16ನೇ ಹಣಕಾಸು ಆಯೋಗದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿ, ರಾಜ್ಯದ ಪ್ರಸ್ತಾವಣೆ ಸಲ್ಲಿಕೆ

Date:

Advertisements

ದೆಹಲಿಯಲ್ಲಿ ಶುಕ್ರವಾರ (ಜೂ.13) ನಡೆದ 16ನೇ ಹಣಕಾಸು ಆಯೋಗದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿಯಾದರು.

ಆಯೋಗದ ಅಧ್ಯಕ್ಷ ಡಾ. ಅರವಿಂದ ಪನಗರಿಯ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಕೇಂದ್ರದಿಂದ ರಾಜ್ಯಗಳಿಗೆ ತೆರಿಗೆ ಹಂಚಿಕೆ ಮತ್ತು ಹಣಕಾಸು ವರ್ಗಾವಣೆ ಕುರಿತು ರಾಜ್ಯದ ಆಶಯಗಳು, ನಿರೀಕ್ಷೆಗಳು ಮತ್ತು ಪ್ರಸ್ತಾವನೆಗಳನ್ನು ಸಿಎಂ ಮಂಡಿಸಿದರು.

ಆಯೋಗವನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿಗಳು, “ಭಾರತದ ಆರ್ಥಿಕ ಬೆಳವಣಿಗೆಯಲ್ಲಿ ಕರ್ನಾಟಕದ ಪ್ರಮುಖ ಪಾತ್ರ ವಹಿಸುತ್ತಿದ್ದು, ರಾಜ್ಯವು ದೇಶದ ಒಟ್ಟು ಜಿಡಿಪಿಗೆ ಸುಮಾರು ಶೇ.8.7ರಷ್ಟು ಕೊಡುಗೆ ನೀಡುತ್ತಿದೆ. ಜಿ.ಎಸ್.ಟಿ ಸಂಗ್ರಹಣೆಯಲ್ಲಿ 2ನೇ ಸ್ಥಾನದಲ್ಲಿದೆ” ಎಂದು ತಿಳಿಸಿದರು.

Advertisements

“ಈ ಕೊಡುಗೆಯ ಹೊರತಾಗಿಯೂ ಸಂಪನ್ಮೂಲ ಹಂಚಿಕೆಯಲ್ಲಿ ತೀವ್ರ ಅಸಮತೋಲನ ಇದೆ. ರಾಜ್ಯದಿಂದ ಕೇಂದ್ರಕ್ಕೆ ಸ್ವೀಕೃತವಾಗುವ ತೆರಿಗೆಯ ಪ್ರತಿ ರೂಪಾಯಿಗೆ ಪ್ರತಿಯಾಗಿ ರಾಜ್ಯವು ಕೇವಲ 15 ಪೈಸೆ ಮಾತ್ರ ಪಡೆಯುತ್ತದೆ. 15 ನೇ ಹಣಕಾಸು ಆಯೋಗವು ಕರ್ನಾಟಕದ ತೆರಿಗೆ ಪಾಲನ್ನು 4.713% ರಿಂದ 3.647% ಕ್ಕೆ ಇಳಿಕೆ ಮಾಡಿದ್ದರಿಂದ 15 ನೇ ಹಣಕಾಸು ಆಯೋಗದ ಅವಧಿಯಲ್ಲಿ ₹80,000 ಕೋಟಿಗಳಷ್ಟು ನಷ್ಟವಾಗಿದೆ” ಎಂದು ತಿಳಿಸಿದರು.

ಸಂಪನ್ಮೂಲ ಹಂಚಿಕೆಯಲ್ಲಿ ಉಂಟಾಗಿರುವ ಈ ಅಸಮತೋಲನವನ್ನು ಸರಿಪಡಿಸಲು ರಾಜ್ಯವು 16ನೇ ಹಣಕಾಸು ಆಯೋಗಕ್ಕೆ ಈಗಾಗಲೇ ಜ್ಞಾಪನಾಪತ್ರವನ್ನು ಸಲ್ಲಿಸಿದ್ದು, ರಾಜ್ಯದ ಮುಖ್ಯ ಪ್ರಸ್ತಾವನೆಗಳನ್ನು ಪರಿಗಣಿಸುವಂತೆ ಕೋರಿದರು.

