ಒಂದು ತಿಂಗಳಲ್ಲಿ ಅಲೆಮಾರಿ ಮತ್ತು ಆದಿವಾಸಿ ಆಯೋಗ ರಚನೆ: ಸಿಎಂ ಡಿ ಕೆ ಶಿವಕುಮಾರ್ ಭರವಸೆ

Date:

“ಅಲೆಮಾರಿ ಮತ್ತು ಆದಿವಾಸಿ ಆಯೋಗ ರಚನೆ ಮಾಡಬೇಕು ಎಂದು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದು, ಒಂದು ತಿಂಗಳಲ್ಲಿ ರಚನೆ ಮಾಡಲಾಗುವುದು” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಭರವಸೆ ನೀಡಿದರು.

- Advertisement -

ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ಮಂಗಳವಾರ ನಡೆದ ವಿಶ್ವ ಆದಿವಾಸಿ ದಿನಾಚರಣೆ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯುಕ್ತರ ನೇಮಕ, ವಜಾ ಹೇಗೆ? ಈ ಹಿಂದೆ...

ಚುನಾವಣೆಯನ್ನು ನ್ಯಾಯಸಮ್ಮತವಾಗಿ ನಡೆಸಬೇಕಾದ ಚುನಾವಣಾ ಆಯೋಗ, ಚುನಾವಣಾ ಆಯುಕ್ತರು ಸರ್ಕಾರದ ಪ್ರಭಾವದಿಂದ ಮುಕ್ತವಾಗಿರಬೇಕು. ಆದರೆ ಚುನಾವಣೆ ಸ್ಪರ್ಧಿಸುವ ಆಡಳಿತ ಪಕ್ಷವೇ ತನಗೆ ಇಷ್ಟವಾದ ವ್ಯಕ್ತಿಯನ್ನು ಚುನಾವಣಾ ಅಧಿಕಾರಿಯಾಗಿ ನೇಮಕ ಮಾಡಿಕೊಂಡರೆ, ವಿರೋಧ ಪಕ್ಷಗಳಿಗೆ...

ರಾಹುಲ್‌ ಗಾಂಧಿ ಲಿಸ್ಟ್‌ನಲ್ಲಿರುವ ʼಸಂವಿಧಾನದ ವಿಧ್ವಂಸಕರುʼ ಇವರೇನಾ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರದಲ್ಲಿ ಚುನಾವಣಾ ಆಯೋಗದ ವಿರುದ್ಧ ಎದ್ದಿರುವ ಅನುಮಾನಗಳಿಂದ ರಾಜಕೀಯ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ. ಈ ಬೆನ್ನಲ್ಲೇ, ಕಾಂಗ್ರೆಸ್‌ ನಾಯಕ ಹಾಗೂ ಲೋಕಸಭೆ ವಿರೋಧ ಪಕ್ಷದ...

ತೆಲಂಗಾಣ ಬೆಳೆ ರಕ್ಷಣೆಗೆ 3 ಟಿಎಂಸಿ ನೀರು: ಅಚ್ಚುಕಟ್ಟು...

ಕೃಷ್ಣಾ ನದಿಯ ನೀರು ಮತ್ತೊಮ್ಮೆ ಕರ್ನಾಟಕ–ತೆಲಂಗಾಣದ ನಡುವಿನ ಪ್ರಮುಖ ವಿಚಾರವಾಗಿ ಮುನ್ನೆಲೆಗೆ ಬಂದಿದೆ. ತೆಲಂಗಾಣದ ಕೃಷಿ ಪ್ರದೇಶದಲ್ಲಿನ ನಿಂತಿರುವ ಬೆಳೆಗಳನ್ನು ರಕ್ಷಿಸಲು ಕರ್ನಾಟಕದಿಂದ ಕೃಷ್ಣಾ ನೀರು ಬಿಡುಗಡೆ ಮಾಡುವಂತೆ ಆ ರಾಜ್ಯದ ಸಚಿವರು...

