ರಸಗೊಬ್ಬರ ಕಾಳಸಂತೆಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಪೊಲೀಸ್ ಮಹಾ ನಿರ್ದೇಶಕರಿಗೆ ಸಿಎಂ ಸೂಚನೆ

Date:

ಕೇಂದ್ರ ಸರ್ಕಾರ ರಾಜ್ಯಕ್ಕೆ ಅಗತ್ಯವಾದ ರಸಗೊಬ್ಬರ ಸರಬರಾಜು ಮಾಡದೆ ಅನ್ಯಾಯ ಎಸಗಿರುವ ಸಂದರ್ಭದಲ್ಲಿ ಕಾಳಸಂತೆಕೋರರು ತಲೆ ಎತ್ತದಂತೆ ತೀವ್ರ ನಿಗಾ ವಹಿಸಿ, ಕಠಿಣ ಕ್ರಮ ಕೈಗೊಳ್ಳುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ.

- Advertisement -

ಕೇಂದ್ರ ಸರ್ಕಾರದ ಅಸಹಾಕಾರದ ನಡುವೆಯೂ ರಾಜ್ಯದ ರೈತರಿಗೆ ಅನಾನುಕೂಲ ಆಗದಂತೆ ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳುತ್ತಿದೆ. ಈ ನಡುವೆ ರಸಗೊಬ್ಬರಕ್ಕೆ ಕೃತಕ ಅಭಾವ ಸೃಷ್ಟಿಸಿ ದುರ್ಲಾಭ ಮಾಡಿಕೊಳ್ಳಲು ಕಾಳಸಂತೆಕೋರರು ಪ್ರಯತ್ನಿಸುತ್ತಿರುವ ಬಗ್ಗೆ ತೀವ್ರ ನಿಗಾ ವಹಿಸುವಂತೆ ಸಿಎಂ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ವಿಧಾನಸೌಧದ ತಮ್ಮ ಕಚೇರಿಯಲ್ಲಿ ಸಚಿವರು ಮತ್ತು ಶಾಸಕರುಗಳ ಜೊತೆ ಸಭೆ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆಯ ನಡುವೆಯೇ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ದೂರವಾಣಿ ಮೂಲಕ ಮಾತನಾಡಿ ಸ್ಪಷ್ಟ ಸೂಚನೆ ನೀಡಿದ್ದಾರೆ.

ಜಿಲ್ಲೆ ಮತ್ತು ತಾಲ್ಲೂಕು, ಹೋಬಳಿ ಎಲ್ಲೂ ರಸಗೊಬ್ಬರಕ್ಕೆ ಕೃತಕ ಅಭಾವ ಸೃಷ್ಠಿಯಾಗಬಾರದು. ಈ ರೀತಿ ಅಭಾವ ಸೃಷ್ಟಿಸುತ್ತಿರುವವರ ಬಗ್ಗೆ ತೀವ್ರ ನಿಗಾ ಇಟ್ಡು ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

Form 7 ಅರ್ಜಿ ವಿವಾದ; ತನಿಖೆಗೆ SIT ರಚನೆಗೆ ಸರ್ಕಾರ ಚಿಂತನೆ

ರಾಜ್ಯದಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸುವ ಉದ್ದೇಶದಿಂದ ಬೃಹತ್‌ ಪ್ರಮಾಣದಲ್ಲಿ Form...

ಎಸ್‌ಐಆರ್ ವಿರೋಧಿ ಹೋರಾಟ: ಯುವ ಪೀಳಿಗೆಗೆ ಕರ್ನಾಟಕ ನಾಗರಿಕ ಸಮಾಜ ಬೆಂಬಲ, ಕೇಂದ್ರ ಸರ್ಕಾರಕ್ಕೆ ನೂರ್ ಶ್ರೀಧರ್ ಎಚ್ಚರಿಕೆ

ದೆಹಲಿಯಲ್ಲಿ ನಡೆಯಲಿರುವ ಎಸ್‌ಐಆರ್ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿರುವ ಯುವ ಹೋರಾಟಗಾರರ ಮೇಲೆ...

ಮೋಶಾ ಜೋಡಿ ಪ್ರಜಾಪ್ರಭುತ್ವದ ಹತ್ಯೆಗೆ ಸಂಚು ರೂಪಿಸಿದೆ; ಅಭಿಜೀತ್ ದೀಪ್ಕೆ

ಕೇಂದ್ರದ ಬಿಜೆಪಿ ಸರ್ಕಾರ ಹಾಗೂ ಚುನಾವಣಾ ಆಯೋಗವು ಸೇರಿ ದೇಶದಲ್ಲಿ...

ಎಸ್‌ಐಆರ್ ವಿರುದ್ಧದ ಹೋರಾಟ ಜನರ ಹಕ್ಕಿನ ಹೋರಾಟ: ಪ್ರಕಾಶ್ ರಾಜ್

“ಕಳೆದ ಒಂದು ವರ್ಷದಿಂದ ಕರ್ನಾಟಕದ ನಾಗರಿಕ ಸಂಘಟನೆಗಳು ಎಸ್‌ಐಆರ್ ವಿರುದ್ಧ ನಡೆಸುತ್ತಿರುವ...