ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಡಾ. ಕೆ ಸುಧಾಕರ್ ಪತ್ನಿಗೆ ಡಿಜಿಟಲ್ ಅರೆಸ್ಟ್; ಲಕ್ಷಾಂತರ ರೂ. ವಂಚನೆ

Date:

Advertisements

ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಕೆ ಸುಧಾಕರ್ ಪತ್ನಿ ಡಾ. ಪ್ರೀತಿ ಸುಧಾಕರ್ ಅವರಿಗೆ ಸೈಬರ್ ವಂಚಕರು ಡಿಜಿಟಲ್‌ ಅರೆಸ್ಟ್ ಮೂಲಕ ವಂಚಿಸಿದ್ದಾರೆ.

ಆಗಸ್ಟ್ 26ರಂದು ಡಾ. ಪ್ರೀತಿ ಸುಧಾಕರ್ ಅವರಿಗೆ ಫೋನ್​ ಕರೆ ಬಂದಿದೆ. ಬೆಳಿಗ್ಗೆ 9.30ಕ್ಕೆ ಕರೆ ಮಾಡಿದ್ದ ಸೈಬರ್ ವಂಚರು, ನಾವು ಮುಂಬೈ ಸೈಬರ್​ ಇಲಾಖೆಯ ಸಿಬ್ಬಂದಿ ಎಂದು ಹೇಳಿಕೊಂಡು ವಂಚಿಸಿದ್ದಾರೆ ಎಂಬ ಮಾಹಿತಿ ನೀಡಿದ್ದಾರೆ.

ನಿಮ್ಮ ದಾಖಲೆಗಳನ್ನು ಸದ್ಭತ್ ಖಾನ್ ಎಂಬ ಅಪರಿಚಿತ ವ್ಯಕ್ತಿ ಬಳಸಿಕೊಂಡಿದ್ದಾನೆ. ನಿಮ್ಮ ಹೆಸರಲ್ಲಿ ಕ್ರೆಡಿಟ್ ಕಾರ್ಡ್ ಮಾಡಿಸಿ ಅಕ್ರಮ ಟ್ರನ್ಸಾಕ್ಷನ್ ನಡೆಸಿದ್ದಾನೆ. ವಿದೇಶಕ್ಕೆ ಕಾನೂನು ಬಾಹಿರ ಚಟುವಟಿಕೆ ನಡೆಸಲು ಜನರನ್ನ ಕಳುಹಿಸಿದ್ದಾನೆ ಎಂದು ಸೈಬರ್​​ ಕ್ರಿಮಿಗಳನ್ನು ಕಥೆ ಕಟ್ಟಿದ್ದಾರೆ ಎನ್ನಲಾಗಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಜಿಎಸ್‌ಟಿ ದರ ಇಳಿಕೆ ಲಾಭ ಗ್ರಾಹಕರಿಗೆ ದೊರೆಯಲಿ!

ಸದ್ಬತ್ ಖಾನ್‌ನ ಅರೆಸ್ಟ್ ಮಾಡಲಾಗಿದೆ. ಆತನ ಹೇಳಿಕೆಯಲ್ಲಿ ನಿಮ್ಮ ಹೆಸರಿನ ದಾಖಲೆಯಿದೆ. ಇದರ ವಿಚಾರಣೆ ನಡೆಸುವುದಕ್ಕೆ ವಿಡಿಯೋ ಕಾಲ್ ಮಾಡಿದ್ದೀವಿ. ಆತ ನಿಮ್ಮ ದಾಖಲೆ ಹಾಗೂ ವೈಯಕ್ತಿಕ ದಾಖಲೆಗಳನ್ನು ರದ್ದು ಮಾಡುವುದಾಗಿ ಬೆದರಿಕೆ ಹಾಕಿದ್ದ. ನಿಮ್ಮ ಅಕೌಂಟ್ ಅಕ್ರಮ ಆಗಿದ್ದು ಹಣ ಹಾಕಿ ಎಂದು ಬೆದರಿಕೆ ಹಾಕಿದ್ದಾನೆ.

