ನೋಟಿಸ್ ನೀಡಲು ಬಂದ ಪೊಲೀಸರ ಮುಂದೆ ಸಿಟಿ ರವಿ ಹೈಡ್ರಾಮಾ: ನೋಟಿಸ್ ಕಿತ್ತೆಸದ ಬೆಂಬಲಿಗರು!

Date:

ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಅವರ ವಿರುದ್ಧ ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಡಿ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲು ಬಂದ ಪೊಲೀಸರ ವಿರುದ್ಧ ಸಿಟಿರವಿ ಮತ್ತು ಅವರ ಬೆಂಬಲಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಟಿ ರವಿ ಬೆಂಬಲಿಗರು ನೋಟಿಸ್ ಕಿತ್ತೆಸಿದಿದ್ದಾರೆ.

- Advertisement -

ಜುಲೈ 23ರಂದು ಚಿಕ್ಕಮಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ “ಮುಲ್ಲಾಗಳಿಗೂ ನೀಟ್ ಪರೀಕ್ಷೆಗೂ ಏನು ಸಂಬಂಧ? ಅವರ ಎದೆ ಸೀಳಿದರೆ ಮೂರು ಅಕ್ಷರ ಇರಲ್ಲ” ಎಂದು ಸಿಟಿ ರವಿ ವಿವಾದಾದ್ಮಕ ಹೇಳಿಕೆ ನೀಡಿದ್ದರು. ಇದರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಮುದಸ್ಸಿರ್ ಪಾಷಾ ಎಂಬುವವರು ನೀಡಿದ ದೂರಿನ ಮೇರೆಗೆ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್‌) ಸೆಕ್ಷನ್ 353(2) ರ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಇದನ್ನೂ ಓದಿ: ‘ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ’; ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

Advertisements

ಅದರಂತೆ ಚಿಕ್ಕಮಗಳೂರಿನಲ್ಲಿರುವ ಸಿಟಿ ರವಿ ಅವರ ನಿವಾಸಕ್ಕೆ ನಗರ ಠಾಣೆ ಇನ್‌ಸ್ಪೆಕ್ಟರ್‌ ಅಭಯ್ ಪ್ರಕಾಶ್ ನೇತೃತ್ವದ ಪೊಲೀಸ್ ತಂಡ ವಿಚಾರಣಾ ನೋಟಿಸ್ ನೀಡಲು ತೆರಳಿದಾಗ, ರವಿ ಅವರು ನೋಟಿಸ್ ಪಡೆಯಲೂ ನಿರಾಕರಿಸಿದ್ದಾರೆ.

ಅಷ್ಟು ಮಾತ್ರವಲ್ಲದೆ, “ಯಾರೋ ದೂರು ನೀಡಿದರೆ ತಕ್ಷಣ ಬಂಧಿಸಲು ಬರುತ್ತೀರಾ? ಕಾನೂನು ಎಲ್ಲರಿಗೂ ಒಂದೇ ಆಗಿರಬೇಕು. ನಾನೇನು ದೇಶದ್ರೋಹದ ಕೆಲಸ ಮಾಡಿಲ್ಲ, ಯಾವುದೇ ಸಮುದಾಯವನ್ನು ನಿಂದಿಸಿಲ್ಲ” ಎಂದು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನು ಕಾಂಗ್ರೆಸ್ ಸರ್ಕಾರವು ರಾಜಕೀಯ ಪ್ರೇರಿತವಾಗಿ ಈ ಪ್ರಕರಣ ದಾಖಲಿಸಿದೆ ಎಂದು ಅವರು ಆರೋಪಿಸಿದರು.

ಇನ್ನು ಸಿಟಿ ರವಿ ಅವರು ನೋಟಿಸ್ ತೆಗೆದುಕೊಳ್ಳದ ಕಾರಣ ಇನ್‌ಸ್ಪೆಕ್ಟರ್‌ ಅಭಯ್ ಪ್ರಕಾಶ್ ನೋಟಿಸ್ ಪ್ರತಿಯನ್ನು ಅವರ ನಿವಾಸದ ಗೋಡೆಗೆ ಅಂಟಿಸಿದರು. ಈ ವೇಳೆ ಸ್ಥಳದಲ್ಲಿದ್ದ ಸಿಟಿ ರವಿ ಬೆಂಬಲಿಗರು ಪೊಲೀಸರ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಗೋಡೆಗೆ ಅಂಟಿಸಲಾಗಿದ್ದ ನೋಟಿಸ್ ಪ್ರತಿಯನ್ನು ಹರಿದು ಹಾಕಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಕಸಾಪ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ನಿರ್ಧಾರ : ಸಿ.ಸೋಮಶೇಖರ್‌

ನಾಡಿನ ಹಿರಿಯ ಸಾಹಿತಿಗಳು, ಕನ್ನಡಪರ ಸಂಘಟನೆಗಳ ಮುಖಂಡರು ಹಾಗೂ ಹಿತೈಷಿಗಳ ಒತ್ತಾಯದ...

ಹಾವೇರಿ | ಸಾರ್ವಜನಿಕ ಶಿಕ್ಷಣವನ್ನು ಬಲಪಡಿಸಲು ಕಲಬುರಗಿಯಲ್ಲಿ ಎಸ್ಎಫ್ಐ 17ನೇ ರಾಜ್ಯ ಸಮ್ಮೇಳನ: ಬಸವರಾಜ ಎಸ್

ಸಾರ್ವಜನಿಕ ಶಿಕ್ಷಣವನ್ನು ಬಲಪಡಿಸಲು, ವಿದ್ಯಾರ್ಥಿ ಸಂಘಟನೆಗಳ ಚುನಾವಣೆ ನಡೆಸಲು, ಕೋಮು ಸೌಹಾರ್ದತೆಗಾಗಿ,...

ಉದ್ಯೋಗ ಮಾಹಿತಿ: SSLC, ITI ಪಾಸಾದವರಿಗೆ ಅವಕಾಶ; BHELನಲ್ಲಿ 660 ಹುದ್ದೆಗಳಿಗೆ ಅರ್ಜಿ ಆಹ್ವಾನ

ಸರ್ಕಾರಿ ವಲಯದ 'ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್' (BHEL) ಸಂಸ್ಥೆ ಬೃಹತ್...

ಬಾಗಲಕೋಟೆ | ಆಶಾ ಕಾರ್ಯಕರ್ತೆಯರಿಗೆ ರೂ.15000 ಮಾಸಿಕ ವೇತನ ನಿಗದಿಪಡಿಸಲು ಆಗ್ರಹ

ಬೆಲೆ ಏರಿಕೆಯಿಂದ ಜನಸಾಮಾನ್ಯರ ಬದುಕು ದುಸ್ತರವಾಗಿರುವ ಸಂದರ್ಭದಲ್ಲಿ, ಆಶಾ ಕಾರ್ಯಕರ್ತೆಯರಿಗೆ ನೀಡುತ್ತಿರುವ...