ಚಿತ್ರದುರ್ಗದ ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು

Date:

ಅಕ್ರಮ ಆನ್‌ಲೈನ್ ಬೆಟ್ಟಿಂಗ್ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಬಂಧಿಸಿದ್ದ ಚಿತ್ರದುರ್ಗ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ ಸಿ ವೀರೇಂದ್ರ ಪಪ್ಪಿ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

- Advertisement -

ಆಗಸ್ಟ್ 23ರಂದು ಸಿಕ್ಕಿಂನ ಗ್ಯಾಂಗ್‌ಟಾಕ್‌ನಲ್ಲಿ ವೀರೇಂದ್ರ ಪಪ್ಪಿ ಅವರನ್ನು ಇ.ಡಿ ಅಧಿಕಾರಿಗಳು ಬಂಧಿಸಿದ್ದರು. ನಂತರ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿತ್ತು. ಪಪ್ಪಿ ವಿರುದ್ಧ ಪ್ರಕರಣದಲ್ಲಿ ಗೋವಾದ ಕ್ಯಾಸಿನೋಗಳು, ಆನ್‌ಲೈನ್ ಬೆಟ್ಟಿಂಗ್ ಆ್ಯಪ್‌ಗಳ ಮೂಲಕ ಸಾವಿರಾರು ಕೋಟಿ ರೂಪಾಯಿ ವಹಿವಾಟು ನಡೆಸಿದ ಆರೋಪವಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಇನ್ನಾದರೂ ಪ್ರೀತಿ ಬಿತ್ತೋಣ, ಮಾನವೀಯತೆ ಮೆರೆಯೋಣ…

ಇ.ಡಿ ದಾಳಿಗಳಲ್ಲಿ ಚಿತ್ರದುರ್ಗ, ಬೆಂಗಳೂರು, ಗೋವಾ ಸೇರಿ 30ಕ್ಕೂ ಹೆಚ್ಚು ಕಡೆಗಳಲ್ಲಿ ಶೋಧ ನಡೆಸಿ 150 ಕೋಟಿಗೂ ಅಧಿಕ ಮೌಲ್ಯದ ಆಸ್ತಿ, ಚಿನ್ನ-ಬೆಳ್ಳಿ, ಐಷಾರಾಮಿ ವಾಹನಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಶಾಸಕರ ಬ್ಯಾಂಕ್ ಖಾತೆಗಳಲ್ಲಿ 55 ಕೋಟಿ ರೂಪಾಯಿ ಫ್ರೀಜ್ ಮಾಡಲಾಗಿತ್ತು. ಅಕ್ಟೋಬರ್‌ನಲ್ಲಿ ಕರ್ನಾಟಕ ಹೈಕೋರ್ಟ್ ಶಾಸಕರ ಪತ್ನಿ ಆರ್.ಡಿ. ಚೈತ್ರಾ ಸಲ್ಲಿಸಿದ ಅರ್ಜಿ ವಜಾಗೊಳಿಸಿ ಬಂಧನ ಕಾನೂನುಬದ್ಧವೆಂದು ಘೋಷಿಸಿತ್ತು. ಆದರೆ ಜಾಮೀನು ಅರ್ಜಿ ಸಲ್ಲಿಸಲು ಅವಕಾಶ ನೀಡಿತ್ತು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಗೃಹಲಕ್ಷ್ಮಿ’ಗೆ 17 ಪ್ರಶ್ನೆಗಳ ಪರೀಕ್ಷೆ: ₹2 ಸಾವಿರದ ಯೋಜನೆಗೆ ಇಷ್ಟೆಲ್ಲಾ ದಾಖಲೆ ಬೇಕೇ?

ಮರುಪರಿಶೀಲನೆ ಹೆಸರಿನಲ್ಲಿ ಫಲಾನುಭವಿಗಳ ಅಸ್ತಿತ್ವವನ್ನೇ ಪ್ರಶ್ನಿಸುವಂತಾಗಬಾರದು; ನೈಜ ಅನರ್ಹರನ್ನು ಕೈಬಿಡುವ ಕ್ರಮದ...

ನಕಲಿ ಔಷಧ ಜಾಲ ಭೇದಿಸಿದ ಎಸ್‌ಐಟಿ: ಅಜರ್‌ಬೈಜಾನ್‌ಗೆ ಪರಾರಿಯಾಗಿದ್ದ ಕಿಂಗ್‌ಪಿನ್‌ ಪ್ರಶಾಂತ್‌ ಸೆರೆ

ರಾಜ್ಯಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ನಕಲಿ ಔಷಧ...

ರಾಜ್ಯದಲ್ಲಿ 1.07 ಕೋಟಿ ಮತದಾರರ ಹೆಸರು ಡಿಲೀಟ್: ಮರು ಸೇರ್ಪಡೆಗೆ ಕೇವಲ 7.7 ಲಕ್ಷ ಅರ್ಜಿ

ವಿಶೇಷ ತೀವ್ರ ಪರಿಷ್ಕರಣೆ (SIR) ಅಡಿಯಲ್ಲಿ ರಾಜ್ಯದ ಮತದಾರರ ಪಟ್ಟಿಯಿಂದ ಬರೋಬ್ಬರಿ...