ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ ನಿಧನಕ್ಕೆ ಸಿಎಂ ಸೇರಿ ಗಣ್ಯರಿಂದ ಸಂತಾಪ

Date:

ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ(114) ಶುಕ್ರವಾರ ನಿಧನರಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

- Advertisement -

ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಜಯನಗರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ನಿಧನ ಹೊಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

“ವೃಕ್ಷಮಾತೆ ಸಾಲುಮರದ ತಿಮ್ಮಕ್ಕನವರ ನಿಧನದ ಸುದ್ದಿ ತಿಳಿದು ದುಃಖಿತನಾಗಿದ್ದೇನೆ. ಸಾವಿರಾರು ಗಿಡಗಳನ್ನು ನೆಟ್ಟು, ಅವುಗಳನ್ನು ಮಕ್ಕಳಂತೆ ಸಲಹಿದ ತಿಮ್ಮಕ್ಕನವರು ತಮ್ಮ ಬಹುಪಾಲು ಜೀವಿತ ಕಾಲವನ್ನು ಪರಿಸರ ಸಂರಕ್ಷಣೆಗಾಗಿ ಮುಡಿಪಾಗಿಟ್ಟವರು. ಇಂದು ತಿಮ್ಮಕ್ಕನವರು ನಮ್ಮನ್ನು ಅಗಲಿದರೂ ಅವರ ಪರಿಸರ ಪ್ರೇಮ ಅವರನ್ನು ಚಿರಸ್ಥಾಯಿಯಾಗಿಸಿದೆ. ಅಗಲಿದ ಮಹಾಚೇತನಕ್ಕೆ ನನ್ನ ನಮನಗಳು. ಸಾಲುಮರದ ತಿಮ್ಮಕ್ಕನವರ ನಿಧನದಿಂದ ನಾಡು ಬಡವಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬವರ್ಗಕ್ಕೆ ನನ್ನ ಸಂತಾಪಗಳು” ಎಂದು ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

“ಪರಿಸರಕ್ಕಾಗಿ ತಮ್ಮ ಇಡೀ ಬದುಕನ್ನೇ ಮುಡಿಪಿಟ್ಟು ಪ್ರಕೃತಿಗಾಗಿಯೇ ಬದುಕಿ ಬಾಳಿದ ಪದ್ಮಶ್ರೀ ಪುರಸ್ಕೃತ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರ ನಿಧನದ ಸುದ್ದಿ ಕೇಳಿ ಬಹಳ ದುಃಖವಾಯಿತು. ನಾಡಿಗೆ ಅವರು ನೀಡಿರುವ ಕೊಡುಗೆ, ಅವರಿಂದ ದೊರೆತಿರುವ ಪ್ರೇರಣೆ ಅಜರಾಮರ. ಅಗಲಿದ ಆ ಚೇತನಕ್ಕೆ ಚಿರಶಾಂತಿ ದೊರೆಯಲಿ. ಈ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ಸಂತಾಪ ವ್ಯಕ್ತಪಡಿಸಿದ್ದಾರೆ.

“ವೃಕ್ಷಮಾತೆ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಗೌರವಕ್ಕೆ ಪಾತ್ರರಾಗಿದ್ದ ಸಾಲು ಮರದ ತಿಮ್ಮಕ್ಕ ಅವರ ನಿಧನಕ್ಕೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸಂತಾಪ ವ್ಯಕ್ತಪಡಿಸಿದ್ದಾರೆ. ಸಾಲುಮರದ ತಿಮ್ಮಕ್ಕ ಕರ್ನಾಟಕದ ಹೆಮ್ಮೆಯ ಪರಿಸರ ಪ್ರಚಾರಕರಾಗಿದ್ದರು. ಮಕ್ಕಳಿಲ್ಲದ ಈ ಮಹಾತಾಯಿ ಮರಗಳನ್ನೇ ಮಕ್ಕಳಂತೆ ಬೆಳೆಸುವ ಮೂಲಕ ಹಸಿರಿನ ಮಹತ್ವವನ್ನು ಜಗತ್ತಿಗೆ ಸಾರಿದ್ದರು” ಎಂದು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

“ವೃಕ್ಷಮಾತೆ ಶತಾಯುಷಿ ಸಾಲು ಮರದ ತಿಮ್ಮಕ್ಕ ಅವರ ನಿಧನದ ಶುದ್ದಿ ಕೇಳಿ ಅತ್ಯಂತ ಆಘಾತವಾಗಿದೆ. ಸಾವಿರಾರು ಗಿಡಗಳನ್ನು ನೆಟ್ಟು ಮಕ್ಕಳಂತೆ ಸಲುಹಿ ತನ್ನ ಇಡೀ ಜೀವನವನ್ನೇ ಪರಿಸರದ ಉಳುವಿಗಾಗಿ ಮುಡುಪಾಗಿಟ್ಟು ಅವರು ಮಾಡಿರುವ ಪರಿಸರ ಸೇವೆ ಸದಾಕಾಲ ಅವರನ್ನು ಜೀವಂತವಾಗಿಡುತ್ತದೆ. ಅವರ ಸಾಧನೆಗೆ ಪದ್ಮಶ್ರೀ, ರಾಜ್ಯೋತ್ಸವ ಸೇರಿದಂತೆ ಹಲವಾರು ಪ್ರಶಸ್ತಿಗಳು ಅವರನ್ನು ಅರಸಿ ಬಂದಿದ್ದವು. ಅವರ ಅಗಲಿಕೆಯಿಂದ ನಾಡು ಹಿರಿಯ ಜೀವವನ್ನು ಕಳೆದುಕೊಂಡು ಬಡವಾದಂತಾಗಿದೆ. ತಿಮ್ಮಕ್ಕ ಅವರ ಕಾರ್ಯ ಸದಾ ಪ್ರೇರಣೆಯಾಗಿದೆ. ದೇವರು ಹಿರಿಯ ಜೀವಕ್ಕೆ ಚಿರ ಶಾಂತಿ ನೀಡಲಿ, ಅವರ ಅಗಲಿಕೆಯ ದುಖವನ್ನು ಭರಿಸುವ ಶಕ್ತಿಯನ್ನು ಎಲ್ಲ ಅವರ ಅಭಿಮಾನಿಗಳಿಗೆ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.

