ಚಿನ್ನಸ್ವಾಮಿ ಸ್ಟೇಡಿಯಂ ದುರಂತ | ಮೃತರ ಕುಟುಂಬಕ್ಕೆ 10 ಲಕ್ಷ ರೂಪಾಯಿ ಪರಿಹಾರ: ಸಿ ಎಂ ಘೋಷಣೆ

Date:

ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿರುವ ಕಾಲ್ತುಳಿತ ಘಟನೆ ಅನಿರೀಕ್ಷಿತ ದುರಂತವಾಗಿದ್ದು, ಈ ದುರ್ಘಟನೆ ಬಗ್ಗೆ ಮ್ಯಾಜಿಸ್ಟ್ರೇಟ್ ಮೂಲಕ ತನಿಖೆ ನಡೆಸಲಾಗುವುದು. ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

- Advertisement -

ದುರಂತದ ಬಗ್ಗೆ ನಮ್ಮ ನಿವಾಸದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದುರಂತದಲ್ಲಿ 11 ಮಂದಿ ಮೃತಪಟ್ಟಿದ್ದಾರೆ. ಒಟ್ಟು 47 ಮಂದಿ ಗಾಯಗೊಂಡಿದ್ದಾರೆ. ಅವರಲ್ಲಿ 14 ಮಂದಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ತೆರಳಿದ್ದಾರೆ. 33 ಮಂದಿ ಒಳ ರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದು ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಅಸೋಷಿಯೇಶನ್‌ ಆರ್.ಸಿ.ಬಿ. ತಂಡದ ಸಂಭ್ರಮಾಚರಣೆ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಈ ಸಂಭ್ರಮಾಚರಣೆ ಸಮಯದಲ್ಲಿ ಕಾಲ್ತುಳಿತ ದುರಂತ ಸಂಭವಿಸಿದೆ. ಇದೊಂದು ಅನಿರೀಕ್ಷಿತ ದುರಂತವಾಗಿದ್ದು ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ನೀಡಲಾಗುವುದು. ದುರಂತದಿಂದ ಗಾಯಗೊಂಡಿರುವ ಎಲ್ಲರ ಆಸ್ಪತ್ರೆಯ ಖರ್ಚನ್ನು ಸರಕಾರವೇ ಭರಿಸಲಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಈ ದುರಂತ ನಡೆಯಬಾರದಿತ್ತು. ಚಿನ್ನಸ್ವಾಮಿ ಕ್ರೀಡಾಂಗಣದ ಒಳಗೆ 35 ಸಾವಿರ ಜನರಿಗೆ ಕುಳಿತುಕೊಳ್ಳುವ ಆಸನಗಳ ವ್ಯವಸ್ಥೆ ಇದೆ. ಇದಕ್ಕಿಂತ ಸ್ವಲ್ಪ ಜಾಸ್ತಿ ಜನ ಸೇರಬಹುದು ಎಂಬ ನಿರೀಕ್ಷೆ ಇತ್ತು. ಆದರೆ ಒಮ್ಮೆಲೆ 3ರಿಂದ 4 ಲಕ್ಷ ಅಭಿಮಾನಿಗಳು ಜಮಾಯಿಸಿ ಕ್ರೀಡಾಂಗಣದ ಒಳಗೆ ನುಗ್ಗಲು ಯತ್ನಿಸಿದಾಗ ಈ ದುರಂತ ನಡೆದಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ವಿಧಾನಸೌಧದ ಎದುರು ಸರಕಾರದ ವತಿಯಿಂದ ಸಂಭ್ರಮಾಚರಣೆ ನಡೆಸಲಾಗಿತ್ತು. ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಜನ ಸೇರಿದ್ದರು. ಅಲ್ಲಿ ಯಾವುದೇ ದುರಂತ ನಡೆದಿಲ್ಲ. ಎಲ್ಲಾ ವ್ಯವಸ್ಥೆಯೂ ಚೆನ್ನಾಗಿ ಇತ್ತು. ಆದರೆ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ 3ರಿಂದ 4 ಲಕ್ಷ ಅಭಿಮಾನಿಗಳು ಸೇರಿದಾಗ ಉಂಟಾದ ನೂಕುನುಗ್ಗಲಿನಿಂದ ಕಾಲ್ತುಳಿತ ಸಂಭವಿಸಿದೆ. ಇದರಲ್ಲಿ ಯುವಕ, ಯುವತಿಯರು ಸೇರಿ 11 ಮಂದಿ ಮೃತಪಟ್ಟಿದ್ದಾರೆ. ಇದೊಂದು ದುಖದ ಘಟನೆಯಾಗಿದೆ. ಮೃತರ ಕುಟುಂಬದ ಜೊತೆ ಸರಕಾರ ನಿಲ್ಲಲಿದೆ ಎಂದು ಅವರು ತಿಳಿಸಿದರು.

ಈ ದಿನ ಸಂಪಾದಕೀಯ | ವೀರಣ್ಣ ಮಡಿವಾಳರ ಅವರನ್ನು ಅವಮಾನಿಸಿದ್ದೇ ಅನಾಗರಿಕತೆ! ಅಮಾನತನ್ನು ವಾಪಸು ಪಡೆಯಿರಿ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | SIR ವಿರೋಧ: ಚುನಾವಣಾ ಆಯೋಗ ಅಕ್ರಮವಾಗಿ ಕಾರ್ಯನಿರ್ವಹಿಸಿದೆ; ನಟ ಪ್ರಕಾಶ್ ರಾಜ್ 

SIR ವಿರೋಧಿ ಒಕ್ಕೂಟ, ನಾಗರೀಕ ಸಂಘಟನೆಗಳ ಹಾಗೂ ಜಾತ್ಯತೀತ ಪಕ್ಷಗಳಿಂದ ರಾಜ್ಯ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ ಮಂಡಳಿಯ ಚಪ್ಪಾಳೆ

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ...

Bhalki Ground Report | ಮುಸ್ಲಿಮರ ಮತ ಹಕ್ಕಿಗೆ ಕನ್ನ: ಬಗೆದಷ್ಟು ಬಯಲಾಗ್ತಿದೆ ‘ಫಾರ್ಮ್-7’ರ ಸಂಚು?

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಈಶ್ವರ ಬಿ.ಖಂಡ್ರೆ ಅವರು ಪ್ರತಿನಿಧಿಸುವ...