ಪ್ರಸ್ತಾವಣೆಗಳು

  • ಕೇಂದ್ರ ಹಾಗೂ ರಾಜ್ಯಗಳ ನಡುವಿನ ಹಂಚಿಕೆಯು ಕನಿಷ್ಠ 50%ಕ್ಕೆ ಹೆಚ್ಚಿಸಬೇಕು ಮತ್ತು ಸೆಸ್‌ಗಳು ಮತ್ತು ಸೆಸ್‌ಚಾರ್ಜ್‌ಗಳನ್ನು 5% ಕ್ಕೆ ಮಿತಿಗೊಳಿಸಬೇಕು.
  • ಕೇಂದ್ರದ ತೆರಿಗೆಯೇತರ ಆದಾಯವನ್ನು ರಾಜ್ಯಗಳಿಗೆ ಹಂಚಿಕೆಯಾಗುವ ಪಾಲಿನಲ್ಲಿ ಸೇರಿಸಿ, ಹಂಚಿಕೆ ಮಾಡಬೇಕು.
  • ರಾಜ್ಯಗಳ ನಡುವಿನ ಹಂಚಿಕೆಗೆ ಸಂಬಂಧಿಸಿದಂತೆ ಪ್ರತಿ ರಾಜ್ಯವು ತಾನು ನೀಡುವ ಕೊಡುಗೆಯಲ್ಲಿ ಸುಮಾರು 60% ಅನ್ನು ಉಳಿಸಿಕೊಳ್ಳಲು ಮತ್ತು 40% ಅನ್ನು ಉಳಿದ ರಾಜ್ಯಗಳಿಗೆ ಹಂಚಿಕೆ ಯಾಗಬೇಕು. ಇದು ಬೆಳವಣಿಗೆ ಮತ್ತು ಸಮಾನತೆ ಎರಡನ್ನೂ ಖಚಿತಪಡಿಸುತ್ತದೆ.
  • ತಲಾವಾರು ತೆರಿಗೆ ಹಂಚಿಕೆಯಲ್ಲಿ ಹೆಚ್ಚುತ್ತಿರುವ ಅಸಮಾನತೆಗಳು, ಆದಾಯ ಕೊರತೆ ಅನುದಾನಗಳ ಅವೈಜ್ಞಾನಿಕ ವಿನ್ಯಾಸ ಮತ್ತು ರಾಜ್ಯ-ನಿರ್ದಿಷ್ಟ ಅನುದಾನಗಳ ಅನಿರೀಕ್ಷಿತತೆ ಹೆಚ್ಚಾಗಿದೆ. ದೇಶದ GDPಗೆ ರಾಜ್ಯದ ಕೊಡುಗೆಯು ಹೆಚ್ಚಾಗಿದ್ದರೂ, ತಲಾವಾರು ತೆರಿಗೆ ಹಂಚಿಕೆಯು ಗಮನಾರ್ಹವಾಗಿ ಕುಸಿದಿದೆ. 14 ನೇ ಮತ್ತು 15 ನೇ ಹಣಕಾಸು ಆಯೋಗಗಳ ನಡುವಿನ ರಾಷ್ಟ್ರೀಯ ಸರಾಸರಿಯ 95% ರಿಂದ 73%ಕ್ಕೆ ಕುಸಿದಿದೆ. 16ನೇ ಹಣಕಾಸು ಆಯೋಗದಲ್ಲಿ ಈ ಹಂಚಿಕೆಯನ್ನು ಹೆಚ್ಚಿಸಬೇಕು.
