ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ವಿವಿಗೆ ರಾಜ್ಯಪಾಲರ ಬದಲು ಸಿಎಂ ಕುಲಪತಿ, ಬಿಜೆಪಿ ಆಕ್ಷೇಪ

Date:

ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಕುಲಪತಿ ಸ್ಥಾನವನ್ನು ರಾಜ್ಯಪಾಲರಿಂದ ಹಿಂಪಡೆಯಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿದ್ದು, ಇದಕ್ಕೆ ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿದೆ.

- Advertisement -

ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಈ ಬಗ್ಗೆ ಟ್ವೀಟ್‌ ಮಾಡಿ, “ಶಿಕ್ಷಣದಲ್ಲಿ ರಾಜಕೀಯ ಬೆರೆಯಬಾರದು ಎಂಬ ಸದುದ್ದೇಶದಿಂದ ಸಂವಿಧಾನದ ಆಶಯಕ್ಕೆ ಪೂರಕವಾಗಿ ರಾಜ್ಯದ ಸಾಂವಿಧಾನಿಕ ಮುಖ್ಯಸ್ಥರೂ ಆದ ಗೌರವಾನ್ವಿತ ರಾಜ್ಯಪಾಲರೇ ವಿಶ್ವವಿದ್ಯಾನಿಲಯಗಳ ಕುಲಾಧಿಪತಿಗಳಾಗಿರುವುದು ಶಿಕ್ಷಣದ ಭೂಷಣ. ಆದರೆ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಸದ್ಯ ಈಗಿರುವ ತನ್ನ ಅಧಿಕಾರವನ್ನು ದುರುಪಯೋಗ ಮಾಡಿಕೊಂಡು ಸರಣಿ ಭ್ರಷ್ಟಾಚಾರಗಳಲ್ಲಿ ತೊಡಗಿರುವುದರ ನಡುವೆಯೇ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಮಲಿನಗೊಳಿಸಲು ಹೊರಟಿದೆ” ಎಂದು ಟೀಕಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ವಿಶ್ವವಿದ್ಯಾಲಯದ ಕುಲಪತಿ ಅಧಿಕಾರವನ್ನು ರಾಜ್ಯಪಾಲರಿಂದ ಕಿತ್ತು ಮುಖ್ಯಮಂತ್ರಿ ಅವರಿಗೆ ನೀಡಲು ಹೊರಟಿರುವ ಸರ್ಕಾರದ ನಿಲುವು ಗ್ರಾಮೀಣಾಭಿವೃದ್ಧಿ ಅಧ್ಯಯನ ಕ್ಷೇತ್ರದಲ್ಲೂ ಅನಗತ್ಯ ರಾಜಕೀಯ ಹಸ್ತಕ್ಷೇಪಕ್ಕೆ ಅವಕಾಶ ನೀಡಲಿದೆ” ಎಂದು ಆರೋಪಿಸಿದ್ದಾರೆ.

“ಈ ಮೊದಲಿನಿಂದಲೂ ರಾಜ್ಯಪಾಲರ ಕುರಿತು ಅಸಹನೆ ತೋರುತ್ತಿರುವ ಹಾಗೂ ರಾಜ್ಯಪಾಲರನ್ನು ವೈರಿಯಂತೆ ನೋಡುತ್ತಿರುವ ಕಾಂಗ್ರೆಸ್‌ ಸರ್ಕಾರ ಸರ್ಕಾರ ರಾಜ್ಯಪಾಲರಿಗಿರುವ ಪರಮಾಧಿಕಾರಕ್ಕೆ ಕತ್ತರಿ ಪ್ರಯೋಗ ಮಾಡಲು ಹೊರಟಿರುವುದು ಸಾಂವಿಧಾನಿಕ ವ್ಯವಸ್ಥೆನ್ನು ವಿಚಲಿತಗೊಳಿಸುವ ಹೊನ್ನಾರದಿಂದ ಕೂಡಿದೆ. ರಾಜ್ಯ ಸರ್ಕಾರದ ಈ ನಡೆ ಅತ್ಯಂತ ಖಂಡನೀಯ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಸಚಿವ ಸಂಪುಟ ಸಭೆ | 9 ಮಹತ್ವದ ವಿಧೇಯಕಕ್ಕೆ ತಿದ್ದುಪಡಿ, ಪಂಚಾಯತ್ ರಾಜ್ ವಿವಿಗೆ ಮುಖ್ಯಮಂತ್ರಿಗಳೇ ಕುಲಪತಿ

