ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ನವೆಂಬರ್ ೧೮ ರಂದು ಬೆಳಿಗ್ಗೆ 8.೦೦ ಗಂಟೆಗೆ ಜಿಲ್ಲಾ ಪೊಲೀಸ್ ಕವಾಯತು ಮೈದಾನ, ಜಿಲ್ಲಾ ಸಶಸ್ತ್ರ ಮೀಲು ಪಡೆ, ರಾಮನಹಳ್ಳಿ ಇಲ್ಲಿ ವಾರ್ಷಿಕ ಕ್ರೀಡಾಕೂಟ 2026 ರ ಉದ್ಘಾಟನಾ ಸಮಾರಂಭವನ್ನು ಹಾಗೂ ನವೆಂಬರ್ 2೦ ರಂದು ಸಂಜೆ 4.೦೦ ಗಂಟೆಗೆ ಸಮಾರೋಪ ಸಮಾರಂಭವನ್ನು ಆಯೋಜಿಸಲಾಗಿದೆ.
ಇದನ್ನೂ ಓದಿದ್ದೀರಾ?ಹಾಸನ | ಬಿಜೆಪಿ ಮುಖಂಡ ಮಹಿಳೆ ವಂಚನೆ ಆರೋಪ; ಪ್ರಕರಣ ದಾಖಲು
ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮಂಗಳೂರು, ಪಶ್ಚಿಮ ವಲಯ ಪೊಲೀಸ್ ಉಪನಿರೀಕ್ಷಕ ಸುಧೀರ್ ಕುಮಾರ್ ರೆಡ್ಡಿ ಸಿ.ಹೆಚ್ ಮುಖ್ಯ ಅಥಿತಿಗಳಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.