“ನಾವು ಮೂಲ ಆದಿವಾಸಿಗಳೇ. ಇದರಲ್ಲಿ ಯಾವುದೇ ಅನುಮಾನವಿಲ್ಲ. ನಾಗರಿಕತೆ ಬಂದು ಸೂಟು ಬೂಟು ಹಾಕಿದ್ದೇವೆ. ಹುಟ್ಟಿದಾಗ ಬಟ್ಟೆ, ಹೆಸರು, ಕುರ್ಚಿ, ಅಧಿಕಾರ ಏನೂ ಇರಲಿಲ್ಲ. ನಂತರ ಹೆಸರು ಹಾಗೂ ಎಲ್ಲವೂ ಬಂದಿದೆ. ನೀವು ಪ್ರಕೃತಿ ಜೊತೆಗೆ ಬದುಕುತ್ತಿದ್ದೀರಿ. ನಾವು ಎಷ್ಟೇ ದೊಡ್ಡ ವ್ಯಕ್ತಿಗಳಾದರೂ ಕೊನೆಗೆ ನಾವು ಬದುಕಲು ಬಯಸುವುದು ಪ್ರಕೃತಿ ಜೊತೆಗೆ” ಎಂದರು.

“ನೀವು ಪ್ರಕೃತಿ ಮಕ್ಕಳು, ಭಾಗ್ಯವಂತರು. ನೀವು ಸಾಕಷ್ಟು ಸಮಸ್ಯೆಯಲ್ಲಿ ಬದುಕುತ್ತಿದ್ದೀರಿ. ಸರ್ಕಾರ ನಿಮ್ಮ ಬದುಕಿನಲ್ಲಿ ಬದಲಾವಣೆ ತರಲು ಶಿಕ್ಷಣ ಸೇರಿ ಅನೇಕ ಕಾರ್ಯಕ್ರಮ ನೀಡಿದೆ. ಯುಪಿಎ ಸರ್ಕಾರದಲ್ಲಿ ಅರಣ್ಯ ಹಕ್ಕು ಕಾಯ್ದೆ ನೀಡಿದೆವು. ನನ್ನ ಕ್ಷೇತ್ರದಲ್ಲಿ ನಿಮ್ಮ ಸಮುದಾಯದ ಜನರ ಭಾವನೆ, ಬದುಕು ಶ್ರಮ ಏನು ಎಂದು ಅರಿತಿದ್ದೇನೆ” ಎಂದು ತಿಳಿಸಿದರು.

“ಬೆಂಗಳೂರು ಜಿಲ್ಲೆಯಲ್ಲೂ ನಿಮ್ಮ ಜನಾಂಗ ಪರಿಶ್ರಮದಲ್ಲಿ ಬದುಕುತ್ತಿದ್ದೀರಿ. ನೀವು ಶಿಕ್ಷಣಕ್ಕೆ ಆದ್ಯತೆ ನೀಡಿ, ವಿದ್ಯಾವಂತರು, ಪ್ರಜ್ಞಾವಂತರಾಗಿ. ಆದರೆ ನಿಮ್ಮ ಮೂಲ ಕಸುಬು ಬಿಡಬೇಡಿ. ಬೇರು ಗಟ್ಟಿಯಾಗಿದ್ದಾರೆ ಮಾತ್ರ ಹಣ್ಣು ಪಡೆಯಲು ಸಾಧ್ಯ. ಇತಿಹಾಸ ಮರೆತವ ಇತಿಹಾಸ ಸೃಷ್ಟಿಸಲಾರ ಎಂದು ಅಂಬೇಡ್ಕರ್ ಹೇಳಿದ್ದಾರೆ. ನಿಮ್ಮ ಮೂಲ ತತ್ವ, ಬದುಕಿನ ಆದರ್ಶ ಮರೆಯಬೇಡಿ. ಸೂರ್ಯ ಚಂದ್ರರೆ ನಿಮಗೆ ಗಡಿಯಾರ” ಎಂದು ಕಿವಿಮಾತು ಹೇಳಿದರು.