ಇದರಿಂದ ಹೆದರಿದ ಪ್ರೀತಿ ಅವರು 14 ಲಕ್ಷ ಹಣವನ್ನು ವಂಚಕರ ಖಾತೆಗೆ ಹಾಕಿದ್ದಾರೆ. ಆರ್ ಬಿ ಐ ರೂಲ್ಸ್ ಪರಿಶೀಲನೆ ಮಾಡಿ 45 ನಿಮಿಷದಲ್ಲಿ ವಾಪಸ್ ಹಾಕೋದಾಗಿ ವಂಚಕ ತಿಳಿಸಿದ್ದಾನೆ. ಪ್ರೀತಿ ಸುಧಾಕರ್ ಇಂದ 14 ಲಕ್ಷ ಹಣವನ್ನ ಆರ್ ವಂಚಕರು ಆರ್‌ಟಿಜಿಎಸ್‌ ಮಾಡಿಸಿಕೊಂಡಿದ್ದಾರೆ. ಹಣ ಹಾಕಿದ ನಂತರ ವಂಚನೆಯಾಗಿರುವುದು ಪತ್ತೆಯಾಗಿದೆ.

ಹಣ ಹಾಕಿದ ನಂತರ ವಂಚನೆಯಾಗಿರೋದು ಪತ್ತೆಯಾಗಿದೆ. ಪ್ರೀತಿ ಸುಧಾಕರ್ ನೀಡಿದ ದೂರಿನ ಮೇರೆಗೆ ಸೈಬರ್ ಠಾಣೆಯಲ್ಲಿ ಎಫ್ಐಆರ್‌ ದಾಖಲು ಮಾಡಲಾಗಿದೆ.

ಸಿಬಿಐ, ಇಡಿ ಹಾಗೂ ಜಡ್ಜ್ ಹೆಸರಿನಲ್ಲಿ ಔರಾದ್​​ನ ಮಾಜಿ ಶಾಸಕ ಗುಂಡಪ್ಪ ವಕೀಲ್​ಗೆ ಇತ್ತೀಚಿಗಷ್ಟೆ ವಂಚನೆ ಮಾಡಲಾಗಿತ್ತು. ಆಗಸ್ಟ್ 12ರಂದು ಸಿಬಿಐ ಅಧಿಕಾರಿಗಳು ಅಂತ ಹೇಳಿ ಕರೆ ಮಾಡಿದ್ದ  ವಂಚಕರು 30 ಲಕ್ಷ ದೋಚಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಬುಕ್‌ ಆಫ್‌ ರೆಕಾರ್ಡ್‌’ | ಶಕ್ತಿ ಪ್ರದರ್ಶಿಸಿದ ‘ಶಕ್ತಿ ಯೋಜನೆ’!

ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿಗಳು ರಾಜ್ಯದ ಜನರನ್ನು ಸೋಂಬೇರಿಗಳ್ಳಾನ್ನಾಗಿ...

ರಾಹುಲ್ ಗಾಂಧಿಗೆ ಜೀವ ಬೆದರಿಕೆ; ಮೋದಿ, ಶಾ ಮೌನ ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ

ಬಿಜೆಪಿ ಮತ್ತು ಸಂಘಪರಿವಾರದ ವಿರುದ್ಧ ನಿರಂತರ ಧ್ವನಿ ಎತ್ತುತ್ತಿರುವ ಲೋಕಸಭೆಯ ವಿರೋಧ...

ಕಲಬುರಗಿ ರೈತರಿಗೆ ₹1417.02 ಕೋಟಿ ಪರಿಹಾರ, ಬಿಜೆಪಿಯಿಂದ ನಕಲಿ ಪ್ರತಿಭಟನೆ: ಪ್ರಿಯಾಂಕ್‌ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

Download Eedina App Android / iOS

X