ಬಟ್ಟೆಚೀಲ ಹಗರಣ: ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ತನಿಖೆಗೆ ಹೈ ಕೋರ್ಟ್‌ ಆದೇಶ

Date:

ಕರ್ನಾಟಕ ಹೈ ಕೋರ್ಟ್‌ ರೋಹಿಣಿ ಸಿಂಧೂರಿ ಮೇಲಿನ ಭ್ರಷ್ಟಾಚಾರ ಆರೋಪದ ತನಿಖೆ ಕೈಗೆತ್ತಿಕೊಳ್ಳಲು ಅನುಮತಿಸುವಂತೆ ಕಾರ್ನಾಟಕ ಸರ್ಕಾರಕ್ಕೆ ಆದೇಶ ನೀಡಿದೆ. ರೋಹಿಣಿ ಸಿಂಧೂರಿ ಬಟ್ಟೆ ಚೀಲದ ಖರೀದಿಯಲ್ಲಿ ಅಕ್ರಮವೆಸಗಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು.

- Advertisement -

ಮೈಸೂರಿನ ವಕೀಲರಾದ ರವಿಚಂದ್ರೇಗೌಡ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ಪುಷ್ಟೀಕರಿಸಿದೆ. ಕೋರ್ಟ್‌ ಆದೇಶದ ಪ್ರತಿ ಪಡೆದ ನಾಲ್ಕು ವಾರಗಳ ಒಳಗಾಗಿ ತನಿಖೆಗೆ ಆದೇಶ ನೀಡಬೇಕೆಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಕೋರ್ಟ್‌ ಸೂಚನೆ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವ್ಯವಸ್ಥೆಯ ವೈಫಲ್ಯಕ್ಕೆ 32 ಬೈಗಾ ಕಂದಮ್ಮಗಳ ಬಲಿ: ಬುಡಕಟ್ಟು...

ಕೇಂದ್ರ, ರಾಜ್ಯ ಸರ್ಕಾರಗಳು ಇಂತಹ ಅಳಿದುಳಿಯುತ್ತಿರುವ ಬುಡಕಟ್ಟು ಸಮುದಾಯದ ಕಡೆಗೆ ತಮ್ಮ ಮತ ಬಾಚುವ ಕಣ್ಣು ಮುಚ್ಚಿ ತನ್ಮ ಕರ್ತವ್ಯದ ಕಣ್ಣು ತೆರೆದು ನೋಡುವುದು ಅಗತ್ಯ. ಬೈಗಾ ಸಮುದಾಯದಂತಹ ಅಪರೂಪದ ಬುಡಕಟ್ಟು ಸಂತತಿಯನ್ನು...

ಆದಿವಾಸಿ ಕಲಾವಿದನ ನಿಧನದ 25 ವರ್ಷಗಳ ನಂತರ ₹18...

ಈ ಚಿತ್ರಕಲಾಕೃತಿಯಲ್ಲಿ ಚಿತ್ರಿತವಾಗಿರುವ ನಾಗ, ಭೂಮಿತಾಯಿಯ ಪ್ರತೀಕ. ನಾಗನ ಮೇಲೆ ನಿಂತಿರುವ ವಿಶಾಲ ವೃಕ್ಷ, ಪ್ರಕೃತಿ ಮತ್ತು ಬದುಕಿನ ಸಂಬಂಧದ ಪ್ರತಿಫಲನ. ಗೊಂಡ್ ಆದಿವಾಸಿ ಕಲಾವಿದನ ಚಿತ್ರ ಕಲಾಕೃತಿಯೊಂದು ಆತನ ಮರಣದ 25...

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಭ್ರಷ್ಟಾಚಾರವನ್ನು ಮೊಳಕೆಯಲ್ಲೇ ಚಿವುಟುವ ಕಾರ್ಯ ನಡೆಯಬೇಕು. ಸಾರ್ವಜನಿಕರ ಹಣ ದುರ್ಬಳಕೆ ಮಾಡಿಕೊಳ್ಳುವುದು ಅಕ್ಷಮ್ಯ ಅಪರಾಧ ಎಂದು ಹೇಳಿಕೆ ನೀಡಿದೆ.

ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟಾಚಾರ ನಿರ್ಮೂಲನ ಕಾಯ್ದೆಯ ಅನ್ವಯ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿಯವರ ಮೇಲೆ ಎಫ್‌ಐಆರ್‌ ದಾಖಲಿಸಿಕೊಳ್ಳಲು ಸರ್ಕಾರ ಸಮ್ಮತಿಸಬೇಕು ಎಂದು ಕೋರ್ಟ್‌ ಆದೇಶಿಸಿದೆ.

 ಏನಿದು ಪ್ರಕರಣ?

ಪ್ಲಾಸ್ಟಿಕ್‌ ಮುಕ್ತ ಭಾರತದ ಅಭಿಯಾನದ ಮೇರೆಗೆ ಮೈಸೂರು ಜಿಲ್ಲೆಯನ್ನು ಪ್ಲಾಸ್ಟಿಕ್‌ ಮುಕ್ತವಾಗಿಸುವ ಯೋಜನೆ ಕೈಗೆತ್ತಿಕೊಂಡ ಸಿಂಧೂರಿ ಅವರು ಜಿಲ್ಲೆ ಹಾಗೂ ಗ್ರಾಮ ಪಂಚಾಯ್ತಿಯ ವ್ಯಾಪ್ತಿಗೆ ಬರುವ ಎಲ್ಲಾ ಸಂಸ್ಥೆಗಳು ಬಟ್ಟೆಯ ಕೈ ಚೀಲ ಬಳಸುವಂತೆ ಆದೇಶ ನೀಡಿದ್ದರು.