ನಿಮಗೆ ನೀಡಬೇಕಾದದ್ದನ್ನು ಸರ್ಕಾರ ನೀಡಲಿದೆ. ಮಕ್ಕಳಿಗೆ ಶಿಕ್ಷಣ ಕೊಡಿಸಿ, ಬೆಳೆಸಿ. ನಿಮ್ಮ ಪರವಾಗಿ ದ್ವಾರಕನಾಥ್ ಅವರು ಮನವಿ ಮಾಡಿದ್ದಾರೆ. ನಾವು ಕಂದಾಯ ಗ್ರಾಮ ಘೋಷಿಸಿ ಹಕ್ಕುಪತ್ರ, ಮನೆ ನೀಡಿದ್ದೇವೆ. ಅಲೆಮಾರಿ ಮತ್ತು ಆದಿವಾಸಿ ಆಯೋಗ ರಚನೆಗೆ ಮನವಿ ಮಾಡಿದ್ದು, ಒಂದು ತಿಂಗಳಲ್ಲಿ ಅದಕ್ಕೆ ತೀರ್ಮಾನ ಮಾಡಲಾಗುವುದು. ಇದು ನಮ್ಮ ಸರ್ಕಾರದ ಪ್ರಣಾಳಿಕೆ ಭಾಗವಾಗಿದೆ” ಎಂದು ತಿಳಿಸಿದರು.

“ಮಾನವ ಧರ್ಮಕ್ಕೆ ಜಯವಾಗಲಿ, ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎಂದು ನನ್ನ ಗುರುಗಳು ಮಾರ್ಗದರ್ಶನ ನೀಡಿದ್ದಾರೆ. ನೊಂದು ಬೆಂದಿರುವ ಸಮಾಜಕ್ಕೆ ಶಕ್ತಿ ತುಂಬುವುದು ನಮ್ಮ ಕರ್ತವ್ಯ. ನಗರದ ವಿದ್ಯಾರ್ಥಿಗಳಿಗೆ ಮೂರು ದಿನಗಳ ಕಾಲ ಹಳ್ಳಿಗಳಲ್ಲಿ ವಾಸ ಇದ್ದು, ಅಲ್ಲಿನ ಜನರ ಬದುಕಿನ ಬಗ್ಗೆ ಪರಿಚಯಿಸಲು ತೀರ್ಮಾನಿಸಿದ್ದೇವೆ. ನೀವು ನಿಮ್ಮ ಮೂಲ ಹಾಗೂ ಆಸ್ತಿಯನ್ನು ಬಿಟ್ಟುಕೊಡಬೇಡಿ” ಎಂದರು.

“ಈ ಹಿಂದೆ ನೆಹರೂ ಅವರು ಆದಿವಾಸಿಗಳಿಂದ ಅಣೆಕಟ್ಟು ಉದ್ಘಾಟನೆ ಮಾಡಿದಸಿದ್ದರು. ನಿಮ್ಮ ನಮ್ಮ ಸಂಬಂಧ ಭಕ್ತ ಹಾಗೂ ಭಗವಂತನ ಸಂಬಂಧ. ನಿಮಗೆ ಶಿಕ್ಷಣ, ವಸತಿ, ಭೂಮಿ, ಆಹಾರ, ಉದ್ಯೋಗ, ಗ್ಯಾರಂಟಿ ನೀಡಲು ಬದ್ಧ. ನಾವು ನಿಮಗಾಗಿ ಐದು ಗ್ಯಾರಂಟಿ ಯೋಜನೆ ನೀಡಿದ್ದೇವೆ. ಇಂತಹ ಒಂದು ಯೋಜನೆ ಬೇರೆ ಯಾವುದಾದರೂ ಸರ್ಕಾರ ನೀಡಿತ್ತಾ? ನಿಮಗೆ ನಾವು, ನಮಗೆ ನೀವು ಆಸರೆಯಾಗಿ ಇರಬೇಕು” ಎಂದು ಕರೆ ನೀಡಿದರು.

