ಕೇಂದ್ರ ಗುಪ್ತಚರ ಇಲಾಖೆಯ ವೈಫಲ್ಯದಿಂದ ಪಹಲ್ಗಾಮ್‌ ಭಯೋತ್ಪಾದನಾ ದಾಳಿ: ಸಿಎಂ ಸಿದ್ದರಾಮಯ್ಯ ಆರೋಪ

Date:

ಪಹಲ್ಗಾಮ್‌ ಭಯೋತ್ಪಾದನಾ ದಾಳಿ ಕೇಂದ್ರ ಗುಪ್ತಚರ ಇಲಾಖೆಯ ವೈಫಲ್ಯ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದರು.

- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಬೆಳಿಗ್ಗೆ ಮಲೆ ಮಹದೇಶ್ವರನ ದೇಗುಲದಲ್ಲಿ ದೇವರ ದರ್ಶನ ಪಡೆದು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಮಲೆ ಮಹದೇಶ್ವರನ ಕ್ಷೇತ್ರದಲ್ಲಿ ಶುಚಿತ್ವ, ಮೂಲಸೌಕರ್ಯಕ್ಕೆ ಒತ್ತು ನೀಡುವಂತೆ ಸೂಚನೆ ನೀಡಲಾಗಿದೆ. ಕ್ಷೇತ್ರವನ್ನು ಮದ್ಯಪಾನ ಮುಕ್ತವಾಗಿಸಲು ಹಾಗೂ ತಿರುಪತಿ ಮಾದರಿಯಲ್ಲಿ ಲಡ್ಡು ತಯಾರಿಸಿ ಕಡಿಮೆ ದರದಲ್ಲಿ ಭಕ್ತರಿಗೆ ನೀಡುವಂತೆ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರಕ್ಕೆ ಸೂಚನೆ ನೀಡಿದ್ದೇನೆ” ಎಂದು ಸಿಎಂ ತಿಳಿಸಿದರು.

“ಚಾಮರಾಜನಗರ ಜಿಲ್ಲೆಗೆ ಭೇಟಿಕೊಟ್ಟರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬುದು ಮೌಢ್ಯವಷ್ಟೆ, ಜಿಲ್ಲೆಗೆ ಬಂದ ಮೇಲೆ ಎರಡು ಬಾರಿ ಮುಖ್ಯಮಂತ್ರಿ ಆಗಿದ್ದೇನೆ, ಕುರ್ಚಿಯೂ ಗಟ್ಟಿಯಾಗುತ್ತಲೇ ಇದೆ. ಜಿಲ್ಲೆಗೆ 10 ರಿಂದ 15 ಬಾರಿ ಭೇಟಿ ನೀಡಿದ್ದೇನೆ, ಸಮಾಜದ ಪ್ರಗತಿಗೆ ಅಡ್ಡಿಯಾಗಿರುವ ಮೌಢ್ಯಗಳನ್ನು ತೊಡೆದುಹಾಕಬೇಕಿದೆ” ಎಂದರು.

“ಶಾಸಕ ವಿನಯ ಕುಲಕರ್ಣಿ ನಿವಾಸದ ಮೇಲೆ ಇ.ಡಿ ದಾಳಿ ರಾಜಕೀಯ ಪ್ರೇರಿತ. ದ್ವೇಷದ ರಾಜಕಾರಣ ಮಾಡುತ್ತಿರುವ ಕೇಂದ್ರ ಸರ್ಕಾರ ಇಡಿ ಬಳಸಿಕೊಂಡು ದಾಳಿ ಮಾಡಿಸುತ್ತಿದೆ, ಬಿಜೆಪಿ ನಾಯಕರ ಮೇಲೆ ಇ.ಡಿ ದಾಳಿ ಏಕೆ ನಡೆಯುವುದಿಲ್ಲ, ಅವರೆಲ್ಲರೂ ಸಾಚಾಗಳಾ” ಎಂದು ಪ್ರಶ್ನಿಸಿದರು.

ಸಿದ್ದರಾಮಯ್ಯ ಅವರು ಬೆಳ್ಳಿ ದಂಡುಕೋಲು ಸೇವೆಯಲ್ಲಿ ಭಾಗವಹಿಸಿ ಬೆಳ್ಳಿತೇರಿಗೆ ಪೂಜೆ ಸಲ್ಲಿಸಿದರು. ಇದೇ ವೇಳೆ ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಹಾಗೂ ದೇವಸ್ಥಾನದ ವತಿಯಿಂದ ಮುಖ್ಯಮಂತ್ರಿಗೆ ಗೌರವ ಸಲ್ಲಿಸಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ...

‘ಸ್ಟಿಂಗ್ ಆಪರೇಷನ್’ ವಿವಾದ- ನನ್ನಿಂದಲೇ ತನಿಖೆ ಆರಂಭಿಸಿ: ಎಚ್.ಡಿ. ಕುಮಾರಸ್ವಾಮಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ವೀಡಿಯೊ ಬಿಡುಗಡೆ ಮಾಡಲು ಯತ್ನಿಸಲಾಗಿದೆ...

ಬಳ್ಳಾರಿ | ವರದಕ್ಷಿಣೆ ಕಿರುಕುಳಕ್ಕೆ ಮೂವರು ಬಲಿ

ಬಳ್ಳಾರಿಯಲ್ಲಿ ವರದಕ್ಷಿಣೆ ಕಿರುಕುಳ ತಾಳಲಾರದೆ ತಾಯಿಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ತುಂಗಭದ್ರಾ...

ಶೃಂಗೇರಿ ಮತ ಎಣಿಕೆ ವಿಡಿಯೋ ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ

2023ರ ಚುನಾವಣೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆಯ ವೀಡಿಯೋ...