2021ರಲ್ಲಿ ರೋಹಿಣಿ ಸಿಂಧೂರಿ ಮೈಸೂರಿನ ಜಿಲ್ಲಾಧಿಕಾರಿ ಹಾಗೂ ಕರ್ನಾಟಕ ಕೈಮಗ್ಗ ಅಭಿವೃದ್ಧಿ ಪ್ರಾಧಿಕಾರದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ವೇಳೆ ನಡೆದ ಖರೀದಿ, ಮಾರುಕಟ್ಟೆಯಲ್ಲಿ ರೂ 13 ಇರುವ ಚೀಲವನ್ನು ರೋಹಿಣಿ 52 ರೂ. ದರ ನೀಡಿ ಖರೀದಿ ಮಾಡಿರುವುದಾಗಿ ಲೆಕ್ಕ ಒದಗಿಸಿದ್ದರು. ಒಟ್ಟು 14,71,458 ಪರಿಸರ ಸ್ನೇಹಿ ಬಟ್ಟೆ ಚೀಲಗಳನ್ನು ಖರೀದಿಸಿದ ರೋಹಿಣಿ ಸಿಂಧೂರಿ ಸರ್ಕಾರದ ಖಜಾನೆಗೆ 5.88 ಕೋಟಿ ನಷ್ಟ ಉಂಟು ಮಾಡಿದ್ದಾರೆ ಎಂದು ದೂರು ದಾಖಲಾಯಿತು.

ದೂರು ದಾಖಲಾದ ಬೆನ್ನಲ್ಲೇ ಸಿಬ್ಬಂದಿ ಮತ್ತು ಆಡಳಿತ ಸುಧಾರಣ ಇಲಾಖೆಯು ಸೆಕ್ಷನ್‌ 17A ಅನ್ವಯ ಮಾರ್ಚ್‌ 26, 2025 ರಂದು ಅಧಿಕಾರಿಯ ಮೇಲಿನ ತನಿಖೆಯ ಆದೇಶವನ್ನು ನಿರಾಕರಿಸಿತು.

ಸೆಕ್ಷನ್‌ 17A ಭ್ರಷ್ಟಾಚಾರ ತಡೆ ಕಾಯ್ದೆಯ 2018ರ ತಿದ್ದುಪಡಿಯು ಸರ್ಕಾರಿ ಅಧಿಕಾರಿಗಳ ಮೇಲಿನ ಆರೋಪಗಳ ತನಿಖೆಗೆ ಸರ್ಕಾರದ ಪೂರ್ವಾನುಮತಿ ಪಡೆಯುವುದು ಕಡ್ಡಾಯ ಮಾಡಿದೆ. ಸೆಕ್ಷನ್‌ 17A ಕುರಿತು ಅಭಿಪ್ರಾಯಿಸಿದ ನ್ಯಾಯಪೀಠವು ಈ ಕಾಯ್ದೆಯು ಸುಳ್ಳು ಆರೋಪಗಳಿಗೆ ಒಳಗಾಗುವ ಪ್ರಾಮಾಣಿಕ ಅಧಿಕಾರಿಗಳ ರಕ್ಷಣೆಗಾಗಿ ಬಳಕೆ ಆಗಬೇಕು. ಗಂಭೀರ ಭ್ರಷ್ಟಾಚಾರದ ಆರೋಪಗಳಿಗೆ ಈ ಕಾಯ್ದೆ ಯಾವ ರಕ್ಷಣೆಯನ್ನು ಒದಗಿಸಲಾರದು ಎಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಶರಾವತಿ ಸಂತ್ರಸ್ತರ ಸಮಸ್ಯೆ ಪರಿಹಾರಕ್ಕೆ ಶೀಘ್ರವೇ ಕೇಂದ್ರಕ್ಕೆ ಪ್ರಸ್ತಾವನೆ: ಮಧು ಬಂಗಾರಪ್ಪ

ಶರಾವತಿ ಮುಳುಗಡೆ ಸಂತ್ರಸ್ತರ ಅರಣ್ಯ ಭೂಮಿಯನ್ನು ಡಿ-ನೋಟಿಫೈ ಮಾಡಲು ಕೇಂದ್ರ ಸರ್ಕಾರದ...

ಅನ್ಯಾಯದ ವಿರುದ್ಧ ಹೋರಾಟಕ್ಕೆ ಹೊಸ ರೂಪು: ‘ಸತ್ಯಾಗ್ರಹ’ ಪೋರ್ಟಲ್ ಪರಿಚಯಿಸಿದ ರಾಹುಲ್ ಗಾಂಧಿ

ದೇಶಾದ್ಯಂತ ನಡೆಯುತ್ತಿರುವ ವಿವಿಧ ಜನಪರ ಪ್ರತಿಭಟನೆಗಳು ಹಾಗೂ ಹೋರಾಟಗಳನ್ನು ಒಂದೇ ಸೂರಿನಡಿ...

ಫಾರ್ಮ್‌-6 ಮೂಲಕ ಮರುನೋಂದಣಿ ಸಾಧ್ಯವಿದ್ದರೆ SIR ಏಕೆ? ಚುನಾವಣಾ ಆಯೋಗಕ್ಕೆ ಚಿದಂಬರಂ ಪ್ರಶ್ನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಕೈಬಿಡಲಾದ ಮತದಾರರು...

ದೆಹಲಿ ಸಿಜೆಪಿ ಪ್ರತಿಭಟನೆ ಬೆನ್ನಲ್ಲೇ ಹೋರಾಟಗಾರರ ವಿರುದ್ಧ ಮೂರು ಎಫ್‌ಐಆರ್ ದಾಖಲು

ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಯಲ್ಲಿ (SIR) ಅಕ್ರಮ ನಡೆದಿದೆ ಎಂದು ಆರೋಪಿಸಿ,...