್ಷಣೆಗೆ SIR ಪರಿಶೋಧನಾ ಪ್ರವಾಸ; ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತದಾರರ...

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಗಾಂಧೀಜಿ ಹೆಸರು, ವಿಚಾರಧಾರೆ ಅಳಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿ.ಕೆ. ಶಿವಕುಮಾರ್

"ಮಹಾತ್ಮ ಗಾಂಧೀಜಿ ಭಾರತದ ಆತ್ಮವಿದ್ದಂತೆ. ಅವರ ಹೆಸರು ಹಾಗೂ ವಿಚಾರಧಾರೆಯನ್ನು ಅಳಿಸಿಹಾಕಲು...

ಸಾಗರ | ಗೂಡ್ಸ್ ಆಟೋ ಢಿಕ್ಕಿ; ಚಿಕಿತ್ಸೆ ಫಲಿಸದೆ ಬಾಲಕ ಸಾವು

ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಗೂಡ್ಸ್ ಆಟೋ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ...