ಅಹಲ್ಯಾಬಾಯಿ ಮಹಿಳಾ ಸಂಘಕ್ಕೆ ಬೆಂಗಳೂರಿನಲ್ಲಿ ಜಮೀನು: ಸಿಎಂ ಸಿದ್ದರಾಮಯ್ಯ ಘೋಷಣೆ

Date:

ರಾಜ್ಯ ಅಹಲ್ಯಾಬಾಯಿ ಮಹಿಳಾ ಸಂಘಕ್ಕೆ ಬೆಂಗಳೂರಿನಲ್ಲಿ ಜಮೀನು ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು.

- Advertisement -

ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆದ ರಾಣಿ ಅಹಲ್ಯಾ ಬಾಯಿ ಹೋಳ್ಕರ್ ಅವರ 300ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, “ಶೇ.100 ರಷ್ಟು ಅಂಕಗಳನ್ನು ಪಡೆಯುವುದರಲ್ಲಿ ಹೆಣ್ಣುಮಕ್ಕಳೇ ಮುಂದಿದ್ದು, ಸೈನ್ಯದಲ್ಲಿ , ಅಂತರಿಕ್ಷದಲ್ಲೂ ಹೆಣ್ಣು ಮಕ್ಕಳು ಕೆಲಸ ಮಾಡುತ್ತಿರುವುದು ಮಹಿಳಾ ಕುಲದ ಪ್ರಗತಿಯ ಪ್ರತೀಕ” ಎಂದು ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

“ಯಾವುದೇ ಸಂಘಟನೆ 25 ವರ್ಷ ಪೂರೈಸಿದರೆ ಅದು ದೊಡ್ಡ ಯಶಸ್ಸು. ಕರ್ನಾಟಕ ರಾಜ್ಯ ಅಹಲ್ಯಾ ಬಾಯಿ ಹೋಳ್ಕರ್ ಮಹಿಳಾ ಸಂಘ ಅತ್ಯಂತ ಯಶಸ್ವಿ ಆಗಿದೆ. ಇದಕ್ಕಾಗಿ ಶ್ರಮಿಸಿದ ಯಲ್ಲಮ್ಮ ಮತ್ತು ಜೊತೆಗಿರುವ ಪ್ರತಿಯೊಬ್ಬರೂ ಅಭಿನಂದನಾರ್ಹರು” ಎಂದರು.

“ಶಿಕ್ಷಣ-ಸಂಘಟನೆ-ಹೋರಾಟ ಅಂಬೇಡ್ಕರ್ ಅವರು ಶೋಷಿತ ಜಾತಿ-ಸಮುದಾಯಗಳಿಗೆ ಕೊಟ್ಟಿರುವ ಮಂತ್ರ. ಶೂದ್ರರು ಮತ್ತು ಮಹಿಳೆಯರು ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದರು. ಆದರೆ ಅಂಬೇಡ್ಕರ್ ಅವರ ಕಾರಣದಿಂದ ಶೂದ್ರ ಮತ್ತು ಮಹಿಳಾ ಕುಲಕ್ಕೆ ಶಿಕ್ಷಣ ಕಲಿಯುವ ಅವಕಾಶ ಒದಗಿ ಬಂತು. ಇದಕ್ಕೆ ನಮ್ಮ ಸಂವಿಧಾನ ನೀಡಿದ ಕಡ್ಡಾಯ ಶಿಕ್ಷಣ ಕಾನೂನು ನೆರವಾಯಿತು” ಎಂದು ಹೇಳಿದರು.

“ಕುರುಬರಿಗೆ ಅಕ್ಷರ ಹತ್ತಲ್ಲ, ಶಿಕ್ಷಣ ಏಕೆ ಎಂದು ನಮ್ಮ ಅಜ್ಜಿ ಹೇಳುತ್ತಿದ್ದರು. ಆದರೆ, ನಾನು ಶಾಲೆಗೆ ಹೋಗಿ ಕಾನೂನು ಪದವಿ ಪಡೆದು ಮುಖ್ಯಮಂತ್ರಿಯೂ ಆದೆ. ನಾನು ಶಾಲೆಗೆ ಹೋಗಿ ಶಿಕ್ಷಣ ಕಲಿಯುವ ಅವಕಾಶ ಉಪಯೋಗಿಸಿಕೊಳ್ಳದಿದ್ದರೆ ನಾನೂ ಹಸು, ಕುರಿ ಕಾಯುತ್ತಾ ಇರಬೇಕಾಗಿತ್ತು. ಆದ್ದರಿಂದ ರಾಣಿ ಅಹಲ್ಯಾ ಬಾಯಿ ಅವರ ಶಿಕ್ಷಣ ಕ್ರಾಂತಿ ಎಲ್ಲರಿಗೂ ಈ ಮಹಿಳಾ ಸಂಘಟನೆಗೂ ಪ್ರೇರಣೆ ಆಯಿತು. ಇತಿಹಾಸ ಗೊತ್ತಿಲ್ಲದವರು ಭವಿಷ್ಯ ರೂಪಿಸಲು ಸಾಧ್ಯವಿಲ್ಲ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೈಗಾರಿಕೆಯಲ್ಲಿ ತಮಿಳುನಾಡು ಮಾದರಿ ಅಳವಡಿಸಿಕೊಳ್ಳಲಿ ಕರ್ನಾಟಕ

“ರಾಣಿ 20 ವರ್ಷ ಅಧಿಕಾರದಲ್ಲಿದ್ದರೂ ತನ್ನ ಸಾಮ್ರಾಜ್ಯ ಉಳಿಸಲು ಅಗತ್ಯವಾದ ಎಲ್ಲ ಅರ್ಹತೆಗಳನ್ನು ಬೆಳೆಸಿಕೊಂಡಿದ್ದರೂ ಸಾಮ್ರಾಜ್ಯ ವಿಸ್ತರಿಸುವ ಹಪಾಹಪಿ ಇರಲಿಲ್ಲ. ಖಜಾನೆ ತುಂಬಿದ್ದರೂ ಸರಳ ಜೀವನ ನಡೆಸುತ್ತಾ, ಸುಸ್ಥಿರ ಆಡಳಿತ, ಅಭಿವೃದ್ಧಿ ಕಡೆ ಹೆಚ್ಚಿನ ಗಮನ ಹರಿಸಿದ್ದ ರಾಣಿ ಅಹಲ್ಯಾ ಬಾಯಿ ಅವರು ಬಾಲ್ಯ ವಿವಾಹ ನಿಲ್ಲಿಸುವ ಮೂಲಕ ಸಾಮಾಜಿಕ ಬದಲಾವಣೆಯಲ್ಲೂ ಪ್ರಮುಖ ಪಾತ್ರ ವಹಿಸಿದರು. ಜಾತ್ಯತೀತ ಮನೋಭಾವ ಹೊಂದಿದ್ದ ಅಹಲ್ಯಾ ಬಾಯಿ ಆಗಲೇ ಅಂತರ್ಜಾತಿ ವಿವಾಹ ಮಾಡಿಸಿದ್ದರು” ಎಂದು ವಿವರಿಸಿದರು.

ಮಹಿಳೆಯರ ಸಬಲೀಕರಣಕ್ಕೆ ನಮ್ಮ ಸರ್ಕಾರ ಗೃಹಲಕ್ಷ್ಮಿ, ಶಕ್ತಿ ಯೋಜನೆ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡಿದ್ದಾಗಿದೆ. ಇದರಿಂದ ಸಮಾಜಕ್ಕೆ, ಮಹಿಳಾ ಕುಲಕ್ಕೆ ಶಕ್ತಿ ಬಂದಿದೆಯೇ ಹೊರತು ಯಾರೂ ಸೋಮಾರಿಗಳಾಗಿಲ್ಲ ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಗೃಹಲಕ್ಷ್ಮಿ’ಗೆ 17 ಪ್ರಶ್ನೆಗಳ ಪರೀಕ್ಷೆ: ₹2 ಸಾವಿರದ ಯೋಜನೆಗೆ ಇಷ್ಟೆಲ್ಲಾ ದಾಖಲೆ ಬೇಕೇ?

ಮರುಪರಿಶೀಲನೆ ಹೆಸರಿನಲ್ಲಿ ಫಲಾನುಭವಿಗಳ ಅಸ್ತಿತ್ವವನ್ನೇ ಪ್ರಶ್ನಿಸುವಂತಾಗಬಾರದು; ನೈಜ ಅನರ್ಹರನ್ನು ಕೈಬಿಡುವ ಕ್ರಮದ...

ನಕಲಿ ಔಷಧ ಜಾಲ ಭೇದಿಸಿದ ಎಸ್‌ಐಟಿ: ಅಜರ್‌ಬೈಜಾನ್‌ಗೆ ಪರಾರಿಯಾಗಿದ್ದ ಕಿಂಗ್‌ಪಿನ್‌ ಪ್ರಶಾಂತ್‌ ಸೆರೆ

ರಾಜ್ಯಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ನಕಲಿ ಔಷಧ...

ರಾಜ್ಯದಲ್ಲಿ 1.07 ಕೋಟಿ ಮತದಾರರ ಹೆಸರು ಡಿಲೀಟ್: ಮರು ಸೇರ್ಪಡೆಗೆ ಕೇವಲ 7.7 ಲಕ್ಷ ಅರ್ಜಿ

ವಿಶೇಷ ತೀವ್ರ ಪರಿಷ್ಕರಣೆ (SIR) ಅಡಿಯಲ್ಲಿ ರಾಜ್ಯದ ಮತದಾರರ ಪಟ್ಟಿಯಿಂದ ಬರೋಬ್ಬರಿ...