ಬಂಡೀಪುರ-ನಾಗರಹೊಳೆಯಲ್ಲಿ ಸುರಕ್ಷಿತ ಸಫಾರಿಗೆ ಸಿಎಂ ಸೂಚನೆ

Date:

ರಾಜ್ಯದ ಪ್ರಮುಖ ಪ್ರವಾಸಿತಾಣಗಳಾದ ಬಂಡೀಪುರ ಮತ್ತು ನಾಗರಹೊಳೆ ರಾಷ್ಟ್ರೀಯ ಉದ್ಯಾನಗಳಲ್ಲಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಸಫಾರಿ ಹಾಗೂ ಪರಿಸರ ಪ್ರವಾಸೋದ್ಯಮ ಚಟುವಟಿಕೆಗಳನ್ನು ಪುನರಾರಂಭಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

- Advertisement -

ವಿಧಾನಸೌಧದಲ್ಲಿ ನಡೆದ ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಿಎಂ, ಪ್ರವಾಸಿಗರ ಸುರಕ್ಷತೆಗೆ ಮೊದಲ ಆದ್ಯತೆ ನೀಡುವಂತೆ ಸೂಚಿಸಿದರು. ಈ ಉದ್ಯಾನಗಳಲ್ಲಿ ಹುಲಿ ಮತ್ತು ಚಿರತೆಗಳು ಹೆಚ್ಚಿರುವುದರಿಂದ, ಮಾನವ-ವನ್ಯಜೀವಿ ಸಂಘರ್ಷಕ್ಕೆ ಅವಕಾಶವಿಲ್ಲದಂತೆ ಎಚ್ಚರಿಕೆ ವಹಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಮಾನತೆಯ ಮರೆಯಲ್ಲಿ ಅಸಮಾನತೆಯ ನೆರಳು: ಹಸಿರು ಕನಸುಗಳ ಕಾಲಡಿಯಲ್ಲಿ...

ದೇಶದಲ್ಲಿ ಬಡತನ ಇಳಿಕೆಯಾಗುತ್ತಿದೆ, ಅಭಿವೃದ್ಧಿಯ ಅಂಕಿಅಂಶಗಳು ಏರುತ್ತಿವೆ. ಆದರೆ, ಆರ್ಥಿಕ ಪ್ರಗತಿಯ ನಡುವೆಯೂ ಶ್ರಮಜೀವಿಗಳ ಬದುಕಿನಲ್ಲಿ ಬಡತನ, ಜಾತಿ ತಾರತಮ್ಯ ಮತ್ತು ಅಸಮಾನತೆ ಏಕೆ ಮುಂದುವರಿದಿವೆ? ಅಭಿವೃದ್ಧಿಯ ಫಲ ಸಮಾಜದ ಕಟ್ಟಕಡೆಯ ಮನುಷ್ಯನಿಗೂ...

ಬಾಗಲಕೋಟೆ | ಸಾಕ್ಷರತೆಯಲಿ ಹಿಂದುಳಿದ ಜಿಲ್ಲೆ ʻಅಕ್ಷರ ಕ್ರಾಂತಿಗೆʼ...

ಮುಳುಗಡೆ ನಗರಿ ಬಾಗಲಕೋಟೆ ಜಿಲ್ಲೆ ಇಂದು ಕಬ್ಬಿನ ಬೆಲೆ ಹೋರಾಟದಲ್ಲಿ ಗೆಲುವು ಸಾಧಿಸಿ ಸಂಭ್ರಮಿಸುತ್ತಿದೆ. ಇದೇ ಸಂಭ್ರಮ ಶಿಕ್ಷಣ ಕ್ಷೇತ್ರದಲ್ಲಿಯೂ ಕಾಣಿಸಿಕೊಳ್ಳಬೇಕಿದೆ. ಆದರೆ, ಸಾಕ್ಷರತೆ, ಶಿಕ್ಷಕರ ಕೊರತೆ ಹಾಗೂ ಡಿಜಿಟಲ್ ಸೌಲಭ್ಯಗಳ ಅಭಾವ...

25ರ ಹರೆಯದಲ್ಲೇ ಬ್ರಿಟಿಷ್ ಸಾಮ್ರಾಜ್ಯಕ್ಕೆ ಸಿಂಹಸ್ವಪ್ನವಾದ ಆದಿವಾಸಿ ಕ್ರಾಂತಿಕಾರಿ...

ಕೇವಲ 25 ವರ್ಷಗಳ ಬದುಕಿನಲ್ಲಿ ಬ್ರಿಟಿಷ್ ಸಾಮ್ರಾಜ್ಯಶಾಹಿ ಆಡಳಿತಕ್ಕೆ ಸವಾಲು ಹಾಕಿ, ಸಾವಿರಾರು ಆದಿವಾಸಿಗಳನ್ನು ಸಂಘಟಿಸಿ, ಭೂಮಿಯ ಹಕ್ಕು ಮತ್ತು ಸ್ವಯಂ ಆಡಳಿತಕ್ಕಾಗಿ ಬೃಹತ್ ಚಳವಳಿಯನ್ನು ಕಟ್ಟಿದ ಬಿರ್ಸಾ ಮುಂಡಾ ಅವರು ಕೇವಲ...

