ಚಿತ್ತಾಪುರ ಪಥಸಂಚಲನಕ್ಕೆ ಕ್ರೈಸ್ತ ಸಂಘಟನೆ ಸೇರಿ ಐವರಿಂದ ಅರ್ಜಿ; ಇಂದು ಮಧ್ಯಾಹ್ನ ವಿಚಾರಣೆ

Date:

ಚಿತ್ತಾಪುರ ಆರ್‌ಎಸ್‌ಎಸ್ ಪಥಸಂಚಲನ ವಿಚಾರ ಹೈಕೋರ್ಟ್ ಮೆಟ್ಟಿಲೇರಿದ್ದು ದಿನಕ್ಕೊಂದು ತಿರುವು ಪಡೆಯುತ್ತಲೇ ಇದೆ. ಆರ್‌ಎಸ್‌ಎಸ್ ನ.2ರಂದು ಪಥಸಂಚಲನ ನಡೆಸಲು ಅನುಮತಿ ಕೋರಿ ಅರ್ಜಿ ಸಲ್ಲಿಸಿದರೆ ಇತ್ತ 5 ಸಂಘಟನೆಗಳೂ ಅಂದೇ ನಮಗೂ ಅವಕಾಶ ಕೊಡಿ ಎಂದು ಅರ್ಜಿ ಹಾಕಿದೆ. ಈ ಮಧ್ಯೆ ಎಲ್ಲ ಅರ್ಜಿಗಳ ವಿಚಾರಣೆ ಇಂದು ಮಧ್ಯಾಹ್ನ ಹೈಕೋರ್ಟ್‌ನಲ್ಲಿ ನಡೆಯಲಿದೆ.

- Advertisement -

ಆರ್‌ಎಸ್‌ಎಸ್‌ ಅಕ್ಟೋಬರ್ 19 ರಂದು ಪಥಸಂಚಲನ ಕಾರ್ಯಕ್ರಮ ಆಯೋಜನೆ ಮಾಡಿತ್ತು. ಆದರೆ ಅರ್ಜಿಯಲ್ಲಿ ಸರಿಯಾದ ಮಾಹಿತಿ ನೀಡಿಲ್ಲ ಮತ್ತು ಹಲವು ಸಂಘಟನೆಗಳು ಪಥಸಂಚಲನಕ್ಕೆ ಅನುಮತಿ ಕೋರಿದ್ದರಿಂದ ಚಿತ್ತಾಪುರ ತಹಶೀಲ್ದಾರ್‌ ನಾಗಯ್ಯ ಹಿರೇಮಠ ಕಾನೂನು ಸುವ್ಯವಸ್ಥೆ ಕಾರಣ ನೀಡಿ ತಡೆ ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಅನುಮತಿ ನೀಡದ ಬೆನ್ನಲ್ಲೇ ಆರ್‌ಎಸ್‌ಎಸ್‌ ಕಲಬುರಗಿ ಹೈಕೋರ್ಟ್‌ ಪೀಠದಲ್ಲಿ ತುರ್ತು ಅರ್ಜಿ ಸಲ್ಲಿಸಿತ್ತು. ಅರ್ಜಿ ಮಾನ್ಯ ಮಾಡಿದ ಹೈಕೋರ್ಟ್‌ ಇಂದಿಗೆ ವಿಚಾರಣೆ ಮುಂದೂಡಿ ಅನುಮತಿ ನೀಡುವ ಬಗ್ಗೆ ಸರ್ಕಾರದ ಅಭಿಪ್ರಾಯವನ್ನು ಕೇಳಿತ್ತು. ವಿಚಾರಣೆಯ ಸಂದರ್ಭದಲ್ಲಿ ನ.2 ರಂದು ಪಥಸಂಚಲನಕ್ಕೆ ಅನುಮತಿ ನೀಡುವಂತೆ ಆರ್‌ಎಸ್‌ಎಸ್‌ ಮನವಿ ಮಾಡಿಕೊಂಡಿತ್ತು.

ಆರ್‌ಎಸ್‌ಎಸ್‌ ಅರ್ಜಿ ಸಲ್ಲಿಸುತ್ತಿದ್ದಂತೆ ಮತ್ತೊಂಡು ಕಡೆ ಭೀಮ್ ಆರ್ಮಿ, ದಲಿತ್ ಪ್ಯಾಂಥರ್ ಹಾಗೂ ಕುರುಬ ಸಮುದಾಯ ಅದೇ ದಿನ ಪ್ರತಿಭಟನೆಗೆ ಅರ್ಜಿ ಸಲ್ಲಿಸಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕೆಲಸಗಾರ ಕಂದಾಯ ಸಚಿವರು ಭಕ್ತರ ಕ್ಯೂ ಕಾಯಲು ನಿಲ್ಲುವುದು ತರವಲ್ಲ

