ಚಿಕ್ಕಮಗಳೂರು | ರಸ್ತೆ ಅಪಘಾತ ನಿಯಂತ್ರಣಕ್ಕೆ ಎ.ಐ ತಂತ್ರಜ್ಞಾನ: ತುರ್ತು ಚಿಕಿತ್ಸೆಗೆ 2,50 ಲಕ್ಷ ರೂ. ನೆರವು; ಸಿ.ಎಸ್ ಡಾ. ಶಾಲಿನಿ ರಜನೀಶ್

Date:

ರಾಜ್ಯದಲ್ಲಿ ರಸ್ತೆ ಅಪಘಾತಗಳು ಮತ್ತು ಅವುಗಳಿಂದ ಸಂಭವಿಸುವ ಸಾವು-ನೋವುಗಳನ್ನು ಗಣನೀಯವಾಗಿ ತಗ್ಗಿಸಲು ಕೃತಕ ಬುದ್ಧಿ ಮತ್ತೆ ಆಧಾರಿತ ಸ್ಮಾರ್ಟ್ ಎನ್‌ಫೋರ್ಸ್‌ಮೆಂಟ್ ವ್ಯವಸ್ಥೆ, ಅಪಘಾತ ವಲಯಗಳ ವೈಜ್ಞಾನಿಕ ಸುಧಾರಣೆ ಹಾಗೂ ತ್ವರಿತ ತುರ್ತು ಚಿಕಿತ್ಸಾ ಸೌಲಭ್ಯಗಳನ್ನು ಮತ್ತಷ್ಟು ಬಲಪಡಿಸಲಾಗುತ್ತಿದೆ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್  ತಿಳಿಸಿದ್ದಾರೆ.

- Advertisement -

ಸಭೆಯ ಅಧ್ಯಕ್ಷತೆಯಲ್ಲಿ ನಡೆದ 24ನೇ ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರದ ಸಭೆಯ ಬಳಿಕ ಮಾಹಿತಿ ನೀಡಿದ ಅವರು, ರಸ್ತೆ ಸುರಕ್ಷತೆಯು ಕೇವಲ ಒಂದು ಇಲಾಖೆಯ ಕೆಲಸವಲ್ಲ ಪೊಲೀಸ್, ಸಾರಿಗೆ, ಆರೋಗ್ಯ, ಲೋಕೋಪಯೋಗಿ, ನಗರಾಭಿವೃದ್ಧಿ ಮತ್ತು ಸ್ಥಳೀಯ ಸಂಸ್ಥೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕಾದ ಮಹತ್ವದ ಸಾರ್ವಜನಿಕ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಧಿಕೃತ ಕೆಲಸಕ್ಕೆ WHATSAPP ವೆಬ್ ಅಪಾಯಕಾರಿ ಏಕೆ? ಗೃಹ...

ಕಚೇರಿ, ಸಾರ್ವಜನಿಕ ಅಥವಾ ಹಲವರು ಹಂಚಿಕೊಂಡು ಬಳಸುವ ಕಂಪ್ಯೂಟರ್‌ಗಳಲ್ಲಿ WHATSAPP ವೆಬ್ ಬಳಸುವವರಿಗೆ ಕೇಂದ್ರ ಗೃಹ ಸಚಿವಾಲಯ ಮಹತ್ವದ ಭದ್ರತಾ ಎಚ್ಚರಿಕೆ ನೀಡಿದೆ. ಸಚಿವಾಲಯದ ಅಧೀನದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ...

ಆನೆ ಓಡಿಸಲು ಜೇನುನೊಣ ಸಾಕು! ಏನಿದು ತಂತ್ರ?

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಕೃಷಿಕರು ಆನೆ ಹಾವಳಿ ತಡೆಗೆ ಸರಳ ಮತ್ತು ವಿನೂತನ ಪ್ರಯೋಗಕ್ಕೆ ಮುಂದಾಗಿದ್ದಾರೆ. ಆನೆ ಬರುವ ದಾರಿಯಲ್ಲಿ ಜೇನು ಪೆಟ್ಟಿಗೆಗಳನ್ನಿಟ್ಟು ಗಜಪಡೆಯನ್ನು ಹಿಮ್ಮೆಟ್ಟಿಸುವ ಮಾರ್ಗವಿದು. ಆನೆಗಳ ಸೊಂಡಿಲಿನ ಒಳಭಾಗ...

ವೈದ್ಯರಿಲ್ಲ, ಔಷಧವೂ ಇಲ್ಲ! ದಶಕ ಕಳೆದರೂ ಚೇತರಿಸದ ಗಜೇಂದ್ರಗಡ...

