ಸಮೀಕ್ಷೆ ಕಾರ್ಯ ಗಂಭೀರವಾಗಿ ಪರಿಗಣಿಸಿ ಪೂರ್ಣಗೊಳಿಸಿ: ಡಿಸಿಗಳಿಗೆ ಸಿಎಂ ಖಡಕ್ ಸೂಚನೆ

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿ ಬಗ್ಗೆ ಕೃಷ್ಣಾದಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್ ನಡೆಸಿದರು.

- Advertisement -

ಸಮೀಕ್ಷೆ ಕಾರ್ಯ ರಾಜ್ಯಾದ್ಯಂತ ಆರಂಭವಾಗಿದ್ದು, ಆರಂಭದಲ್ಲಿ ಕೆಲವು ತಾಂತ್ರಿಕ ತೊಂದರೆಗಳ ಕಾರಣ ಸಮೀಕ್ಷೆ ನಿಧಾನವಾಗಿತ್ತು. ಈಗ ಎಲ್ಲಾ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಲಾಗಿದೆ. ಇಂದಿನಿಂದ ಸಮೀಕ್ಷೆ ಕಾರ್ಯವನ್ನು ಚುರುಕುಗೊಳಿಸಲು ಎಲ್ಲ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸಭೆಯಲ್ಲಿ ಸಿಎಂ ಸೂಚನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

“ಸಮೀಕ್ಷೆ ಕಾರ್ಯಕ್ಕೆ ಯಾವುದೇ ತಾಂತ್ರಿಕ ತೊಂದರೆಗಳು ಉಂಟಾಗದಂತೆ ಎಚ್ಚರಿಕೆ ವಹಿಸಬೇಕು. ತಾಂತ್ರಿಕ ತೊಂದರೆಗಳು ಎದುರಾದರೆ ತಕ್ಷಣ ಅದನ್ನು ಬಗೆಹರಿಸಲು ಕ್ರಮ ಕೈಗೊಳ್ಳಬೇಕು. ಸಮೀಕ್ಷೆ ಕಾರ್ಯವನ್ನು ಎಲ್ಲ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ಪೂರ್ಣಗೊಳಿಸಬೇಕು” ಎಂದರು.

“ರಾಜ್ಯದಲ್ಲಿ ಒಟ್ಟು 1,43,81,702 ಕುಟುಂಬಗಳ ಸಮೀಕ್ಷೆ ಕಾರ್ಯವನ್ನು ನಡೆಸಬೇಕಾಗಿದ್ದು, ಇದುವರೆಗೆ 2,76,016 ಕುಟುಂಬಗಳ ಸಮೀಕ್ಷೆ ಕಾರ್ಯ ಪೂರ್ಣಗೊಳಿಸಲಾಗಿದೆ. ಸಮೀಕ್ಷೆ ಕಾರ್ಯಕ್ಕೆ ಒಟ್ಟು 1,20,728 ಗಣತಿದಾರರನ್ನು ನಿಯೋಜಿಸಲಾಗಿದೆ. ಒಟ್ಟು 1,22,085 ಗಣತಿ ಬ್ಲಾಕ್‌ಗಳನ್ನು ಗುರುತಿಸಲಾಗಿದೆ. ಅಕ್ಟೋಬರ್‌ 7ರ ಒಳಗಾಗಿ ಗಣತಿ ಕಾರ್ಯ ಪೂರ್ಣಗೊಳ್ಳಬೇಕು. ಸಮೀಕ್ಷೆ ಕಾರ್ಯಕ್ಕೆ ನಿಯೋಜಿಸಿರುವ ಎಲ್ಲಾ ಶಿಕ್ಷಕರು ತಮಗೆ ವಹಿಸಲಾಗಿರುವ ಕಾರ್ಯವನ್ನು ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಬೇಕು. ಯಾವುದೇ ಶಿಕ್ಷಕರು ಗಣತಿ ಕಾರ್ಯಕ್ಕೆ ಅಸಹಕಾರ ತೋರಿಸಬಾರದು. ಇದು ಸರ್ಕಾರಿ ಕೆಲಸವಾಗಿದ್ದು, ಕರ್ತವ್ಯದಲ್ಲಿ ನಿರ್ಲಕ್ಷ್ಯ ವಹಿಸಬಾರದು. ನಿರ್ಲಕ್ಷ್ಯ ವಹಿಸುವ ಗಣತಿದಾರರ ಮೇಲೆ ಕ್ರಮ ಕೈಗೊಳ್ಳಬೇಕು” ಎಂದು ಸೂಚಿಸಿದರು.

