ಮಹರ್ಷಿ ವಾಲ್ಮೀಕಿಯವರು ದೇಶ ಕಂಡ ಅಪರೂಪದ ಸಾಹಿತಿ: ಮುಖ್ಯಮಂತ್ರಿ ಸಿದ್ದರಾಮಯ್ಯ

Date:

ರಾಮಾಯಣದಂತಹ ಮಹಾನ್ ಗ್ರಂಥವನ್ನು ರಚಿಸಿದ ಮಹರ್ಷಿ ವಾಲ್ಮೀಕಿಯವರು ದೇಶ ಕಂಡ ಅಪರೂಪದ ಸಾಹಿತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

- Advertisement -

ಅವರು ಇಂದು ಶ್ರೀ ಮಹರ್ಷಿ ವಾಲ್ಮೀಕಿ ತಪೋವನ ದಲ್ಲಿರುವ ಶ್ರೀ ವಾಲ್ಮೀಕಿ ಜಯಂತಿಯ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

ನಾಡಿನ ಜನತೆಗೆ ಮಹರ್ಷಿ ವಾಲ್ಮೀಕಿ ಜಯಂತಿಯ ಶುಭಾಶಯಗಳನ್ನು ತಿಳಿಸಿದರು. ವಾಲ್ಮೀಕಿ ಜಯಂತೋತ್ಸವದ ಮೂಲಕ ಅವರನ್ನು ಸ್ಮರಿಸಲಾಗಿದೆ. ದೇಶ ಕಂಡ ಅಪರೂಪದ ಸಾಹಿತಿ. ರಾಮಾಯಣದಂತಹ ಮಹಾನ್ ಗ್ರಂಥದ ಕತೃ. ವಾಲ್ಮೀಕಿಯವರು ಶೂದ್ರ ಜನಾಂಗದಲ್ಲಿ ಜನಿಸಿದ್ದರೂ, ರಾಮಾಯಣದಂತಹ ಶ್ರೇಷ್ಠ ಗ್ರಂಥವನ್ನು ವಿಶ್ವಕ್ಕೆ ಪರಿಚಯಿಸಿದರು. ವಾಲ್ಮೀಕಿಯವರ ಪ್ರತಿಮೆಯನ್ನು 2017 ರಲ್ಲಿ ಸ್ಥಾಪಿಸಲಾಯಿತು. ವಾಲ್ಮೀಕಿ ಹಾಗೂ ಕನಕದಾಸರಂತಹ ಮಹಾನ್ ಸಂತರು ಸಮಾಜಮುಖಿಯಾಗಿ ಬದುಕಿದವರು. ಅವರು ಬೋಧಿಸಿದಂತೆ ಮಾನವೀಯ ಮೌಲ್ಯಗಳನ್ನು ಅನುಸರಿದವರು ಎಂದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಆರ್‌ಎಸ್‌ಎಸ್‌ಗೆ ನೂರು, ನ್ಯಾಯಮೂರ್ತಿಗಳ ಮೇಲೆ ಶೂ ತೂರು

ಸಚಿವ ಸಂಪುಟ ಪುನರ್ ರಚನೆ
ನಾಯಕ ಸಮುದಾಯದ ಶಾಸಕರಿಗೆ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ನೀಡುವ ಬಗ್ಗೆ ಪ್ರತಿಕ್ರಿಯೆ ನೀಡಿ, ಮುಂದಿನ ದಿನಗಳಲ್ಲಿ ಸಚಿವಸಂಪುಟ ಪುನರ್ ರಚನೆ ನಡೆಯುವ ಸಂದರ್ಭದಲ್ಲಿ ಪರಿಗಣಿಸಲಾಗುವುದು ಎಂದರು.

ಮನುವಾದಿಗಳ ಕೈವಾಡ
ಸರ್ವೋಚ್ಛ ನ್ಯಾಯಾಲಯದ ಮುಖ್ಯನ್ಯಾಯಮೂರ್ತಿಗಳ ಮೇಲೆ ಶೂ ಎಸೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡುತ್ತಾ, ಮುಖ್ಯ ನ್ಯಾಯಮೂರ್ತಿಯವರೇ ಈ ಘಟನೆಯನ್ನು ಕ್ಷಮಿಸಿದ್ದು, ಅವರ ದೊಡ್ಡಗುಣವನ್ನು ಬಿಂಬಿಸುತ್ತದೆ. ಆದರೆ ಇಂತಹ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇನೆ. ಇದು ಮನುವಾದಿಗಳ ಕೈವಾಡವಾಗಿದೆ ಎಂದರು.

ಸಮೀಕ್ಷೆ ಅವಧಿ ವಿಸ್ತರಣೆ; ಪರಿಶೀಲಿಸಿ ತೀರ್ಮಾನ
ಸಮೀಕ್ಷೆಗೆ ಕಾಲಾವಕಾಶ ವಿಸ್ತರಣೆ ಬಗ್ಗೆ ಪ್ರತಿಕ್ರಿಯೆ ನೀಡಿ, ಇಂದು ಸಮೀಕ್ಷೆಯ ಪ್ರಗತಿ ಬಗ್ಗೆ ಪರಿಶೀಲನೆ ನಡೆಸಲಾಗುವುದು. ನಂತರ ಸಮೀಕ್ಷೆ ಅವಧಿ ವಿಸ್ತರಣೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದ 12ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇನ್ನೂ 5 ದಿನ ಭಾರೀ ಮಳೆ: ಹವಾಮಾನ ಇಲಾಖೆ

ರಾಜ್ಯದ ವಿವಿಧ ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದೆ.  ಇನ್ನೂ...

ಕೆಪಿಎಸ್‌ಸಿ ಪರೀಕ್ಷಾ ಅಕ್ರಮದ ಆರೋಪಿ ಬಸವರಾಜ್ ಕಿನ್ನಾಳೆ RSS ಪಥಸಂಚಲನದ ಫೋಟೊ ವೈರಲ್

ಕೆಪಿಎಸ್‌ಸಿ ಪರೀಕ್ಷಾ ಅಕ್ರಮ ಪ್ರಕರಣದಲ್ಲಿ ಸಿಐಡಿಯಿಂದ ಬಂಧನಕ್ಕೊಳಗಾಗಿ, ಮಧ್ಯಂತರ ಜಾಮೀನಿನ ಮೇಲೆ...

‘ಎಸ್ಐಆರ್’ ವಿರುದ್ಧ ಸಿಡಿದೆದ್ದ ರೈತ-ದಲಿತ ಸಂಘಟನೆಗಳು: ಅ.23ರಂದು ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ

ದೇಶದಲ್ಲಿ ಪ್ರಜಾಪ್ರಭುತ್ವವನ್ನು ಉಳಿಸುವ ನಿಟ್ಟಿನಲ್ಲಿ ಹಾಗೂ ಚುನಾವಣಾ ಆಯೋಗದ ಏಕಪಕ್ಷೀಯ ನಿರ್ಧಾರಗಳನ್ನು...