“ನಾಡಿನ ಹಿರಿಯಚೇತನ, ವೃಕ್ಷಮಾತೆ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರು ನಮ್ಮನ್ನು ಅಗಲಿರುವ ಸುದ್ದಿ ತಿಳಿದು ಮನಸ್ಸಿಗೆ ಅತೀವ ದುಃಖವಾಯಿತು. ಅವರಿಗೆ ನನ್ನ ಭಾವಪೂರ್ಣ ನಮನಗಳು. ಸಸಿಗಳನ್ನೇ ಮಕ್ಕಳೆಂದು ಭಾವಿಸಿ, ನೀರು ಎರೆದು ಅವುಗಳನ್ನು ಪೋಷಿಸಿ ಸಾವಿರಾರು ಮರಗಳನ್ನು ಬೆಳೆಸುವ ಮುಖೇನ ವಿಶ್ವಕ್ಕೆ ಮಾದರಿಯಾಗಿದ್ದರು. ಯಾವುದೇ ಸ್ವಾರ್ಥ, ಫಲಾಪೇಕ್ಷೆಯಿಲ್ಲದೆ ಪರಿಸರ ಮತ್ತು ಜೀವಸಂಕುಲವನ್ನು ಸಂರಕ್ಷಿಸಿದ ಮಾತೆ ಸಾಲುಮರದ ತಿಮ್ಮಕ್ಕನವರ ಕೊಡುಗೆ ಅವಿಸ್ಮರಣೀಯ. ಅವರ ಅಗಲಿಕೆಯು ನಾಡಿಗೆ ಮತ್ತು ಪರಿಸರ ಲೋಕಕ್ಕೆ ತುಂಬಲಾಗದ ನಷ್ಟ. ನಾಡು ಅವರನ್ನು ಸದಾ ಸ್ಮರಿಸಲಿದೆ. ಮೃತರ ಆತ್ಮಕ್ಕೆ ಭಗವಂತನು ಚಿರಶಾಂತಿ ಕರುಣಿಸಲಿ. ದುಃಖತಪ್ತ ಅವರ ಕುಟುಂಬವರ್ಗ, ಅಭಿಮಾನಿಗಳ ಬಳಗ ಹಾಗೂ ಪರಿಸರ ಪ್ರೇಮಿಗಳಿಗೆ ನೋವನ್ನು ಸಹಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವೆ” ಎಂದು ಗೃಹ ಸಚಿವ ಪರಮೇಶ್ವರ್‌ ಸಂತಾಪ ನುಡಿಗಳನ್ನಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ಭೀಕರ ಬರ: 46,000 ಕೋಟಿ ರೂ. ನಷ್ಟ; ಜಿಎಸ್‌ಟಿ ಆದಾಯದ ಮೇಲೆ ಪರಿಣಾಮ

ಕರ್ನಾಟಕದಲ್ಲಿ ಈ ಬಾರಿ ಹಿಂದೆಂದೂ ಕಾಣದಂತಹ ಭೀಕರ ಬರ ಪರಿಸ್ಥಿತಿ ತಲೆದೋರಿದೆ‌....

ರಾಜ್ಯದಲ್ಲಿ ಹೆಚ್ಚುತ್ತಿದೆ ಮಳೆ ಆರ್ಭಟ; 19 ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರೀ ಮಳೆ: ಹವಾಮಾನ ಇಲಾಖೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ವಿವಿಧ ಭಾಗಗಳಲ್ಲಿ ಇಂದು...

ದೆಹಲಿ ಪತ್ರಕರ್ತೆಗೆ ಪೊಲೀಸರಿಂದ ಲೈಂಗಿಕ ಕಿರುಕುಳ: ಕರ್ನಾಟಕ ಪತ್ರಕರ್ತೆಯರ ಸಂಘದಿಂದ ಖಂಡನೆ

ದೆಹಲಿಯ ಜಂತ‌ರ್ ಮಂತರ್‌ನಲ್ಲಿ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ...

SIR ವಿವಾದ | ಕೊಪ್ಪದಲ್ಲಿ 243 ಮತದಾರರ ಹೆಸರು ಡಿಲೀಟ್‌ಗೆ ನೀಡಿದ್ದ ಅರ್ಜಿ ಹಿಂಪಡೆದ ಬಿಜೆಪಿ ಮುಖಂಡ

ರಾಜ್ಯಾದ್ಯಂತ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಮತ್ತು...