ಕಾನೂನು ಎಲ್ಲರಿಗೂ ಒಂದೇ ಎಂಬ ಕನಿಷ್ಠ ಜ್ಞಾನ ಸಿಎಂಗೆ ಇರಬೇಕಿತ್ತು: ಪಿ.ರಾಜೀವ್

Date:

ಕಾನೂನು ಓದಿದ್ದಾಗಿ ಸಿದ್ದರಾಮಯ್ಯನವರು ಮಾತುಮಾತಿಗೂ ಹೇಳುತ್ತಾರೆ. ಕಾನೂನು ಎಲ್ಲರಿಗೂ ಒಂದೇ ಎಂಬ ಕನಿಷ್ಠ ಜ್ಞಾನ ಮುಖ್ಯಮಂತ್ರಿಗಳಿಗೆ ಇರಬೇಕಿತ್ತು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಹೇಳಿದರು.

- Advertisement -

ಮದ್ದೂರಿನಲ್ಲಿ ಶಾಸಕ ಡಿ ಸಿ ತಮ್ಮಣ್ಣ ಮನೆಯ ಆವರಣದಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿ, “ಯಡಿಯೂರಪ್ಪನವರ ಮೇಲೆ ಹಂಸರಾಜ್ ಭಾರದ್ವಾಜ್ ಅವರು ತನಿಖೆಗೆ ಅನುಮತಿ ನೀಡಿದಾಗ ಇದೇ ಸಿದ್ದರಾಮಯ್ಯನವರು ಯಾವ ಮಾತು ಹೇಳಿದ್ದರು? ಯಾವ ಪದಗಳನ್ನು ಬಳಸಿದ್ದರು? ಎಂಬುದನ್ನು ನೆನಪಿಸಿಕೊಳ್ಳಲಿ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಕಿಕ್ ಬ್ಯಾಕ್ ಕೊಡಲು ಬ್ಲ್ಯಾಕ್‌ ಮೇಲ್‌

“ಸಿದ್ದರಾಮಯ್ಯನವರನ್ನು ಇಳಿಸುತ್ತೇವೆ; ಇಲ್ಲವಾದರೆ ಕಿಕ್‌ಬ್ಯಾಕ್ ಕೊಡಿ ಎಂಬ ಬ್ಲ್ಯಾಕ್‌ಮೇಲ್‌ ತಂತ್ರಕ್ಕೆ ಕಾಂಗ್ರೆಸ್ಸಿನ ಹೈಕಮಾಂಡ್ ಇಳಿದಿರುವುದು ರಾಜ್ಯದ ದುರದೃಷ್ಟ. ಕರ್ನಾಟಕವು ಕಾಂಗ್ರೆಸ್ಸಿನ ಎಟಿಎಂ ಆಗಲಿದೆ ಎಂಬ ಈ ಹಿಂದಿನಿಂದಲೇ ಆಡುತ್ತಿದ್ದ ನಮ್ಮ ಮಾತು ನಿಜವಾಗಿದೆ” ಎಂದು ಆರೋಪಿಸಿದರು.

“ರಾಜ್ಯ ಖಜಾನೆಯಿಂದ ರಾಜ್ಯ ಸರ್ಕಾರವು ಹಣ ಲೂಟಿ ಮಾಡಿ ಚುನಾವಣೆಗೆ ಬಳಸಿದ ಉದಾಹರಣೆ ಇತಿಹಾಸದಲ್ಲೇ ಇಲ್ಲ. ಕಾಂಗ್ರೆಸ್ ಆಡಳಿತದಲ್ಲಿ ನಡೆದ ಇದು ಇಡೀ ದೇಶಕ್ಕೆ ಮತ್ತು ಪ್ರಜಾಪ್ರಭುತ್ವಕ್ಕೆ ಕಪ್ಪು ಚುಕ್ಕಿ. ಅಧಿಕಾರಿಗಳ ಆತ್ಮಹತ್ಯೆ ನಿರಂತರವಾಗಿ ನಡೆಯುತ್ತಿದೆ. ಸಚಿವರು ಎಂದು ಚಂದ್ರಶೇಖರ್ ಅವರು ತಮ್ಮ ಡೆತ್ ನೋಟ್‌ನಲ್ಲಿ ಉಲ್ಲೇಖಿಸಿದ್ದರೂ ಕೂಡ ಸಿಐಡಿ ಚಾರ್ಜ್ ಶೀಟ್‌ನಲ್ಲಿ ಅವರ ಹೆಸರನ್ನು ಕೈಬಿಡುವ ಮೂಲಕ ಕಾಂಗ್ರೆಸ್ ಭ್ರಷ್ಟಾಚಾರವನ್ನು ಯಾವ ರೀತಿ ರಕ್ಷಿಸಲು ಮುಂದಾಗುತ್ತದೆ ಎಂಬುದು ಗೊತ್ತಾಗುತ್ತದೆ” ಎಂದು ಟೀಕಿಸಿದರು.

ಹೆಗ್ಗಣ ಬಿದ್ದಿದೆ; ಅದನ್ನು ನೋಡಿಕೊಳ್ಳಿ

“ಸಿದ್ದರಾಮಯ್ಯ ಅವರು ನಮ್ಮ ತಟ್ಟೆಯಲ್ಲಿ ಕತ್ತೆ ಬಿದ್ದಿದೆ ಎನ್ನುತ್ತಾರೆ. ಸಿದ್ದರಾಮಯ್ಯನವರಿಗೆ ತಟ್ಟೆಯ ಸೈಜ್ ಎಷ್ಟು, ಕತ್ತೆಯ ಸೈಜ್ ಎಷ್ಟೆಂದು ಗೊತ್ತಾಗುವುದಿಲ್ಲ. ಯಾರ ತಟ್ಟೆಯಲ್ಲೂ ಕತ್ತೆ ಬೀಳಲು ಸಾಧ್ಯವಿಲ್ಲ. ನಿಮ್ಮ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದೆ ಎಂದು ನಾವು ಹೇಳುತ್ತೇವೆ. ಅದನ್ನು ನೀವು ನೋಡಿಕೊಳ್ಳಿ” ಎಂದು ಲೇವಡಿ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಕರ್ನಾಟಕ SIR | ಅರ್ಹರ ಹೆಸರು ಡಿಲೀಟ್‌ ಮಾಡಲು ಬಿಜೆಪಿಗೆ ‘ಫಾರ್ಮ್‌-7’ ಟೂಲ್‌ಕಿಟ್; ಷಡ್ಯಂತ್ರ ಬಹಿರಂಗ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಿಜೆಪಿಗರು ‘ಫಾರ್ಮ್‌-7’ಅನ್ನು ದುರ್ಬಳಕೆ ಮಾಡಿಕೊಳ್ಳುತತಿದ್ದಾರೆ. ಈ...