ಗಜೇಂದ್ರಗಡ ತಾಲೂಕು ಘೋಷಣೆಯಾಗಿ ದಶಕ ಕಳೆದರೂ ಇಂದಿಗೂ ಸಮುದಾಯ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸಿಲ್ಲ. ವೈದ್ಯರ ಕೊರತೆ, ಅಗತ್ಯ ಔಷಧಿಗಳ ಕೊರತೆ, ಸಿಬ್ಬಂದಿಗಳ ಕೊರತೆ ಇರುವುದರಿಂದ, ಇಲ್ಲಿಗೆ ಬರುವ ರೋಗಿಗಳಿಗೆ ಸರಿಯಾದ ಚಿಕತ್ಸೆ,...

ಅಪಘಾತ ಪ್ರಮಾಣದಲ್ಲಿ ಇಳಿಕೆ : ರಾಜ್ಯದಲ್ಲಿ ನೋಂದಾಯಿತ ವಾಹನಗಳ ಸಂಖ್ಯೆ ನಿರಂತರವಾಗಿ ಹೆಚ್ಚಾಗುತ್ತಿದ್ದರೂ, 2018ರಿಂದ 2024ರ ಅವಧಿಯಲ್ಲಿ ಪ್ರತಿ 10 ಸಾವಿರ ವಾಹನಗಳಿಗೆ ಸಂಭವಿಸುವ ಅಪಘಾತಗಳ ಪ್ರಮಾಣ ಶೇ. 27ರಷ್ಟು (17.28 ರಿಂದ 12.56ಕ್ಕೆ) ಹಾಗೂ ಮರಣ ದರ ಶೇ. 21ರಷ್ಟು (4.55 ರಿಂದ 3.59ಕ್ಕೆ) ಇಳಿಕೆಯಾಗಿದೆ. ಪ್ರಸಕ್ತ 2026ರ ಜನವರಿಯಿಂದ ಅಕ್ಟೋಬರ್‌ವರೆಗೆ 37,443 ಅಪಘಾತಗಳು ಸಂಭವಿಸಿದ್ದು, ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಮೃತಪಟ್ಟವರ ಸಂಖ್ಯೆಯಲ್ಲಿ 220ರಷ್ಟು ಇಳಿಕೆ ಕಂಡುಬಂದಿದೆ.   

ಎ.ಐ ಕ್ಯಾಮೆರಾ ಹಾಗೂ ಕಪ್ಪು ಸ್ಥಳಗಳ ಸುಧಾರಣೆ : ಸಂಚಾರ ನಿಯಮ ಉಲ್ಲಂಘನೆ ಮತ್ತು ಅಪಘಾತ ಮಾಡಿ ಪರಾರಿಯಾಗುವ (ಹಿಟ್ ಅಂಡ್ ರನ್) ವಾಹನಗಳನ್ನು ಪತ್ತೆಹಚ್ಚಲು ಗುರುತಿಸಲಾದ 87ಸ್ಥಳಗಳ ಪೈಕಿ 27ಕಡೆ ಎ.ಐ ಆಧಾರಿತ ಸ್ಮಾರ್ಟ್ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, 20ಕಡೆ ಇ-ಚಲನ್ ವ್ಯವಸ್ಥೆಯಡಿ ಕಾರ್ಯನಿರ್ವಹಿಸುತ್ತಿವೆ. ಇದರಿಂದ ಈಗಾಗಲೇ 6,500ಚಲನ್‌ಗಳನ್ನು ದಾಖಲಿಸಲಾಗಿದ್ದು, ಉಳಿದ 60 ಸ್ಥಳಗಳಲ್ಲಿ ಕಾಮಗಾರಿ ಪ್ರಗತಿಯಲ್ಲಿದೆ. ಅಲ್ಲದೆ, ರಾಜ್ಯ ಮತ್ತು ಕೇಂದ್ರ ಸರ್ಕಾರ ಗುರುತಿಸಿರುವ ಅಪಘಾತ ಸಂಭವಿಸುವ ಬ್ಲಾಕ್ ಸ್ಪಾಟ್ ಗಳಲ್ಲಿ  ಅಲ್ಪಾವಧಿ ಮತ್ತು ದೀರ್ಘಾವಧಿ ಸುಧಾರಣಾ ಕಾಮಗಾರಿಗಳನ್ನು ಚುರುಕುಗೊಳಿಸಲಾಗಿದೆ.

