ಮುಖ್ಯಮಂತ್ರಿಯಾಗಿ ಎಂಟನೇ ದಸರಾ ಉದ್ಘಾಟಿಸಿದ್ದನ್ನು ಉಲ್ಲೇಖಿಸಿದ ಸಿಎಂ

Date:

Advertisements

ಪಂಡಿತ್ ವೆಂಕಟೇಶ್ ಕುಮಾರ್ ಅವರಿಗೆ ಸಂಗೀತ ವಿದ್ವಾನ್ ಪ್ರಶಸ್ತಿ ಪುರಸ್ಕಾರ ಆಗಿರುವುದು ಕೇವಲ ಅವರ ಸಂಗೀತ ಸಾಧನೆಗೆ ಸಿಕ್ಕ ಗೌರವ ಅಲ್ಲ, ನಮ್ಮನ್ನು ನಾವೇ ಗೌರವಿಸಿಕೊಂಡಂತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ವುಗೆ ವ್ಯಕ್ತಪಡಿಸಿದರು.

ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಉದ್ಘಾಟಿಸಿ, ಪಂಡಿತ್ ವೆಂಕಟೇಶ್ ಕುಮಾರ್ ಅವರಿಗೆ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.

ಇದೇ ಸಂದರ್ಭದಲ್ಲಿ ತಾವು ಮುಖ್ಯಮಂತ್ರಿಯಾಗಿ ಎಂಟನೇ ದಸರಾ ಉದ್ಘಾಟಿಸಿದನ್ನು ಸಿಎಂ ಸಿದ್ದರಾಮಯ್ಯ ಉಲ್ಲೇಖಿಸಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ‘ಆಳಂದ’ ಕ್ಷೇತ್ರದ ಆಕ್ಷೇಪಕ್ಕೆ ಅರೆಬರೆ ಉತ್ತರಕೊಟ್ಟ ಚುನಾವಣಾ ಆಯೋಗ

ದಸರಾ ಪ್ರಯುಕ್ತ ಪ್ರತಿ ವರ್ಷ ಸಂಗೀತ ವಿದ್ವಾನ್ ಪ್ರಶಸ್ತಿ ನೀಡಲಾಗುತ್ತಿದ್ದು, ಈ ಬಾರಿ ಪುಟ್ಟರಾಜ ಗವಾಯಿಗಳ ಗರಡಿಯಲ್ಲಿ ಪಳಗಿದ ಪಂಡಿತ್ ವೆಂಕಟೇಶ್ ಕುಮಾರ್ ಅವರಿಗೆ ನೀಡಲಾಗಿದೆ. ಅತಿ ಬಡತನದ ಕುಟುಂಬದಿಂದ ಬಂದು ಅಂತಾರಾಷ್ಟ್ರೀಯ ಮಟ್ಟಕ್ಕೆ ಸಂಗೀತ ಕ್ಷೇತ್ರದ ಕೀರ್ತಿಯನ್ನು ಹೆಚ್ಚಿಸಿದ ವೆಂಕಟೇಶ್ ಕುಮಾರ್ ಸಂಗೀತ ವಿದ್ವಾನ್ ಪುರಸ್ಕಾರಕ್ಕೆ ಅತೀ ಅರ್ಹರು. ಇದು ನಮಗೇ ಸಲ್ಲುವ ಗೌರವ ಎಂದರು.

ಸಂಗೀತಕ್ಕೆ ಆಸಕ್ತಿ , ಶ್ರದ್ದೆ, ಏಕಾಗ್ರತೆ, ಶ್ರಮ ಅಗತ್ಯ. ಇಷ್ಟು ಇದ್ದರೆ ಸಂಗೀತ ಸಾಧನೆ ಸಾಧ್ಯ ಎಂದರು.

ಕಲಾನಿಧಿ ವಿದ್ವಾನ್ ವಾಸುದೇವಾಚಾರ್ಯ ಅವರ ಹೆಸರಿನಲ್ಲಿ ಕಾರ್ಯಕ್ರಮ ರೂಪಿಸಬೇಕು ಎನ್ನುವ ಶಾಸಕ ಶ್ರೀವತ್ಸ ಅವರ ಬೇಡಿಕೆಯಂತೆ ಕಾರ್ಯಕ್ರಮ ರೂಪಿಸಲಾಗುವುದು ಎಂದು ಭರವಸೆ ನೀಡಿದರು

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಬುಕ್‌ ಆಫ್‌ ರೆಕಾರ್ಡ್‌’ | ಶಕ್ತಿ ಪ್ರದರ್ಶಿಸಿದ ‘ಶಕ್ತಿ ಯೋಜನೆ’!

ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿಗಳು ರಾಜ್ಯದ ಜನರನ್ನು ಸೋಂಬೇರಿಗಳ್ಳಾನ್ನಾಗಿ...

ರಾಹುಲ್ ಗಾಂಧಿಗೆ ಜೀವ ಬೆದರಿಕೆ; ಮೋದಿ, ಶಾ ಮೌನ ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ

ಬಿಜೆಪಿ ಮತ್ತು ಸಂಘಪರಿವಾರದ ವಿರುದ್ಧ ನಿರಂತರ ಧ್ವನಿ ಎತ್ತುತ್ತಿರುವ ಲೋಕಸಭೆಯ ವಿರೋಧ...

ಕಲಬುರಗಿ ರೈತರಿಗೆ ₹1417.02 ಕೋಟಿ ಪರಿಹಾರ, ಬಿಜೆಪಿಯಿಂದ ನಕಲಿ ಪ್ರತಿಭಟನೆ: ಪ್ರಿಯಾಂಕ್‌ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

Download Eedina App Android / iOS

X