ಇನ್ನೊಂದು ಕಡೆ ನವೆಂಬರ್ 2 ರಂದೇ ಕೇಂದ್ರ ಸರ್ಕಾರದ ವಿರುದ್ದ ಅತೀವೃಷ್ಟಿ ಪರಿಹಾರಕ್ಕಾಗಿ ಪ್ರತಿಭಟನೆ ಹಮ್ಮಿಕೊಳ್ಳುತ್ತೇವೆ. ಪಥಸಂಚಲನ ಮಾಡುತ್ತೇವೆ ಎಂದು ರಾಜ್ಯ ರೈತ ಸಂಘಟನೆ ಹಸಿರು ಸೇನೆ ಬಣ ಅರ್ಜಿ ಹಾಕಿದೆ.

ಸಂಘಟನೆಗಳ ಮಾತ್ರವಲ್ಲದೇ ರಾಜ್ಯ ಕ್ರಿಶ್ಚಿಯನ್ ವೆಲ್ಫೇರ್‌ ಸೊಸೈಟಿ ಸಹ ನಾವು ಪ್ರಾರ್ಥನಾ ನಡಿಗೆ ಮಾಡುತ್ತೇವೆ ಎಂದು ಅರ್ಜಿ ಸಲ್ಲಿಸಿದ್ದಾರೆ. ಭಾನುವಾರ ನಾವು ಸಹಜವಾಗಿಯೇ ಪ್ರಾರ್ಥನೆ ಮಾಡುತ್ತೇವೆ. ನಾವು ಆರ್‌ಎಸ್‌ಎಸ್‌ ವಿರುದ್ಧವಾಗಿ ಈ ನಡಿಗೆ ಮಾಡುತ್ತಿಲ್ಲ. ಬದಲಾಗಿ ಶಾಂತಿ ಸುವ್ಯಸಸ್ಥೆಯ ಬಗ್ಗೆ ಅರಿವು ಮೂಡಿಸುತ್ತೇವೆ ಎಂದು ಹೇಳಿದೆ.

ಈ ಎಲ್ಲ ಅರ್ಜಿಗಳ ವಿಚಾರಣೆ ಇಂದು ನ್ಯಾಯಾಲಯದ ಮುಂದೆ ಬರುತ್ತಿವೆ. ಹೀಗಾಗಿ ಎಲ್ಲರ ಚಿತ್ತ ಇಂದು ಮಧ್ಯಾಹ್ನ 3:30ರ ಕೋರ್ಟ್ ಕಲಾಪದತ್ತ ನೆಟ್ಟಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಿಂಡವಾರ ಬಳಿ ಭೂಕಂಪ; ಸ್ಥಳೀಯರು ಆತಂಕಪಡುವ ಅಗತ್ಯವಿಲ್ಲ: KSNDMC ಅಧಿಕಾರಿಗಳು

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನಲ್ಲಿ 3.5 ತೀವ್ರತೆಯ ಭೂಕಂಪ ಉಂಟಾಗಿರುವುದಾಗಿ ಕರ್ನಾಟಕ...

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಬೃಹತ್ ಸುಧಾರಣೆ: ಮೂರು ಉನ್ನತ ಮಟ್ಟದ ತಜ್ಞರ ಸಮಿತಿ ರಚಿಸಿದ ಸರ್ಕಾರ!

ರಾಜ್ಯದಲ್ಲಿ ಪೊಲೀಸ್ ವ್ಯವಸ್ಥೆಯನ್ನು ಆಧುನಿಕಗೊಳಿಸಲು, ಸಾರ್ವಜನಿಕರಿಗೆ ನೀಡಲಾಗುವ ಸೇವೆಗಳನ್ನು ಇನ್ನಷ್ಟು ಸಶಕ್ತಗೊಳಿಸಲು...

ರಾಜ್ಯದಲ್ಲಿ SIR ಭೌತಿಕ ವಿಚಾರಣೆ ಸ್ಥಗಿತ: ಬಿಎಲ್ಒಗಳಿಂದ ಮನೆ ಬಾಗಿಲಿಗೆ ತೆರಳಿ ದಾಖಲೆ ಸಂಗ್ರಹ

ಹಿಂದಿನ ದತ್ತಾಂಶ ಲಭ್ಯವಿಲ್ಲದ ಹಾಗೂ ಮಾಹಿತಿಯಲ್ಲಿ ಹೊಂದಾಣಿಕೆಯಾಗದ ಕಾರಣಕ್ಕೆ ನೋಟಿಸ್ ಸ್ವೀಕರಿಸಿರುವ...