  • ಸಂಪನ್ಮೂಲ ಹಂಚಿಕೆಯಲ್ಲಿ ಸಮಾನತೆ ಮುಖ್ಯವಾಗಿದ್ದರೂ, ಇದು ಸ್ಥಿರವಾದ ಆರ್ಥಿಕ ಕಾರ್ಯಕ್ಷಮತೆ ಮತ್ತು ಆರ್ಥಿಕ ಶಿಸ್ತನ್ನು ಪಾಲಿಸುವ ರಾಜ್ಯಗಳಿಗೆ ದಂಡ ವಿಧಿಸುವಂತಾಗಬಾರದು. ಸಂಪನ್ಮೂಲ ಹಂಚಿಕೆಯಲ್ಲಿ ಸಮಾನತೆಯನ್ನು ಫಲಿತಾಂಶ ಆಧಾರಿತ ರೀತಿಯಲ್ಲಿ ಕಾರ್ಯಗತಗೊಳಿಸಬೇಕು. ಆದಾಯ-ದೂರ ಮಾನದಂಡದ ಪಾಲನ್ನು 20% ರಷ್ಟು ಕಡಿಮೆ ಮಾಡಿ ದೇಶದ GDPಯಲ್ಲಿ ರಾಜ್ಯಗಳ ಕೊಡುಗೆಯನ್ನು ಅಳತೆಗೊಲಾಗಿ ಪರಿಗಣಿಸಿ ಇದಕ್ಕೆ 20% ಅಂಕವನ್ನು ನೀಡಬೇಕು.
  • ಹಣಕಾಸು ಆಯೋಗವು ನೀಡುವ ರಾಜಸ್ವ ಕೊರತೆ ಅನುದಾನವನ್ನು ಪಡೆಯುತ್ತಿರುವ ಫಲಾನುಭವಿ ರಾಜ್ಯಗಳು, ಈ ಅನುದಾನದ ಹೊರತಾಗಿಯೂ ರಾಜಸ್ವ ಕೊರತೆಯನ್ನು ಶೂನ್ಯವಾಗಿಸುವಲ್ಲಿ ವಿಫಲವಾಗಿದೆ. ರಾಜಸ್ವ ಕೊರತೆ ಅನುದಾನವನ್ನು ತೆರಿಗೆ ಹಂಚಿಕೆಯ ಸೂತ್ರದಲ್ಲೇ ರಾಜ್ಯಗಳಿಗೆ ನೀಡಬೇಕು.
  • ರಾಜಸ್ವ ಕೊರತೆ ಅನುದಾನಗಳನ್ನು ಅಂದಾಜಿಸಲು ಆಯೋಗವು ಪರಿಕಲ್ಪಿಸುವ ವೆಚ್ಚದ ಆದ್ಯತೆಗಳು ವ್ಯಕ್ತಿನಿಷ್ಠ ಮೌಲ್ಯಮಾಪನಗಳನ್ನು ಪ್ರತಿಬಿಂಬಿಸುತ್ತವೆ. ದುರದೃಷ್ಟವಶಾತ್, ಈ ಮೌಲ್ಯಮಾಪನಗಳು ಸಂಬಳ, ಪಿಂಚಣಿ ಮತ್ತು ಆಡಳಿತಾತ್ಮಕ ವೆಚ್ಚಗಳಿಗೆ ಹೋಲಿಸಿದರೆ ಕಲ್ಯಾಣ ಕಾರ್ಯಕ್ರಮಗಳಿಗೆ ಸರ್ಕಾರ ಭರಿಸುವ ವೆಚ್ಚವನ್ನು ಕಡಿಮೆ ಪ್ರಮಾಣದಲ್ಲಿ ಇರಿಸುತ್ತವೆ. ನಮ್ಮ ಸರ್ಕಾರವು ಎಲ್ಲರ ಕಲ್ಯಾಣವನ್ನು ಒತ್ತಿಹೇಳುವ ಗಾಂಧೀಜಿಯವರ ಸರ್ವೋದಯ ತತ್ವದಿಂದ ಮಾರ್ಗದರ್ಶಿಸಲ್ಪಟ್ಟಿದೆ. ಕಡಿಮೆ ಆದಾಯದ ಕುಟುಂಬಗಳನ್ನು ಸಬಲೀಕರಣಗೊಳಿಸುವ ಮೂಲಕ, ಸ್ಥಳೀಯ ಬೇಡಿಕೆಯನ್ನು ಉತ್ತೇಜಿಸುವ ಮತ್ತು ಸಮಗ್ರ ಬೆಳವಣಿಗೆಯನ್ನು