“ನಿಮ್ಮ ಶ್ರಮಕ್ಕೆ ಗೌರವ ನೀಡಲು ನಾವು ಬದ್ಧ. ನಿಮ್ಮಲ್ಲಿ ಕೀಳರಿಮೆ ಬೇಡ, ನಿಮ್ಮ ಮೂಲ ಬದುಕನ್ನು ಹೆಮ್ಮೆಯಿಂದ ಬದುಕಿ. ಎಸ್ಐಆರ್ ಪ್ರಕ್ರಿಯೆಯಲ್ಲಿ ನಿಮ್ಮ ಮತದಾನ ಹಕ್ಕು ಕಾಪಾಡಿಕೊಳ್ಳಿ. ನಿಮಗೆ ಜಾತಿ ಹಾಗೂ ವಾಸ ದೃಢೀಕರಣ ಪತ್ರ ನೀಡಲು ಮುಂದಾಗಿದ್ದೇವೆ” ಎಂದು ತಿಳಿಸಿದರು.

ತಮಿಳುನಾಡಿಗೆ ಕಾವೇರಿ ನೀರು: ರಾಜ್ಯದ ನೀರಿನ ಪರಿಸ್ಥಿತಿ ಪರಿಶೀಲಿಸಿದ ನಂತರ ಮುಂದಿನ ತೀರ್ಮಾನ

“ರಾಜ್ಯದ ನೀರಿನ ಪರಿಸ್ಥಿತಿಯನ್ನು ಕೂಲಂಕುಷವಾಗಿ ಪರಿಶೀಲಿಸಿದ ನಂತರ ತಮಿಳುನಾಡಿಗೆ 12,000 ಕ್ಯೂಸೆಕ್ಸ್ ಕಾವೇರಿ ನೀರು ಹರಿಸುವ, ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಆದೇಶದ ಬಗ್ಗೆ ಮುಂದಿನ ಕ್ರಮ ಕೈಗೊಳ್ಳಲಾಗುವುದು” ಎಂದು ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು. “ನ್ಯಾಯಾಲಯದ ಆದೇಶವನ್ನು ಪಾಲಿಸುವುದರ ಜೊತೆಗೆ ರೈತರ ಹಿತಾಸಕ್ತಿಯನ್ನು ರಕ್ಷಿಸುವ ಅಗತ್ಯವನ್ನು ಅವರು ಪ್ರತಿಪಾದಿಸಿದರು. ಎರಡೂ ಅಂಶಗಳನ್ನು ಪರಿಗಣಿಸಿ, ಈ ವಿಷಯದ ಕುರಿತು ನೀರಾವರಿ ಸಚಿವರೊಂದಿಗೆ ಈಗಾಗಲೇ ಚರ್ಚಿಸಿರುವುದಾಗಿ” ಎಂದು ಅವರು ತಿಳಿಸಿದರು.

“ರಾಜ್ಯದ ನದಿಗಳಿಗೆ ಹರಿದು ಬರುತ್ತಿರುವ ಒಳಹರಿವನ್ನು ನಿಕಟವಾಗಿ ಗಮನಿಸಲಾಗುತ್ತಿದೆ. ರೈತರೊಂದಿಗೆ ಸ್ಥಳೀಯ ಸಭೆಗಳನ್ನು ಮಾಡಿ ಬೆಳೆಗಳ ಬಗ್ಗೆ ಚರ್ಚಿಸಬೇಕು. ಕೇವಲ ಕಾವೇರಿ ಮಾತ್ರವಲ್ಲದೆ ತುಂಗಭದ್ರಾ ಮತ್ತು ಆಲಮಟ್ಟಿ ಸೇರಿದಂತೆ ಎಲ್ಲಾ ಜಲಾಶಯಗಳಲ್ಲಿನ ನೀರು ಸಂಗ್ರಹಣೆಯನ್ನು ಗಮನದಲ್ಲಿಟ್ಟುಕೊಂಡು ಬೆಳೆ ಬೆಳೆಯುವ ಕುರಿತು ನಿರ್ಧಾರ ಕೈಗೊಳ್ಳಬೇಕು” ಎಂದು ಹೇಳಿದರು.