ಚಾಲನಾ ಪರವಾನಗಿ ಪರೀಕ್ಷೆಗೂ ಮುನ್ನ ಜಾಗೃತಿ ವಿಡಿಯೋ ಕಡ್ಡಾಯ : ಚಾಲನಾ ತರಬೇತಿ ಸಂಸ್ಥೆಗಳ ಮೇಲೆ ಸಾರಿಗೆ ಇಲಾಖೆ ನಿರಂತರ ನಿಗಾ ಇಡಬೇಕು ಹಾಗೂ ಚಾಲನಾ ಪರವಾನಗಿ ಪರೀಕ್ಷೆಗೆ ಹಾಜರಾಗುವ ಪ್ರತಿಯೊಬ್ಬ ಅಭ್ಯರ್ಥಿಗೂ ಹೆಲ್ಮೆಟ್, ಸೀಟ್ ಬೆಲ್ಟ್, ವೇಗ ನಿಯಂತ್ರಣ, ಮದ್ಯಪಾನ ಮತ್ತು ಮೊಬೈಲ್ ಬಳಕೆ ನಿಷೇಧದ ಕುರಿತ ಜಾಗೃತಿ ವಿಡಿಯೋಗಳನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು. ವಿಡಿಯೋ ವೀಕ್ಷಿಸಿ ನಿಯಮಗಳನ್ನು ಅರಿತಿರುವ ಬಗ್ಗೆ ಅಭ್ಯರ್ಥಿಗಳಿಂದ ಸಹಿ ಪಡೆಯುವ ವ್ಯವಸ್ಥೆ ಜಾರಿಗೆ ತರುವಂತೆ ಸಾರಿಗೆ ಇಲಾಖೆಗೆ ನಿರ್ದೇಶನ ನೀಡಲಾಗಿದೆ.

ತುರ್ತು ಚಿಕಿತ್ಸೆಗೆ ರೂ. 2.50 ಲಕ್ಷದವರೆಗೆ ನಗದುರಹಿತ ನೆರವು :ಪಿಎಂ-ರಹತ್ & ಸಿಎಂ-ಆರ್ಕ್:  2026ರ ಏಪ್ರಿಲ್ 15ರಿಂದ ಜಾರಿಯಾಗಿರುವ ’ಪಿಎಂ-ರಹತ್’ ಯೋಜನೆಯಡಿ ಅಪಘಾತದ ಸಂತ್ರಸ್ತರಿಗೆ ೭ ದಿನಗಳವರೆಗೆ ಗರಿಷ್ಠ ರೂ.1,50ಲಕ್ಷದವರೆಗೆ ನಗದುರಹಿತ ಚಿಕಿತ್ಸೆ ನೀಡಲಾಗುತ್ತಿದೆ. ಇದಕ್ಕೆ ಪೂರಕವಾಗಿ ’ಮುಖ್ಯಮಂತ್ರಿ ಆರೋಗ್ಯ ಕರ್ನಾಟಕ’ ಯೋಜನೆಯಡಿ ಹೆಚ್ಚುವರಿ ರೂ. 1 ಲಕ್ಷ ಸೇರಿದಂತೆ ಒಟ್ಟು ರೂ. 2,50 ಲಕ್ಷದವರೆಗೆ ಚಿಕಿತ್ಸಾ ನೆರವು ಲಭ್ಯವಿದೆ. ರಾಜ್ಯದ ೩,೪೪೫ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ಈ ಯೋಜನೆಯಡಿ ನೋಂದಣಿಯಾಗಿವೆ.

100 ಹೊಸ ಆಂಬುಲೆನ್ಸ್ : ತುರ್ತು ಸ್ಪಂದನೆಗಾಗಿ 108 ಮತ್ತು 102 ಸೇವೆಗಳನ್ನು 112 ಸಹಾಯವಾಣಿಯೊಂದಿಗೆ ಸಂಯೋಜಿಸಲಾಗಿದೆ. ಜೊತೆಗೆ 100ಹೊಸ ಬಿಎಲ್‌ಎಸ್ ಆಂಬುಲೆನ್ಸ್‌ಗಳ ಖರೀದಿ ಪೂರ್ಣಗೊಂಡಿದ್ದು, ಶೀಘ್ರದಲ್ಲೇ ಸೇವೆಗೆ ಲಭ್ಯವಾಗಲಿವೆ. ಜಿಲ್ಲಾ ಆಸ್ಪತ್ರೆಗಳ ತೀವ್ರ ನಿಗಾ ಘಟಕಗಳನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ.