ಸಚಿವ ಸಂಪುಟ ನಿರ್ಧಾರ ಏನು?

ಸಚಿವ ಸಂಪುಟ ಸಭೆಯಲ್ಲಿ ಒಟ್ಟು 8 ವಿಧೇಯಕಗಳನ್ನು ಬೆಳಗಾವಿ ಅಧಿವೇಶನದಲ್ಲಿ ಮಂಡಿಸಿ ಅನುಮೋದನೆ ಪಡೆಯಲು ನಿರ್ಧರಿಸಿದ್ದು, ಇದರಲ್ಲಿ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ತಿದ್ದುಪಡಿ ವಿಧೇಯಕ-2024ಕ್ಕೆ ಸಹ ಸರ್ಕಾರ ಅಂಗೀಕಾರ ಪಡೆದಿದೆ. ಇದರಡಿ ವಿಧೇಯಕದ ತಿದ್ದುಪಡಿ ಮೂಲಕ ಗದಗದ ಗ್ರಾಮೀಣಾಭಿವೃದ್ಧಿ ವಿಶ್ವವಿದ್ಯಾಲಯದ ಕುಲಾಧಿಪತಿಗಳನ್ನಾಗಿ ರಾಜ್ಯಪಾಲರ ಬದಲಿಗೆ ಮುಖ್ಯಮಂತ್ರಿಗಳನ್ನೇ ನೇಮಿಸಲು ತೀರ್ಮಾನಿಸಲಾಗಿದೆ. ಬೆಳಗಾವಿ ಅಧಿವೇಶನದಲ್ಲಿ ಮಂಡಿಸಿ ಉಭಯ ಸದನಗಳಲ್ಲಿ ಅಂಗೀಕಾರ ಪಡೆಯಲಿದ್ದು, ಅನುಮೋದನೆಗಾಗಿ ರಾಜ್ಯಪಾಲರಿಗೆ ಕಳುಹಿಸಲಾಗುವುದು.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್, ಮತ್ತಷ್ಟು ಸಕ್ರಿಯವಾಗಿ ವಿಶ್ವವಿದ್ಯಾಲಯವನ್ನು ಮುನ್ನಡೆಸಲು ಈ ತೀರ್ಮಾನ ಮಾಡಲಾಗಿದೆ. ಗುಜರಾತ್‌ನಲ್ಲೂ ಈ ಮಾದರಿ ಅನುಸರಿಸಲಾಗಿದೆ. ಇದರಲ್ಲಿ ಬೇರೆ ಯಾವುದೇ ಉದ್ದೇಶವಿಲ್ಲ. ಇನ್ನು ಮುಂದೆ ಕುಲಪತಿಗಳ ಎಲ್ಲ ನಿರ್ಣಯಗಳನ್ನು ರಾಜ್ಯಪಾಲರ ಬದಲಾಗಿ ಸಿಎಂ ನಿರ್ವಹಿಸುತ್ತಾರೆ ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಂಧೀಜಿ ಹೆಸರು, ವಿಚಾರಧಾರೆ ಅಳಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿ.ಕೆ. ಶಿವಕುಮಾರ್

"ಮಹಾತ್ಮ ಗಾಂಧೀಜಿ ಭಾರತದ ಆತ್ಮವಿದ್ದಂತೆ. ಅವರ ಹೆಸರು ಹಾಗೂ ವಿಚಾರಧಾರೆಯನ್ನು ಅಳಿಸಿಹಾಕಲು...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...