ರೈತರು ಪ್ರತಿಭಟನೆ ನಡೆಸುವ ಸಾಧ್ಯತೆ ಕುರಿತು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, “ನಾನು ಪಾರದರ್ಶಕವಾಗಿ ಕೆಲಸ ಮಾಡುತ್ತೇನೆ. ರಾಜಕೀಯ ಮಾಡುವವರು, ಮಾಧ್ಯಮಗಳ ಮುಂದೆ ಮಾತನಾಡುವವರಿಗಾಗಿ ನಿರ್ಧಾರ ಕೈಗೊಳ್ಳುವುದಿಲ್ಲ. ಯಾರೂ ನೀರನ್ನು ತಡೆಹಿಡಿಯಲು ಸಾಧ್ಯವಿಲ್ಲ. ಜನರು ಸಂಯಮದಿಂದಿರಬೇಕು. ನಾವು ನಿಮ್ಮೊಂದಿಗಿದ್ದೇವೆ, ನಿಮಗಾಗಿಯೇ ಇದ್ದೇವೆ. ರೈತರನ್ನು ರಕ್ಷಿಸಲು ಜನರು ನಮಗೆ ಅಧಿಕಾರ ನೀಡಿದ್ದಾರೆ. ಯಾವುದೇ ಕಾರಣಕ್ಕೂ ಯಾವುದೇ ರೈತರಿಗೂ ತೊಂದರೆಯಾಗಲು ನಾವು ಬಿಡುವುದಿಲ್ಲ. ನಾವು ಸಮಾಧಾನದಿಂದಿದ್ದರೆ, ಎಲ್ಲ ಸಮಸ್ಯೆಗಳೂ ಸೌಹಾರ್ದಯುತವಾಗಿ ಬಗೆಹರಿಯಲಿವೆ. ಪ್ರಕೃತಿಯೇ ನಮ್ಮನ್ನು ಕಾಪಾಡುತ್ತದೆ” ಎಂದರು.

ಬುಧವಾರ ಕರೆಯಲಾಗಿರುವ ಸಚಿವರುಗಳ ಸಭೆ ಬಗ್ಗೆ ಕೇಳಿದಾಗ, “ಮಾರ್ಗದರ್ಶನ ನೀಡಲು ಮತ್ತು ಪಕ್ಷದ ಮುಂದಿನ ಯೋಜನೆಗಳ ಕುರಿತು ಚರ್ಚಿಸಲು ಸಚಿವರು ಹಾಗೂ ಪಕ್ಷದ 15 ನಾಯಕರುಗಳೊಂದಿಗೆ ಬುಧವಾರ ರಾಜಕೀಯ ಸಭೆಯನ್ನು ಕರೆಯಲಾಗಿದೆ. ಗುರುವಾರ ಸಂಪುಟ ಸಭೆ ನಿಗದಿಯಾಗಿದೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ವಿರುದ್ಧ ನಿಂದನೆ ಆರೋಪ: ಸಾಕ್ಷ್ಯವಿಲ್ಲವೆಂದು ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ನಿಂದನಾತ್ಮಕ ಪದಗಳನ್ನು ಬಳಸಿದ್ದಾರೆ ಎಂಬ...

ಚಿಕ್ಕಮಗಳೂರು |ರಾಜ್ಯದಲ್ಲಿ ಪ್ರಸ್ತುತ 9,೦೦೦ಕ್ಕೂ ಹೆಚ್ಚು ಪೋಕ್ಸೋ ಪ್ರಕರಣ

ಚಿಕ್ಕಮಗಳೂರು ನಗರದ ಕುವೆಂಪು ಕಲಾಮಂದಿರದಲ್ಲಿ ಕಾನೂನು ಅರಿವು ಕಾರ್ಯಕ್ರಮದಲ್ಲಿ ಹಿರಿಯ ನ್ಯಾ....

ಚಿಕ್ಕಮಗಳೂರು | ಮಕ್ಕಳ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ನ್ಯಾ. ಹೆಚ್. ಶಶಿಧರ್ ಶೆಟ್ಟಿ

ಮಕ್ಕಳ ಹಕ್ಕುಗಳನ್ನು ರಕ್ಷಿಸುವುದು ಕೇವಲ ಸರ್ಕಾರ, ಇಲಾಖೆಗಳು ಅಥವಾ ಸರ್ಕಾರೇತರ ಸಂಸ್ಥೆಗಳ...