ಹೆಚ್ಚಿಸುವಲ್ಲಿ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ರೂಪಿತವಾಗಿದೆ. ಆದ್ದರಿಂದ, ಹಣಕಾಸಿನ ಹಂಚಿಕೆಯಲ್ಲಿ ಮೌಲ್ಯಮಾಪನ ಮಾಡುವಾಗ ಈ ಕಲ್ಯಾಣ ಕಾರ್ಯಕ್ರಮಗಳ ಮೇಲಿನ ವೆಚ್ಚಗಳಿಗೆ ಹೆಚ್ಚಿನ ಆದ್ಯತೆ ನೀಡದೆ ಹೋದರೆ ಕನಿಷ್ಠ ಸಂಬಳ, ಪಿಂಚಣಿ ಮತ್ತು ಬಡ್ಡಿ ಪಾವತಿಗಳಂತಹ ಬದ್ಧ ವೆಚ್ಚಗಳಿಗೆ ಸಮಾನವಾಗಿ ಪರಿಗಣಿಸಬೇಕು.
  • ಕೇಂದ್ರ ಸರ್ಕರದ ವಿವೇಚನಾಧಾರಿತ ಅನುದಾನವಾಗಿರುವ ರಾಜ್ಯ ಕೇಂದ್ರಿತ ಅನುದಾನದ ಬದಲಾಗಿ ಒಟ್ಟು ಕೇಂದ್ರ ಸ್ವೀಕೃತಿಗಳಲ್ಲಿ 0.3%ರಷ್ಟು ಅನುದಾನ ವಿತರಣಾ ಸೂತ್ರದ ಆಧಾರದಲ್ಲಿ ರಾಜ್ಯಗಳಿಗೆ ನೀಡಬೇಕು.
  • ಕರ್ನಾಟಕದ ಆರ್ಥಿಕತೆಯಲ್ಲಿ ಬೆಂಗಳೂರಿನ ಪ್ರಮುಖ ಪಾತ್ರವನ್ನು ಪರಿಗಣಿಸಿ, ಬೆಂಗಳೂರಿನ ಮೂಲಸೌಕರ್ಯವನ್ನು ಬಲಪಡಿಸಲು ₹1.15 ಲಕ್ಷ ಕೋಟಿ ಹೂಡಿಕೆಗೆ ಬೆಂಬಲ ನೀಡಬೇಕು. ಅಲ್ಲದೆ, ಕಡಿಮೆ ಆದಾಯ ಮತ್ತು ಕುಂಠಿತ ಮೂಲಸೌಕರ್ಯ ಅಭಿವೃದ್ಧಿ ಸಮಸ್ಯೆಯನ್ನು ಎದುರಿಸುತ್ತಿರುವ ಕಲ್ಯಾಣ ಕರ್ನಾಟಕ ಮತ್ತು ಮಲೆನಾಡಿನಲ್ಲಿ ಪ್ರಾದೇಶಿಕ ಅಂತರವನ್ನು ಕಡಿಮೆ ಮಾಡಲು ನೆರವು ನೀಡಬೇಕು.
  • ಬೆಳವಣಿಗೆ ಮತ್ತು ಸಮಾನತೆ ಜೊತೆ ಜೊತೆಯಾಗಿ ಮುಂದುವರಿಯಬೇಕು. ಆದ್ದರಿಂದ ಸಧೃಡ ಭಾರತದ ನಿರ್ಮಾಣಕ್ಕೆ ನ್ಯಾಯಯುತ ಸಂಪನ್ಮೂಲ ಹಂಚಿಕೆಯಿಂದ ಬೆಂಬಲಿತವಾದ ಬಲವಾದ ಕರ್ನಾಟಕ ಅತ್ಯಗತ್ಯ.
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X