ರೂ. 322 ಕೋಟಿ ಕ್ರಿಯಾ ಯೋಜನೆ : 2026-27ನೇ ಸಾಲಿನ ರಸ್ತೆ ಸುರಕ್ಷತಾ ಕ್ರಮಗಳಿಗಾಗಿ ಒಟ್ಟು ರೂ. 322 ಕೋಟಿ ಮೊತ್ತದ ಕ್ರಿಯಾ ಯೋಜನೆ ಸಿದ್ಧಪಡಿಸಲಾಗಿದ್ದು, ಇದರಲ್ಲಿ ರೂ. 233.11 ಕೋಟಿಯನ್ನು ಮುಂದುವರಿದ ಕಾಮಗಾರಿಗಳಿಗೆ ಹಾಗೂ ರೂ. 88.89ಕೋಟಿಯನ್ನು ಹೊಸ ಕಾಮಗಾರಿಗಳಿಗೆ ಮೀಸಲಿಡಲಾಗಿದೆ. ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಮಾಧ್ಯಮಗಳು, ಚಿತ್ರಮಂದಿರಗಳು ಮತ್ತು ಬಸ್ ನಿಲ್ದಾಣಗಳಲ್ಲಿ ವ್ಯಾಪಕ ಪ್ರಚಾರ ಕೈಗೊಳ್ಳಲಾಗುವುದು ಎಂದು ಡಾ. ಶಾಲಿನಿ ರಜನೀಶ್ ತಿಳಿಸಿದರು.

ಇದನ್ನು ಓದಿದ್ದೀರಾ?ಚಿಕ್ಕಮಗಳೂರು | ಮಕ್ಕಳಿಗೆ ಶಾಲಾ ಪರಿಕರ ವಿತರಣೆ

ಈ ವೇಳೆ  ಸಭೆಯಲ್ಲಿ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗಳು, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಹಾಗೂ ಸಂಚಾರ ವಿಭಾಗದ ಪೊಲೀಸ್ ಆಯುಕ್ತರು ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವೈದ್ಯರಿಲ್ಲ, ಔಷಧವೂ ಇಲ್ಲ! ದಶಕ ಕಳೆದರೂ ಚೇತರಿಸದ ಗಜೇಂದ್ರಗಡ ಆರೋಗ್ಯ ಕೇಂದ್ರ

ಗಜೇಂದ್ರಗಡ ತಾಲೂಕು ಘೋಷಣೆಯಾಗಿ ದಶಕ ಕಳೆದರೂ ಇಂದಿಗೂ ಸಮುದಾಯ ಆರೋಗ್ಯ ಕೇಂದ್ರವನ್ನು...

ವಿಜಯಪುರ |ಕೃಷಿ ಮಹಾವಿದ್ಯಾಲಯದಲ್ಲಿ 7 ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಸಂದರ್ಶನ

ವಿಜಯಪುರ ನಗರದ ಕೃಷಿ ಮಹಾವಿದ್ಯಾಲಯದಲ್ಲಿ ಖಾಲಿ ಇರುವ ವಿವಿಧ ವಿಷಯಗಳ 7...

ಕೋಲಾರ|ಜಿ.ಹೆಚ್.ನಾಗರಾಜ್ ಕೆಪಿಸಿಸಿಯ ನೂತನ ಖಜಾಂಚಿಯಾಗಿ ರುವುದು ಕಾಂಗ್ರೆಸ್ ವಲಯದಲ್ಲಿ ಒಂದು ಉತ್ಸಾಹ ತುಂಬಿದೆ : ಅನ್ವರ್ ಪಾಷ

ಹಿಂದುಳಿದ ಈಡಿಗ ಜನಾಂಗಕ್ಕೆ ಸೇರಿದ ಜಿ.ಹೆಚ್.ನಾಗರಾಜ್ ರವರು ಅವಿಭಾಜಿತ ಕೋಲಾರ ಜಿಲ್ಲೆಯಲ್ಲಿ...

ದಕ್ಷಿಣ ಕನ್ನಡ | ರೂ.20 ಲಕ್ಷ ಮೌಲ್ಯದ ಗೋವಾ ಮದ್ಯ, 2 ಕಾರು ವಶ

ದಕ್ಷಿಣ ಕನ್ನಡ ಅಬಕಾರಿ ಇಲಾಖೆ ಅಧಿಕಾರಿಗಳು ಕೈಗೊಂಡ ಎರಡು ಪ್ರತ್ಯೇಕ ಕಾರ್ಯಾಚರಣೆಯಲ್ಲಿ,...