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್‌ನಲ್ಲಿ ತಾಂತ್ರಿಕ ನೆಪಗಳನ್ನು ಮುಂದಿಟ್ಟು ತಕರಾರು ಹೂಡುತ್ತಿರುವ ವಿಚಾರದ ಬಗ್ಗೆ ಸಿಎಂ ಗಮನ ಹರಿಸಿದರು. ಯೋಜನೆಯ ಅನುಷ್ಠಾನಕ್ಕೆ ಇರುವ ಸಣ್ಣಪುಟ್ಟ ತಾಂತ್ರಿಕ ಸಮಸ್ಯೆಗಳನ್ನು ತುರ್ತಾಗಿ ಪರಿಶೀಲಿಸಿ, ಅವುಗಳನ್ನು ಪರಿಣಾಮಕಾರಿಯಾಗಿ ಬಗೆಹರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ನಿರ್ಮಾಣದ ವೇಳೆ ವನ್ಯಜೀವಿಗಳ ಸುರಕ್ಷಿತ ಸಂಚಾರಕ್ಕಾಗಿ ಅಗತ್ಯವಿರುವ ಅಂಡರ್‌ಪಾಸ್ ಮತ್ತು ಓವರ್‌ಪಾಸ್‌ಗಳನ್ನು ನಿರ್ಮಿಸಬೇಕೆಂಬ ಷರತ್ತು ಪಾಲನೆಯಾಗಿಲ್ಲ. ಇದರಿಂದ ಆನೆ, ಹುಲಿ ಸೇರಿದಂತೆ ವನ್ಯಜೀವಿಗಳ ಸಾಂಪ್ರದಾಯಿಕ ಮಾರ್ಗಕ್ಕೆ ಅಡ್ಡಿಯಾಗಿದ್ದು, ಇವು ರಾಮನಗರ ಹಾಗೂ ಚನ್ನಪಟ್ಟಣ ಭಾಗದತ್ತ ಬಂದು ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಾಗಲು ಕಾರಣವಾಗಿದೆ ಎಂದು ಅಧಿಕಾರಿಗಳು ಸಭೆಯಲ್ಲಿ ವಿವರಿಸಿದರು.

ಇದನ್ನೂ ಓದಿ: ನಶೆ ಮುಕ್ತ ಕರ್ನಾಟಕಕ್ಕೆ ಸಿಎಂ ಡಿಕೆಶಿ ಕರೆ: ಡ್ರಗ್ಸ್ ಮಾಹಿತಿ ನೀಡುವವರಿಗೆ ಬಹುಮಾನ!

ಬಿಬಿಎಂಪಿ ವ್ಯಾಪ್ತಿಯಲ್ಲಿ ಅಪಾಯದ ಸ್ಥಿತಿಯಲ್ಲಿರುವ ಮರಗಳು ಮತ್ತು ಕೊಂಬೆಗಳನ್ನು ತೆರವುಗೊಳಿಸುವ ಕುರಿತು ನೀಡಿದ ಸೂಚನೆಯನ್ನು ಸಮರ್ಪಕವಾಗಿ ಪಾಲಿಸದಿರುವ ಬಗ್ಗೆ ಸಿಎಂ ಅಸಮಾಧಾನ ವ್ಯಕ್ತಪಡಿಸಿದರು. ಮಳೆಗಾಲದಲ್ಲಿ ಇವುಗಳಿಂದ ಸಂಭವಿಸುತ್ತಿರುವ ಅಪಘಾತಗಳನ್ನು ತಡೆಯಲು ತುರ್ತಾಗಿ ಮರಗಳನ್ನು ಗುರುತಿಸಿ ತೆರವುಗೊಳಿಸಲು ನಿರ್ದೇಶನ ನೀಡಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ |ಗೋಕಾಕದಲ್ಲಿ ಭೀಕರ ರಸ್ತೆ ಅಪಘಾತ: ನಾಲ್ವರ ಪ್ರಯಾಣಕ್ಕೆ ವಿಧಿಯ ಬ್ರೇಕ್; ಮಗು ಸೇರಿ ಮೂವರ ದುರ್ಮರಣ!

ಸಂಕೇಶ್ವರ–ನರಗುಂದ ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತವೊಂದು ಒಂದೇ ಕುಟುಂಬದ...

ಬೀದರ್‌ | ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಉಚಿತ ಕಾರ್ಯಾಗಾರ

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ಅಭ್ಯರ್ಥಿಗಳಿಗಾಗಿ ನಗರದ ಜ್ಞಾನಸೂರ್ಯ ಸ್ಪರ್ಧಾ ಅಕಾಡೆಮಿಯು...

ಮಂಗಳೂರಿನಲ್ಲಿ ನಡೆದ ಒಂದು ದಿನದ ಸಂಪುಟ ಸಭೆಗೆ 3.83 ಕೋಟಿ ರೂ. ಖರ್ಚು!

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಸೆಪ್ಟೆಂಬರ್ 18ರಂದು ನಡೆದ ರಾಜ್ಯ ಸಚಿವ...

ದೋಷಪೂರಿತ ಬ್ರೇಕ್‌ನೊಂದಿಗೆ 463 ಕಿ.ಮೀ ಸಂಚರಿಸಿದ ವಂದೇ ಭಾರತ್‌ ರೈಲು; ತನಿಖೆಗೆ ಆದೇಶ

ಸರಿಯಾದ ಬ್ರೇಕ್‌ ವ್ಯವಸ್ಥೆಯಿಲ್ಲದೆ ಖಾಲಿ ವಂದೇ ಭಾರತ್‌ ರೈಲೊಂದು 463 ಕಿ.ಮೀ...