ಬೀದರ್ | ಕಟ್ಟಡ ನಿರ್ಮಾಣ ಕಾರ್ಮಿಕರ ಶೈಕ್ಷಣಿಕ ಸಹಾಯಧನ ಬಿಡುಗಡೆಗೆ ಸಿಐಟಿಯು ಒತ್ತಾಯ

Date:

  • ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಪ್ರತಿವರ್ಷ ನೀಡಬೇಕಾದ ಶೈಕ್ಷಣಿಕ ಸಹಾಯಧನವನ್ನು ಬಿಡುಗಡೆ ಮಾಡಿಲ್ಲ.
  • ಹುಮನಾಬಾದ್ ಕಾರ್ಮಿಕ ನಿರೀಕ್ಷಣಾಧಿಕಾರಿ ಮೂಲಕ ಕಲ್ಯಾಣ ಮಂಡಳಿ ಕಾರ್ಯದರ್ಶಿಗೆ ಹಕ್ಕೊತ್ತಾಯ ಸಲ್ಲಿಕೆ

ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಶೈಕ್ಷಣಿಕ ಸಹಾಯಧನ ಬಿಡುಗಡೆಗೆ ಒತ್ತಾಯಿಸಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್ ಹುಮನಾಬಾದ್ ತಾಲೂಕು ಸಮಿತಿಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಹುಮನಾಬಾದ್ ಪಟ್ಟಣದ ಕಾರ್ಮಿಕ ನಿರೀಕ್ಷಕರ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ಕಾರ್ಮಿಕ ನಿರೀಕ್ಷಣಾಧಿಕಾರಿ ಮೂಲಕ ಕರ್ನಾಟಕ ಕಟ್ಟಡ ಮತ್ತು ಇತರೆ ಕಾರ್ಮಿಕರ ಕಲ್ಯಾಣ ಮಂಡಳಿ ಕಾರ್ಯದರ್ಶಿಗೆ ಹಕ್ಕೊತ್ತಾಯ ಪತ್ರವನ್ನು ಸಲ್ಲಿಸಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಸಮಿತಿಯ ಪ್ರಮುಖರು “ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಕಲ್ಯಾಣ ಮಂಡಳಿಯಿಂದ ಕಾನೂನು ಪ್ರಕಾರ ಪ್ರತಿವರ್ಷ ನೀಡಬೇಕಾದ ಶೈಕ್ಷಣಿಕ ಸಹಾಯಧನವನ್ನು ಬಿಡುಗಡೆ ಮಾಡಿಲ್ಲ. 2012-23ನೇ ಸಾಲಿನಲ್ಲಿ ಶೈಕ್ಷಣಿಕ ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸಿದ ಕಾರ್ಮಿಕರಿಗೆ ಈವರೆಗೂ ಸಹಾಯಧನ ಬಿಡುಗಡೆ ಮಾಡಿಲ್ಲ. 2021-22ನೇ ಸಾಲಿನಲ್ಲಿ ಶೈಕ್ಷಣಿಕ ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸಿದ ಸುಮಾರು ಒಂದೂವರೆ ಲಕ್ಷ ಜನ ಫಲಾನುಭವಿಗಳಿಗೆ ಸಹಾಯಧನ ಬಾಕಿ ಉಳಿಸಿಕೊಳ್ಳಲಾಗಿದೆ” ಎಂದು ದೂರಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“2023-24 ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗಿ, ಆರ್ಥಿಕ ವರ್ಷ ಕಳೆಯುತ್ತಿದ್ದರೂ ಈವರೆಗೂ ಸಹಾಯಧನಕ್ಕಾಗಿ ಅರ್ಜಿಯನ್ನೇ ಆಹ್ವಾನಿಸಿಲ್ಲ. ಈ ಎಲ್ಲಾ ಬೇಡಿಕೆಗಳನ್ನು ಈಡೇರಿಕೆಗೆ ಒತ್ತಾಯಿಸಿ ಕಟ್ಟಡ ನಿರ್ಮಾಣ ಕಾರ್ಮಿಕರು ರಾಜ್ಯಾದ್ಯಂತ ಎಲ್ಲ ಕಾರ್ಮಿಕ ನಿರೀಕ್ಷಕರ ಕಚೇರಿ ಎದುರು ಪ್ರತಿಭಟನೆ ನಡೆಸಿ ಶೈಕ್ಷಣಿಕ ಸಹಾಯಧನ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಹಕ್ಕೊತ್ತಾಯ ಸಲ್ಲಿಸುತ್ತಿದ್ದೇವೆ” ಎಂದರು.

“ಇದೀಗ ಶೈಕ್ಷಣಿಕ ಸಹಾಯಧನ ಬಿಡುಗಡೆಗೆ ‘ಹಣದ ಕೊರತೆ ಇದೆ” ಎಂದು ಹೇಳಲಾಗುತ್ತಿದೆ. ಹಣವಿಲ್ಲ ಎನ್ನುವಾಗಲೇ, ಈ ಹಿಂದೆಯೂ ‘ಟ್ಯಾಬ್, ಲ್ಯಾಪ್ ಟಾಪ್ ಮತ್ತು ಸ್ಕೂಲ್ ಕಿಟ್ ಗಳನ್ನು ಖರೀದಿ, ನೀಡಲಾಗಿತ್ತು. ಈಗಲೂ ಪ್ರತಿ ಲ್ಯಾ‌ಪ್ ಟಾಪ್ ಗೆ 21 ಸಾವಿರ ರೂಪಾಯಿಯಂತೆ, 10 ಸಾವಿರ ಲ್ಯಾಪ್‌ಟಾಪ್‌ಗಳನ್ನು ಖರೀದಿಸಲಾಗಿದೆ, ಅಂದರೆ ನೇರ ಹಣ ವರ್ಗಾವಣೆಗೆ ಹಣವಿಲ್ಲ, ಆದರೆ ಖರೀದಿಗೆ ಹಣವಿದೆಯೇ? ಎಂಬುದು ಕಾರ್ಮಿಕರ ಪ್ರಶ್ನೆಯಾಗಿದೆ” ಎಂದರು.