“ಶಿಕ್ಷಕರಿಗೆ ಗೌರವಧನದ ಬಗ್ಗೆ ಯಾವುದೇ ಅನುಮಾನ ಬೇಡ. ಈಗಾಗಲೇ ಗೌರವಧನವನ್ನು ಬಿಡುಗಡೆ ಮಾಡಿದ್ದೇವೆ. ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರು ಗಣತಿ ಕಾರ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಇದು ಕೇವಲ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಮೀಕ್ಷೆಯಲ್ಲ. ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ನಿಗದಿತ ಗುರಿಯ ಪ್ರಗತಿ ಬಗ್ಗೆ ಪ್ರತಿ ದಿನ ಪರಿಶೀಲನೆ ನಡೆಸಬೇಕು. ಕಂದಾಯ ಇಲಾಖೆ, ಪಂಚಾಯತ್‌ ರಾಜ್‌ ಇಲಾಖೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು” ಎಂದು ಹೇಳಿದರು.

“ಕೆಲವು ಜಿಲ್ಲೆಗಳಲ್ಲಿ ಸಮೀಕ್ಷೆ ನಿಧಾನಗತಿಯಲ್ಲಿದ್ದು, ಚುರುಕುಗೊಳಿಸಬೇಕು. ಅಗತ್ಯವಿರುವ ಕಡೆ ಅನುದಾನಿತ ಶಾಲೆಗಳ ಶಿಕ್ಷಕರ ಸೇವೆಯನ್ನು ಪಡೆದುಕೊಳ್ಳಬೇಕು. ಜಿಲ್ಲಾ ಉಸ್ತುವಾರಿ ಸಚಿವರೊಂದಿಗೂ ಈ ಕುರಿತು ಸಂಪರ್ಕದಲ್ಲಿರಬೇಕು. ಸಮೀಕ್ಷೆ ಕಾರ್ಯದ ಮೇಲ್ವಿಚಾರಣೆ ನಡೆಸಲು ಪ್ರತಿ ತಾಲೂಕಿಗೆ ಜಿಲ್ಲಾ ಮಟ್ಟದ ಅಧಿಕಾರಿಯನ್ನು ನೋಡಲ್‌ ಅಧಿಕಾರಿಯಾಗಿ ನೇಮಕ ಮಾಡಿ” ಎಂದು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ವಿರೋಧದ ನಡುವೆಯೂ ಕಾವೇರಿಗೆ ಕಾಂಗ್ರೆಸ್ಸಿಗರ ಮೊಂಡಾರತಿ

“ಜಿಲ್ಲಾ ಮಟ್ಟದಲ್ಲಿ ಯಾವುದೇ ತಾಂತ್ರಿಕ ತೊಂದರೆಗಳು ಎದುರಾದರೆ ಸ್ಥಳೀಯವಾಗಿ ಸಮಸ್ಯೆ ಬಗೆಹರಿಸಲು ಜಿಲ್ಲಾ ಮಟ್ಟದಲ್ಲಿ ವಿವಿಧ ಇಲಾಖೆಗಳಲ್ಲಿರುವ ಐಟಿ ತಂತ್ರಜ್ಞರ ನೆರವನ್ನು ಪಡೆದುಕೊಳ್ಳಬೇಕು. ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ ಸಮೀಕ್ಷೆ ಕಾರ್ಯ ಇಂದಿನಿಂದ ಆರಂಭವಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಸುಮಾರು 50ಲಕ್ಷ ಮನೆಗಳಿದ್ದು, ಆದಷ್ಟು ಬೇಗನೆ ಗಣತಿ ಕಾರ್ಯವನ್ನು ಪ್ರಾರಂಭಿಸಲು ಕ್ರಮ ಕೈಗೊಳ್ಳಬೇಕು. ರಾಜ್ಯದ ಪ್ರತಿಯೊಂದು ಕುಟುಂಬಗಳ ಸಮೀಕ್ಷೆ ಕಾರ್ಯವನ್ನು ಕೈಗೊಳ್ಳಬೇಕು. ಯಾವುದೇ ಕುಟುಂಬ ಸಮೀಕ್ಷೆಯಿಂದ ಹೊರಗುಳಿಯದಂತೆ ಎಚ್ಚರಿಕೆ ವಹಿಸಬೇಕು” ಎಂದು ತಿಳಿಸಿದರು.