ಕೂಡಲೇ ಕಾರ್ಮಿಕ ಸಚಿವರು ಹಾಗೂ ಕಲ್ಯಾಣ ಮಂಡಳಿ ನಮ್ಮ ಬೇಡಿಕೆಗಳು ಈಡೇರಿಸಬೇಕು. ಇಲ್ಲವಾದಲ್ಲಿ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಸಿಐಟಿಯು ಜಿಲ್ಲಾಧ್ಯಕ್ಷ ಬಸವರಾಜ ಮಾಳಗೆ, ಹುಮನಾಬಾದ್ ತಾಲೂಕು ಅಧ್ಯಕ್ಷ ಗೌಸೋದ್ದೀನ್, ಕಾರ್ಯದರ್ಶಿ ಶಶಿಕಾಂತ ಡಾಂಗೆ, ಉಪಾಧ್ಯಕ್ಷ ಈಶ್ವರ ಕ್ರಾಂತಿ, ಸೇರಿದಂತೆ ಪ್ರಮುಖರಾದ ರೇಷ್ಮಾ ಹಂಸರಾಜ್ , ಕಿರಣಕುಮಾರ, ನಬೀಸಾಬ್ ಸೇರಿದಂತೆ ಇತರರಿದ್ದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಭ್ರಷ್ಟಾಚಾರ ಆರೋಪ; ಕ್ರಮ ಕೈಗೊಳ್ಳದ ಜಿಲ್ಲಾಡಳಿತ

ಬೇಡಿಕೆಗಳು:

1. 2022-23ನೇ ಸಾಲಿನ ಶೈಕ್ಷಣಿಕ ಸಹಾಧನವನ್ನು ಕೂಡಲೇ ಬಿಡುಗಡೆ ಮಾಡಬೇಕು.

2. 2021-22 ನೇ ಸಾಲಿನ ಲಕ್ಷ ಫಲಾನುಭವಿಗಳಿಗೆ ಬಾಕಿ ಉಳಿಸಿಕೊಂಡಿರುವ ಶೈಕ್ಷಣಿಕ ಸಹಾಧನವನ್ನು ಪಾವತಿಸಬೇಕು.

3. 2023-23ನೇ ಸಾಲಿನ ಶೈಕ್ಷಣಿಕ ವರ್ಷದ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಬೇಕು.

4. ಲ್ಯಾಪ್‌ ಟಾಪ್‌, ಟ್ಯಾಬ್‌ ಸೇರಿದಂತೆ ಯಾವುದೇ ವಿಧವಾದ ಖರೀದಿಗಳನ್ನು ನಿಲ್ಲಿಸಬೇಕು.

5. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿರುವ ಎಲ್ಲ ಖರೀದಿ ವ್ಯವಹಾರಗಳನ್ನು ತನಿಖೆಗೆ ಆದೇಶಿಸಬೇಕು.

6. ಭ್ರಷ್ಟಾಚಾರದಲ್ಲಿ ಭಾಘಿಯಾದವರ ಮೇಲೆ ಕಠಿಣ ಕಾನೂನು ಕ್ರಮ ಜಾರಿಯಾಗಬೇಕು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಅವಹೇಳನಕಾರಿ ಭಾಷಣ; ನಗರಸಭೆ ಸದಸ್ಯ ಸೇರಿ ಇಬ್ಬರ ವಿರುದ್ಧ ಪ್ರಕರಣ ದಾಖಲು

ಹುಬ್ಬಳ್ಳಿಯ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಖಂಡಿಸಿ ಹಿಂದೂ ಪರ...

‘ಬಾಂಡ್ ಭ್ರಷ್ಟಾಚಾರದ ಸಮರ್ಥನೆಗೆ ಮೋದಿ ಇಳಿದದ್ದು ದುರಂತದ ಸಂಗತಿ’

ಎಲೆಕ್ಟೋರಲ್ ಬಾಂಡ್ ಭ್ರಷ್ಟಾಚಾರದ ವಿರುದ್ಧ ಸುಪ್ರೀಂಕೋರ್ಟ್‌ನಲ್ಲಿ ಮೊಕದ್ದಮೆ ನಡೆಸಿದ ಹೋರಾಟಗಾರ್ತಿ ಅಂಜಲಿ...

ಎಲೆಕ್ಟೋರಲ್‌ ಬಾಂಡ್ ಸಮಗ್ರ ತನಿಖೆಗೆ ಎಸ್‌ಐಟಿ ನೇಮಕ ಅಗತ್ಯ: ಪ್ರಶಾಂತ್ ಭೂಷಣ್

ಬಿಜೆಪಿ ಸರ್ಕಾರ ಜಾರಿಗೆ ತಂದ ಎಲೆಕ್ಟೋರಲ್ ಬಾಂಡ್‌ಗಳ ರದ್ದತಿಗಾಗಿ ಹೋರಾಡಿ ಯಶಸ್ವಿಯಾಗಿರುವ...