“ಗುಡ್ಡಗಾಡು ಪ್ರದೇಶಗಳ ವ್ಯಾಪ್ತಿಯಲ್ಲಿ ಶಾಲೆಗಳಲ್ಲಿ ಸಮೀಕ್ಷೆ ಕೇಂದ್ರಗಳನ್ನು ಆರಂಭಿಸಲು ಅವಕಾಶ ನೀಡಲಾಗಿದೆ. ಜನರು ಕೇಂದ್ರಕ್ಕೆ ಬಂದು ಸಮೀಕ್ಷೆ ಕಾರ್ಯದಲ್ಲಿ ಪಾಲ್ಗೊಳ್ಳಬಹುದಾಗಿದೆ. ಆನ್‌ಲೈನ್‌ ಮೂಲಕ ಸಹ ಸಮೀಕ್ಷೆ ಕಾರ್ಯದಲ್ಲಿ ಭಾಗಿಯಾಗಲು ಅವಕಾಶ ಕಲ್ಪಿಸಲಾಗಿದ್ದು, ಇದರ ಪ್ರಯೋಜನ ಪಡೆದುಕೊಳ್ಳಬೇಕು. ಸಮೀಕ್ಷೆ ಸಂದರ್ಭದಲ್ಲಿ ಮನೆಗಳಿಗೆ ಬೀಗ ಹಾಕಿದ್ದರೆ, ಅಂತಹ ಮನೆಗಳಲ್ಲೂ ಗಣತಿ ಕಾರ್ಯವನ್ನು ಮುಂದಿನ ದಿನಗಳಲ್ಲಿ ಕೈಗೊಳ್ಳಲು ಕ್ರಮ ಕೈಗೊಳ್ಳಬೇಕು” ಎಂದು ಹೇಳಿದರು.

“ಪ್ರತಿ ದಿನ ಜಿಲ್ಲಾವಾರು ಕನಿಷ್ಠ ಶೇಕಡಾ 10ರಷ್ಟು ಸಮೀಕ್ಷೆ ಗುರಿಯನ್ನು ಸಾಧಿಸಬೇಕು. ಪ್ರಾದೇಶಿಕ ಆಯುಕ್ತರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಸಮೀಕ್ಷೆ ಪ್ರಗತಿಯ ಪರಿಶೀಲನೆ ನಡೆಸಬೇಕು ಮತ್ತು ಸಕ್ರಿಯವಾಗಿ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲು ಸೂಚನೆ ನೀಡಲಾಗಿದೆ. ಸಮೀಕ್ಷೆ ಕಾರ್ಯದಲ್ಲಿ ನಿರ್ಲಕ್ಷ್ಯ ವಹಿಸುವ ಗಣತಿದಾರರ ಮೇಲೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಿ” ಎಂದರು.

ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಎಚ್.ಕೆ.ಪಾಟೀಲ್, ಶಿವರಾಜ ತಂಗಡಗಿ, ಕೃಷ್ಣ ಭೈರೇಗೌಡ, ರಹೀಂ ಖಾನ್, ಭೈರತಿ ಸುರೇಶ್, ಮಧು ಬಂಗಾರಪ್ಪ, ಬೋಸರಾಜು, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ ನಾಯ್ಕ್‌, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್‌ ಅಹ್ಮದ್, ಕಾನೂನು ಸಲಹೆಗಾರ ಪೊನ್ನಣ್ಣ, ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್‌ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಸ್ಲಿಮರನ್ನು ಗುರಿಯಾಗಿಸಿ ಮತದಾನದ ಹಕ್ಕು ಕಸಿಯುವ ತಂತ್ರವೇ ‘SIR’: ಶಿವಸುಂದರ್

“SIR ರದ್ದಾಗಬೇಕು; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಎಂಬುದಷ್ಟೇ ನಮ್ಮ ಹೋರಾಟವಲ್ಲ,...

SIR ವಿರುದ್ಧ ರಾಜ್ಯಾದ್ಯಂತ ಹೋರಾಟಕ್ಕೆ INDIA ಮೈತ್ರಿಕೂಟ ಸಜ್ಜು; ಸಮನ್ವಯ ಸಮಿತಿ ರಚನೆಗೆ ನಿರ್ಧಾರ

ಸಂವಿಧಾನ, ಪ್ರಜಾಪ್ರಭುತ್ವ ಮತ್ತು ಮತದಾನದ ಹಕ್ಕಿನ ರಕ್ಷಣೆಗಾಗಿ ಕರ್ನಾಟಕದಲ್ಲಿ INDIA ಮೈತ್ರಿಕೂಟದ...

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣ ವಚನ ಸ್ವೀಕಾರ

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಅವರು ಶುಕ್ರವಾರ ಅಧಿಕಾರ...

ಚರ್ಚ್‌ನಲ್ಲಿ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ; ಫಾದರ್ ವಿರುದ್ಧ ಪೋಕ್ಸೋ ಕೇಸ್

ಪ್ರಾರ್ಥನೆಗಾಗಿ ಚರ್ಚ್‌ಗೆ ತೆರಳುತ್ತಿದ್ದ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ...